ನಿತ್ಯ ಎದ್ದ ಕೂಡಲೇ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುವ ಅಭ್ಯಾಸ ಕೆಲವರಲ್ಲಿ ಇರುತ್ತದೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ? ಇದೆಯಾ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಇಂದಿನ (ಡಿಸೆಂಬರ್ 15) ನಿಮ್ಮ ರಾಶಿಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಶುಕ್ರವಾರ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಉತ್ತರಾಷಾಢಾ, ಯೋಗ: ವೃದ್ಧಿ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 50 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:03 ರಿಂದ ಮಧ್ಯಾಹ್ನ 12:28ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:16 ರಿಂದ 04:40ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:15 ರಿಂದ 09:39ರ ವರೆಗೆ.
ಧನು ರಾಶಿ: ಕಛೇರಿಯ ಕೆಲಸದಲ್ಲಿ ಸಹೋದ್ಯೋಗಿಗಳ ಅಸಹಕಾರವು ಇರುವುದು. ನಿಮಗೆ ಗೊತ್ತಿಲ್ಲದೇ ಇರುವ ಕಾರ್ಯವನ್ನು ಮಾಡಬೇಕಾಗುವುದು. ಉದ್ಯಮಿಗಳು ಇಂದು ಹಣವನ್ನು ಗಳಿಸುವ ಸಾಧ್ಯತೆಯಿದೆ, ಉತ್ಪಾದದನಾ ಕ್ಷೇತ್ರದಲ್ಲಿ ಕೊಂಚ ಹಿನ್ನಡೆ ಆಗಬಹುದು. ಹಲವು ದಿನಗಳಿಂದ ನಿರೀಕ್ಷಿಸುತ್ತಿದ್ದ ಘಟನೆಯು ಇಂದು ನಡೆಯುವುದು. ನಿಮ್ಮ ಧಾರ್ಮಿಕ ಶ್ರದ್ಧೆಗೆ ಇನ್ನಷ್ಟು ಬಲವು ಬರಲಿದೆ. ನಿಮ್ಮ ಪ್ರತಿಭೆಯನ್ನು ತೋರಿಸಲು ಸಂಕೋಚವಾಗುವುದು. ನಿಮ್ಮ ನಿಮಗೆ ಸಿಕ್ಕ ಬೆಂಬಲವನ್ನು ಇನ್ನೊಬ್ಬರಿಗೂ ಕೊಡುವ ಮನಸ್ಸು ಮಾಡಿ. ದೈಹಿಕ ಕಸರತ್ತನ್ನು ಮಿತವಾಗಿ ಮಾಡಿ. ಅತಿಯಾದ ಸಲುಗೆಯಿಂದ ನಿಮಗೆ ತೊಂದರೆ ಆಗಬಹುದು. ಸಾಲಗಾರರ ಬೆನ್ನು ಬಿಡದೇ ನೀವು ಬರುವ ಹಣವನ್ನು ಪಡೆದುಕೊಳ್ಳುವಿರಿ. ಉಪವಾಸದಿಂದ ಆರೋಗ್ಯವನ್ನು ಕೆಡಸಿಕೊಳ್ಳುವಿರಿ. ಅನಿರೀಕ್ಷಿತ ಧನಾಗಮನವು ನಿಮ್ಮ ಕಾರ್ಯಗಳಿಗೆ ಸರಿಯಾಗಿ ದೊರೆತಂತೆ ಆಗುವುದು.
ಮಕರ ರಾಶಿ: ಯಾರಾದರೂ ಹೊಸ ಯೋಜನೆಗಳ ಬಗ್ಗೆ ಸಲಹೆಯನ್ನು ಕೊಡುವರು, ಉದ್ಯೋಗದ ಕಾರಣದಿಂದ ನೀವು ಓಡಾಟವನ್ನು ಮಾಡಬೇಕಾಗುವುದು. ಹಳೆಯ ಸ್ನೇಹಿತರನ್ನು ನೀವು ಭೇಟಿಯಾಗಿ ಎಲ್ಲ ಸಂಗತಿಗಳನ್ನು ಹಂಚಿಕೊಳ್ಳುವಿರಿ. ನೀವು ಅಂದುಕೊಂಡಿದ್ದಕ್ಕಿಂತ ಹೆಚ್ಚಿನ ಖರ್ಚನ್ನು ನಿಮ್ಮ ಯೋಜನೆಯು ತೆಗೆದುಕೊಂಡಿದ್ದು ನಿಮಗೆ ಚಿಂತೆಯಾಗಬಹುದು. ಚರಾಸ್ತಿಯ ವಿಷಯದಲ್ಲಿ ನೀವು ಅಸ್ವತಂತ್ರರಾಗಿರುವಿರಿ. ಮನೆಯ ಕಾರ್ಯದಲ್ಲಿ ನಿಮಗೆ ಒತ್ತಡವು ಅಧಿಕವಾಗಿ ಇರಲಿದೆ. ಯಾವುದೋ ಸಂಸ್ಥೆಯಲ್ಲಿ ಹಣ ಹೂಡಿಕೆಯನ್ನು ಮಾಡಲು ಹೋಗುವಿರಿ. ಕರಕುಶಲ ವಸ್ತುಗಳ ಮಾರಾಟವನ್ನು ನೀವು ಮಾಡಲು ಉತ್ಸಾಹದಿಂದ ಇರುವಿರಿ. ಕಛೇರಿಯ ಕೆಲಸದಲ್ಲಿ ಮೇಲಧಿಕಾರಿಗಳಿಂದ ಅಕ್ಷೇಪವು ಬರಬಹುದು. ನಿಮ್ಮ ಆಸ್ತಿಗೆ ಸಂಬಂಧಿಸಿದ ಕಾರ್ಯಗಳಿಗೆ ಹೆಚ್ಚು ಓಡಾಟವಾಗುವುದು. ನಿಮ್ಮ ಬಗ್ಗೆ ಪ್ರಶಂಸೆಯ ಮಾತುಗಳು ಕೇಳಿಬಂದರೂ ಅದನ್ನು ನಗಣ್ಯ ಮಾಡುವಿರಿ. ಸಭೆಯಲ್ಲಿ ಮಾತನಾಡುವ ಅವಕಾಶವು ಸಿಗಲಿದೆ.
