ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್ 16) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ತೃತೀಯಾ, ನಿತ್ಯನಕ್ಷತ್ರ: ಮೂಲಾ, ಯೋಗ: ಸುಕರ್ಮಾ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 34 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05-59 ಗಂಟೆ, ರಾಹು ಕಾಲ ಮಧ್ಯಾಹ್ನ 01:43 ರಿಂದ 03:08ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:35 ರಿಂದ 08:00ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:26 ರಿಂದ 10:52ರ ವರೆಗೆ.
ಧನು ರಾಶಿ : ಜವಾಬ್ದಾರಿಯ ಸ್ಥಾನದಲ್ಲಿ ಇದ್ದು ಮಾತನಾಡುವಾಗ ಎಚ್ಚರಿಕೆ ಇರಲಿ. ನಿಮ್ಮ ಕಣ್ಣು ಆಯಾಸವನ್ನು ಸ್ಪಷ್ಟವಾಗಿ ಹೇಳುವುದು. ಸಕಾರಾತ್ಮಕವಾಗಿ ಚಿಂತಿಸಿ ಕಾರ್ಯದಲ್ಲಿ ತೊಡಗಿಕೊಳ್ಳಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಇರಲಿದೆ. ಸ್ಥಿರಾಸ್ತಿಯನ್ನು ಖರೀದಿಸಲು ಉತ್ತಮ ಕಾಲವಿದು. ಗೃಹ ನಿರ್ಮಾಣದಂತಹ ಕಾರ್ಯಕ್ಕೆ ಕೈ ಹಾಕುವುದು ಬೇಡ. ವ್ಯವಹಾರದಲ್ಲಿ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ಅನಗತ್ಯ ವಾದ ವಿವಾದಗಳಿಂದ ದೂರವಿರಿ. ಮಕ್ಕಳು ನಿಮ್ಮ ವರ್ತನೆಯನ್ನು ವಿರೋಧಿಸಬಹುದು. ಅಂತರಂಗವನ್ನು ಆದಷ್ಟು ಗೌಪ್ಯವಾಗಿ ಇಡುವುದು ಬೇಕಾದೀತು. ನಿಮ್ಮ ಹಾರಿಕೆಯ ಮಾತುಗಳು ನಿಮ್ಮ ಬಗ್ಗೆ ನಂಬಿಕೆಯು ಇರದಂತೆ ಮಾಡುವುದು. ವ್ಯಾಪಾರದ ಉದ್ದೇಶಕ್ಕೆ ಹೊರ ನಿಮ್ಮ ವಿದೇಶ ಪ್ರವಾಸವು ಶುಭವನ್ನು ತರಲಿದೆ.
ಮಕರ ರಾಶಿ : ವಿದೇಶದಿಂದ ಸ್ನೇಹಿತರ ಆಗಮನವಾಗಲಿದೆ. ಸಹೋದ್ಯೋಗಿಗಳ ಜೊತೆ ಕಲಹವನ್ನು ಮಾಡಿಕೊಳ್ಳುವಿರಿ. ಹಿರಿಯರ ಮಧ್ಯಸ್ಥಿಕೆಯಿಂದ ಶಾಂತವಾಗುವುದು. ನಿಮ್ಮ ಸಮಸ್ಯೆಗಳಿಗೆ ಹಲವರು ಹಲವು ರೀತಿಯ ಸಲಹೆಗಳನ್ನು ನೀಡಬಹುದು. ಸಲಹೆಯನ್ನು ಏಕಚಿತ್ತದಿಂದ ಸ್ವೀಕರಿಸಿ, ನಿಮ್ಮ ವಿವೇಕದಿಂದ ಬಳಸಿಕೊಳ್ಳಿ. ಅನ್ಯರಿಂದ ಹಣಕಾಸಿನ ವಿಷಯದಲ್ಲಿ ಮೋಸ ಹೋಗುವ ಸನ್ನಿವೇಶವು ಬರಬಹುದು. ಎಲ್ಲವೂ ನಿಮ್ಮಿಂದ ಆದರೂ ಹೇಳಿಕೊಳ್ಳುವಾಗ ಗೌಣವಾಗಿರಲಿ. ದಾಂಪತ್ಯದಲ್ಲಿ ಸಲುಗೆಯು ಅತಿಯಾಗಲಿದೆ. ತಂದೆಯಿಂದ ಧನಾಗಮನವನ್ನು ನಿರೀಕ್ಷಿಸುವಿರಿ. ಬೇಸರವನ್ನು ಕಳೆಯಲು ಒಂಟಿಯಾಗಿ ದೂರ ಹೋಗಿ. ಪ್ರೇಯಸಿಯನ್ನು ದೂರಮಾಡಿಕೊಂಡು ದುಃಖಿಸುವ ಸಾಧ್ಯತೆ ಇದೆ. ನಿಮ್ಮ ಸಾಮರ್ಥ್ಯವನ್ನು ಸುಧಾರಿಸಲು ಒಂದು ಅವಕಾಶ ಸಿಗಲಿದೆ.
