Horoscope:ನಿಮ್ಮ ಮನಸ್ಸಿಗೆ ಇಷ್ಟವಾಗದ ಘಟನೆಯು ದಿನವಿಡೀ ನಿಮ್ಮನ್ನು ಕಾಡುವುದು

| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 17, 2023 | 9:28 PM

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಡಿಸೆಂಬರ್ 17 ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Horoscope:ನಿಮ್ಮ ಮನಸ್ಸಿಗೆ ಇಷ್ಟವಾಗದ ಘಟನೆಯು ದಿನವಿಡೀ ನಿಮ್ಮನ್ನು ಕಾಡುವುದು
ರಾಶಿ ಭವಿಷ್ಯ
Follow us on

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಡಿಸೆಂಬರ್ 17) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ವೃಶ್ಚಿಕ ಮಾಸ,
ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಪಂಚಮೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ವ್ಯಾಘಾತ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 51 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 05 ನಿಮಿಷಕ್ಕೆ, ರಾಹು ಕಾಲ ಸಂಜೆ 04:41 ರಿಂದ 06:06ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:29 ರಿಂದ 01:53ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:17 ರಿಂದ 04:41ರ ವರೆಗೆ.

ಧನು ರಾಶಿ : ನಿಮಗೆ ನಿಮ್ಮ ತಪ್ಪಿನ ಅರಿವಾದರೂ ಅದನ್ನು ಸರಿ ಮಾಡಿಕೊಳ್ಳುವ ಮನಸ್ಸಿದ್ದರೂ ಸಮಯ ಮಾತ್ರ ದೂರ ಸರಿದಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ನೀವು ಬಂಧುಗಳ ಸಹಾಯವನ್ನು ಕೇಳುವಿರಿ. ಕೊಟ್ಟ ಹಣಕ್ಕೆ ಸರಿಯಾದ ಕೆಲಸವನ್ನು ಮಾಡಿಕೊಡುವಿರಿ.‌ ಗ್ರಾಹಕರಲ್ಲಿ ಸಂತುಷ್ಟಿ ಇರುವುದು. ಆಸ್ತಿಯನ್ನು ಸ್ವಂತಕ್ಕೆ ಮಾಡಿಕೊಳ್ಳುವ ಉಪಾಯವು ಹೊಳೆಯಬಹುದು. ಅಧ್ಯಾತ್ಮದಲ್ಲಿ ಹೆಚ್ಚು ತೊಡಗಿಕೊಳ್ಳುವಿರಿ. ಪ್ರೇಮ ವಿವಾಹವು ನಿಮಗೆ ಖಷಿಕೊಡದು. ಯಾರನ್ನಾದರೂ ಪ್ರೀತಿಸುವ ಮನಸ್ಸಾಗುವುದು. ನಿಮ್ಮ ಅಸ್ಮಿತೆಯನ್ನು ನೀವು ಬಿಟ್ಟಕೊಡಲಾರಿರಿ.‌ ಮನೆಯ ಜವಾಬ್ದಾರಿಯನ್ನು ಅನಿವಾರ್ಯವಾಗಿ ತೆಗೆದುಕೊಳ್ಳಬೇಕಾಗುವುದು. ನಿಮ್ಮ ವಸ್ತುಗಳು ಇಲ್ಕವಾಗಿದ್ದು ನಿಮಗೆ ಗೊತ್ತಾಗದೇಹೋಗುವುದು. ಇಷ್ಟು ದಿನ ಗುಪ್ತವಾಗಿದ್ದ ಪ್ರೇಮವು ಇಂದು ಪ್ರಕಟವಾಗುವುದು.

