Nitya Bhavishya: ಈ ರಾಶಿಯವರು ಅತಿಯಾದ ಉತ್ಸಾಹ, ನಂಬಿಕೆಯಿಂದ ತೊಂದರೆಗೆ ಸಿಲುಕುವಿರಿ

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಫೆಬ್ರವರಿ​​​​ 04ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Nitya Bhavishya: ಈ ರಾಶಿಯವರು ಅತಿಯಾದ ಉತ್ಸಾಹ, ನಂಬಿಕೆಯಿಂದ ತೊಂದರೆಗೆ ಸಿಲುಕುವಿರಿ
ರಾಶಿ ಭವಿಷ್ಯ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 04, 2024 | 12:44 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 04) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ದಶಮೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ವೃದ್ಧಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 07 ಗಂಟೆ 01 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 31 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 05:05 ರಿಂದ 06:32ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:47 ರಿಂದ 02:13 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:39 ರಿಂದ 05:05ರ ವರೆಗೆ.

ಧನು ರಾಶಿ : ಇಂದು ಆತುರದಲ್ಲಿ ಕೆಲಸವನ್ನು ಮಾಡುವಿರಿ. ನಿಮ್ಮ ಮನಸ್ಸಿಗೆ ಹಿಡಿಸದ ಯಾವುದೇ ವಿಷಯದ ಬಗ್ಗೆ ವಿವಾದವನ್ನು ಮಾಡಿಕೊಳ್ಳಬೇಡಿ. ಮನೆಯ ವಿಷಯಕ್ಕೆ ಹೊರಗಿನವರನ್ನು ಸಂಪರ್ಕಿಸುವುದು ಬೇಡ. ನೀವೇ ಸರಿಮಾಡಿಕೊಳ್ಳಿ. ಆರೋಗ್ಯದ ವಿಷಯದಲ್ಲಿ ಜಾಗರೂಕರಾಗಿರಬೇಕು. ನಿಮ್ಮ ಆತ್ಮೀಯರಿಂದ ನಿಮ್ಮ ಪ್ರೀತಿ ಮತ್ತು ವಿಶ್ವಾಸ ಹೆಚ್ಚಾಗುತ್ತದೆ. ನಿಮ್ಮ ಸ್ನೇಹಿತರು ನಿಮಗೆ ಯಾವುದಾದರೂ ಸಲಹೆಯನ್ನು ನೀಡುತ್ತಿದ್ದರೆ ಅದನ್ನು ಗಮನಿಸಿ. ಸೌಕರ್ಯಗಳಿಗಾಗಿ ನೀವು ಸಾಕಷ್ಟು ಹಣವನ್ನು ಖರ್ಚು ಮಾಡಿಕೊಳ್ಳುವಿರಿ. ನೂತನ ವಸ್ತ್ರ, ವಸ್ತುಗಳ ಖರೀದಿಗೆ ಹೆಚ್ಚು ಸಮಯವನ್ನು ಕೊಡಬೇಕಾದೀತು. ಸಂಗಾತಿಯ ಮನೋಭಾವವನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾದೀತು. ಮಕ್ಕಳ ವಿವಾಹಕ್ಕಾಗಿ ಓಡಾಟ, ಮಾತುಕತೆಗಳನ್ನು ಮಾಡಬೇಕಾದೀತು. ಮಕ್ಕಳನ್ನು ಪಡೆಯಬೇಕು ಎಂಬ ಆಸೆ ಬರುವುದು. ನಿಮಗೆ ಸ್ವಾಭಿಮಾವನ್ನು ಬಿಟ್ಟು ವ್ಯವಹರಿಸುವುದು ಸಾಧ್ಯವಾಗದು.‌

