Horoscope: ಹಠದ ಸ್ವಭಾವವನ್ನು ಬಿಡುವುದು ಒಳ್ಳೆಯದು, ಸಂಗಾತಿಯ ಜೊತೆ ವಾಗ್ವಾದ ಬೇಡ

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಡಿಸೆಂಬರ್ 27 ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Horoscope: ಹಠದ ಸ್ವಭಾವವನ್ನು ಬಿಡುವುದು ಒಳ್ಳೆಯದು, ಸಂಗಾತಿಯ ಜೊತೆ ವಾಗ್ವಾದ ಬೇಡ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Dec 27, 2023 | 12:20 AM

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಡಿಸೆಂಬರ್ 27) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ಬ್ರಹ್ಮ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 56 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 10 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:34 ರಿಂದ 01:58 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 08:21 ರಿಂದ 09:45ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 11:09 ರಿಂದ 12:34ರ ವರೆಗೆ.

ಧನು ರಾಶಿ: ಧನದ ಸಂಪಾದನೆಯು ಅನಿವಾರ್ಯವಾದ ಕಾರಣ ಬರುವ ಎಲ್ಲ ಕಾರ್ಯವನ್ನೂ ಬಿಡದೇ ಮಾಡುವಿರಿ. ಸಮಸ್ಯೆಗಳನ್ನು ಸರಿ ಮಾಡಿಕೊಳ್ಳುವ ದಾರಿಯನ್ನು ಹುಡುಕಿಕೊಳ್ಳಿ. ಸಾಲವು ನಿಮ್ಮನ್ನು ಹಿಂದೇಟು ಹಾಕುವಂತೆ ಮಾಡುತ್ತದೆ. ಯಾರ ಮಾತನ್ನೂ ಸಾವಧಾನವಾಗಿ ಕೇಳುವ ಮನಸ್ಸು ಇರದು. ಶುಭ ಸಮಾಚಾರದಿಂದ ಮನಸ್ಸು ಅರಳುವುದು. ಪ್ರೀತಿಯನ್ನು ಹೇಳಿಕೊಳ್ಳಲು ನಿಮಗೆ ಮುಜುಗರವಾಗಬಹುದು. ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಿತಿಯು ಬಂದರೂ ಸಮಯೋಚಿತವಾಗಿರಲಿ. ಕಛೇರಿಯ ಕೆಲಸದಿಂದ ಸ್ವಲ್ಪ ವಿಶ್ರಾಂತಿಯನ್ನು ಪಡೆಯುವಿರಿ. ಮನೆಯಿಂದ ಹೊರ ಹೋಗುವುದು ನಿಮಗೆ ಇಷ್ಟವಾಗದು. ನಿಮ್ಮವರಿಗೆ ನಿಮ್ಮ ನಡತೆಯಲ್ಲಿ ಬದಲಾವಣೆ ಕಂಡೀತು. ಪಾಲುದಾರಿಕೆಯಲ್ಲಿ ನಿಮ್ಮ ಶ್ರಮವೇ ಹೆಚ್ಚಿರಲಿದೆ. ನಿಮಗೆ ಇಷ್ಟವಾಗದ ಜವಾಬ್ದಾರಿಗಳು ಹೇಗಾದರೂ ಮಾಡಿ ತಪ್ಪಿಸಿಕೊಳ್ಳುವಿರಿ.

ಮಕರ ರಾಶಿ: ನಿಮ್ಮ ದುರರ್ಭ್ಯಾಸದ ಬಗ್ಗೆ ನಿಮಗೆ ಅಸಮಾಧಾನವಾಗಬಹುದು. ಸಂಬಂಧಿಕರಿಂದ ಅನಿರೀಕ್ಷಿತ ಆನಂದವು ಸಿಗುವುದು. ಸರ್ಕಾರದ ಕೆಲಸದಲ್ಲಿ ಪೂರ್ಣವಾದ ಸಹಕಾರ ಸಿಗದು. ನಿಮ್ಮ ಊಹೆಗಳು ಎಲ್ಲವೂ ವಾಸ್ತವಕ್ಕೆ ದೂರವಾದುದಾಗಿದೆ. ಸಂಗಾತಿಯ ಮಾತುಗಳು ನಿಮಗೆ ಖುಷಿ ಕೊಟ್ಟೀತು. ಬಂಧುಗಳ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರಲಿದೆ. ನಿಮಗೆ ಅರ್ಥವಾಗದ ವಿಚಾರವನ್ನು ಬೇರೆಯವರ ಕಡೆಯಿಂದ ಪಡೆಕೊಳ್ಳುವಿರಿ. ಉತ್ತಮ ಭೂಮಿಯನ್ನು ಖರೀದಿಸಲು ನಿಮಗೆ ಅವಕಾಶಗಳು ಸಿಗಬಹುದು. ನಿಮ್ಮ ಪ್ರಯಾಣದಲ್ಲಿ ಅಡೆತಡೆಗಳು ಉಂಟಾಗಬಹುದು. ನಿಮ್ಮವರ ಅನಾರೋಗ್ಯದ ಕಾರಣ ಓಡಾಟ ಮಾಡಬೇಕಾದೀತು. ಒಂಟಿಯಾಗಿ ಎಲ್ಲಿಗಾದರೂ ದೂರ ಹೋಗುವಿರಿ. ಅಶಿಸ್ತಿನಿಂದ ವರ್ತಿನೆಯ ಕಾರಣ ನಿಮಗೆ ಎಲ್ಲರಿಂದ ಅಪಮಾನವಾಗಬಹುದು. ಕೆಲವು ಕೆಲಸಗಳನ್ನು ಕೈಬಿಡುವಿರಿ.

ಕುಂಭ ರಾಶಿ: ಬಹಳ ಚಂಚಲದಿಂದ ಇರುವ ಮನಸ್ಸಿಗೆ ಯಾವುದಾದರೂ ಇಷ್ಟವಾದ ವಿಷಯವನ್ನು ಕೊಟ್ಟು ಚಾಂಚಲ್ಯವನ್ನು ಕಡಿಮೆ ಮಾಡಿಕೊಳ್ಳಿ. ದೂರದ ಊರಿಗೆ ಪ್ರಯಾಣ ಮಾಡುವ ಸಂದರ್ಭವು ಬರಲಿದ್ದು, ಅಲ್ಲಿ ಇಷ್ಟಮಿತ್ರರ ಸಹವಾಸವು ದೊರೆಯುವುದು. ನಿಮ್ಮವರನ್ನು ಕಳೆದುಕೊಳ್ಳುವ ಭೀತಿಯು ಬರಬಹುದು. ರಾಜಕೀಯದ ಒತ್ತಡವು ಅಧಿಕಾರದಲ್ಲಿ ಇದ್ದವರಿಗೆ ಬರಲಿದೆ. ಕಾರ್ಯದಲ್ಲಿ ಆಗುವ ತೊಂದರೆಗಳಿಗೆ ಹಿರಿಯರ ಮಾರ್ಗದರ್ಶನವನ್ನು ಪಡೆಯಿರಿ. ಹೂಡಿಕೆಯನ್ನು ಒತ್ತಾಯದ ಕಾರಣಕ್ಕೆ ಮಾಡುವಿರಿ. ಎಲ್ಲದರಲ್ಲಿಯೂ ತಪ್ಪನ್ನು ಹುಡುಕುತ್ತ ಕಾಲಹರಣ ಮಾಡುವುದು ಬೇಡ. ಮನೆ ಹುಡುಕಾಟಕ್ಕೆ ತಿರುಗಾಟ ಮಾಡಲಿದ್ದೀರಿ. ವಿದ್ಯಾರ್ಥಿಗಳು ಗಂಭೀರವಾಗಿ ಅಧ್ಯಯನದ ಕಡೆ ಗಮನಕೊಡಬೇಕಸದೀತು. ಕಛೇರಿಯಲ್ಲಿ ನಿಮಗೆ ವಹಿಸಿದ ಕೆಲಸವನ್ನು ಮಾಡದೇ ಮೇಲಧಿಕಾರಿಗಳು ಸಿಟ್ಟುಗೊಂಡಾರು.

ಮೀನ ರಾಶಿ: ಇಂದು ನೀವು ಸಂತೋಷವಾಗಿ ಇರಲು ಹಠದ ಸ್ವಭಾವವನ್ನು ಬಿಡುವುದು ಒಳ್ಳೆಯದು. ಆರ್ಥಿಕ ವಿಷಯದಲ್ಲಿ ಸಂಗಾತಿಯ ಜೊತೆ ವಾಗ್ವಾದವು ಹೊಸ ರೂಪವನ್ನು ಪಡೆಯಬಹುದು. ನಿಮ್ಮ ಬಳಿ ಸಂಘರ್ಷದ ಪರಿಹಾರಕ್ಕೆ ಬರಬಹುದು. ಜಾಣ್ಮೆಯಿಂದ ಅದನ್ನು ಬಗೆಹರಿಸಬೇಕಾಗುವುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಸ್ಥಳವನ್ನು ಬದಲಿಸುವಿರಿ. ಭೂಮಿಯ ಮಾರಾಟದಿಂದ ಕಲಹವಾಗುವುದು. ಸಂಸಾರದ ಕಲಹಕ್ಕೆ ಮನಸ್ಸು ಕೊಡದೇ ಪ್ರಸನ್ನ ಮನಸ್ಸಿನಿಂದ ಇರುವಿರಿ. ಬೇರೆಯಾದ ಮನಸ್ಸನ್ನು ಒಟ್ಟು ಸೇರಿಸಲಿದ್ದೀರಿ. ಆರೋಗ್ಯದ ರಹಸ್ಯವನ್ನು ಇತರರಿಗೂ ತಿಳಿಸುವಿರಿ. ಸಹೋದರರ ಜೊತೆ ಮನೆಯ ಆಸ್ತಿಯ ಬಗ್ಗೆ ಮಾತನಾಡುವಿರಿ. ನಿಮ್ಮ ದಿನಚರಿಯನ್ನು ವ್ಯವಸ್ಥಿತವಾಗಿಸಿಕೊಳ್ಳಿ. ಆಪ್ತರ ಜೊತೆ ಮಾತನಾಡಿ ನಿಮ್ಮ ಮನಸ್ಸಿನ ಭಾರವನ್ನೆಲ್ಲ ದೂರ ಮಾಡಿಕೊಳ್ಳುವಿರಿ. ನಿಮ್ಮ ನಿಯಮಗಳು ನಿಮಗೆ ತೊಂದರೆಯಾಗಬಹುದು.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್