AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ಅಗತ್ಯ ವಸ್ತುಗಳ ಖರೀದಿ ಮಾತ್ರ ಆದಾಯ ಬಳಸಿ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 19) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರು ಅಗತ್ಯ ವಸ್ತುಗಳ ಖರೀದಿ ಮಾತ್ರ ಆದಾಯ ಬಳಸಿ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Nov 19, 2023 | 12:20 AM

Share

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 19) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್: ಋತು, ವೃಶ್ಚಿಕ: ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಭಾನು ತಿಥಿ: ಷಷ್ಠೀ, ನಿತ್ಯನಕ್ಷತ್ರ: ಶ್ರವಣಾ, ಯೋಗ: ವೃದ್ಧಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 36 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05-59 ಗಂಟೆ, ರಾಹು ಕಾಲ ಬೆಳಗ್ಗೆ 04:34 ರಿಂದ 05:59ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:18 ರಿಂದ 01:43ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:09 ರಿಂದ 04:34ರ ವರೆಗೆ.

ಧನು ರಾಶಿ: ಸಾಲವು ತೀರುವುದು ಎಂಬ ನಂಬಿಕೆಯು ಬರಲಿದೆ. ಸರಿಯಾದ ನಿದ್ರೆಯನ್ನು ಮಾಡಿ. ಹಳೆಯ ಸ್ನೇಹಿತರ ಭೇಟಿಯಾಗಬಹುದು. ವ್ಯಾಪಾರದಲ್ಲಿ ಲಾಭವನ್ನು ಕಂಡು ಏನಾದರೂ ಯೋಜನೆಯನ್ನು ಮಾಡಿ ಕಷ್ಟಕ್ಕೆ ಸಿಲುಕಿಕೊಳ್ಳುವಿರಿ. ಅಪರಿಚಿತರ ಬಗ್ಗೆ ಭಯವಿರುವುದು. ಪ್ರಶಂಸೆಯಿಂದ ಅಹಂಕಾರವು ಬರುವುದು. ‌ಮಿತ್ರರಿಗೆ ವಂಚಿಸುವ ಆಲೋಚನೆ ಬರಲಿದೆ. ಯಂತ್ರಗಳನ್ನು ಬಳಸಿಕೊಂಡು ಸಣ್ಣ ಉದ್ಯೋಗವನ್ನು ಆರಂಭಿಸುವಿರಿ. ವಿದೇಶದಲ್ಲಿ ಜೀವನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಪ್ರವಚನಕಾರರಿಗೆ ಉತ್ತಮ ಅವಕಾಶಗಳು ಲಭ್ಯವಿರಲಿದೆ. ದೌರ್ಬಲ್ಯವನ್ನು ನೀವು ಸಕಾರಾತ್ಮಕವಾಗಿ ತೆಗೆದುಕೊಂಡವು ಸಾಧಿಸುವಿರಿ. ವಿದೇಶದ ಬಂಧುಗಳು ನಿಮ್ಮ ಉದ್ಯಮಕ್ಕೆ ಸಹಾಯ ಮಾಡುವರು. ಪೂರ್ವಯೋಜಿತ ಕಾರ್ಯಕ್ಕೆ ಸಮಯವನ್ನು ಹೊಂದಿಸಿಕೊಳ್ಳಲಾಗದು.

ಮಕರ ರಾಶಿ: ಪ್ರೀತಿಪಾತ್ರರ ಭೇಟಿಯಿಂದ ಮನಸ್ಸು ನಿರಾಳವಾಗಬಹುದು. ಸಾಲವಾಗಿ ಹಣವನ್ನು ಬಂಧುಗಳಿಗೆ ಕೊಡಬೇಕಾದೀತು. ನಿಮ್ಮನ್ನು ಯಾರಾದರೂ ಹಾಸ್ಯ ಮಾಡಿಯಾರು. ಅನಿರೀಕ್ಷಿತ ಧನವ್ಯಯದಿಂದ ಆತಂಕವು ಆಗಲಿದೆ. ರಾಜಕೀಯದಿಂದ ನಿಮಗೆ ಪ್ರೇರಣೆ ಸಿಗುವುದು. ಆರ್ಥಿಕ ಲಾಭದಿಂದ ನೀವು ಸಂತೋಷ ಇರುವುದು ನಿಮ್ಮ ಮುಖದಲ್ಲಿ ಕಾಣಿಸುವುದು. ಹಳೆಯ ವಾಹನವನ್ನು ನೀವು ಖರೀದಿಸುವಿರಿ. ಸಾಲ ಮಾಡುವಾಗ ನಿಮ್ಮ ಆದಾಯವನ್ನು ಗಮನದಲ್ಲಿ ಇಟ್ಟುಕೊಳ್ಳುವುದು ಒಳ್ಳೆಯದು. ತಾಯಿಯ ಆರೋಗ್ಯದಲ್ಲಿ ಆದ ವ್ಯತ್ಯಾಸದಿಂದ ಚಿಂತೆಗೆ ಒಳಗಾಗುವಿರಿ. ಪ್ರಭಾವೀ ಜನರ ಭೇಟಿಯಿಂದ ಭವಿಷ್ಯಕ್ಕೆ ಅನೇಕ ಲಾಭವು ಆಗಲಿದೆ. ಸಾಮಾಜಿಕ ಕಾರ್ಯಕ್ಕೆ ಸಣ್ಣ ಕೊಡುಗೆ ನೀಡುವಿರಿ.

