Horoscope: ಈ ರಾಶಿಯವರ ಮಾತು ಇನ್ನೊಬ್ಬರಿಗೆ ಸಿಟ್ಟು ಬರುವಂತೆ ಇರವುದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 13) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರ ಮಾತು ಇನ್ನೊಬ್ಬರಿಗೆ ಸಿಟ್ಟು ಬರುವಂತೆ ಇರವುದು
ರಾಶಿ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 13, 2023 | 12:46 AM

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 13) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಸೌಭಾಗ್ಯ, ಕರಣ: ಕಿಂಸ್ತುಘ್ನ, ಸೂರ್ಯೋದಯ ಬೆಳಗ್ಗೆ 06 ಗಂಟೆ 33 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ, ರಾಹು ಕಾಲ ಬೆಳಗ್ಗೆ 07:59 ರಿಂದ 09:25ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:51 ರಿಂದ ಮಧ್ಯಾಹ್ನ 12:17ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:43 ರಿಂದ 03:08ರ ವರೆಗೆ.

ಧನು ರಾಶಿ : ನಿಮ್ಮ ಸ್ವಂತ ಕೆಲಸಗಳಿಗೆ ಸಮಯವನ್ನು ಕೊಡುವಿರಿ. ಆದಾಯ ಮಾರ್ಗವನ್ನು ಬದಲಿಸಿಕೊಳ್ಳಬಹುದು. ಭೂಮಿಯ ವಿಚಾರದಲ್ಲಿ ಶಾಂತವಾದ ಕಲಹವು ಮತ್ತೆ ಆರಂಭವಾಗುವುದು. ಕಬ್ಬಿಣ ಮುಂತಾದ ವ್ಯಾಪಾರವನ್ನು ಮಾಡುವವರಿಗೆ ಆದಾಯವು ಹೆಚ್ಚಾಗುವುದು. ಮಕ್ಕಳ ಶ್ರಮದಿಂದ ಪಾಲಕರಿಗೆ ನೆಮ್ಮದಿ ಇರಲಿದೆ. ವಿದ್ಯಾರ್ಥಿಗಳಿಗೆ ಬೆಂಬಲದ ಕೊರತೆ ಇರುವುದು. ಹಿರಿಯರ ಆರೋಗ್ಯದಲ್ಲಿ ವ್ಯತ್ಯಸಾವಾಗಿದ್ದು ತುರ್ತು ಚಿಕಿತ್ಸೆಯ ಅವಶ್ಯಕತೆ ಇರಲಿದೆ. ಹಲವು ದಿನಗಳ ನಿಮ್ಮ ಋಣವು ಮುಕ್ತಾಯವಾಗಿದ್ದು ಸಂತಸದ ವಿಚಾರವಾಗಿದೆ. ಸಣ್ಣ ವ್ಯಾಪರಿಗಳಿಗೆ ಉತ್ತಮ ಲಾಭವಿರಲುದೆ. ಉನ್ನತ ಹುದ್ದೆಗೆ ಆಯ್ಕೆಯಾದವರ ಪಟ್ಟಿಯಲ್ಲಿ ನಿಮ್ಮ ಹೆಸರೂ ಇರಲಿದೆ. ಮಕ್ಕಳ ಭವಿಷ್ಯಕ್ಕೆ ಹಣವನ್ನು ಉಳಿತಾಯ ಮಾಡವಿರಿ. ಇಂದಿನ ಸಮಯ ಮಿತಿಯನ್ನು ಅರಿತು ಕಾರ್ಯವನ್ನು ಮಾಡುವಿರಿ. ಕಳೆದುಕೊಳ್ಳದೇ ಪಡೆಯುವ ಕ್ರಮವನ್ನು ಅನುಸರಿಸಿ.

ಮಕರ ರಾಶಿ : ಆಸಮಯದಲ್ಲಿ ಭೋಜನವನ್ನು ಮಾಡಬೇಕಾಗುವುದು. ಕಾರ್ಯದ ಕಾರಣ ಸಂಭ್ರಮವನ್ನು ಕಳೆದುಕೊಳ್ಳಬೇಕಾಗುವುದು. ಶಿಕ್ಷಕವೃತ್ತಿಯವರು ಉನ್ನತ ಸ್ಥಾನದ ನಿರೀಕ್ಷೆಯಲ್ಲಿ ಇರುವರು. ಖಾಸಗಿ ಸಂಸ್ಥೆಯ ಹುದ್ದೆಯನ್ನು ನೀವು ಪಡೆಯಲಿದ್ದೀರಿ. ಧಾರ್ಮಿಕ‌ಚಿಂತನೆಗಳು ನಿಮ್ಮ ಮನಸ್ಸಿನಲ್ಲಿ ಓಡಬಹುದು. ನೀವು ಇಂದು ಹಳೆಯ ಸ್ನೇಹಿತನ ಜೊತೆ ಸೇರಿ ಹೊಸ ಉದ್ಯೋಗವನ್ನು ಆರಂಭಿಸುವ ಯೋಚನೆ ಮಾಡುವಿರಿ. ಆದಾಯವು ಕುಗ್ಗಬಹುದು. ತಂದೆ ಹಾಗೂ ತಾಯಿಯರ ಜೊತೆ ಬಹಳ ದಿನಗಳ ಅನಂತರ ಹರಟೆ ಹೊಡೆಯುವಿರಿ. ತೀರ್ಥಕ್ಷೇತ್ರಗಳ ದರ್ಶನವನ್ನು ಮಕ್ಕಳ ಜೊತೆ ಮಾಡುವಿರಿ. ಚಂಚಲವಾದ ಮನಸ್ಸನ್ನು ಏಕಾಗ್ರವಾಗಿ ಇಡಲು ಪ್ರಯತ್ನಿಸುವಿರಿ. ತಿಳಿದವರ ಜೊತೆ ಸಂದೇಹವನ್ನು ಪರಿಹರಿಸಿಕೊಳ್ಳುವಿರಿ.

ಕುಂಭ ರಾಶಿ : ಆದಾಯದ ಮೂಲದಲ್ಲಿ ಸಮಸ್ಯೆಯು ಕಾಣಿಸಿಕೊಂಡೀತು. ಆರೋಗ್ಯದಲ್ಲಿ ಹೆಚ್ಚಿನ ವ್ಯತ್ಯಾಸವು ಆಗಲಿದೆ. ಅನಗತ್ಯ ಖರ್ಚುಗಳ ಬಗ್ಗೆ ಗಮನವಿರಲಿ. ಅಧಿಕ ಆದಾಯ ಕೆಲಸವನ್ನು ಇಂದು ಹುಡುಕುವಿರಿ. ನಿಮ್ಮ ವ್ಯಾಪಾರಕ್ಕೆ ವಿದೇಶದ ಸಂಪರ್ಕವು ಬರಬಹುದು. ಮನೆಯಲ್ಲಿ ನಡೆದು ಶುಭಕಾರ್ಯದ ತಯಾರಿಯಲ್ಲಿ ನೀವು ಇರುವಿರಿ. ಆಸ್ತಿಯ ವಿಚಾರದಲ್ಲಿ ನಿಮ್ಮ ನಿಲುವಿಗೆ ಅಪಜಯವಾಗಬಹುದು. ಇಂದು ನೀವು ಸಂಗಾತಿಯ ಮಾತನ್ನೇ ಹೆಚ್ಚು ಕೇಳಬೇಕಾದೀತು. ಬಂಧುಗಳ ಒಡನಾಟವು ಹಿತವೆನಿಸುವುದು. ಸ್ನೇಹಿತರಿಗೋಸ್ಕರ ನೀವು ಹಣವನ್ನು ಖರ್ಚು ಮಾಡಬೇಕಾದೀತು. ನಿಮ್ಮ‌ ವಸ್ತುಗಳನ್ನು ದುರುಪಯೋಗ ಮಾಡಿಕೊಳ್ಳುವಿರಿ. ನೀವು ಇನ್ನೊಬ್ಬರಿಗೆ ನಿಮ್ಮನ್ನು ಹೋಲಿಸಿಕೊಂಡು ನಿಮ್ಮೊಳಗೇ ಸಂಕಟಪಡುವಿರಿ. ಉಪಕಾರ ಸ್ಮರಣೆಯನ್ನು ಇಟ್ಟುಕೊಳ್ಳಿ.

