Horoscope Today February: ಇಂದು ಈ ರಾಶಿಯವರಿಗೆ ಆಪ್ತರ ಮೇಲೆ ಅತಿ ಕೋಪ
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ಚತುರ್ದಶೀ ತಿಥಿ ಭಾನುವಾರ ಸ್ಮರ್ಧಾತ್ಮಕತೆ, ಭೂವ್ಯವಹಾರ, ಅಪರಿಚಿತರ ಸಹವಾಸ, ವಿಶ್ವಸ ದ್ರೋಹ, ವ್ಯಾಪರ, ದಾನ ಇವೆಲ್ಲ ಇಂದಿನ ವಿಶೇಷ.

ಮೇಷ ರಾಶಿ:
ವೇಗದ ನಿಮ್ಮ ಕೆಲಸಕ್ಕೆ ಮೆಚ್ಚುಗೆ ಸಿಗಬಹುದು. ಉದ್ಯೋಗದಲ್ಲಿ ಬರುವ ಮನಸ್ತಾಪವನ್ನು ನಿಮ್ಮೊಳಗೇ ಇಟ್ಟುಕೊಂಡು ಮುಂದುವರಿಯುವಿರಿ. ವಹಿಸಿಕೊಂಡ ಕೆಲಸವನ್ನು ನಿಶ್ಚಿತ ಸಮಯಕ್ಕೆ ಮುಗಿಸಲು ಆಗದು. ಮನೆಯ ನಿರ್ಮಾಣದ ಕನಸನ್ನು ಕಾಣುವಿರಿ. ನಿದ್ರಾಹೀನತೆಯನ್ನು ಹೋಗಲಾಡಿಸಲು ಪ್ರಯತ್ನ ಮಾಡಿ. ನಿಮ್ಮ ಕಾರ್ಯದ ಮೇಲೆ ಕಾರಣಾಂತರಗಳಿಂದ ಗಮನವು ಕಡಿಮೆ ಆಗಬಹುದು. ನಿಮ್ಮ ವಿರುದ್ಧದ ಮಾತುಗಳಿಗೆ ನೀವು ಸಿಟ್ಟಾಗುವಿರಿ. ನಿಮ್ಮ ಉತ್ಸಾಹದಲ್ಲಿ ಮಿತಿ ಮೀರುವುದು ಬೇಡ.
ವೃಷಭ ರಾಶಿ:
ವಿದ್ಯಾರ್ಥಿಗಳು ಅಭ್ಯಾಸಕ್ಕೆ ಆಗುವ ತೊಂದರೆಯನ್ನೇ ಯೋಚಿಸುವರು. ಸಂಗಾತಿಯನ್ನು ಕೆಲವು ವಿಷಯಕ್ಕೆ ದ್ವೇಷಿಸಬಹುದು. ಹಳೆಯ ವಿಚಾರಗಳು ಮತ್ತೆ ಮುಖ್ಯಸ್ಥಾನಕ್ಕೆ ಬರುವುವು. ನಿಮ್ಮ ಸ್ಥಿತಿಯನ್ನು ಕೆಲವರು ಆಡಿಕೊಂಡಾರು. ಅಮೂಲ್ಯ ವಸ್ತುವನ್ನು ಖರೀದಿಸುವುದಕ್ಕಿಂತ ಅದನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ನಿಮಗೆ ಕೊಟ್ಟ ಕೆಲಸವನ್ನು ವಿಳಂಬವಾಗಿ ಮಾಡುವಿರಿ. ಆರ್ಥಿಕತೆಯ ಬಗ್ಗೆ ನಿಮ್ಮನ್ನು ಬಂಧುಗಳು ಪ್ರಶ್ನಿಸಬಹುದು. ನಿಮ್ಮ ನಮಗೆ ಗೊತ್ತಿರಲಿ. ಕುರುಡನಂತೆ ಹೋಗುವುದು ಬೇಡ.
ಮಿಥುನ ರಾಶಿ:
ಹಿತಶತ್ರುಗಳು ನಿಮ್ಮ ಅವನತಿಯನ್ನು ನಿರೀಕ್ಷಿಸಬಹುದು. ನಿಮ್ಮ ಕಷ್ಟವನ್ನು ಆಲಿಸುವವರಿಲ್ಲ ಎಂಬ ನೋವಿದೆ. ಮಾತನ್ನು ಸರಿಯಾಗಿ, ಸರಿಯಾದ ಸ್ಥಳದಲ್ಲಿ ಆಡಿ. ಊಹಿಸದ ಕೆಲವು ಸಂದರ್ಭಗಳು ಇಂದು ಬರಬಹುದು. ಮಕ್ಕಳ ವಿಚಾರದಲ್ಲಿ ನೀವು ಬಹಳ ಮಾರ್ದವವನ್ನು ತೋರಿಸುವಿರಿ. ಗಣ್ಯರ ಭೇಟಿಯನ್ನು ಮಾಡುವಿರಿ. ವಿದ್ಯಾಭ್ಯಾಸಕ್ಕಾಗಿ ಮನೆಯನ್ನು ಬಿಟ್ಟು ಇರುವುದು ಕಷ್ಟವಾಗುವುದು. ಭವಿಷ್ಯವನ್ನು ನಿಮ್ಮ ತಲೆಯಲ್ಲಿ ಇಟ್ಟುಕೊಂಡು ಮುಂದುವರಿಯಿರಿ.
