AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರಿಗೆ ಪ್ರೀತಿ ಪಾತ್ರರಿಂದ ಉಡುಗೊರೆ ಬರಲಿದೆ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 18) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರಿಗೆ ಪ್ರೀತಿ ಪಾತ್ರರಿಂದ ಉಡುಗೊರೆ ಬರಲಿದೆ
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Nov 18, 2023 | 12:45 AM

Share

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಉತ್ತರಾಷಾಢಾ, ಯೋಗ: ಗಂಡ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 35 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05-59 ಗಂಟೆ, ರಾಹು ಕಾಲ ಬೆಳಗ್ಗೆ 09:27 ರಿಂದ 10:52ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:43 ರಿಂದ 03:09ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:36 ರಿಂದ 08:01ರ ವರೆಗೆ.

ಧನು ರಾಶಿ : ಲೋಹದ ವಸ್ತುಗಳಿಂದ ಘಾಸಿಯಾಗಬಹುದು. ಆದಷ್ಟು ಅಂತಹ ವಸ್ತುಗಳನ್ನು ದೂರವಿರಿಸಿ ಅಥವಾ ಬಹಳ ಜಾಗರೂಕತೆಯಿಂದ ಬಳಸಿ. ನೀವು ಮಾಡಿಕೊಂಡ ಎಡವಟ್ಟಿನಿಂದ ಅವಕಾಶದಿಂದ ವಂಚಿತರಾಗಬೇಕಾಗುವುದು. ಪರಾಧೀನ ಸ್ಥಿತಿಯಿಂದ ಮಾನಸಿಕ ಹಿಂಸೆಯಾದೀತು. ಅಧಿಕಾರದಿಂದ ಮಾತ್ರ ಎಲ್ಲವೂ ಸರಿಯಾಗುವುದು ಎಂಬ ಭ್ರಮೆ‌ ಬೇಡ. ಇಂದಿನ ಕಾರ್ಯವು ಯಾವುದೇ ತೊಂದರೆಗಳಿಲ್ಲದೇ ಮುಗಿಯುವುದು. ಸ್ತ್ರೀಯರು ಅನಾರೋಗ್ಯದಿಂದ ಪೀಡಿತರಾಗುವಿರಿ. ಮುಕ್ತ‌ ಮನಸ್ಸಿನಿಂದ ಮಾತನಾಡುವಿರಿ.‌ ದಾಂಪತ್ಯದಲ್ಲಿ ಹೊಂದಾಣಿಕೆ ಅವಶ್ಯಕತೆ ಅಧಿಕವಾಗಿ ಇರಲಿದೆ. ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತನ್ನು ಕಳೆದುಕೊಳ್ಳುವಿರಿ. ನಿಮಗೆ ಇಂದು ಪ್ರೀತಿ ಪಾತ್ರರಿಂದ ಉಡುಗೊರೆ ಬರಲಿದೆ. ವಿದ್ಯಾಭ್ಯಾಸವನ್ನು ಯೋಗ್ಯರೀತಿಯಲ್ಲಿ ನಡೆಸಲು ಕಷ್ಟವಾದೀತು.

ಮಕರ ರಾಶಿ : ಇಂದು ನೀವು ಅಂದುಕೊಂಡಷ್ಟು ಸರಳವಾಗಿ ಕಾರ್ಯಗಳನ್ನು ಮಾಡಲಾರಿರಿ. ಮಹಿಳೆಯರಿಂದ‌ ನಿಮಗೆ ಗೌರವವು ಸಿಗುವುದು. ಸ್ನೇಹಿತರಿಂದ ಆರ್ಥಿಕತೆಗೆ ಸಹಾಯವು ಸಿಗುವುದು. ಚಿಕಿತ್ಸೆಯಿಂದ ಆರೋಗ್ಯದಲ್ಲಿ ಸುಧಾರಣೆ ಇರಲಿದೆ. ಹಿತಶತ್ರುಗಳಿಂದ ತೊಂದರೆ ಎದುರಾದೀತು. ಹೊಸತರ ಕಲಿಕೆಯಲ್ಲಿ ಆಸಕ್ತಿಯು ಅಧಿಕವಾಗುವುದು. ಸಮಾರಂಭಗಳಿಗೆ ತೆರಳುವಿರಿ. ಕೃಷಿಕರಿಗೆ ಲಾಭದಲ್ಲಿ ಸ್ವಲ್ಪ ಇಳಿಮುಖ ಇರಲಿದೆ‌. ಸಾಮಾಜಿಕ ಕಾರ್ಯಗಳಿಂದ ಮೆಚ್ಚುಗೆ ಪಡೆಯುವಿರಿ. ಸಂಬಂಧದಲ್ಲಿ ಒಡಕು ಬರಬಹುದು.‌ ವ್ಯವಹಾರವು ಸರಿಯಾಗಿ ಇರಲಿ. ಅತಿಯಾದ ಕೋಪದಿಂದ ಎಲ್ಲ ಕೆಲಸವನ್ನು ವ್ಯತ್ಯಾಸ ಮಾಡಿಕೊಳ್ಳುವಿರಿ. ಆಲಂಕಾರಿಕ ವಸ್ತುಗಳನ್ನು ಖರೀದಿಸುವಿರಿ. ಅಧಿಕಾರಿಯ ವಿಶ್ವಾಸವನ್ನು ಪಡೆದು ಹೆಚ್ಚಿನ ಸ್ಥಾನ ಪಡೆಯುವಿರಿ. ಅನಿರೀಕ್ಷಿತ ರಾಜಕಾರಿಣಿಗಳ ಭೇಟಿಯಿಂದ ಕೆಲವು ಬದಲಾವಣೆಯನ್ನು ಕಾಣುವಿರಿ.