ಮೀನ ರಾಶಿ : ಪ್ರಯತ್ನಕ್ಕೆ ಫಲವು ಕಡಿಮೆ ಸಿಗುವುದೆಂಬ ಭಾವವು ನಿಮ್ಮಲ್ಲಿ ಜಾಗರೂಕವಾಗಿದ್ದು ಉತ್ಸಾಹವು ಆ ಕಾರಣಕ್ಕೆ ಕಡಿಮೆ ಇರುವುದು. ಕಾರ್ಯದ ಒತ್ತಡದಿಂದ ನೀವು ವಿಶ್ರಾಂತಿಯನ್ನು ಪಡೆಯುವುದು ಉತ್ತಮ. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹಿನ್ನಡೆಯಾಗುವುದು. ಆಭರಣ ಮಾರಾಟಗಾರು ಲಾಭವನ್ನು ಗಳಿಸಬಹುದು. ಶತ್ರುಗಳು ಅನ್ಯ ಕಾರ್ಯದಲ್ಲಿ ತೊಡಗಿರುವ ಕಾರಣ ನಿಮಗೆ ಬಾಧೆ ಇರದು. ಕಲಾವಿದರಿಗೆ ಅವಕಾಶದ ದೊಡ್ಡ ಬಾಗಿಲು ತೆರೆದುಕೊಳ್ಳಬಹುದು. ಎದುರಿಸಬಹುದಾದ ಸಮಸ್ಯೆಯನ್ನು ಧೈರ್ಯದಿಂದ ಮುನ್ನುಗ್ಗಿ. ಇಂದು ನಿಮಗೆ ಕೆಲಸವು ಆಗಬೇಕಾಗಿದ್ದು ಪ್ರಯಾಣವು ಅನಿವಾರ್ಯವಾಗುವುದು. ಒಂದೇ ಸಾರಿ ಖರ್ಚಿನ ಎಲ್ಲ ಅವಕಾಶಗಳನ್ನು ಇಟ್ಟುಕೊಳ್ಳಬೇಡಿ. ನಿಮ್ಮ ಮಾತು ಇನ್ನೊಬ್ಬರಿಗೆ ಸಿಟ್ಟು ಬರುವಂತೆ ಇರವುದು. ಮಕ್ಕಳ ವಿದ್ಯಾಭ್ಯಾಸದ ಖರ್ಚು ಸ್ವಲ್ಪ ಕಡಿಮೆ‌ ಆಗಿದ್ದು ಸಂತಸದ ಸಮಾಚಾರವಾಗಲಿದೆ. ದೈವಾನುಕೂಲವನ್ನು ಪ್ರಾರ್ಥಿಸುವಿರಿ.

-ಲೋಹಿತಶರ್ಮಾ – 8762924271 (what’s app only)

ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ
ಕರ್ನಾಟಕ ಬಿಜೆಪಿಯಲ್ಲಿ ಬದಲಾವಣೆ ಬಿರುಗಾಳಿ: ಯತ್ನಾಳ್ ಸ್ಫೋಟಕ ಹೇಳಿಕೆ
ಕರ್ನಾಟಕ ಬಿಜೆಪಿಯಲ್ಲಿ ಬದಲಾವಣೆ ಬಿರುಗಾಳಿ: ಯತ್ನಾಳ್ ಸ್ಫೋಟಕ ಹೇಳಿಕೆ
ತ್ರಿವಿಕ್ರಮ್ ಡೇಂಜರ್​ ಎಂದ ಭವ್ಯಾ ಗೌಡ; ರಾಧೆಗೆ ಈಗ ಬೇಡವಾದ ಕೃಷ್ಣ
ತ್ರಿವಿಕ್ರಮ್ ಡೇಂಜರ್​ ಎಂದ ಭವ್ಯಾ ಗೌಡ; ರಾಧೆಗೆ ಈಗ ಬೇಡವಾದ ಕೃಷ್ಣ
ಗ್ಯಾರಂಟಿಗಳಿಗೆ ನನ್ನ ವಿರೋಧವಿಲ್ಲ, ನಿಲ್ಲಿಸಬೇಡಿ, ಮುಂದುವರೆಸಿ: HDK
ಗ್ಯಾರಂಟಿಗಳಿಗೆ ನನ್ನ ವಿರೋಧವಿಲ್ಲ, ನಿಲ್ಲಿಸಬೇಡಿ, ಮುಂದುವರೆಸಿ: HDK