Horoscope Today: ರಾಶಿಭವಿಷ್ಯ, ಈ ರಾಶಿಯವರಿಗೆ ಸ್ನೇಹವೇ ಪ್ರೇಮವಾಗುವ ಸಾಧ್ಯತೆ ಇದೆ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 31) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope Today: ರಾಶಿಭವಿಷ್ಯ, ಈ ರಾಶಿಯವರಿಗೆ ಸ್ನೇಹವೇ ಪ್ರೇಮವಾಗುವ ಸಾಧ್ಯತೆ ಇದೆ
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 31, 2023 | 12:30 AM

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 31) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಅತಿಗಂಡ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹುಕಾಲ ಮಧ್ಯಾಹ್ನ 02:06 ರಿಂದ 15:39ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:22 ರಿಂದ 07:54ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 09:27 ರಿಂದ 11:00ರ ವರೆಗೆ.

ಧನು ರಾಶಿ : ಪ್ರಯತ್ನಿಸಿದ ಕಾರ್ಯದಲ್ಲಿ ನಿಮಗೆ ಸಂಪೂರ್ಣ ಯಶಸ್ಸು ಲಭ್ಯವಾಗದೇ ಹೋಗಬಹುದು. ಸರ್ಕಾರದಿಂದ‌ ಆಗಬೇಕಾದ ಕೆಲಸಕ್ಕೆ ಹಣವನ್ನು ಮಾಡುವಿರಿ. ಸ್ವಾಭಿಮಾನಕ್ಕೆ ಅಡ್ಡಿಯಾದೀತು. ನೀವು ಆಪ್ತರಿಗೆ ಎಲ್ಲವನ್ನೂ ಹೇಳಬೇಕು ಎಂದುಕೊಂಡರೂ ನಿಮಗೆ ಹೇಳಲಾಗದೆ ದುಃಖವು ಬರುವುದು. ಅಪರಿಚಿತ ವ್ಯಕ್ತಿಯ ಜೊತೆ ಸ್ನೇಹವನ್ನು ಮಾಡುವಾಗ ಎಚ್ಚರವಿರಲಿ. ಸ್ನೇಹವೇ ಪ್ರೇಮವಾಗುವ ಸಾಧ್ಯತೆ ಇದೆ. ನಿಮ್ಮ ಪ್ರತಿಯೊಂದು ನಡೆಯನ್ನೂ ಗಮನಿಸುವರು. ನಿಮ್ಮ ಮೇಲಿಟ್ಟ ವಿಶ್ವಾಸಕ್ಕೆ ಭಂಗಬಾರದಂತೆ ನಿಮ್ಮ ವರ್ತನೆಯು ಇರಲಿದೆ. ವಿದ್ಯಾರ್ಥಿಗಳು ಸಮಯ ಪಾಲನೆಯನ್ನು ಮಾಡುವುದು ಅತ್ಯವಶ್ಯಕ. ಓದಿನಲ್ಲಿ ಹಿಂದುಳಿಯುವ ಸಾಧ್ಯತೆ ಇರಲಿದೆ.

ಮಕರ ರಾಶಿ : ಸುಖದ ಜೀವನ ಮತ್ತು ಹಣ ಸಂಪಾದನೆ ಈ ಎರಡು ಮಾರ್ಗಗಳು ನಿಮ್ಮ‌ ಮುಂದು ಇರುವುದು. ಆಯ್ಕೆಯೂ ನಿಮಗೇ ಬಿಟ್ಟಿದ್ದಾಗಿದೆ. ಮನೆಯ ಹಿರಿಯರ ಜೊತೆ ವಾಗ್ವಾದವನ್ನು ನಡೆಸುವಿರಿ. ನಿಮ್ಮ ಸತ್ಯದಿಂದ ಸಹೋದ್ಯೋಗಿಯ ಕೆಲಸವು ಇಲ್ಲವಾಗುವುದು. ಸ್ವಭಾವವನ್ನು ಬದಲಿಸಿಕೊಂಡು ಎಲ್ಲರ‌ ಕೆಂಗಣ್ಣಿಗೆ ಗುರಿಯಾಗುವಿರಿ. ದಿನಚರ್ಯೆಯನ್ನು ಬದಲಿಸಿಕೊಂಡು ನೀವು ಆರೋಗ್ಯವನ್ನು ಕಾಪಾಡಿಕೊಳ್ಳುವಿರಿ. ಸಾಮಾಜಿಕ ಗೌರವಕ್ಕೆ ನೀವು ಪಾತ್ರರಾಗುವಿರಿ. ವಿಪರೀತ ಸಿಟ್ಟಿನಿಂದ ಇಂದು ಇರುವಿರಿ.