ಮಕರ ರಾಶಿ : ಇಂದು ನೀವು ಜಾಣ್ಮೆಯಿಂದ ಕಾರ್ಯವನ್ನು ಪ್ರಶಂಸೆಯನ್ನು ಪಡೆಯುವಿರಿ. ಕೆಲವು ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಇರಬೇಕಾದೀತು. ಕುಟುಂಬದ ಸದಸ್ಯರ ಜೊತೆ ಸಮಯವನ್ನು ಕಳೆಯುವಾಗ ಹಳೆಯ ವಿಚಾರದಲ್ಲಿ ಬಿಸಿಬಿಸಿ ಚರ್ಚೆಯಾಗಬಹುದು. ನಿಮ್ಮ ಸಂಗಾತಿಗೆ ನೀವು ಉಡುಗೊರೆಯನ್ನು ತಂದುಕೊಡುವಿರಿ. ಖರ್ಚಿನ ಬಗ್ಗೆ ಸ್ಥೂಲ ಚಿತ್ರಣವಿರಲಿ. ಅತಿಯಾದ ಉತ್ಸಾಹ, ನಂಬಿಕೆಯಿಂದ ನೀವು ತೊಂದರೆಗೆ ಸಿಲುಕುವಿರಿ. ನಿಮ್ಮ ಮಾರ್ಗವು ನೇರವಾಗಿರಲಿ. ಓಡಾಟದಲ್ಲಿ ಕೆಲವು ಅಡೆತಡೆಗಳ ಬರಬಹುದು. ನಿಮ್ಮ ದೌರ್ಬಲ್ಯಗಳಿಂದ ನಿಮಗೆ ತೊಂದರೆ ಆಗುವ ಸಾಧ್ಯತೆ ಇದೆ. ವ್ಯಕ್ತಿತ್ವದಲ್ಲಿ ಬದಲಾದಂತೆ ಕಾಣುವಿರಿ. ಆರ್ಥಿಕತೆಯ ಬೆಳವಣಿಗೆಯು ನಿಮಗೆ ಸಂತೋಷವನ್ನು ಕೊಡುವುದು.‌ ಕುಟುಂಬಕ್ಕೆ ನಿಮ್ಮಿಂದ ಶುಭ ವಾರ್ತೆಯು ಬರಬಹುದು. ಹಿತಶತ್ರುಗಳನ್ನು ಇಂದು ಅವರಾಡುವ ಮಾತುಗಳಿಂದ ಗುರುತಿಸುವಿರಿ.

ಕುಂಭ ರಾಶಿ : ಇಂದು ನಿಮಗೆ ಪ್ರಯೋಜನವಾಗುವ ಕೆಲವು ಘಟನೆಗಳು ಆಗಲಿದ್ದು, ಅದು ನಿಮಗೆ ಆ ಸಂದರ್ಭದಲ್ಲಿ ತಿಳಿಯದೇಹೋದೀತು‌. ವಹಿವಾಟಿನಲ್ಲಿ ದೊಡ್ಡ ಗುರಿಯನ್ನು ಸಾಧಿಸಲು ಸಾಧ್ಯ. ನಿಮ್ಮ ಮನಶ್ಚಾಂಚಲ್ಯವನ್ನು ಕಡಮೆ ಮಾಡಿಕೊಳ್ಳುವುದು ಉತ್ತಮ. ಮಕ್ಕಳಿಂದ ನೀವು ಒಳ್ಳೆಯ ಸುದ್ದಿಯನ್ನು ಕೇಳುವಿರಿ. ವೈಯಕ್ತಿಕ ವಹಿವಾಟಿನ ವಿಷಯದಲ್ಲಿ ನಿಮಗೆ ಸ್ಪಷ್ಟತೆ ಇರಲಿ. ಇಲ್ಲದಿದ್ದರೆ ಸಮಸ್ಯೆಗಳಿರುತ್ತವೆ. ಹಳೆಯ ತಪ್ಪಿನಿಂದ ಪಾಠಗಳನ್ನು ನೀವು ಕಲಿಯಬೇಕು. ಹಲವರ ಅಭಿಪ್ರಾಯದಿಂದ ನಿಮಗೆ ಗೊಂದಲವಾಗುವುದು. ಇಂದು ಹಳೆಯ ತಪ್ಪಿಗೆ ನೀವು ಪಶ್ಚಾತ್ತಾಪ ಪಡಪಡುವಿರಿ. ಇಂದಿನ ನಿಮ್ಮ ಖರ್ಚು ಹೆಚ್ಚಾದಂತೆ ಅನ್ನಿಸೀತು. ನಿಮ್ಮ ನಿರ್ಮಾಣದ ಕಾರ್ಯಗಳು ನಿಧಾನವಾಗುವುದು. ಆತುರದಲ್ಲಿ ಯಾವ ಕೆಲಸವನ್ನೂ ಮಾಡಲು ಹೋಗುವುದು ಬೇಡ. ನೀವು ಕೊಟ್ಟ ಸಾಲದ ಹಣವು ನಿಮಗೆ ಹಿಂದಿರುಗಬಹುದು. ಧಾರ್ಮಿಕ ಭಾವನೆಗೆ ತೊಂದರೆಯಾಗಬಹುದು.

ಮೀನ ರಾಶಿ : ಇಂದು ನಿಮಗೆ ಕೆಲವು ಸಂದರ್ಭಗಳು ಕಠಿಣವೆನಿಸಬಹುದು. ಪಾಲುದಾರಿಕೆಯಲ್ಲಿ ಕೆಲಸ ಮಾಡುವುದು ನಿಮ್ಮ ವ್ಯವಹಾರವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಸಹಕಾರಿ. ನಿಮ್ಮ ಜವಾಬ್ದಾರಿಗಳನ್ನು ಸಮಯಕ್ಕೆ ಸರಿಯಾಗಿ ನಿರ್ವಹಿಸಿ. ಸಹಕಾರದ ಮನೋಭಾವವು ನಿಮ್ಮ ಮನಸ್ಸಿನಲ್ಲಿ ಇರುವುದು. ಎಲ್ಲರ ಜೊತೆ ಬೆರೆಯಲು ನೀವು ಇಷ್ಟಪಡುವಿರಿ. ಕುಟುಂಬ ವ್ಯವಹಾರದಲ್ಲಿ ಸಂಗಾತಿಯ ಸಲಹೆಯು ಉಪಯುಕ್ತವೆನಿಸಬಹುದು. ಇಂದು ನೀವು ನಿಮ್ಮ ಕುಟುಂಬದವರ ಜೊತೆ ಅಧಿಕ‌ ಕಾಲವನ್ನು ಕಳೆಯುವಿರಿ. ಆರ್ಥಿಕತೆಯಲ್ಲಿ ಸ್ವಲ್ಪ ಚೇತರಿಕೆ ಇದ್ದು ನಿಮಗೆ ನೆಮ್ಮದಿಯೂ ಸಿಗಲಿದೆ. ತಾಯಿಯು ನಿಮ್ಮನ್ನು ಬೆಂಬಲಿಸುವಳು. ಸ್ಥಿರಾಸ್ತಿಯ ಉಳಿವಿಗೆ ಹೋರಾಟವನ್ನೇ ಮಾಡಬೇಕಾದೀತು. ಮನೆಯಲ್ಲಿ ಬಹಳ ಕಾರ್ಯಗಳಿದ್ದು ಅದರಲ್ಲಿ ತನ್ಮಯರಾಗುವಿರಿ. ನಿಮ್ಮ ವಸ್ತುಗಳನ್ನು ಜೋಪಾನವಾಗಿ ಇರಿಸಿಕೊಳ್ಳಿ. ಸಂಗಾತಿಯು ನಿಮ್ಮ ನಡವಳಿಕೆಯ ಬಗ್ಗೆ ಸಂದೇಹ ಬರಬಹುದು. ಹಳೆಯ ಸಾಲವನ್ನು ಉಳಿಸಿಕೊಂಡೇ ಮತ್ತೆ ಸಾಲವನ್ನು ಮಾಡಬೇಕಾದೀತು.

-ಲೋಹಿತ ಹೆಬ್ಬಾರ್-8762924271 (what’s app only)

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