Horoscope: ಹಠದ ಸ್ವಭಾವವು ಎಲ್ಲರ ಪ್ರೀತಿಯಿಂದ ನಿಮ್ಮನ್ನು ದೂರಮಾಡಬಹುದು

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಡಿಸೆಂಬರ್ 25 ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Horoscope: ಹಠದ ಸ್ವಭಾವವು ಎಲ್ಲರ ಪ್ರೀತಿಯಿಂದ ನಿಮ್ಮನ್ನು ದೂರಮಾಡಬಹುದು
ರಾಶಿ ಭವಿಷ್ಯ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 25, 2023 | 12:45 AM

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಡಿಸೆಂಬರ್ 25) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಶುಭ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 55 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 09 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 08:20 ರಿಂದ 09:44 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 11:08 ರಿಂದ 12:33ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:57 ರಿಂದ 05:21ರ ವರೆಗೆ.

ಧನು ರಾಶಿ : ಅದೃಷ್ಟವನ್ನು ನಂಬಿ ಕುಳಿತುಕೊಳ್ಳದೇ ನಿಮ್ಮ ಪ್ರಯತ್ನವನ್ನು ಮಾಡುವುದು ಉತ್ತಮ. ಪ್ರೀತಿಯನ್ನು ನೀವು ಬಹಳ ಸೂಕ್ಷ್ಮವಾಗಿ ಮುಂದುವರಿಸಬೇಕಾಗುವುದು. ವ್ಯಾವಹಾರಿಕ ಜಾಣ್ಮೆಯನ್ನು ನೀವು ಇಟ್ಟುಕೊಂಡು ಲಾಭವನ್ನು ಪಡೆಯುವಿರಿ. ನಿಮಗೆ ವಿದ್ಯೆಯನ್ನು ನೀಡಿದವರು ಅನೇಕ ವರ್ಷಗಳ ಅನಂತರ ಸಿಗಬಹುದು. ಅತ್ಯಂತ ಸಂಭ್ರಮ ಪಡುವಿರಿ. ಕಾನೂನಿನ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಿರಿ. ಆಸ್ತಿಯನ್ನು ಮಾಡುವ ಚಿಂತನೆ ಅಧಿಕವಾಗಿರುವುದು. ಹಠದ ಸ್ವಭಾವವು ಎಲ್ಲರ ಪ್ರೀತಿಯಿಂದ ನಿಮ್ಮನ್ನು ದೂರಮಾಡಬಹುದು. ಇಂದು ಹಣಕಾಸಿನ ವ್ಯವಹಾರ ಮಾಡಲು ಧೈರ್ಯವು ಸಾಕಾಗದು. ಮಕ್ಕಳ ಒತ್ತಾಯಕ್ಕೆ ಇಂದು ಪ್ರಯಾಣವನ್ನು ಮಾಡುವಿರಿ. ನಿಮ್ಮ ಇಷ್ಟವಾದ ವಸ್ತುವು ಕಣ್ಮೆಯಾರಿಗಿರುವುದು ಇಂದು ಗೊತ್ತಾಗುವುದು. ಇಂದು ಆರ್ಥಿಕ ಸಹಾಯವನ್ನು ಇನ್ನೊಬ್ಬರಿಂದ ಪಡೆಯುವಿರಿ.

ಮಕರ ರಾಶಿ : ಅದೃಷ್ಟ ನಿಮ್ಮ ಜೊತೆ ಇದೆ ಎಂದು ಏನೆಲ್ಲ ಮಾಡಿಕೊಳ್ಳುವುದು ಬೇಡ. ಕುಟುಂಬದ ಕಡೆಯಿಂದ ಸಂತೋಷದ ಮಾತುಗಳು ಇರುವುದು. ನಿಮ್ಮ ಕೆಲಸದಿಂದ ಉತ್ತಮ ಹೆಸರು ಕುಟುಂಬಕ್ಕೆ ಸಿಗುವುದು. ಕೊಟ್ಟ ಹಣವನ್ನು ಪುನಃ ಕೇಳಲು ಮುಜುಗರವಾದೀತು. ಸಹೋದರಿಗೆ ನಿಮ್ಮಂದ ಅಪೇಕ್ಷಿತ ಸಹಾಯವು ಸಿಗಲಿದೆ. ಹಳೆಯ ವಾಹನದ ಮಾರಾಟ ಮಾಡಿ ಹೊಸ ವಾಹನವನ್ನು ಖರೀದಿಸುವಿರಿ. ಉನ್ನತ ಶಿಕ್ಷಣವನ್ನು ಪಡೆಯಲು ನೀವು ಸಫಲರಾಗಬಹುದು. ಉದ್ಯೋಗದಲ್ಲಿ ನಿಮ್ಮ ಕಣ್ತಪ್ಪಿನಿಂದ ಆದ ತಪ್ಪಿಗೆ ನೀವೇ ತಲೆಕೊಡಬೇಕಾದೀತು. ಭೂಮಿಯ ವ್ಯವಹಾರದಲ್ಲಿ ಸುಮ್ಮನೆ ಕೆಲವನ್ನು ನಿಮ್ಮ ಮೇಲೆ ಬರುವಂತೆ ಮಾಡಿಕೊಳ್ಳುವಿರಿ. ಎಷ್ಟು ಅವಶ್ಯಕವೋ ಅಷ್ಟನ್ನು ಮಾತ್ರ ಮಾಡಿ. ತುರ್ತು ಹಣವು ಬೇಕಾಗಿದ್ದು ಸಾಲವನ್ನು ಮಾಡಲು ನಿಮಗೆ ಭಯವಾಗಬಹುದು. ನಿಮ್ಮ ಸ್ವಂತ ಕೆಲಸಕ್ಕಾಗಿ ವಿರಾಮ ಸಿಗದು. ಸಂಗಾತಿಯನ್ನು ತಮಾಷೆ ಮಾಡಿ, ಖುಷಿಪಡುವಿರಿ.

ಕುಂಭ ರಾಶಿ : ನೀವು ಇಂದು ಅನೇಕರ ಸಹಕಾರದ ಜೊತೆ ಜವಾಬ್ದಾರಿಯಲ್ಲಿ ಯಶಸ್ವಿಯಾಗುವಿರಿ. ನಿಮ್ಮೆದುರೇ ನಿಮ್ಮ ಸಹೋದರರನ್ನು ಹೊಗಳುವುದು ನಿಮಗೆ ಆಗದು. ಯಾರ ಜೊತೆಗಾದರೂ ವೈಮನಸ್ಯವಿದ್ದರೆ ಕುಳಿತು ಮಾತನಾಡಿಕೊಂಡು ಸರಿ ಮಾಡಿಕೊಳ್ಳುವಿರಿ. ನಿಮಗೆ ನಿಮ್ಮವರ ಭಾವವನ್ನು ಸರಿಯಾಗಿ ಅಂದಾಜು ಮಾಡಲಾಗದು. ಸುಮ್ಮನೇ ಯಾರ ಬೆಂಬಲಕ್ಕೂ ನಿಲ್ಲಲು ಹೋಗುವುದು ಬೇಡ. ಬಂಧುಗಳನ್ನು ನೀವು ಆಡಿಕೊಳ್ಳುವಿರಿ. ಯಾರ ಮೇಲಾದರೂ ದೋಷಾರೋಪ ಮಾಡುವ ಸಂಭವವಿದೆ. ಬರುವ ಆದಾಯಕ್ಕೆ ವಿಘ್ನವು ಬರಬಹುದು. ಅಂತರ್ಜಾಲದಿಂದ ನಿಮಗೆ ಕೆಲಸಕ್ಕೆ ಕರೆ ಬರಬಹುದು. ನಿರಾಕರಿಸುವುದು ಉತ್ತಮ. ಸ್ನೇಹವು ಸಡಿಲವಾಗುವ ಸಾಧ್ಯತೆ ಇದೆ. ಪ್ರಭಾವಿ ವ್ಯಕ್ತಿಗಳ ಸಲಹೆಯಿಂದ ನೀವು ಅಂದುಕೊಂಡ ದಾರಿಯು ಸುಗಮವಾಗುವುದು. ಹಣದ ಆಮಿಷದಲ್ಲಿ ಸಿಕ್ಕಿಕೊಳ್ಳುವಿರಿ.

ಮೀನ ರಾಶಿ : ಇಂದು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯನ್ನು ಮಾಡುವರು. ಸಾಲವನ್ನು ಕೇಳಿ ಬಂದವರಿಗೆ ಅಲ್ಪವನ್ನು ಮಾತ್ರ ಕೊಡಿ. ವ್ಯಾಪಾರವು ಕೆಲವು ತಿರುವನ್ನು ಪಡೆಯಬಹುದು. ಆತ್ಮೀಯರ ಬಗ್ಗೆ ಕಾಳಜಿ ಹೆಚ್ಚಿರುವುದು. ಚರಾಸ್ತಿಯ ನಷ್ಟಕ್ಕೆ ನೀವೇ ಕಾರಣವಾಗುವಿರಿ. ವೃತ್ತಿಯ ಸ್ಥಳದಲ್ಲಿ ಬದಲಾವಣೆಯನ್ನು ಬಯಸುವಿರಿ. ನಿಮ್ಮ ವಸ್ತುಗಳನ್ನು ರಕ್ಷಣೆ ಮಾಡಿಕೊಳ್ಳುವುದು ಉತ್ತಮ. ಶತ್ರುಗಳ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಇರಲಿದೆ. ಕಛೇರಿಗೆ ವಿರಾಮವಿದ್ದರೂ ಅನಿರೀಕ್ಷಿತ ಮೀಟಿಂಗ್ ಗೆ ಹಾಜಾರಾಗಬೇಕಾದೀತು. ನಿಮ್ಮ ಪ್ರಾಮಾಣಿಕತೆಯ ಮಾರ್ಗವನ್ನು ಬಿಡುವುದು ಬೇಡ. ನಿಮಗೆ ಕೊಟ್ಟ ಜವಾಬ್ದಾರಿಯನ್ನು ಪೂರ್ಣ ಮಾಡುವಿರಿ. ತಾಯಿಯ ಕಡೆಯ ಬಂಧುಗಳಿಂದ ನಿಮಗೆ ಸಹಾಯವು ಸಿಗಲಿದೆ.

-ಲೋಹಿತ ಹೆಬ್ಬಾರ್ – 8762924271 (what’s app only)

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