ಕರ್ಕಾಟಕ ರಾಶಿ:
ಯಾರ ಜೊತೆ ಸ್ಪರ್ಧಿಸಲೂ ನೀವು ತಯಾರಿರುವಿರಿ. ಗಂಭೀರವಾದ ಸಣ್ಣ ವಿಚಾರವೂ ಮುಂದೆ ದೊಡ್ಡದಾಗಬಹುದು. ಇಂದು ಒಂದು ಕಾರ್ಯವನ್ನು ಮಾಡುವುದು ಕಷ್ಟ. ಹೊಸ ವೃತ್ತಿಯಲ್ಲಿ ಪೂರ್ಣ ತೊಡಗಿಕೊಳ್ಳುವುದು ನಿಮಗೆ ಇಷ್ಟವಾಗುವುದು. ಅನಪೇಕ್ಷಿತ ಮಾತುಗಳಿಂದ ನಿಮ್ಮ ಸಮಯವು ವ್ಯರ್ಥವಾಗುವುದು. ಸ್ವಂತ ಭೂಮಿಯಲ್ಲಿ ಏನನ್ನಾದರೂ ಬೆಳೆಯುವ ಬಗ್ಗೆ ಯೋಚಿಸುವಿರಿ. ಒಬ್ಬೊಂಟಿಯಾಗಿ ವಿಹಾರ ಮಾಡುವಿರಿ. ವಿವಾಹಕ್ಕೆ ಅಪರಿಚಿತರಿಂದ ತಡೆ ಬರಬಹುದು.
ಸಿಂಹ ರಾಶಿ:
ಮಕ್ಕಳಿಗೆ ನಿಮ್ಮ ಪ್ರೀತಿಯ ಕೊರತೆಯು ಆದೀತು. ಅಧಿಕ ಲಾಭದ ನಿರೀಕ್ಷೆಯಲ್ಲಿ ಹೊರಟ ನಿಮಗೆ ಅಲ್ಪ ಲಾಭವಾಗಬಹುದು. ಒಳಜಗಳದಿಂದ ಮನಸ್ಸಿಗೆ ಎಲ್ಲಿ ಹೋದರೂ ನೆಮ್ಮದಿ ಕಾಣಿಸದು. ಜಾಣ್ಮೆಯಿಂದ ಸರ್ಕಾರದ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಸ್ವಂತ ವಾಹನದ ದುರಸ್ತಿಗೆ ಖರ್ಚಾಗಬಹುದು. ನಿಮ್ಮ ಪ್ರೇಮಸಂಬಂಧವು ಸಡಿಲಾಗಬಹುದು. ನಿಮ್ಮ ಜವಾಬ್ದಾರಿಗೆ ಬೆನ್ನು ಹಾಕಿಹೋಗುವುದು ಬೇಡ. ಸಣ್ಣ ಅನಾರೋಗ್ಯಕ್ಕೂ ಔಷಧವನ್ನು ಮಾಡಿ.
ಕನ್ಯಾ ರಾಶಿ:
ವೃತ್ತಿಯ ಬದಲಾವಣೆಯಿಂದ ಉತ್ಸಾಹ ಬರಲಿದೆ. ಕಾರ್ಯದ ವಿಳಂಬದಿಂದ ಮನೆಗೆ ಬರುವುದು ವಿಳಂಬವಾಗುವುದು. ನಿಮ್ಮನ್ನು ಶ್ರೇಷ್ಠವೆಂದು ಭಾವಿಸಿ, ಕೆಲಸವನ್ನು ಮಾಡಿ. ನಾಜೂಕಿನಿಂದ ಇಂದಿನ ಕಾರ್ಯವನ್ನು ಮಾಡಿಕೊಳ್ಳುವಿರಿ. ಸಮೂಹ ಕಾರ್ಯದಲ್ಲಿ ನೀವು ಹೆಚ್ಚು ಕಾರ್ಯವನ್ನು ಮಾಡಬೇಕಾಗುವುದು. ಮನೆಯಿಂದ ದೂರದಲ್ಲಿ ನಿಮ್ಮ ಹೊಸ ಜೀವನವನ್ನು ನಡೆಸಬಹುದು. ಇಂದು ಅಧಿಕ ಮಾತನ್ನು ಆಡುವುದು ಬೇಡ.
ತುಲಾ ರಾಶಿ:
ಸ್ವಂತಿಕೆಯನ್ನು ಬೆಳೆಸಿಕೊಳ್ಳುವ ಕಡೆ ನಿಮ್ಮ ಪ್ರಯತ್ನವಿರಲಿ. ದುಃಖವನ್ನು ಕಳೆಯಲು ದುರಭ್ಯಾಸಕ್ಕೆ ಹೋಗಬಹುದು. ಬೆಳಗಿನಿಂದಲೇ ಮನಸ್ಸು ಸರಿ ಇಲ್ಲದ ಕಾರಣ ಎಲ್ಲದಕ್ಕೂ ಸಿಟ್ಟು ಮಾಡುವಿರಿ. ಇಲ್ಲವೇ ಸುಮ್ಮನೆ ಇರುವಿರಿ. ಸಹೋದ್ಯೋಗಿ ಮಿತ್ರರ ಜೊತೆ ಮಸ್ತಿಯಲ್ಲಿ ಕಾಲ ಕಳೆಯುವಿರಿ. ಮಿತ್ರರಿಂದ ಧನದ ವಿಚಾರದಲ್ಲಿ ಮೋಸವಾಗಬಹುದು. ಕಾರ್ಯದ ಒತ್ತಡದಿಂದ ಪ್ರೀತಿಯು ಸಡಿಲಾಗುವುದು. ವೃತ್ತಿಯಲ್ಲಿ ಒಂದಿಲ್ಲೊಂದು ಕಾರಣಕ್ಕೆ ಕಲಹವಾಗುವ ಕಾರಣ ಸ್ಥಾನವು ಬದಲಾಗಬಹುದು.
ವೃಶ್ಚಿಕ ರಾಶಿ:
ಎಲ್ಲಿಗಾದರೂ ಮಕ್ಕಳನ್ನು ಕರೆದುಕೊಂಡು ಹೋಗಲಿದ್ದೀರಿ. ಅವರ ಬಗ್ಗೆ ಅತಿಯಾದ ಕಾಳಜಿ ಬೇಕು. ವೃತ್ತಿಯಲ್ಲಿ ಒಂದೇ ಕೆಲಸವನ್ನು ಇಬ್ಬರು ಮಾಡಲು ಹೋಗಿ ವೈಮನಸ್ಯ ಉಂಟಾಗುವುದು. ಸಂಗಾತಿಯ ಮಾತುಗಳು ನಿಮ್ಮ ಅಭಿಮಾನಕ್ಕೆ ತೊಂದರೆ ಕೊಡಬಹುದು. ನೀವು ಅಪಮಾನವನ್ನೂ ನುಂಗಿಕೊಂಡು ಕಾರ್ಯದಲ್ಲಿ ಮಗ್ನರಾಗಬೇಕಾಗುವುದು. ನಿಮ್ಮ ಉದ್ಯಮವನ್ನು ವಿಸ್ತಾರಗೊಳಿಸುವ ಆಲೋಚನೆಯು ಬೇರೆಯವರಿಂದ ಸಿಗಬಹುದು.
ಧನು ರಾಶಿ:
ಕಾನೂನಿನ ಬಗ್ಗೆ ನಿಮಗೆ ಸರಿಯಾದ ಜ್ಞಾನವಿರಲಿ. ಉದ್ವೇಗದಿಂದ ಏನನ್ನಾದರೂ ಅನೀತಿ ಮಾರ್ಗದಲ್ಲಿ ಹೋಬೇಕಾದೀತು. ಸಂಗಾತಿಯ ಆಗಮನವನ್ನು ನಿರೀಕ್ಷಿಸುವಿರಿ. ನಿಮ್ಮ ವಿರೋಧಿಗಳ ಬಗ್ಗೆ ನೀವು ಯೋಚಿಸುವ ಅಗತ್ಯವಿಲ್ಲ. ನಿಮ್ಮ ಮಾತಿಗೆ ಸಂಗಾತಿ ಸಿಟ್ಟಾಗುವರು. ನೀವು ನಿಮ್ಮ ಪರಿಸ್ಥಿತಿಯನ್ನು ಇತರರಿಗೆ ತಿಳಿಸುವುದು ಕಷ್ಟವಾಗುವುದು. ನಿಮ್ಮ ಮುಂದಿರುವ ಆಯ್ಕೆಯನ್ನು ನಿರ್ಧಿರಿಸಲಾಗದು. ಸಂತಾನದ ಖುಷಿಯು ಇರಲಿದೆ.