ಕುಂಭ ರಾಶಿ : ಮಾತನಾಡುವಾಗ ಎಚ್ಚರಿಕೆಯು ಅಗತ್ಯ. ಉದ್ಯಮದಲ್ಲಿ ಅಧಿಕ ಚಿಂತೆಯು ಇರಲಿದ್ದು ಪ್ರಯತ್ನವು ಅಧಿಕವಾಗಿ ಇರುವುದು. ಸಂಗಾತಿಯ ಮಾತನ್ನು ಇಂದು ಅನುಸರಿಸುವಿರಿ. ಮನೆಯಲ್ಲಿ ಹಿಂದಿನ ಘಟನೆಯೇ ಮರುಕಳಿಸಲಿದ್ದು ಸಣ್ಣ ವಾಗ್ವಾದವೂ ನಡೆಯಬಹುದು. ವ್ಯಾಪಾರವು ಸಾಧಾರಣವಾಗಿ ಇರಲಿದೆ. ಉದ್ಯೋಗವನ್ನು ಬದಲಿಸಲು ಮನಸ್ಸು ಇಲ್ಲದಿದ್ದರೂ ನಿಮಗೆ ಅನಿವಾರ್ಯ ಆಗಬಹುದು. ವಾಹನದಿಂದ ಬಿದ್ದು ಪೆಟ್ಟಾಗಬಹುದು. ದುರ್ಬಲರ‌ ಜೊತೆ ಸಂಘರ್ಷ ಬೇಡ. ಆತುರದಲ್ಲಿ ವಾಹನ ಚಾಲನೆಯಿಂದ ತೊಂದರೆಯಾದೀತು. ಇಂದು ಬಂಧುಗಳನ್ನು ಮನೆಗೆ ಆಹ್ವಾನಿಸುವಿರಿ. ಮನಸ್ಸಿನ ನೋವನ್ನು ಮರೆಯಲು ಒಂಟಿಯಾಗಿ ದೂರ ಹೋಗುವಿರಿ. ಪುಣ್ಯಕ್ಷೇತ್ರಗಳ ದರ್ಶನವನ್ನು ಮಾಡುವಿರಿ. ಅನಾರೋಗ್ಯದಿಂದ ಕೆಲಸಗಳಿಗೆ ವಿಘ್ನವು ಬರುವುದು.

ಮೀನ ರಾಶಿ : ಪ್ರೇಮಿಗಳು ಪರಸ್ಪರ ಮನಸ್ತಾಪದಿಂದ ಇರುವರು. ಸಾಲವನ್ನು ಪಡೆದುಕೊಳ್ಳಲು ಅವಕಾಶ ಲಭ್ಯವಾಗಬಹುದು. ಇಂದು ನಿಮಗೆ ದೇವರ ಕಾರ್ಯವನ್ನು ಮಾಡುವ ಉತ್ಸಾಹವಿರುವುದು. ಅದಕ್ಕಾಗಿ ಹೆಚ್ಚು ಸಮಯ ಕೊಡುವಿರಿ. ದೂರದಲ್ಲಿ ಇದ್ದ ಮಕ್ಕಳ ಆಗಮನದಿಂದ ಮನೆಯಲ್ಲಿ ಸಂತೋಷವು ಇರುವುದು. ಆಸ್ತಿಯನ್ನು ಖರೀದಿಸುವ ಕುರಿತು ಮನೆಯಲ್ಲಿ ಚರ್ಚೆಗಳು ನಡೆಯುವುದು. ಆರ್ಥಿಕ ಒತ್ತಡದಿಂದ ನೀವು ಹೊರಬರುವ ಮಾರ್ಗವನ್ನು ಹುಡುಕುವಿರಿ. ಇಂದಿನ ಉತ್ಸಾಹವು ಕೆಲಸಕ್ಕೆ ಪೂರಕವಾಗವುವುದು. ಹಣದ ಹರಿವು ಸಾಧಾರಣವಾಗಿ ಇರಲಿದೆ. ಪ್ರೀತಿಪಾತ್ರರ ವರ್ತನೆಯಿಂದ ಕಿರಿಕಿರಿ ಆಗಬಹುದು. ಹೇಳಲಾಗದ ಮರೆಯಲಾಗದ ಸ್ಥಿತಿ ಇರಲಿದೆ. ನೀವೇ ನಿಮ್ಮ ಬಗ್ಗೆ ಹೇಳಿಕೊಳ್ಳುವುದು ಉಚಿತವಲ್ಲ.‌

-ಲೋಹಿತಶರ್ಮಾ – 8762924271 (what’s app only)

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?