AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ವಾಹನದಲ್ಲಿ ದೂರ ಸಂಚಾರವು ನಿಮಗೆ ಖುಷಿಯನ್ನು ಕೊಡುವುದು.‌

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಡಿಸೆಂಬರ್ 24 ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Horoscope: ವಾಹನದಲ್ಲಿ ದೂರ ಸಂಚಾರವು ನಿಮಗೆ ಖುಷಿಯನ್ನು ಕೊಡುವುದು.‌
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 24, 2023 | 12:45 AM

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಡಿಸೆಂಬರ್ 24) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಸಾಧ್ಯ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 54 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 08 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:43 ರಿಂದ 11:07 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:56 ರಿಂದ 03:20ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:55 ರಿಂದ 08:19ರ ವರೆಗೆ.

ಧನು ರಾಶಿ : ಜೀವನವನ್ನು ಸಂತೋಷದಿಂದ ಕಳೆಯುವ ವಿಧಾನವು ನಿಮಗೆ ಗೊತ್ತಿದೆ. ವಾಹನದಲ್ಲಿ ದೂರ ಸಂಚಾರವು ನಿಮಗೆ ಖುಷಿಯನ್ನು ಕೊಡುವುದು.‌ ಇಂದು ಆಸ್ತಿಯ ಮಾರಾಟಕ್ಕೆ ಸಂಬಂಧಿಸಿದಂತೆ ಹೆಚ್ಚು ತಿರುಗಾಟ ಮಾಡಬೇಕಾಗುವುದು. ಮಕ್ಕಳ ವಿದ್ಯಾಭ್ಯಾಸದ ಖರ್ಚನ್ನು ನೋಡಿಕೊಳ್ಳಲು ಹೋಗಿ ನಿಮ್ಮ ಆರ್ಥಿಕತೆಯು ಹಿಂದಡಿ ಇಡಬಹುದು. ಸಮಾರಂಭದಲ್ಲಿ ಹಳೆಯ ಸ್ನೇಹಿತರ ಭೇಟಿಯಾಗುವುದು. ಆಕಸ್ಮಿಕ ಧನಪ್ರಾಪ್ತಿಯಿಂದ ಹರ್ಷಗೊಳ್ಳುವಿರಿ. ಶ್ರೇಷ್ಠ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ. ವಿದ್ಯಾರ್ಥಿಗಳು ಯಾರ ಬೆಂಬಲಕ್ಕೂ ಕಾಯದೇ ನಿಮ್ಮ ಪ್ರತಿಭೆಯ ಪ್ರದರ್ಶನಕ್ಕೆ ಮುನ್ನುಗ್ಗುವುದು ಸೂಕ್ತ. ನಿಮ್ಮ ಮನಸ್ಸಿಗೆ ಪೂರ್ಣವಾಗಿ ಒಪ್ಪಿಗೆ ಆದರೆ ಮಾತ್ರ ಯಾವ ಕೆಲಸಕ್ಕಾದರೂ ಮುಂದುವರಿಯಿರಿ. ನಿಮಗೆ ಇಷ್ಟವಾದ ವಿಚಾರವನ್ನು ತಕ್ಷಣ ಪಡೆಯುವಿರಿ. ಉದ್ಯೋಗವಿಲ್ಲವೆಂಬುದು ನಿಮಗೆ ಅವಮಾನದ ಸಂಗತಿಯಾಗಲಿದೆ.

ಮಕರ ರಾಶಿ : ಎಲ್ಲರ ಜೊತೆಗಿದ್ದರೂ ಒಂಟಿಯಂತೆ ಅನ್ನಿಸುವುದು.‌ ಸ್ಪರ್ಧೆಯಲ್ಲಿ ಹಿನ್ನಡೆಯಾಗಬಹುದು. ಯಾರನ್ನೂ ಸುಲಭವಾಗಿ ಒಪ್ಪಿಕೊಳ್ಳುವುದಿಲ್ಲ. ಇಂದು ಸ್ತ್ರೀಯರಿಗೆ ಮಾನಿಸಿಕವಾದ ಕಿರಿಕಿರಿ ಇರಲಿದ್ದು ತೊಂದರೆಯಾಗಬಹುದು. ಯಂತ್ರೋತ್ಪನ್ನಗಳ ತಯಾರಿಯಲ್ಲಿ ಹಿನ್ನಡೆಯಾಗಬಹುದು. ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ಪಡೆಯುವಿರಿ. ನಿಮ್ಮ‌ ವಸ್ತುಗಳ ಮೇಲೆ ಅತಿಯಾದ ಮೋಹವು ಇರುವುದು. ವೈಯಕ್ತಿಕ‌ ಕೆಲಸಗಳು ಬಹಳಷ್ಟು ಇದ್ದು, ಮಾಡಲು ಸಮಯ ಸಾಲದು. ಮಿತ್ರರ ಸಹಾಯದಿಂದ ನಿಮಗೆ ಧನ ಸಹಾಯವು ಸಿಗಬಹುದು. ಸಾರ್ವಜನಿಕವಾಗಿ ಅವಮಾನವಾಗುವ ಸಾಧ್ಯತೆ ಇದೆ. ನಿಮಗೆ ಪರಿಚಿತರನ್ನು ಆಪ್ತರನದನಾಗಿ ಮಾಡಿಕೊಳ್ಳುವಿರಿ. ನಿಮ್ಮ ಸ್ವಾಭಿಮಾನಕ್ಕೆ ತೊಂದರೆ ಆದೀತು. ಸಂಗಾತಿಯ ಭಾವನೆಗಳಿಗೆ ಸ್ಪಂದಿಸದೇ ಇರುವುದರಿಂದ ನಿಮ್ಮ ಮೇಲೆ ಕೋಪಗೊಳ್ಳುವರು.

ಕುಂಭ ರಾಶಿ : ನಿಮ್ಮ ಅಮೂಲ್ಯ ವಿಚಾರಗಳನ್ನು ಇನ್ನೊಬ್ಬರ ಜೊತೆ ಹಂಚಿಕೊಳ್ಳುವ ಅಗತ್ಯವಿಲ್ಲ. ಮನೆಯಲ್ಲಿ ನಡೆಯುವ ಶುಭ ಕಾರ್ಯಕ್ಕೆ ಹೆಚ್ಚು ಖರ್ಚಾಗಬಹುದು. ನಿಮ್ಮ ಅಂದಾಜು ಮೀರಬಹುದು. ಮಕ್ಕಳಿಗೆ ಇರುವ ಗೊಂದಲವನ್ನು ದೂರ ಮಾಡುವಿರಿ.‌ ಆದಾಯಕ್ಕೆ ನಾನಾ ಮೂಲವನ್ನು ಆಯ್ಕೆ ಮಾಡಿಕೊಳ್ಳುವಿರಿ. ಆಕಸ್ಮಿಕವಾಗಿ ಆರೋಗ್ಯವು ಹದ ತಪ್ಪಬಹುದು. ನಿಮ್ಮನ್ನು ನೀವು ಬದಲಿಸಿಕೊಳ್ಳಬೇಕಾಗುವುದು. ವಿದೇಶದ ವ್ಯವಹಾರದಲ್ಲಿ ಪಾಲುದಾರಿಕೆ ಇರಲಿದೆ. ವೃತ್ತಿಯನ್ನು ಹೊರತುಪಡಿಸಿದ ಅವಕಾಶಗಳು ನಿಮ್ಮನ್ನು ಹುಡುಕಿ ಬರಬಹುದು. ಕಾರ್ಯದ ಸ್ಥಳವು ಬದಲಾಗುವ ಸಾಧ್ಯತೆ ಇದೆ. ಉತ್ತಮ ಸಮಯದ ನಿರೀಕ್ಷೆಯಲ್ಲಿ ಸಮಾಧಾನ ಇರುವುದು. ನಿಮ್ಮಲ್ಲಿ ಇರುವ ವಸ್ತುಗಳನ್ನು ನೀವು ಯಾರಿಗಾದರೂ ಕೊಡುವುದು ಬೇಡ. ನಿಮ್ಮ ಕೋಪವು ವ್ಯರ್ಥವಾದೀತು.

ಮೀನ ರಾಶಿ : ಆರ್ಥಿಕ ಭದ್ರೆತೆಯ ಬಗ್ಗೆ ನಿಮಗೆ ತೊಂದರೆಗಳು ಆಗಬಹುದು. ಇಲ್ಲವಾದರೆ ಯಾವ ಪ್ರಯೋಜನವೂ ಇಲ್ಲದೇ ನಷ್ಟವಾಗುವುದು. ವೈವಾಹಿಕ ಜೀವನವನ್ನು ನಡೆಸುವ ಬಗ್ಗೆ ನಿಮಗೆ ಸಲಹೆಗಳು ಸಿಗುವುದು. ಭೂಮಿಗೆ ಸಂಬಂಧಿಸಿದ ವಿಚಾರಗಳನ್ನು ಇತ್ಯರ್ಥ ಮಾಡಿಕೊಳ್ಳುವುದು ಉಚಿತ. ಉನ್ನತ ವಿದ್ಯಾಭ್ಯಾಸದ ಪ್ರಯುಕ್ತ ಹೊರಗಡೆ ಇರಲಿರುವಿರಿ. ನಿಮ್ಮ ಕಾರ್ಯವು ಆಗಬೇಕಾದರೆ ಓಡಾಟ ಅನಿವಾರ್ಯವಾಗಲಿದೆ. ನಿಮ್ಮ ಕೆಲಸವು ಬದಲಾವಣೆಯಾಗಬಹುದು. ಅನಾರೋಗ್ಯದ ನಡುವೆಯೂ ಉತ್ಸಾಹದಿಂದ ಇರುವಿರಿ. ಶತ್ರುಗಳ ಮುಖಾಮುಖಿ ಭೇಟಿಯ ಸಂದರ್ಭವು ಬರುವುದು. ನೀವು ಇಂದು ಯಾವ ವಿಚಾರವನ್ನು ಮಾತನಾಡುವುದಿದ್ದರೂ ಎಚ್ಚರವಿರಲಿ. ಒತ್ತಾಯದ ಕಾರಣ ಸಮಾರಂಭಗಳಿಗೆ ಹೋಗುವಿರಿ.

-ಲೋಹಿತ ಹೆಬ್ಬಾರ್ – 8762924271 (what’s app only)

ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