ಕುಂಭ ರಾಶಿ : ರಾಜಕೀಯ ವ್ಯಕ್ತಿಗಳು ನಿಮ್ಮನ್ನು ದಾಳವಾಗಿ ಬಳಸಿಕೊಳ್ಳಬಹುದು. ಎಲ್ಲ ಕಾರ್ಯಗಳನ್ನು ಒಪ್ಪಿಕೊಳ್ಳುವುದು ಬೇಡ. ಇನ್ನೊಬ್ಬರ ಒತ್ತಾಯಕ್ಕೆ ನೀವು ಮಣಿಯುವಿರಿ. ಹಣದ ಹೂಡಿಕೆಯನ್ನು ಅತಿಯಾಗಿ ಮಾಡಿಕೊಂಡು ಖರ್ಚಿಗೇ ಹಣವಿಲ್ಲದಂತೆ ಆಗಬಹುದು. ವಾಹನ ಖರೀದಿಗೆ ಸಾಲವನ್ನೂ ಮಾಡಬೇಕಾಗುವುದು. ಚರಾಸ್ತಿಯನ್ನು ಕೊಟ್ಟು ಲಾಭ ಮಾಡಿಕೊಳ್ಳುವಿರಿ. ನಿಮ್ಮ ಮಾತಿಗೆ ಬೆಲೆ ಕಡಿಮೆ ಆಗುವುದು. ನಿಮ್ಮ ಕೆಲಸಗಳ ಅವಲೋಕನವನ್ನು ಇಂದು ಮಾಡಿಕೊಳ್ಳುವಿರಿ. ನಿಮ್ಮ ನೇರ ಮಾತು ಇನ್ನೊಬ್ಬರನ್ನು ಘಾಸಿಗೊಳಿಸುವುದು. ಮನಸ್ಸಿನ ಉದ್ವೇಗವನ್ನು ಕಡಿಮೆ ಮಾಡಿಕೊಳ್ಳಿ. ಜನರ ಜೊತೆ ಬೆರೆಯುವುದು ನಿಮಗೆ ಇಷ್ಟವಾಗದು.

ಮೀನ ರಾಶಿ : ನಿಮ್ಮ ಆಸೆಗಳನ್ನು ಇಂದು ಪೂರೈಸಿಕೊಳ್ಳುವಿರಿ. ನಿಮ್ಮ ಭಾವನೆಗಳಿಗೆ ಬೆಲೆ ಕೊಡದೇ ಇರುವುದು ನಿನಗೆ ಬೇಸರವಾಗವುದು. ಬಂಧುಗಳ ಆಗಮನದಿಂದ ನಿಮಗೆ ವ್ಯಾಪಾರದಲ್ಲಿ ನಷ್ಟವಾಗಬಹುದು. ಎಲ್ಲ ಸಮಯದಲ್ಲಿಯೂ ನಿಮ್ಮ ಪರಿಸ್ಥಿತಿಯು ಒಂದೇ ತೆರೆನಾಗಿ ಇರದು. ಮಾತಿನ ಮೇಲೆ ಹಿಡಿತವಿರಲಿದ. ಸಂಗಾತಿಯ ಮಾತುಗಳು ನಿಮ್ಮ ಮನಸ್ಸಿಗೆ ಘಾಸಿ ಮಾಡಬಹುದು. ಗಾಢವಾದ ಚಿಂತೆಯಿಂದ ಹೊರಬರಲು ಕಷ್ಟವಾದೀತು. ಇಂದು ನಿಮ್ಮ ವಿರುದ್ಧ ಮಾತನಾಡುವವರಿಗೆ ಉತ್ತರವನ್ನು ಕೊಡುತ್ತ ಸಮಯವನ್ನು ವ್ಯರ್ಥ ಮಾಡುವಿರಿ. ಉದ್ಯೋಗದಲ್ಲಿ ವಿಶ್ವಸಗಳಿಸಿ. ಪಾರದರ್ಶಕ ವ್ಯವಹಾರದಿಂದ ನಿಮಗೆ ಲಾಭವಿರವುದು‌. ವಿದ್ಯಾರ್ಥಿಗಳು ವಿಷಯದ ಆಯ್ಕೆಯ ವಿಚಾರದಲ್ಲಿ ಆಪ್ತರನ್ನು ಕೇಳಿ. ಇಷ್ಟವಿಲ್ಲದಿದ್ದರೂ ಕೆಲವು ಕೆಲಸಗಳನ್ನು ಮಾಡಲಿದ್ದೀರಿ.

-ಲೋಹಿತಶರ್ಮಾ 8762924271 (what’s app only))

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು