Horoscope: ದುರಭ್ಯಾಸದ ಕಾರಣ ಮರ್ಯಾದಿಯನ್ನು ಕಳೆದುಕೊಳ್ಳಬೇಕಾದೀತು-ಎಚ್ಚರ

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಡಿಸೆಂಬರ್ 22 ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Horoscope: ದುರಭ್ಯಾಸದ ಕಾರಣ ಮರ್ಯಾದಿಯನ್ನು ಕಳೆದುಕೊಳ್ಳಬೇಕಾದೀತು-ಎಚ್ಚರ
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 22, 2023 | 12:45 AM

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಡಿಸೆಂಬರ್ 22) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ದಶಮೀ, ನಿತ್ಯನಕ್ಷತ್ರ: ಭರಣೀ, ಯೋಗ: ಪರಿಘ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 54 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 07 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 11:07 ರಿಂದ 12:31 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:20 ರಿಂದ 04:44ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 08:18 ರಿಂದ 09:43ರ ವರೆಗೆ.

ಧನು ರಾಶಿ : ಹಣಕಾಸಿನ ಭವು ನಿರೀಕ್ಷೆಗಿಂತ ಕಡಿಮೆಯಾಗಬಹುದು. ಇಂದು ಕೆಲವು ಪರಿಸ್ಥಿತಿಯನ್ನು ಎದುರಿಸಲು ಸಂಕೋಚವಾಗಬಹುದು. ಬುದ್ಧಿವಂತಿಕೆಯಿಂದ ಹೂಡಿಕೆ ಮಾಡುವುದು ಸೂಕ್ತ. ಪೂರ್ವಿಕರ ಆಸ್ತಿಗೆ ಸಂಬಂಧಿಸಿದಂತೆ ಮನಸ್ತಾಪವು ಬರಬಹುದು. ತುರ್ತು ಹಣವು ಬೇಕಿದ್ದರಿಂದ ಸ್ನೇಹಿತರನ್ನು ಕೇಳುವಿರಿ. ಮನೆಯ ಕಾರ್ಯದಲ್ಲಿ ನಿಮ್ಮ ಇಡೀ ದಿನವು ಕಳೆದು ಹೋದುದ್ದು ಗೊತ್ತಾಗದೇ ಹೋಗಬಹುದು. ದುರಭ್ಯಾಸದ ಕಾರಣ ಮರ್ಯಾದಿಯನ್ನು ಕಳೆದುಕೊಳ್ಳಬೇಕಾದೀತು. ಮಹಿಳೆಯರಿಗೆ ಸಹಾಯ ಮಾಡಲು ಹೋಗಿ ಅಪವಾದಕ್ಕೆ ಸಿಕ್ಕುವಿರಿ. ನಿಮ್ಮ ನಿರುದ್ಯೋಗಕ್ಕೆ ಸೂಕ್ತ ಪರಿಹಾರ ಸಿಗಲಿದೆ. ಅನಿರೀಕ್ಷಿತವಾಗಿ ಇಂದು ಮನೆಯಲ್ಲಿಯೇ ಕಛೇರಿಯ ಕಾರ್ಯವನ್ನು ಮಾಡಬೇಕಾಗುವುದು. ದುಃಖವನ್ನು ಹಂಚಿಕೊಂಡು ಕಡಿಮೆ ಮಾಡಿಕೊಳ್ಳುವಿರಿ. ಸ್ವತಂತ್ರ ಆಲೋಚನೆಯು ನಿಮಗೆ ಉಪಯುಕ್ತವಾಗುವುದು.

ಮಕರ ರಾಶಿ : ಹಳೆಯ ಖಾಯಿಲೆಯಿಂದ ಕಷ್ಟವಾಗಬಹುದು. ನಿಮ್ಮ ಸಂಗಾತಿಯ ಆರೋಗ್ಯವೂ ವ್ಯತ್ಯಾಸವಾಗಿ ಉದ್ವೇಗಕ್ಕೆ ಒಳಗಾಗುವರು. ವಾಹನ ಚಾಲನೆ ಮಾಡುವಾಗ ಜಾಗರೂಕತೆ ಅವಶ್ಯವಾಗಿದೆ. ಶುಭಕರ್ಮವನ್ನು ಮಾಡುವ ಉತ್ಸಾಹವಗಬಹುದು. ಸಂಗಾತಿಯ ಜೊತೆಗಿನ ಕಲಹವು ನಿಮ್ಮ ಇಡೀ ದಿನವನ್ನು ಸರಿಯಾಗಿ ಕಳೆಯುವಂತೆ ಮಾಡದು. ದೂರಪ್ರಯಾಣವು ಆಯಾಸವನ್ನು ಕೊಡಬಹುದು. ಪಂಡಿತರ ಸಹವಾಸ ತೊರೆಯುವುದು. ಆರ್ಥಿಕತೆಯು ದುರ್ಬಲವಾದ ಕಾರಣ ಆತಂಕವು ಉಂಟಾಗಬಹುದು. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮ್ಮ ಉತ್ಸಾಹಕ್ಕೆ ಭಂಗ ಬರುವುದು. ಆಪತ್ಕಾಲಕ್ಕಾಗಿ ಕೂಡಿಟ್ಟ ಹಣವು ಇಂದು ಖರ್ಚು ಮಾಡಬೇಕಾಗುವುದು. ಭವಿಷ್ಯದ ಬಗ್ಗೆ ಅಸ್ಪಷ್ಟತೆ ಇರುವ ಕಾರಣ ಮನಸ್ಸಿಗೆ ಕಿರಿಕಿರಿ ಇರುವುದು. ದೃಷ್ಟಿದೋಷಕ್ಕೆ ಸೂಕ್ತ ಔಷಧಿಯು ಸಿಗಲಿದೆ.

ಕುಂಭ ರಾಶಿ : ನಿಮ್ಮ ಕೌಶಲ್ಯವು ಸಾರ್ವಜನಿಕವಾಗಿ ಮೆಚ್ಚುಗೆಯಾಗಲಿದೆ. ಹೊಸ ಉದ್ಯಮಕ್ಕೆ ಇಂದು ಉತ್ತಮವಿರುವುದು. ನೀವು ಉದ್ಯೋಗವನ್ನು ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ನಿಮ್ಮ ಜೀವನಶೈಲಿಯನ್ನು ಸುಧಾರಿಸಿಕೊಳ್ಳಿ. ಶತ್ರುಬಾಧೆಯಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗುಬುದು. ನಿಮ್ಮ ಏಳ್ಗೆಯನ್ನು ಇತರರು ಸಹಿಸಿಕೊಳ್ಳುವುದು ಕಷ್ಟವಾಗುವುದು. ಯಾರ ಬಗ್ಗೆಯೂ ಸಲ್ಲದ ಮಾತನಾಡಿ ಸಿಕ್ಕಿಕೊಳ್ಳುವಿರಿ. ಸ್ವಯಂ ಕೃತ ಅಪರಾಧದಿಂದ ಪಶ್ಚಾತ್ತಾಪವಾಗುವುದು. ಸಂಗಾತಿಯ ವಿಷಯದಲ್ಲಿ ನಿಮಗೆ ಸಮಾಧಾನ ಇರದು. ಮನೆಯಲ್ಲಿ ಇಂದು ಸ್ನೇಹ ಕೂಟವು ಏರ್ಪಡುವುದು. ನಿಮ್ಮ ಬಳಿ ಇರುವ ಸಂಪತ್ತನ್ನು ಎಲ್ಲರಿಗೂ ಹೇಳಬೇಕಾದೀತು. ನಿಮ್ಮ ಜೀವನ ಶೈಲಿಯನ್ನು ಬದಲಿಸಿಕೊಳ್ಳುವಿರಿ. ಕಛೇರಿಯ ವ್ಯವಹಾರವನ್ನು ಮನೆಯಲ್ಲಿ ಚರ್ಚಿಸುವುದು ಬೇಡ.

ಮೀನ ರಾಶಿ : ಕಾನೂನಾತ್ಮಕ ವಿಚಾರದಲ್ಲಿ ತಿಳಿವಳಿಕೆಯನ್ನು ಇಟ್ಟುಕೊಂಡು ವ್ಯವಹರಿಸಿ. ನೀವು ಪ್ರತಿಕೂಲ ಪರಿಸ್ಥಿತಿಯಲ್ಲಿ ನಿಮ್ಮನ್ನು ಕಂಡುಕೊಳ್ಳಬಹುದು. ಭೂಮಿಯ ವ್ಯವಹಾರವು ನಿಮಗೆ ಲಾಭದಾಯಕವೆಂದು ಸಾಬೀತುಪಡಿಸಬಹುದು. ಧಾರ್ಮಿಕ ಕಾರ್ಯಗಳಿಗೆ ಖರ್ಚು ಮಾಡುವ ಸಾಧ್ಯತೆಯಿದೆ, ಇದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ನಿಮ್ಮ ಹಣವನ್ನು ಬಲಾತ್ಕಾರದಿಂದ ಪಡೆಯಬೇಕಾಗಬಹುದು. ಸ್ತ್ರೀಯರು ಸಂತೋಷದಿಂದ ದಿನ ಕಳೆಯುವಿರಿ. ನಿಮಗೆ ಇಂದು ಧಾರ್ಮಿಕ ಕಾರ್ಯದಲ್ಲಿ ತೃಪ್ತಿಯು ಸಿಗಲಿದೆ. ಸಂಗಾತಿಯ ಪ್ರೀತಿಯು ನಿಮಗೆ ಅಚ್ವರಿಯಾಗಬಹುದು. ನೌಕರರಿಗೆ ಇಂದು ಸಂತೋಷವನ್ನು ಕೊಡುವಿರಿ. ಸಂತೋಷದ ನಡುವೆ ಯಾರನ್ನೂ ಬೇಸರಿಸುವುದು ಬೇಡ. ನಿಮ್ಮ ಅಧ್ಯಾತ್ಮ ಜೀವನದಿಂದ ಪ್ರಭಾವಿತರಾಗುವರು. ಅತಿಯಾದ ಭೋಜನದಿಂದ ಕಷ್ಟವಾದೀತು. ತಾಯಿಯ ಬಂಧುಗಳು ನಿಮಗೆ ಸಹಕಾರವನ್ನು ನೀಡಬಹುದು.

-ಲೋಹಿತ ಹೆಬ್ಬಾರ್ – 8762924271 (what’s app only)

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