ಮಕರ ರಾಶಿ : ದೊಡ್ಡ ವ್ಯಕ್ತಿಗಳ ಸಹವಾಸವನ್ನು ಮಾಡಿ ಅವರ ಜೊತೆ ನಿಮ್ಮ‌ ಹಲವು ದಿನದ‌ ಸಮಸ್ಯೆಗಳನ್ನು ಹೇಳಿಕೊಳ್ಳುವಿರಿ.‌ ಪಾಲುದಾರಿಕೆಯಲ್ಲಿ ನಿಮಗೆ ಸೂಕ್ತ ವ್ಯಕ್ತಿಗಳ ಕೊರತೆ ಕಾಣಿಸುವುದು. ವಿದೇಶೀಯ ವ್ಯವಹಾರದ ಮಾರ್ಗವು ನಿಮಗೆ ತೆರೆದುಕೊಳ್ಳುವುದು. ಹೂಡಿಕೆಗೆ ಒತ್ತಡವು ಇರುವುದು. ನಿಮ್ಮ‌ ಬಗ್ಗೆ ನಿಮ್ಮ ಶ್ರಮದಿಂದ ಎಣಿಸಿದಷ್ಟು ಲಾಭವು ಆಗುವುದು. ಲಾಭದ ಮುಂದೆ ಆಯಾಸವು ನಗಣ್ಯವಾಗಲಿದೆ. ಪುಣ್ಯಕ್ಷೇತ್ರಗಳ ದರ್ಶನದ ಬಗ್ಗೆ ನೀವು ಹೆಚ್ಚು ಉತ್ಸುಕರಾಗಿರುವಿರಿ. ಕಳೆದ ಸಮಯವನ್ನು ಚಿಂತಿಸಿ ಪ್ರಯೋಜನವಾಗದು. ನಿಮ್ಮ ಕಡೆಯಿಂದ ಆದ ತಪ್ಪಿಗೆ ಕ್ಷಮೆಯನ್ನು ಕೇಳಿ ಸರಿ ಮಾಡಿಕೊಳ್ಳಿ. ಉಪಕಾರದ ಸ್ಮರಣೆಯಿಂದ ಕೆಲಸವನ್ನು ಮಾಡಿ. ಸರಳವಾದುದನ್ನು ಸಂಕೀರ್ಣ ಮಾಡಿಕೊಳ್ಳುವಿರಿ. ನೀವು ಕುಟುಂಬದ ಬಗ್ಗೆ ತೆಗೆದುಕೊಂಡ ತೀರ್ಮಾನವು ಇತರರಿಗೂ ಸರಿಯಾಗುವುದು. ಗೃಹಬಳಕೆಯ ವಸ್ತುಗಳ ಮಾರಾಟವು ನಿಮಗೆ ಲಾಭವನ್ನು ಕೊಡುವುದು.

ಕುಂಭ ರಾಶಿ : ಸಂಗಾತಿಯ ಮಾತಿನಿಂದ ಉದ್ವೇಗಕ್ಕೆ ಒಳಗಾಗುವಿರಿ. ಮನೋರಂಜನೆಯ ಅವಧಿಯಲ್ಲಿ ಸ್ನೇಹಿತರ ಜೊತೆ ಸಮಯವನ್ನು ಕಳೆಯುವಿರಿ. ಸ್ನೇಹಿತರು ಕೊಟ್ಟ ಹಣವನ್ನು ಪುನಃ ಕೇಳಿದ್ದು ನಿಮಗೆ ಅಪಮಾನವಾಗುವುದು. ಅಪಘಾತಗಳು ಸಂಭವಿಸಬಹುದು. ದ್ವಿಚಕ್ರ ವಾಹನ ಸವಾರರು ಎಚ್ಚರಿಕೆಯಿಂದ ಚಾಲಾಯಿಸಬೇಕಾಗುವುದು. ಮಕ್ಕಳ ಜೊತೆ ವಿದೇಶ ಪ್ರವಾಸಕ್ಕೆ ತೆರಳುವಿರಿ. ನಿಮ್ಮ ಮನಸ್ಸಿಗೆ ಇಷ್ಟವಾಗದ ಘಟನೆಯು ದಿನವಿಡೀ ನಿಮ್ಮನ್ನು ಕಾಡುವುದು. ನಿಮಗಾದ ನಷ್ಟವನ್ನು ಸರಿ ಮಾಡಿಕೊಳ್ಳಲು ನಿಮ್ಮ ಮಾರ್ಗವು ಬದಲಾದೀತು. ಉದ್ಯೋಗದ ಬಗ್ಗೆ ಅನೇಕ ಸಲಹೆಗಳು ಬರಬಹುದು. ಎಲ್ಲವನ್ನೂ ಸಮಾಧಾನ ಚಿತ್ತದಿಂದ ಆಲಿಸಿ. ನಿಮ್ಮ ನೋವಿಗೆ ಯಾರೂ ಸ್ಪಂದಿಸದಿರುವುದು ನಿಮಗೆ ಬೇಸರವಾಗುವುದು. ನಿಮ್ಮ‌ ಇಂದಿನ ನಡೆಯನ್ನು ಗುರುತಿಸಲಾಗದು. ಇಂದು ನಿಮ್ಮ ಸಾಮರ್ಥ್ಯದ ಮೇಲೆ ಪೂರ್ಣವಿಶ್ವಾಸವು ಇರದು.

