AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 19 December: ಇಂದು ಈ ರಾಶಿಯವರಿಗೆ ನಿರುದ್ಯೋಗದ ಭಯ ಕಾಡಬಹುದು

ದಿನ ಭವಿಷ್ಯ, 19, ಡಿಸೆಂಬರ್​​ 2025: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಮಾರ್ಗಶೀರ್ಷ ಮಾಸ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿ ಶುಕ್ರವಾರ ಸೌಕರ್ಯ, ಅಶುಭವಾರ್ತೆ, ಅನಾಸಕ್ತಿ, ದುರುಪಯೋಗ, ಒತ್ತಡದಿಂದ ಶಾಂತಿ ಭಂಗ, ಕಾಮಗಾರಿಯಲ್ಲಿ ವಿಳಂಬ, ಅಧಿಕಾರಿಗಳಿಂದ ಪ್ರಶಂಸೆ ಇವೆಲ್ಲ ಇಂದಿನ ವಿಶೇಷ.

Horoscope Today 19 December: ಇಂದು ಈ ರಾಶಿಯವರಿಗೆ ನಿರುದ್ಯೋಗದ ಭಯ ಕಾಡಬಹುದು
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Dec 19, 2025 | 12:33 AM

Share

ಮೇಷ ರಾಶಿ:

ಇಂದು ಕಂಡ ಕನಸುಗಳು ಗಾಢವಾಗಿ ನಿಮ್ಮ ಮೇಲೆ ಪರಿಣಾಮ ಬೀರುವುದು. ನೀವಾಗಿಯೇ ನಿಮ್ಮ ಸ್ಥಾನವನ್ನು ಹೇಳಿ, ಮುಗ್ಗರಿಸುವಿರಿ. ನೀವು ಕೊಟ್ಟ ಮಾತನ್ನು ಇಂದು ಉಳಿಸಿಕೊಳ್ಳುವುದು ಕಷ್ಟವಾದೀತು. ಸಮಾನ ಚಿಂತನಶೀಲರ‌ ನಡುವೆ ಸಖ್ಯವಾಗುವುದು. ಇನ್ನೊಬ್ಬರಿಂದ ಸಹಕಾರವನ್ನು ಬಯಸುವುದಿಲ್ಲ. ಅತಿಯಾದ ಕೋಪವನ್ನು ನಿಯಂತ್ರಿಸಿದ್ದು ನಿಮ್ಮ ಅನುಭವಕ್ಕೆ ಬರಬಹುದು. ಸಂಧಾನಕ್ಕೆ ಕರೆದರೆ ಮಾತ್ರ ಹೋಗಿ. ಮನಸ್ಸಿನ ಸೋಮಾರಿತನವು ನಿಮ್ಮ ಕಾರ್ಯವನ್ನು ಹಿಂದಿಕ್ಕುವುದು. ಗ್ರಾಹಕರಿಗೆ ನಿಮ್ಮ‌ ಅಸಮಾಧಾನವೂ ಆಗುವುದು. ಇಂದು ಜ್ಞಾನವೃದ್ಧರ ಸೇವೆಗೆ ಅವಕಾಶ ಸಿಗಲಿದೆ. ಅಪಘಾತದಿಂದ‌ ಉಂಟಾದ ನೋವಿನಿಂದ ನಿಧಾನವಾಗಿ ಆಚೆ ಬರಬಹುದು. ಪ್ರಕೃತಿಯ ಜೊತೆ ಸಂಚಾರ, ಪೂಜೆ, ಧ್ಯಾನದಿಂದ ಮನಸ್ಸು ಹಗುರಗೊಳ್ಳುತ್ತದೆ. ಯಾರದ್ದಾದರೂ ಸಣ್ಣ ಸಹಾಯವನ್ನೂ ನೀವು ನಿರೀಕ್ಷಿಸುವಿರಿ. ಸಕಾಲಕ್ಕೆ ಸಿಕ್ಕ ಸೌಕರ್ಯದಿಂದ ನಿಮ್ಮ ಕಾರ್ಯವು ಸುಲಲಿತವಾಗುವುದು. ನಿಮ್ಮ ದೌರ್ಬಲ್ಯವನ್ನು ನೀವು ಸಹಾಕರಾತ್ಮಕವಾಗಿ ಪಡೆದುಕೊಂಡು ಮುನ್ನಡೆಯಬಹುದು.

ವೃಷಭ ರಾಶಿ:

ಸಾಮಾನ್ಯ ವಿಚಾರದಲ್ಲೇ ಅಸಾಮಾನ್ಯ ಅರ್ಥ ಕಂಡು ಖುಷಿಪಡುವಿರಿ. ಇಷ್ಟದ ವಸ್ತುವಿನ ಪ್ರಾಪ್ತಿಯ ಸಂತೋಷವಿದ್ದರೂ ಖರ್ಚಿನ ನೋವು ನಿಮ್ಮನ್ನು ಕಾಡಬಹುದು. ಮಾತಿಗೆ ಮಾತು ಬೆಳೆಯಬಹುದು. ಅದನ್ನು ನಿಭಾಯಿಸುವ ಕಲೆ ಗೊತ್ತಿರಲಿ. ನಿಮ್ಮ ಭೂಮಿಯ ಮಾರಾಟಕ್ಕೆ ಯಾರಾದರೂ ಬರಬಹುದು. ಅಂದುಕೊಂಡಿದ್ದಕ್ಕಿಂತ ಖರ್ಚು ಅಧಿಕವಾಗಿದ್ದು ಗಳಿಕೆಯ ಬಗ್ಗೆ ಆಲೋಚಿಸುವಿರಿ. ಇಂದು ನಿಮಗೆ ಸಣ್ಣ ವಿಚಾರಗಳೂ ಬಹಳ ಮುಖ್ಯವಾಗುತ್ತವೆ. ಧಾರ್ಮಿಕ‌ ಕಾರ್ಯದಲ್ಲಿ ತೊಡಗಿರುವವರಿಗೆ ಆದಾಯವು ಹೆಚ್ಚು ಇರಲಿದೆ. ಕುಟುಂಬದ ಪೋಷಣೆಯಲ್ಲಿ ಇಂದು ಸಹಭಾಗಿತ್ವ ಇರುವುದು. ವೃತ್ತಿಯ ಸ್ಥಳದಲ್ಲಿ ತೇಜೋವಧೆಯಾಗುವ ಸಂದರ್ಭವು ಬರಬಹುದು. ಬೇಕೆಂದೇ ನಿಮ್ಮ ಮೇಲೆ‌ ಒತ್ತಡ ತರಬಹುದು. ಸ್ನೇಹಿತರು ನಿಮ್ಮನ್ನು ದೂರವಿಟ್ಟಾರು. ನಿಮ್ಮ ವಿಭಿನ್ನ ಚಿಂತನೆ ಇತರರಿಗೆ ದಾರಿ ತೋರಿಸುತ್ತದೆ. ವೈಫಲ್ಯವನ್ನು ಸಕಾರಾತ್ಮಕ ದೃಷ್ಟಿಯಿಂದ ನೋಡಿ. ಮಕ್ಕಳಿಗೆ ಕಡಿವಾಣ ಹಾಕಲು ಹೋಗುವುದು ಬೇಡ. ಅವರ ಮೇಲೆ ನಿಮ್ಮ ನಿಗಾ ಇರಲಿ. ನೀವು ಯಾರಿಗೂ ಭಾರವಾಗದಂತೆ ಇರಬೇಕೆನಿಸುವುದು.

ಮಿಥುನ ರಾಶಿ:

ಕರ್ತವ್ಯ ಮತ್ತು ಕುಟುಂಬ ಎರಡರ ಮಧ್ಯೆ ಸಮತೋಲನ ಸಾಧಿಸಬೇಕಾದ ದಿನ. ಇಂದು ಸಹೋದರನ ನಡತೆ ನಿಮಗೆ ಸಂಶಯ ತರಿಸಬಹುದು. ನಿರುಪಯೋಗಿ ವಸ್ತುಗಳನ್ನು ನೀವು ದೂರ ಮಾಡುವಿರಿ. ನಿರುದ್ಯೋಗವೇ ನಿಮಗೆ ಅಭ್ಯಾಸವಾಗುವ ಸಾಧ್ಯತೆ ಇದೆ. ಸ್ತ್ರೀಯರಿಗೆ ಪ್ರಯಾಣದಲ್ಲಿ ತೊಂದರೆ ಬರಬಹುದು. ತಪ್ಪನ್ನು ಸರಿಮಾಡಿಕೊಳ್ಳುವ ಮಾರ್ಗದಲ್ಲಿ ಯೋಚನೆ ಇರಲಿ. ನಿಮಗೆ ಕಾರ್ಯದಲ್ಲಿ ನಿಷ್ಠೆ ಇಲ್ಲ ಎಂದು ಸಾಬೀತಾಗಬಹುದು. ವ್ಯವಹಾರದಲ್ಲಿ ಮುಗ್ಗರಿಸುವ ಸಂದರ್ಭವು ಬರಬಹುದು. ಸಾಲವನ್ನು ಕೊಡುವ ಸಂದರ್ಭವು ಬರಬಹುದು. ಏನಾದರೂ ಹೇಳಿ ತಪ್ಪಿಸಿಕೊಳ್ಳುವುದು ಸೂಕ್ತ. ನಿಮ್ಮ ನೌಕರರ ತಪ್ಪಿಗೆ ನೀವು ಉತ್ತರಿಸಬೇಕಾದೀತು. ನಿಮ್ಮ ಮೌಲ್ಯ ಕೆಲಸದಿಂದಲೇ ಹೊರಹೊಮ್ಮುತ್ತದೆ. ತಾಳ್ಮೆಯ ನಡೆ ನಿಮ್ಮ ಗೌರವವನ್ನು ಹೆಚ್ಚಿಸುತ್ತದೆ. ತಂದೆಯ ವ್ಯವಹಾರದಲ್ಲಿ ಮಧ್ಯ ಪ್ರವೇಶ ಮಾಡುವುದು ಬೇಡ. ದ್ವಿಚಕ್ರ ವಾಹನದ ಮೇಲೆ‌ ಜಿಗುಪ್ಸೆ ಬಂದೀತು. ಇಂದಿನ ಒತ್ತಡವನ್ನು ಸಹಿಸಿಕೊಂಡು ಇರುವುದು ಕಷ್ಟವಾದೀತು. ಇರುವುದನ್ನು ಇದ್ದಂತೆ ಹೇಳುವುದು ಇನ್ನೊಬರಿಗೆ ಆಗಿಬಾರದು.

ಕರ್ಕಾಟಕ ರಾಶಿ:

ನಿಮ್ಮ ದೃಷ್ಟಿ ಭವಿಷ್ಯದತ್ತ ನೆಟ್ಟಿರುವಿರಿ. ಇಂದು ಸಣ್ಣ ಆರಂಭ ಮುಂದಿನ ದಿನಗಳಲ್ಲಿ ದೊಡ್ಡ ದಾರಿ ತೆರೆದುಕೊಳ್ಳುತ್ತದೆ, ಧೈರ್ಯವಿರಲಿ. ಯಾರದೋ ಯೋಜನೆಯನ್ನು ನೀವು ಬಳಸಿಕೊಳ್ಳಬಹುದು. ನಿಮ್ಮ ಪ್ರಭಾವದಿಂದಾಗಿ ಇನ್ನೊಬ್ಬರಿಗೆ ಸಹಾಯ ