Horoscope: ವಿದೇಶಕ್ಕೆ ತೆರಳುವ ನಿರೀಕ್ಷೆ, ಮನಸ್ಸಿಗೆ ಹಿಡಿಸುವ ಕೆಲಸ ಮಾತ್ರ ಮಾಡುವಿರಿ
15 ಮಾರ್ಚ್ 2025: ಶನಿವಾರದಂದು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ವೇಗವಾಗಿ ಆಗಬೇಕಾದುದನ್ನು ವಿಳಂಬ ಮಾಡುವಿರಿ. ಇಂದು ತುರ್ತು ಸ್ಥಿತಿಯು ಬರಲಿದ್ದು ಅದನ್ನು ಎದುರಿಸುವುದು ಕಷ್ಟವಾದೀತು. ಹಾಗಾದರೆ ಮಾರ್ಚ್ 15ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

ಬೆಂಗಳೂರು, ಮಾರ್ಚ್ 15, ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರಾ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಶನಿ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಹಸ್ತಾ, ಯೋಗ : ಗಂಡ, ಕರಣ : ಬಾಲವ, ಸೂರ್ಯೋದಯ – 06 – 41 am, ಸೂರ್ಯಾಸ್ತ – 06 – 41 pm, ಇಂದಿನ ಶುಭಾಶುಭಕಾಲ : ರಾಹು ಕಾಲ 09:42 – 11:12, ಯಮಘಂಡ ಕಾಲ 14:12 – 15:42, ಗುಳಿಕ ಕಾಲ 06:41 – 08:11.
ತುಲಾ ರಾಶಿ: ಕೆಲವು ಮೋಹದಿಂದ ಇಂದು ಬಿಡುಗಡೆ ಸಿಗುವ ಸಾಧ್ಯತೆ ಇದೆ. ಸಂಗಾತಿಯ ಮಾತನ್ನು ಅಲ್ಪವಾದರೂ ಪಾಲಿಸಿ. ಇಲ್ಲವಾದರೆ ಮುನಿಸಿಕೊಂಡಾರು. ಮನಸ್ಸಿನಲ್ಲಿರುವ ಸಂಕಟವನ್ನು ಯಾರ ಬಳಿಯಾದರೂ ಹೇಳಿಕೊಳ್ಳಿ. ನಿಮ್ಮ ಅಸಲಿ ರೂಪಕ್ಕೆ ಆಶ್ಚರ್ಯವಾದೀತು. ವಾಹನ ಚಾಲನೆಯಲ್ಲಿ ಅವಸರ ಬೇಡ. ನಿಮಗೆ ಸಂಬಂಧಿಸದ ವಿಚಾರಗಳಲ್ಲಿ ಪ್ರವೇಶವನ್ನು ಪಡೆಯುವುದು ಬೇಡ. ಸರ್ಕಾರದ ಕಾರ್ಯಗಳನ್ನು ಬೇಗ ಮುಗಿಸಿಕೊಳ್ಳಲಿದ್ದೀರಿ. ವ್ಯವಹಾರದ ದಾಖಲೆಗಳು ಸರಿಯಾಗಿ ಇಟ್ಟುಕೊಳ್ಳುವಿರಿ. ವಿದೇಶಕ್ಕೆ ತೆರಳುವ ನಿರೀಕ್ಷೆಯಲ್ಲಿ ಇರುವಿರಿ. ಮನಸ್ಸಿಗೆ ಹಿಡಿಸಿದ ಕೆಲಸವನ್ನು ಮಾತ್ರ ಬೇಗ ಮಾಡಿ ಮುಗಿಸುವಿರಿ. ಧಾರ್ಮಿಕ ಮುಖಂಡರ ಜೊತೆ ಸಮಾಗಮ, ಮಾತುಕತೆ ಮಾಡುವಿರಿ. ಉನ್ನತ ವಿದ್ಯಾಭ್ಯಾಸಕ್ಕೆ ಮನೆಯಿಂದ ದೂರವಿರಲು ಯತ್ನಿಸುವಿರಿ. ವಾಹನಕ್ಕಾಗಿ ಸಾಲ ಮಾಡುವಿರಿ. ದಾಂಪತ್ಯದಲ್ಲಿ ಪರಸ್ಪರರ ಹೊಂದಾಣಿಕೆಯು ಕಾಣಿಸುವುದು. ಮಕ್ಕಳನ್ನು ಪಡೆದುಕೊಳ್ಳುವ ಚಿಂತೆಯು ಕಾಡುವುದು. ಪ್ರೇಮದಲ್ಲಿ ಸಿಕ್ಕಿಕೊಂಡು ಕಷ್ಟಪಡುವಿರಿ. ನಿಮ್ಮ ತೀರ್ಮಾನವನ್ನು ಒಪ್ಪುವುದು ಕಷ್ಟವಾದೀತು.