ಮೀನ ರಾಶಿ : ನಿಮ್ಮ ತಗ್ಗಿ ಬಗ್ಗಿ ನಡೆಯುವ ಗುಣದಿಂದ ಆಗಬೇಕಾದ ಕಾರ್ಯಗಳು ಬೇಗನೆ ಆಗಲಿವೆ. ನಿಮ್ಮ‌ ಅರೋಗ್ಯದ ಬಗ್ಗೆ ಮಕ್ಕಳು ಹೆಚ್ಚಿನ ಕಾಳಜಿ ವಹಿಸುವರು. ನಿಮ್ಮ ಒತ್ತಡಗಳು ಎಂದಿಗಿಂತ ಕಡಿಮೆ ಇರುವ ಕಾರಣ ಮನಸ್ಸು ‌ಸಮಾಧಾನದಿಂದ ಇರುವುದು. ದುರಭ್ಯಾಸದಿಂದ ದೂರವಿರಬೇಕು ಎನ್ನಿಸಬಹುದು. ಭೂಮಿಯ ಒಳಗೆ ಸಿಗುವ ವಸ್ತುಗಳಿಂದ ಲಾಭವನ್ನು ಪಡೆಯಬಹುದು. ನಿಮ್ಮ‌ ಕನಸು ಅರ್ಧ ಪೂರ್ಣವಾಗಿದ್ದು ಖುಷಿ ಕೊಡುವುದು.‌ ಮನಸ್ಸು ಅಮೂರ್ತವಾದ ಅನಂದದಲ್ಲಿ ಇರಲಿದೆ. ಉನ್ನತವಾದ ಸ್ಥಾನಕ್ಕೆ ಏರಲು ನಿಮ್ಮೆದುರು ಅವಕಾಶವು ತೆರೆದುಕೊಳ್ಳುವುದು. ಆಪ್ತರನ್ನು ಅನುಮಾನಿಸುವುದು ಬೇಡ. ನಿಮ್ಮ ಸಂಬಂಧಿಸದ ವಿಚಾರದಲ್ಲಿ ಮಧ್ಯಪ್ರವೇಶವನ್ನು ಮಾಡುವುದು ಬೇಡ. ನೂತನ ಗೃಹನಿರ್ಮಾಣವನ್ನು ಮಾಡಲು ಚಿಂತಿಸುವಿರಿ. ಸ್ವಂತ ಉದ್ಯಮವನ್ನು ವಿಸ್ತರಿಸಲು ನಿಮಗೆ ಕೆಲವು ಕೊರತೆಗಳು ಇರವುದು.

-ಲೋಹಿತ ಹೆಬ್ಬಾರ್ – 8762924271 (what’s app only)

Published On - 12:45 am, Sun, 17 December 23