ಕುಂಭ ರಾಶಿ : ನಿಮ್ಮ ಪರಿಶ್ರಮದ ಆಧಾರದ ಮೇಲೆ ಫಲಾಫಲಗಳು ನಿರ್ಣಯವಾಗುವುದು. ಯಾರಿಗೂ ಉಪದೇಶ ನೀಡಲು ಹೋಗಬೇಡಿ. ಇಂದು ನಿಮ್ಮಲ್ಲಿ ಆತ್ಮಸ್ಥೈರ್ಯವು ಇರಲಿದೆ. ಮಾನಸಿಕವಾಗಿ ಸದೃಢರಾಗುವಿರಿ. ನೀವು ಅಂದಿಕೊಂಡಂತೆ ಸಹೋದರಿಯರಿಂದ ಸಹಕಾರ ದೊರೆಯುವುದಿಲ್ಲ. ನಿಮ್ಮ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ತಾಯಿಯ ಕಡೆಯಿಂದ ನಿಮಗೆ ಆರ್ಥಿಕ ಸಹಾಯವು ಸಿಗಬಹುದು. ಕುಟುಂಬದಲ್ಲಿ ನಿಮ್ಮ ಬಗ್ಗೆ ಭಯವು ಇರಲಿದೆ. ಮಾತು ಎಷ್ಟೇ ಸಹೃದಯತೆಯಿಂದ ಇದ್ದರೂ ಕೇಳಿಸಿಕೊಳ್ಳುವ ಸಹೃದಯರು ಸಿಗುವುದಿಲ್ಲ. ಉದ್ವಿಗ್ನತೆಯು ಉಂಟಾದಾಗ ಏನನ್ನಾದರೂ ಮಾಡಿಕೊಳ್ಳುವಿರಿ. ಅವಿವಾಹಿತರು ಯೋಗ್ಯವಾದ ಸಂಗಾತಿಯನ್ನು ಪಡೆಯುವರು. ನವವಿವಾಹಿತರಿಗೆ ಸಂತಸದ ಸುದ್ದಿಯು ಇರಲಿದೆ.
ಮೀನ ರಾಶಿ : ನಿಮ್ಮ ಬಗೆಗಿನ ಗೌರವ ಜನರಲ್ಲಿ ಹೆಚ್ಚಿರುವುದು. ಅವನ್ನು ಬಹಿರಂಗವಾಗಿಯೂ ಪ್ರಕಟಗೊಳಿಸುವರು. ಮತ್ತು ಧನ್ಯತಾಭಾವವೂ ಮೂಡುವುದು. ಆಧ್ಯಾತ್ಮಿಕ ಚಿಂತನೆಗಳಿಂದ ಮನಸ್ಸಿಗೆ ಶಾಂತತೆಯನ್ನು ಪಡೆಯುವಿರಿ. ಮನೆ ಹಿರಿಯರ ಆರೋಗ್ಯದ ಕಡೆ ಗಮನ ನೀಡಿ. ನಿಮ್ಮ ಪರಿಶ್ರಮಕ್ಕೆ ತಕ್ಕಷ್ಟು ಹಣ ಬರದೆ ತೊಂದರೆ ಅನುಭವಿಸುವಿರಿ. ಮಂದಗತಿಯಲ್ಲಿ ಸಾಗುವ ಕೆಲಸಗಳಿಗೆ ವೇಗವನ್ನು ಕೊಡುವಿರಿ. ನಿಮಗೆ ಆತ್ಮತೃಪ್ತಿಯು ಇರುವುದು. ವಾಹನ ಚಲಾಯಿಸುವಾಗ ಎಚ್ಚರ ಇರಲಿ. ಏಕತಾನತೆಯ ಜೀವನವು ನಿಮಗೆ ಬೇಸರವನ್ನು ಕೊಟ್ಟಿದ್ದು, ಹೊಸತನ್ನು ನೀವು ಬಯಸುವಿರಿ. ಇಂದು ನೀವು ಹೊಸ ಹೂಡಿಕೆಗೆ ಮನಸ್ಸು ಮಾಡುವಿರಿ. ಅತಿಯಾದ ಆಸೆಯಿಂದ ನಿಮಗೆ ಕೆಲವು ತೊಂದರೆಗಳು ಬರಬಹುದು. ಆರ್ಥಿಕವಾಗಿ ಸಬಲತೆಗೆ ಕ್ರಮವನ್ನು ಕೈಗೊಳ್ಳುವಿರಿ.
-ಲೋಹಿತಶರ್ಮಾ – 8762924271 (what’s app only)
Published On - 12:45 am, Thu, 16 November 23