ವೃಶ್ಚಿಕ ರಾಶಿ: ಹಳೆಯ ವ್ಯವಹಾರವನ್ನು ಹೊಸ ವ್ಯಕ್ತಿಗಳ ಜೊತೆ ಆರಂಭಿಸುವಿರಿ. ಉದ್ಯೋಗದ ಸ್ಥಳದಲ್ಲಿ ನಿಮ್ಮನ್ನು ಸ್ಥಾನಭ್ರಷ್ಟರಾಗುವ ಭೀತಿಯು ಇರಲಿದೆ. ವಿದ್ಯಾರ್ಥಿಗಳು ಓದಿನ ಕಡೆ ವಿಶೇಷ ಗಮನವನ್ನು ಕೊಡುವುದು ಕಷ್ಟವಾದೀತು. ಬಂಧುಗಳ ಕುಹಕಕ್ಕೆ ಸಿಲುಕುವಿರಿ. ನ್ಯಾಯಾಲಯದ ಹೋರಾಟವು ಅಪಯಶಸ್ಸನ್ನು ಕೊಡಬಹುದು. ಕಲಾವಂತಿಕೆಯಿಂದ ನಿಮ್ಮ ಅನೇಕ ನಕಾರಾತ್ಮಕ ವಿಚಾರಗಳು ಮರೆಯಾಗಬಹುದು. ನಿಮ್ಮವರ ಬಗ್ಗೆ ತಿಳಿದು ಸಂತೋಷ ಪಡುವಿರಿ. ಉತ್ಸಾಹವು ಅಧಿಕವಾಗಲಿದೆ. ಆಸ್ತಿಯಲ್ಲಿ ಸಮ ಪಾಲು ಸಿಗದೇ ನಿಮಗೆ ವಾದಕ್ಕಿಳಿಯುವಿರಿ. ಪಾಲುದಾರಿಕೆಯಲ್ಲಿ ನಿಮಗೆ ಸಣ್ಣ ಸಮಸ್ಯೆಗಳು ಹುಟ್ಟಿಕೊಳ್ಳಬಹುದು. ಭೂಮಿಯ ವ್ಯವಹಾರಕ್ಕೆ ಆಪ್ತರನ್ನು ಜೋಡಿಸಿಕೊಳ್ಳುವಿರಿ. ದಾನದಿಂದ ಸಮಾಧಾನ ಸಿಗುವ ಸಾಧ್ಯತೆ ಇದೆ. ಇನ್ನೊಬ್ಬರ ಒತ್ತಾಯದ ಕಾರಣಕ್ಕೆ ನೀವು ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ಮಕ್ಕಳಿಂದ ಆರ್ಥಿಕ ಸಹಾಯವು ಸಿಗುವುದು. ಮಕ್ಕಳ ವಿವಾಹದ ಬಗ್ಗೆ ಬಂಧುಗಳ ಜೊತೆ ಗಂಭೀರವಾಗಿ ಚರ್ಚಿಸುವಿರಿ.
ಧನು ರಾಶಿ: ಇಂದು ಸೇವಾ ಮನೋಭಾವದಿಂದ ಸಾಧಿಸಬೇಕಾದುದ ಬಗ್ಗೆ ಯೋಚಿಸುವಿರಿ. ಪ್ರಸಿದ್ಧಿಯನ್ನು ಪಡೆಯುವ ಹಂಬಲವು ಅತಿಯಾಗಬಹುದು. ಎಲ್ಲ ಕೆಲಸವನ್ನೂ ಅದೇ ದೃಷ್ಟಿಯಿಂದ ನೋಡುವಿರಿ. ಹಿರಿಯರ ಕೋಪಕ್ಕೆ ನೀವು ಬಲಿಯಾಗಬೇಕಾದೀತು. ಮಾನಸಿಕವಾದ ಅಸ್ಥಿರತೆಯಿಂದ ನಿಮಗೆ ಕಷ್ಟವಾದೀತು. ವೃತ್ತಿಯಲ್ಲಿ ನಿಮಗೆ ತೃಪ್ತಿಯು ಸಿಗಲಿದೆ. ಧಾರ್ಮಿಕ ವಿಚಾರವಾಗಿ ನೀವು ದೂರ ಪ್ರಯಾಣವನ್ನು ಮಾಡುವಿರಿ. ಎಲ್ಲ ಕೆಲಸದಲ್ಲಿ ಆತ್ಮತೃಪ್ತಿಯನ್ನು ಬಯಸುಬಿರಿ. ರಾಜಕೀಯದಲ್ಲಿ ಕೈಜೋಡಿಸುವ ಬಗ್ಗೆ ಕುತೂಹಲವಿರುವುದು. ಸಾಮಾಜಿಕ ಕಾರ್ಯವು ನಿಮ್ಮನ್ನು ಸೆಳೆಯುವುದು. ಏಕಾಗ್ರತೆಯಿಂದ ನಿಮ್ಮ ಮತ್ತೆಲ್ಲ ಕಾರ್ಯಗಳೂ ನಿಧಾನವಾಗಬಹುದು. ನಿಮ್ಮ ಸ್ವಭಾವವನ್ನು ಇತರರಲ್ಲಿ ಕಾಣುವಿರಿ. ಪರಿಶ್ರಮದಿಂದ ಧನಾರ್ಜನೆ ಮಾಡಿದ್ದು ನಿಮಗೆ ಅಧಿಕ ಸಂತೋಷವಾಗುವುದು. ನಿಮ್ಮ ಮಾತುಗಳೇ ನಿಮಗೆ ಮುಳುವಾಗುವ ಸಾಧ್ಯತೆ ಇದೆ. ಉದ್ಯೋಗವಿಲ್ಲದೇ ಬೇಸರಗೊಂಡ ನಿಮಗೆ ಬೇರೆಕಡೆಯಲ್ಲಿ ಕೆಲಸವು ಸಿಗುವುದು. ಇಂದು ಸಂದರ್ಭವನ್ನು ನೋಡಿಕೊಂಡು ಮಾತನಾಡಿ.
