AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಈ ರಾಶಿಯವರು ದುಡುಕಿ ಕೆಲವು ಸಂದರ್ಭಗಳನ್ನು ಹಾಳುಮಾಡಿಕೊಳ್ಳುವುದು ಬೇಡ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 25) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ, ಈ ರಾಶಿಯವರು ದುಡುಕಿ ಕೆಲವು ಸಂದರ್ಭಗಳನ್ನು ಹಾಳುಮಾಡಿಕೊಳ್ಳುವುದು ಬೇಡ
ದಿನಭವಿಷ್ಯImage Credit source: iStock Photo
TV9 Web
| Updated By: Rakesh Nayak Manchi|

Updated on:Nov 25, 2023 | 10:36 PM

Share

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 25) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ವರಿಯಾನ್, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 39 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:29 ರಿಂದ 10:54ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:45 ರಿಂದ 03:10ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:39 ರಿಂದ 08:04ರ ವರೆಗೆ.

ಧನು ರಾಶಿ: ಪ್ರಯಾಣ ಮಾಡುವಾಗ ಜಾಗರೂಕತೆ ಮುಖ್ಯವಾಗಿರಲಿ. ಆರ್ಥಿಕತೆಯು ಸ್ವಲ್ಪ ಚೇತರಿಕೆಯಾಗಲಿದೆ. ಸಮಾರಂಭಗಳಿಗೆ ಭೇಟಿ ಕೊಡುವ ಸಂದರ್ಭವು ಬರಬಹುದು. ನಿಮ್ಮ ದಿನಚರಿಯು ಬದಲಾಗಿದ್ದು ಇದರಿಂದ ಆರೋಗ್ಯದ ಮೇಲೆ ಪರಿಣಾಮವು ಉಂಟಾಗಬಹುದು. ನೀವು ಇಂದು ಆರಂಭಿಸಿದ ಕೆಲಸವು ಪೂರ್ಣ ಆಗುವವರೆಗೂ ವಿಶ್ರಾಂತಿಯನ್ನು ಪಡೆಯುವುದಿಲ್ಲ. ಸಂಗಾತಿಯ ಜೊತೆ ಸ್ವಲ್ಪ ಹೊತ್ತು ಕಳೆಯಬೇಕು ಎಂಬ ಮನಸ್ಸಾದೀತು. ವಿದೇಶದ ಸ್ನೇಹಿತರ ಪರಿಚಯವನ್ನು ಮಾಡಿಕೊಳ್ಳುವಿರಿ. ಹಿತಶತ್ರುಗಳು ನಿಮ್ಮ ಮನಸ್ಸಿನ ಜೊತೆ ಆಟವಾಡಬಹುದು. ಉದ್ಯೋಗದಲ್ಲಿ ಉನ್ನತ ಸ್ಥಾನವನ್ನು ನೀವೇ ಕೇಳಿ ಪಡೆದುಕೊಳ್ಳಬೇಕಾದೀತು. ಯಾರ ಮೇಲೂ ದೋಷಾರೋಪವನ್ನು ಮಾಡುವಿರಿ. ನೀವು ಇಂದು ಕೆಲವರಿಗೆ ಅಪ್ರಾಮಾಣಿಕರಂತೆ ಕಾಣಿಸುವಿರಿ.

ಮಕರ ರಾಶಿ: ಮಕ್ಕಳನ್ನು ವಿದೇಶಕ್ಕೆ ವಿದ್ಯಾಭ್ಯಾಸಕ್ಕೆ ಕಳುಹಿಸಿಕೊಡುವ ಯೋಚನೆ ಮಾಡುವಿರಿ. ಇಂದು ನಿಮ್ಮ ನಂಬಿಕೆಯು ಬಲವಾಗುವ ಸನ್ನಿವೇಶವು ಕಾಣಿಸಿಕೊಳ್ಳುವುದು. ಸಂಗಾತಿಯ ಸ್ಪಂದನೆಯಿಂದ ಉತ್ಸಾಹವು ಅಧಿಕವಾಗುವುದು.‌ ಆಪ್ತರ ಸಲಹೆಯನ್ನು ನಿರಾಕರಿಸುವಿರಿ. ಯಾರನ್ನಾದರೂ ದ್ವೇಷಿಸುವ ಮನೋಭಾವವು ಬರುವ ಸಾಧ್ಯತೆ ಇದೆ. ನಿಮ್ಮ ಒರಟುತನವು ನಿಮಗೆ ಮುಳುವಾಗಬಹುದು. ದೇಹದ ನಾನಾ ಭಾಗಗಳಲ್ಲಿ ನೋವುಗಳು ಕಾಣಿಸಿಕೊಳ್ಳುವುದು. ನಿಮ್ಮ ವೈಯಕ್ತಿಕ ಕಾರ್ಯಗಳನ್ನು ಇಂದು ಮಾಡಿಕೊಳ್ಳಲಾಗದು. ಇನ್ನೊಬ್ಬರ ಒತ್ತಾಯಕ್ಕೆ ನಿಮ್ಮ ಸಮಯವನ್ನು ವ್ಯರ್ಥಮಾಡಿಕೊಂಡು ಭಾಗವಹಿಸುವಿಕೆ ಇರುವುದು. ಆರ್ಥಿಕ ಹಾಗೂ ಸಮಯದ ನಷ್ಟದಿಂದಾಗಿ ಬೇಸರಿಸುವಿರಿ. ಆಪ್ತರು ನೀಡುವ ಹಣಕ್ಕಾಗಿ ನೀವು ಕಾಯುತ್ತಿರಬೇಕಾದೀತು. ವಾಹನದ ನಷ್ಟವು ನಿಮಗೆ ಹೊರೆಯಾಗುವುದು.

ಕುಂಭ ರಾಶಿ: ನಿಮ್ಮ ಒಳ ಗುಟ್ಟನ್ನು ಯಾರ ಜೊತೆಯೂ ಹಂಚಿಕೊಳ್ಳುವುದು ಬೇಡ. ನಿಮ್ಮ ಊಹೆಯು ವ್ಯತ್ಯಾಸವಾಗಿ ಅನ್ಯರಿಂದ ಅಪಮಾನವಾಗಬಹುದು. ಆರ್ಥಿಕತೆಯನ್ನು ಬಲಪಡಿಸಿಕೊಳ್ಳುವಿರಿ. ಆಸ್ತಿಯ ಖರೀದಿಯಲ್ಲಿ ಗೊಂದಲ ಇರುವುದು. ಆದಾಯದ ಮೂಲವನ್ನು ಬಲಪಡಿಸಿಕೊಳ್ಳಬೇಕಾದೀತು. ಇನ್ನೊಬ್ಬರ ಅಪ್ರಯೋಜಕ ಸಲಹೆಗೆ ಕಿವಗೊಟ್ಟು ಒಳ್ಳೆಯ ವೃತ್ತಿಜೀವನವನ್ನು ಹಾಳು ಮಾಡಿಕೊಳ್ಳುವಿರಿ. ಮಕ್ಕಳ ಬಗ್ಗೆ ಪ್ರೀತಿ ಇರಲಿ. ಸ್ತ್ರೀಯರ ಬಳಿ ವಿನಂತಿ ಮಾಡಿಕೊಂಡು ಸಹಾಯವನ್ನು ಪಡೆದಯುವಿರಿ. ಮಾನಸಿಕ ಒತ್ತಡವನ್ನು ನಿವಾರಿಸಿಕೊಳ್ಳಲು ಒಂಟಿಯಾಗಿ ಸುತ್ತಾಡುವಿರಿ. ತಂದೆ ಹಾಗೂ ಮಕ್ಕಳ ಮಧ್ಯ ಕೆಲವು ವಿಚಾರಗಳಿವೆ ಭಿನ್ನಾಭಿಪ್ರಾಯಗಳು ಬಂದು ವಾಗ್ವಾದವೂ ಆಗಬಹುದು. ಉನ್ನತಮಟ್ಟದಲ್ಲಿ ಅಧಿಕಾರಿಗಳ ಸಂಪರ್ಕವನ್ನು ಬೆಳೆಸಿಕೊಳ್ಳುವಿರಿ. ಉದ್ವೇಗಕ್ಕೆ ಒಳಗಾಗಿ ನಿಮ್ಮನ್ನೇ ನೀವು ಮರೆಯಬಹುದು.

ಮೀನ ರಾಶಿ: ವೈವಾಹಿಕ ಜೀವನದಲ್ಲಿ ಕೆಲವು ತೊಂದರೆಗಳನ್ನು ಎದುರಿಸಬೇಕಾಗುವುದು. ದುಡುಕಿ ಕೆಲವು ಸಂದರ್ಭಗಳನ್ನು ಹಾಳುಮಾಡಿಕೊಳ್ಳುವುದು ಬೇಡ. ದೇಹದ ಆಲಸ್ಯವನ್ನು ಬಿಡವುದು ನಿಮಗೆ ಇಂದು ಸುಲಭವಾಗದು. ಇಂದು ನಿಮ್ಮ ಅನೇಕ‌ ದಿನಗಳ ಬಯಕೆಯನ್ನು ಪೂರ್ಣ ಮಾಡಿಕೊಳ್ಳುವ ಸಂದರ್ಭವು ಬರಬಹುದು. ರಕ್ಷಣಾವ್ಯವಸ್ಥೆಯಲ್ಲಿ ಇರುವವರಿಗೆ ಉನ್ನತ ಸ್ಥಾನವು ಸಿಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಓದಿಗಾಗಿ ಮನೆಯಿಂದ ದೂರವಿರಬೇಕಾಗಿ ಬರಬಹುದು. ಅನ್ಯರ ವಿಷಯದಲ್ಲಿ ಆಸಕ್ತಿಯು ಹೆಚ್ಚಾಗುವುದು. ಆರ್ಥಿಕತೆಯ ಕಾರಣದಿಂದ ಕಾರ್ಯಗಳು ಹಿಂದುಳಿಯುವ ಸಾಧ್ಯತೆ ಇದೆ. ಇದಕ್ಕಾಗಿ ಆಪ್ತರಿಂದ ಧನಸಹಾಯವನ್ನೂ ಬಯಸುವಿರಿ. ವಿವಾಹಕ್ಕೆ ತೊಂದರೆಯಾದ ವಿಷಯವನ್ನು ತಿಳಿದುಕೊಂಡು ಪರಿಹಾರ ಮಾಡಿಕೊಳ್ಳುವುದು ಉತ್ತಮ. ಮಾತಿನಲ್ಲಿ ತೂಕವಿರಲಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:45 am, Sat, 25 November 23

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?