ಮಕರ ರಾಶಿ:
ಭೂಮಿಯ ಮೇಲೆ ಹೂಡಿಕೆ ಮಾಡುವಿರಿ. ಅನ್ಯರ ಕುರಿತಾಗಿ ಸಂತಾಪವನ್ನು ವ್ಯಕ್ತಪಡಿಸುವುದು ವ್ಯರ್ಥವಾಗಬಹುದು. ಅಪರಿಚಿತರ ಬಂಧನದಿಂದ ನೀವು ಮುಕ್ತಾರಾಗಲು ಕಷ್ಟವಾಗಬಹುದು. ವಿದ್ಯಾಭ್ಯಾಸದಲ್ಲಿ ಸಾಮಾನ್ಯ ಪ್ರಗತಿಯನ್ನು ಕಾಣಬಹುದು. ವ್ಯಾವಹಾರಿಕ ವಿಭಾಗದಲ್ಲಿ ನಿಮಗೆ ಹಿನ್ನಡೆಯಾಗಲಿದೆ. ಮಕ್ಕಳ ಯಶಸ್ಸು ನೀವು ನಿರೀಕ್ಷಿಸಿದಂತೆ ಆಗುವುದು ಕಷ್ಟ. ಕೃಷಿಗೆ ಚಟುವಟಿಕೆಗಳಲ್ಲಿ ಸಂತೋಷ ಕಾಣುವಿರಿ.
ಕುಂಭ ರಾಶಿ:
ಪ್ರಯಾಣದಿಂದ ಆಯಾಸಗೊಂಡು ವಿಶ್ರಾಂತಿ ಪಡೆಯುವಿರಿ. ಕೋಪವನ್ನು ಕಡಿಮೆ ಮಾಡಿಕೊಳ್ಳಲು ನಿಮ್ಮ ಸತತ ಪ್ರಯತ್ನವು ಫಲಿಸೀತು. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿಯನ್ನು ಕಾಣಲು ಸಾಧ್ಯ. ನಿಮ್ಮಿಂದ ಆಗದ ಕೆಲಸಕ್ಕೆ ಸಮಯವನ್ನು ಕೊಡುವುದು ಬೇಡ. ಕುಟುಂಬವನ್ನು ಸಮಾಧಾನವಾಗಿ ಇಟ್ಟುಕೊಂಡು ಮುನ್ನಡೆಸುವಿರಿ. ಇಂದು ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಯನ್ನು ಹೆಚ್ಚು ಮಾಡುವಿರಿ. ದಾಂಪತ್ಯದಲ್ಲಿ ಪರಸ್ಪರ ಅನುರಾಗದ ಕೊರತೆ ಕಾಣಿಸಬಹುದು.
ಮೀನ ರಾಶಿ:
ದೂರದ ಮಿತ್ರರ ಸಂಪರ್ಕದಿಂದ ಕೆಲವು ಸಮಸ್ಯೆಗಳು ಬಗೆಹರಿಯಬಹುದು. ತಾಯಿಯ ಜೊತೆ ವಾಗ್ವಾದ ನಡೆಸುವಿರಿ. ಅನಂತರ ಅದಕ್ಕೆ ಬೇಸರಗೊಳ್ಳುವಿರಿ. ಮಾಧ್ಯಮದಲ್ಲಿ ಕೆಲಸ ಮಾಡುವವರು ಸ್ವಲ್ಪ ಜಾಗರೂಕತೆಯಿಂದ ವ್ಯವಹರಿಸಿ. ನಿಮ್ಮೊಳಗೆ ಹೇಳಿಕೊಳ್ಳಲಾಗದ ಭಯವು ಕಾಣಿಸುವುದು. ಅತಿಯಾದ ಸುಖದಿಂದ ನಿಮ್ಮ ಕ್ರಿಯಾಶೀಲತೆ ನಿಂತುಹೋಗುವುದು. ವಾಹನ ಖರೀದಿಯಲ್ಲಿ ಗೊಂದಲ ಉಂಟಾಗಬಹುದು.
ಫೆಬ್ರವರಿ 01, 2026ರ ಪಂಚಾಂಗ:
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ಚತುರ್ದಶೀ, ನಿತ್ಯನಕ್ಷತ್ರ : ಪುಷ್ಯ, ಯೋಗ : ವಿಷ್ಕಂಭ, ಕರಣ : ಗರಜ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 22 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 16:57 – 18:23 ಯಮಗಂಡ ಕಾಲ 12:38 – 14:04, ಗುಳಿಕ ಕಾಲ 15:30 – 16:57
-ಲೋಹಿತ ಹೆಬ್ಬಾರ್ – 8762924271 (what’s app only)