ಮಕರ ರಾಶಿ; ಆರ್ಥಿಕತೆಯನ್ನು ಬಲಪಡಿಸಲು ಹೋಗಿ ಆರೋಗ್ಯ ಬಲಹೀನವಾಗಬಹುದು. ನಿಮ್ಮ ಸಂಪತ್ತನ್ನು ಕಂಡು ಪ್ರೀತಿ ಹುಟ್ಟಿಕೊಳ್ಳಬಹುದು. ಸ್ಪರ್ಧಾತ್ಮಕ ಪರೀಕ್ಷೆಯಿಂದ ಉನ್ನತ ಸ್ಥಾನ ಸಾಧ್ಯ. ಆರ್ಥಿಕತೆಯಲ್ಲಿ ನೀವು ನಂಬಿಕೆಯನ್ನು ಉಳಿಸಿಕೊಳ್ಳಬೇಕಾಗುವುದು. ನಿಮ್ಮ ಬಾಗುವ ಸ್ವಭಾವವು ನಿಮ್ಮನ್ನು ಮೇಲಕ್ಕೆ ಏರಿಸುವುದು. ಹೇಳಿಕೊಳ್ಳಲಾಗದ ಸಂಕಟವನ್ನು ಮನಸ್ಸಿನಲ್ಲಿಯೇ ನುಂಗುವಿರಿ. ಪ್ರಭಾವಿ ಗಣ್ಯರ ಜೊತೆ ಕೆಲವು ಸಮಯವನ್ನು ಕಳೆಯುವಿರಿ. ವ್ಯವಹಾರದಲ್ಲಿ ಚುರುಕು ಸಾಲದು. ದುರ್ಯೋಗವನ್ನು ನೀವು ತಪ್ಪಿಸುವುದು ಕಷ್ಟ. ಉದ್ಯೋಗದಲ್ಲಿ ದಿನದಿಂದ ದಿನಕ್ಕೆ ಉಂಟಾದ ಒತ್ತಡದಿಂದ ಉದ್ಯೋಗವನ್ನು ಬದಲಿಸಲು ಯೋವಿಸುವಿರಿ. ವಿಲಾಸಿ ಜೀವನದ ಕನಸಿನಲ್ಲಿ ಇರುವಿರಿ. ಪ್ರತಿ ವಿಷಯವನ್ನೂ ವೈಯಕ್ತಿಕವಾಗಿ ತೆಗೆದುಕೊಂಡು ಸಾಧಿಸುವಿರಿ. ಪ್ರೀತಿಯನ್ನು ಕುಟುಂಬದ ಜೊತೆ ಹಂಚಿಕೊಳ್ಳುವಿರಿ. ಮನೆತನದ ಕಾರಣದಿಂದ ನಿಮಗೆ ಗೌರವವು ಪ್ರಾಪ್ತವಾಗಲಿದೆ. ಮೇಲಧಿಕಾರಿಗಳನ್ನು ಮೆಚ್ಚಿಸುವಿರಿ. ನಿಮ್ಮ ಮೌನವನ್ನು ಅನ್ಯರೀತಿಯಲ್ಲಿ ಅರ್ಥೈಸಿಕೊಳ್ಳಬಹುದು.
ಕುಂಭ ರಾಶಿ; ವೇಗವಾಗಿ ಆಗಬೇಕಾದುದನ್ನು ವಿಳಂಬ ಮಾಡುವಿರಿ. ಇಂದು ತುರ್ತು ಸ್ಥಿತಿಯು ಬರಲಿದ್ದು ಅದನ್ನು ಎದುರಿಸುವುದು ಕಷ್ಟವಾದೀತು. ಬಂಧುಗಳ ಸಹಾಯದ ಅಪೇಕ್ಷೆ ಇದ್ದರೂ ಅದನ್ನು ಪಡೆಯಲು ಇಷ್ಟಪಡುವುದಿಲ್ಲ. ನಿಮ್ಮ ಬದುಕಿಗೆ ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಳ್ಳುವಿರಿ. ಬರುವ ಹಣವು ಕೈಸೇರಿದರೂ ಖರ್ಚಿನ ದಾರಿ ಮುಕ್ತವಾಗಿರುವುದು ಮಕ್ಕಳಿಗೆ ಸಿಗುವ ಪುರಸ್ಕಾರದಿಂದ ನಿಮಗೆ ಸಂತೋಷವಾಗುವುದು. ಅಪರೂಪದ ಮಿತ್ರರು ನಿಮ್ಮನ್ನು ಭೇಟಿ ಮಾಡುವರು. ಮನೆಗೆ ಅತಿಥಿಗಳ ಆಗಮನವಾಗಬಹುದು. ನಿಮಗೆ ಕಾರ್ಯಗಳು ನಿಮಗೆ ತೃಪ್ತಿಯನ್ನು ಕೊಡುವಂತಿರಲಿ. ಸ್ವಂತ ಕಾರ್ಯವನ್ನು ಅನ್ಯರ ಬಳಿ ಮಾಡಿಸುವಿರಿ. ನಿಮ್ಮ ಮಕ್ಕಳನ್ನು ಓದಿಸಲು ಹೊರಗೆ ಕಳುಹಿಸುವ ನಿರ್ಧಾರವಿರಲಿದೆ. ದಿನಸಿ ವ್ಯಾಪಾರಿಗಳಿಗೆ ಉತ್ತಮ ಲಾಭವು ಆಗಲಿದೆ. ಸ್ವಂತ ನಿರ್ಧಾರವನ್ನು ತೆಗೆದುಕೊಳ್ಳಲು ನೀವು ಸಫಲರಾಗುವುದಿಲ್ಲ. ಏಕಪಕ್ಷೀಯವಾದ ನಿರ್ಧಾರದಿಂದ ನಿಮ್ಮವರಿಗೆ ಬೇಸರವಾದೀತು. ನಿಮ್ಮ ಕೆಲಸವನ್ನು ಪೂರ್ಣವಾಗಿ ಇನ್ನೊಬ್ಬರಿಗೆ ವಹಿಸುವುದು ಬೇಡ.
ಮೀನ ರಾಶಿ: ಪ್ರಭಾವಿಗಳ ಸಹವಾಸದ ಫಲ ಗೊತ್ತಾಗಲಿದೆ. ಇಂದು ಮಿತ್ರರ ಕುಟುಂಬದ ಜೊತೆ ಕಾಲ ಕಳೆಯುವಿರಿ. ಆಪ್ತರ ಜೊತೆ ಗೌಪ್ಯ ಮಾತುಕತೆಯನ್ನು ನಡೆಸುವಿರಿ. ಸಂತೋಷದ ಕೂಟದಲ್ಲಿ ಭಾಗವಹಿಸುವಿರಿ. ಧನನಷ್ಟವನ್ನು ನೀವು ಸಹಿಸಲಾರಿರಿ. ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಮಾರ್ಗದರ್ಶನ ಅಭಾವವು ಹೆಚ್ಚು ತೋರುವುದು. ಹೂಡಿಕೆಯಿಂದ ನಷ್ಟ ಸಂಭವ. ತಾಯಿ ಮೇಲೆ ಪ್ರೀತಿ ಹೆಚ್ಚಾಗುವುದು. ಅವರಿಗೆ ಖುಷಿಯಾಗುವಂತೆ ನಡೆದುಕೊಳ್ಳುವಿರಿ. ಇಂದಿನ ವ್ಯವಹಾರದಲ್ಲಿ ನಿಮಗೆ ತೊಡಕಿರುವುದು. ಮನೆಯ ಎಷ್ಟೋ ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು. ಆಂತರಿಕ ಕಲಹವು ಎಲ್ಲರಿಗೂ ಗೊತ್ತಾಗುವಂತೆ ಮಾಡಿಕೊಳ್ಳುವಿರಿ. ಮಾಡಿಕೊಳ್ಳುವಿರಿ. ನಿಮ್ಮ ಅಗಾಧ ಜ್ಞಾನವು ಸದುಪಯೋಗ ಆಗಬಹುದು. ಇಂದು ನಿಮ್ಮ ದಾಹ ಹೆಚ್ಚಾಗಿರುವುದು. ಬಂಧುಗಳ ಕಾರಣಕ್ಕಾಗಿ ಧನವ್ಯಯವಾಗುವುದು. ನಿಮ್ಮ ಆಸ್ತಿಯ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಿ. ಹಳೆಯ ನೋವುಗಳು ಕಾಣಿಸಿಕೊಳ್ಳಬಹುದು.
Published On - 12:12 am, Sat, 15 March 25