ಕುಂಭ ರಾಶಿ: ಆದಾಯವನ್ನು ಅಗತ್ಯ ವಸ್ತುಗಳ ಖರೀದಿಗೆ ಬಳಸಿ ಖಾಲಿ ಮಾಡಿಕೊಳ್ಳುವಿರಿ. ನಿಮ್ಮ ಭೂಮಿಯನ್ನು ಪಡೆದುಕೊಳ್ಳಲು ಸಾಹಸ ಮಾಡಬೇಕಾಗುವುದು. ನಿಮ್ಮ ನೆಮ್ಮದಿಗೆ ಸಂಗಾತಿಯು ಭಂಗವನ್ನು ಉಂಟುಮಾಡಬಹುದು. ಧಾರ್ಮಿಕ ವಿಚಾರದಲ್ಲಿ ನಿಷ್ಠೆಯನ್ನು ಇಟ್ಟುಕೊಳ್ಳಿ. ನಿಮಗೆ ಗೊತ್ತೇ ಅಗದಂತೆ ವಂಚನೆಯಲ್ಲಿ ಸಿಕ್ಕಿಬೀಳುವಿರಿ. ಅರೋಗ್ಯದ ಸುಧಾರಣೆಗೆ ವೈದ್ಯರ ಸಲಹೆ ಅವಶ್ಯಕ. ಎಲ್ಲರ ಮೇಲೂ ವಿನಾ ಕಾರಣ ಕೋಪ‌ ಮಾಡಿಕೊಳ್ಳುವಿರಿ. ರಾಜಕೀಯವನ್ನು ಬಂಧುಗಳ ನಡುವೆಯೂ ಮಾಡುವಿರಿ. ಆಸಕ್ತಿ ಇಲ್ಲದೇ ಇದ್ದರೂ ಕರ್ತವ್ಯದಲ್ಲಿ ಲೋಪವಿರಬಾರದು. ಮನಸ್ಸು ಚಂಚಲದಿಂದ ಯಾರ ಮಾತನ್ನೂ ಕೇಳುವ ಮನಃಸ್ಥಿತಿಯಲ್ಲಿ ಇರಲಾರಿರಿ. ದೂರದ ಬಂಧುಗಳು ಪರಿಚಿತರಾಗಿ ಅವರ ಜೊತೆ ಕಾಲ ಕಳೆಯುವಿರಿ. ನಿಮಗೆ ಕೃತಜ್ಞತೆ ಇರಲಿ.

ಮೀನ ರಾಶಿ: ಪರಸ್ಥಳದ ವಾಸದಿಂದ ನಿಮಗೆ ನಿದ್ರಯಲ್ಲಿ ಅಸಮಾಧಾನ ಇರುವುದು. ಸನ್ನಿವೇಶವನ್ನು ನೋಡಿ ನಿಮ್ಮ ವಾದವನ್ನು ಮುಂದುವಿರಿಸಿ. ದಿನದ ಕಾರ್ಯದಲ್ಲಿ ಅಡೆತಡೆಯಾಗಲಿದೆ. ಆರ್ಥಿಕ ಸಂಕಟವನ್ನು ಸ್ನೇಹಿತರ ಸಹಾಯವನ್ನು ಪಡೆದು ಸರಿಮಾಡಿಕೊಳ್ಳುವಿರಿ. ನಿಮ್ಮ‌ ಮಾತಿನ ಮೇಲೆ‌ ನಿಯಂತ್ರಣವಿರಲಿ. ನಿಮ್ಮ ವೃತ್ತಿಯು ನಿಮಗೆ ಗೌರವವನ್ನು ಕೊಡಿಸುವುದು. ನಿಮ್ಮ ವಸ್ತುವು ಕಳ್ಳರಿಂದ ಅಪಹರಣ ಆಗುತಗತದೆವೆಂಬ ಭಯವು ಇರುವುದು. ಇನ್ನೊಬ್ಬರ ಬಳಿ‌ ಇರುವ ನಿಮ್ಮ‌ ವಸ್ತುವನ್ನು ಬಹಳ‌ ಪ್ರಯತ್ನದಿಂದ ಪಡೆಯುವಿರಿ. ಬಂಧುಗಳಿಗಾಗಿ ಸಾಲ ಮಾಡುವ ಹಾಗೆ ಅಸದ ಆಗಬಹುದು. ಕೃಷಿಯಲ್ಲಿ ಆದ ಪ್ರಗತಿಯಿಂದ ಸಂತೋಷವಾಗುವುದು. ಅನಾರೋಗ್ಯವನ್ನು ಸರಿ ಮಾಡಿಕೊಳ್ಳುವಲ್ಲಿ ನಿಮ್ಮ ಪ್ರಯತ್ನವೂ ಬೇಕು. ಇಂದು ನಿಮ್ಮ ವಿವಾಹದ ಮಾತುಕತೆಯು ನಡೆಯುವುದು.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