ಕುಂಭ ರಾಶಿ: ಸಂಶೋಧನಾ ಕಾರ್ಯದಲ್ಲಿ ನಿರತರಾಗಿರುವವರಿಗೆ ಮಾರ್ಗಗಳು ತೆರೆದುಕೊಳ್ಳುವುದು. ಸಣ್ಣ ವ್ಯವಹಾರಗಳಿಂದ ನೀವು ಹೆಚ್ಚಿನ ಲಾಭವನ್ನು ಪಡೆಯುವಿರಿ. ಮೇಲಿಂದ ಮೇಲೆ ಒತ್ತಡಗಳು ಕಾಣಿಸಿಕೊಳ್ಳುವುದು. ವಿದ್ಯಾರ್ಥಿಗಳು ಓದಿನ ಬಗ್ಗೆ ಗಂಭೀರವಾದ ನಿರ್ಧಾರವನ್ನು ತೆಗೆದುಕೊಳ್ಳುವ ಅವಶ್ಯಕತೆ ಇದೆ. ಬಂಧುಗಳ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣ ಇರಲಿದೆ. ನಿಮ್ಮ ಆರೋಗ್ಯದ ಸಮಸ್ಯೆಯನ್ನು ತಳ್ಳಿಹಾಕುವುದು ಬೇಡ. ಗುರಿಯ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ವೈಫಲ್ಯಕ್ಕೆ ಕಾರಣವಾಗುವುದು. ದುರ್ಬಲವಾದ ಮನಸ್ಸನ್ನು ನೀವು ಬಲಮಾಡಿಕೊಳ್ಳುವ ಅವಶ್ಯಕತೆ ಇರಲಿದೆ. ನಿಮ್ಮಲ್ಲಿ ಯಾರೂ ಸಾಧಿಸದಿರುವ ಹಾಗೂ ತಾನು ಸಾಧಿಸಿದೆನೆಂಬ ತೃಪ್ತಿ, ಅದಕ್ಕಿಂತ ಹೆಚ್ಚು ಅಹಂಕಾರವು ಕಾಣಿಸುವುದು. ಬರಬೇಕಾದ ಪೂರ್ಣವಾಗಿ ಬಾರದು. ಇಂದು ನಿಮ್ಮ ವೈಯಕ್ತಿಕ ಕಾರ್ಯಗಳನ್ನು ಮಾಡಿ ಮುಗಿಸಲು ಹೆಚ್ಚು ಗಮನಹರಿಸುವಿರಿ. ಸನ್ಮಾನಗಳನ್ನು ಬಯಸುವಿರಿ.
ಮೀನ ರಾಶಿ: ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಅಹಂಕಾರವು ಬಂದೀತು, ನಿಮಗೆ ಸಾಮಾನ್ಯರ ಜೊತೆ ಸಾಮಾನ್ಯರಂತೆ ವರ್ತಿಸುವುದು ಇಷ್ಟವಾಗುವುದು. ವ್ಯಾಪಾರವನ್ನು ನೀವು ವಿಸ್ತಾರ ಮಾಡಿಕೊಳ್ಳುವ ಯೋಜನೆಯನ್ನು ಹೊಂದುವಿರಿ. ಪ್ರಭಾವೀ ವ್ಯಕ್ತಿಗಳ ಬಗ್ಗೆ ನಿಮಗೆ ಮುಜುಗರವಾಗಬಹುದು. ಅನಿವಾರ್ಯವಾಗಿ ಕಾರ್ಯಗಳನ್ನು ಮಾಡಬೇಕಾಗಬಹುದು. ಕುಟುಂಬದ ಜೊತೆ ಸಮಯವನ್ನು ಕಳೆಯಬೇಕು ಎಂದುಕೊಂಡರೂ ಆಗದು. ನಿಮ್ಮ ಆತ್ಮೀಯವಾದ ಮಾತಿನಿಂದ ಅಪರಿಚಿತರ ಸ್ನೇಹವನ್ನು ಗಳಿಸುವಿರಿ. ಆಕಸ್ಮಿಕವಾಗಿ ದ್ರವ್ಯಪ್ರಾಪ್ತಿಯಾಗುವುದು. ದಾಂಪತ್ಯದಲ್ಲಿ ನಂಬಿಕೆ ಹೆಚ್ಚಾಗುವುದು. ಆದಾಯದ ಮೂಲದಲ್ಲಿ ಬದಲಾವಣೆಯಾಗಲಿದೆ. ಕೆಲವನ್ನು ನೀವು ಬೇಕೆಂದೇ ಬಿಟ್ಟುಕೊಳ್ಳುವಿರಿ. ಊಹಿಸದ ಬದಲಾವಣೆಯು ನಿಮ್ಮಿಂದಾಗಬಹುದು. ಸೌಂದರ್ಯದಿಂದ ಸ್ತ್ರೀಯರು ಆಕರ್ಷಕವಾಗಿ ಕಾಣುವಿರಿ.
ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