Horoscope: ಇನ್ನೊಬ್ಬರ ರಹಸ್ಯದ ವಿಚಾರವನ್ನು ದ್ವೇಷದ ಕಾರಣಕ್ಕೆ ಹೊರ ಹಾಕುವಿರಿ

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಡಿಸೆಂಬರ್ 21 ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Horoscope: ಇನ್ನೊಬ್ಬರ ರಹಸ್ಯದ ವಿಚಾರವನ್ನು ದ್ವೇಷದ ಕಾರಣಕ್ಕೆ ಹೊರ ಹಾಕುವಿರಿ
ರಾಶಿ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 21, 2023 | 12:45 AM

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಡಿಸೆಂಬರ್ 21) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ನವಮೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ವರಿಯಾನ್, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 53 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 07 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:55 ರಿಂದ 03:19 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:04 ರಿಂದ 08:18ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:42 ರಿಂದ 11:06ರ ವರೆಗೆ.

ಧನು ರಾಶಿ : ಉದ್ಯೋಗವನ್ನು ಅರಸುತ್ತಿರುವ ನೀವು ದುಡಿಕಿ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಉತ್ತಮ ಕೆಲಸವನ್ನು ನಷ್ಟ ಮಾಡಿಕೊಳ್ಳುವಿರಿ. ಯಂತ್ರದ ವ್ಯಾಪಾರದಿಂದ ನಿಮಗೆ ಲಾಭವು ಅಧಿಕವಾಗುವುದು. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡಿಕೊಂಡು ಅನಂತರ ಬೇಸರಿಸುವರು. ಉದ್ಯಮದ ಕಾರಣ ಇರುವ ಸ್ಥಳದಿಂದ ದೂರ ಹೋಗಬೇಕಾಗುವದು. ಸುಳ್ಳನ್ನಾಡಿ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಅಚಾತುರ್ಯದಿಂದ ಹಣವನ್ನು ಕಳೆದುಕೊಳ್ಳಬೇಕಾದೀತು. ಬೇಡದ ಕಾರ್ಯಕ್ಕೆ ಯಾರಾದರೂ ಪ್ರಚೋದಿಸಿಯಾರು. ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು. ಒಂದು ಕಾರ್ಯಕ್ಕೆ ವಿಘ್ನಗಳು ಬರುತ್ತಿದ್ದು ದೈವಜ್ಞರನ್ನು ಸಂಪರ್ಕಿಸಿ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದು ಉತ್ತಮ. ನಿಮ್ಮ ಬಗ್ಗೆ ಯಾರಿಗೂ ಗೊತ್ತಿಲ್ಲ ಮಾಹಿತಿಯು ಗೊತ್ತಾಗುವುದು. ವಿದ್ಯೆಯ ಕಾರಣಕ್ಕೆ ಇಂದು ನಿಮಗೆ ಗೌರವವು ಸಿಗಲಿದೆ.

ಮಕರ ರಾಶಿ : ನೀವು ತಮ್ಮ ಹಠಮಾರಿತನದಿಂದ ಬೇರೆಯವರ ಹೃದಯವನ್ನೂ ನೋಯಿಸಬಹುದು. ಮೇಲಧಿಕಾರಿಗಳಿಗೆ ನೇರ ನುಡಿಯ ಪ್ರತಿಕ್ರಿಯೆಯನ್ನು ನೀಡುವುದು ಬೇಡ. ದಿನನಿತ್ಯದ ಬಳಕೆಯ ವಸ್ತುಗಳ ವ್ಯಾಪಾರ ಮಾಡುವವರ ಮಾರಾಟ ನಿರೀಕ್ಷೆಗಿಂತ ಹೆಚ್ಚಾಗಿರುತ್ತದೆ. ವಿವಾದದಲ್ಲಿರುವ ಆಸ್ತಿಯಿಂದ ಮಾರಾಟವು ನಿಧಾನವಾಗುವುದು. ಸರ್ಕಾರ ಕಾರ್ಯವು ಇಂದು ಪೂರ್ಣವಾಗದು ಎಂದು ಅಂದುಕೊಂಡಿದ್ದರೂ ಕೊನೆಗೆ ಕೆಲಸವಾಗುವುದು. ಎಲ್ಲರ ಮೇಲೂ ಅನುಮಾನ ಪಡುವ ದುರಭ್ಯಾಸವು ಬೆಳೆಯಬಹುದು. ಮನೆಯ ಸಮೀಪದಲ್ಲಿಯೇ ನಿಮ್ಮ ಉದ್ಯೋಗವು ಸಿಗಲಿದೆ. ಮನೆಯಲ್ಲಿ ತಾಳ್ಮೆಯಿಂದ ವ್ಯವಹರಿಸಿ. ನಿಮ್ಮ ವಾಹನಕ್ಕಾಗಿ ಖರ್ಚನ್ನು ಮಾಡಬೇಕಾಗುವುದು. ಸಿಕ್ಕ ಅವಕಾಶದಲ್ಲಿ ಪ್ರೀತಿಯಿರಲಿ. ಕೊರಗುತ್ತ ಇರುವುದು ಬೇಡ. ಪ್ರೀತಿಯ ವಿಷಯದಲ್ಲಿ ಇಂದು ದುಃಖವುಂಟಾಗಬಹುದು. ಮನಸ್ತಾಪವನ್ನು ದ್ವೇಷವಾಗಿ ಪರಿವರ್ತಿಸಿಕೊಳ್ಳುವುದು ಬೇಡ.

ಕುಂಭ ರಾಶಿ : ಇನ್ನೊಬ್ಬರ ರಹಸ್ಯದ ವಿಚಾರವನ್ನು ದ್ವೇಷದ ಕಾರಣಕ್ಕೆ ಹೊರ ಹಾಕುವಿರಿ. ನಿಮ್ಮ ಕಾರ್ಯದ ಅನುಭವವು ಇಂದು ಪ್ರಯೋಜನಕ್ಕೆ ಬರಲಿದ್ದು, ಎಲ್ಲರೂ ನಿಮ್ಮ ಸಲಹೆಯನ್ನು ಪಡೆಯುವರು. ಕಲಾವಿದರು ಅವಕಾಶದಿಂದ ವಂಚಿತರಾಗಬೇಕಾಗುವುದು. ಇಂದು ನಿಮಗೆ ಸಾಮಾಜಿಕ ಕಾರ್ಯಗಳಿಗೆ ಪ್ರೇರಣೆ ಸಿಗಬಹುದು. ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಓಡಾಟವು ಅಧಿಕವಾಗಿ ಇರುವುದು. ಸ್ನೇಹಿತರು ನಿಮಗೆ ಸುಳ್ಳು ಹೇಳುವರು. ಮಕ್ಕಳ ವಿದ್ಯಾಭ್ಯಾಸಕ್ಕೆ ನೀವೇ ವಿಶೇಷ ಕಾಳಜಿಯನ್ನು ತೋರಿ ಅವರನ್ನು ಓದಿಗೆ ಪ್ರೇರಣೆ ಕೊಡಬೇಕಾಗುವುದು. ದಿನದ ಕೆಲಸವೇ ಇಂದು ಬಹಳ ಆಗಲಿದ್ದು ಇನ್ನೊಬ್ಬರ ಕೆಲಸವನ್ನು ಮಾಡಿಕೊಡಲು ತಾಳ್ಮೆ ಇರಲಾರದು. ಹೂಡಿಕೆಗೆ ಯಾರಿಂದಲಾದರೂ ಪ್ರೇರಣೆ ಸಿಗಬಹುದು. ಇಂದು ನಿಮ್ಮ ಉತ್ಸಾಹವನ್ನು ಯಾರಿಂದಲೂ ಸಾಧ್ಯವಾಗದು. ಆದಾಯದ ವಿಚಾರದಲ್ಲಿ ಹಿನ್ನಡೆಯಾಗಿದ್ದು ನಿಮ್ಮ ತಂತ್ರವು ಪೂರ್ಣವಾಗಿ ಫಲಿಸದು.

ಮೀನ ರಾಶಿ : ಕಾರ್ಯದಲ್ಲಿ ಸಂಪೂರ್ಣ ಜಾಗರೂಕರಾದಾಗ ಮಾತ್ರ ಅವಕಾಶಗಳು ಸಿಗುತ್ತವೆ. ಕಛೇರಿ ಕೆಲಸವು ನಿಮ್ಮ ಸ್ವಂತ ಕೆಲಸಕ್ಕೆ ತೊಂದರೆಯನ್ನು ಕೊಡಬಹುದು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನವನ್ನು ನೀಡುವರು. ಯಾರದೋ ವಿವಾಹದ ಕಾರ್ಯಕ್ಕೆ ಓಡಾಟ ಮಾಡಬೇಕಾದೀತು. ಒಂದಿಷ್ಟು ಆಯಾಸ ಬಿಟ್ಟರೆ, ಮತ್ತೇನೂ ಆಗದು. ಇನ್ನೊಬ್ಬರ ಬಗ್ಗೆ ನಿಮ್ಮಲ್ಲಿ ಕುತೂಹಲ ಇರಲಿದೆ. ಸಜ್ಜನರ ಜೊತೆ ಸಮಯ ಕಳೆಯುವ ಅವಕಾಶ ಸಿಗುವುದು. ಸಂಗಾತಿಯ ಜೊತೆ ಭಿನ್ನಮತವು ಬರಬಹುದು. ಕುಟುಂಬದ ಹಿರಿಯರ ಅನಾರೋಗ್ಯದ ಕಾರಣ ನಿಮ್ಮ ಸ್ವಂತ ಕಾರ್ಯವನ್ನು ಮಾಡಿಕೊಳ್ಳಲಾಗದು. ಆಭರಣ ಖರೀದಿಗೆ ಉತ್ತಮ ದಿನವಿದಾಗಲಿದೆ. ವೃದ್ಧರ ಸೇವೆಯಲ್ಲಿ ತೊಡಗಿಕೊಳ್ಳುವಿರಿ. ಉದ್ಯೋಗವನ್ನು ನಂಬಿ ಜೀವನ ಸಾಗಿಸುವವರಿಗೆ ಬೇಸರ ಎದುರಾಗಬಹುದು.

-ಲೋಹಿತ ಹೆಬ್ಬಾರ್ – 8762924271 (what’s app only)

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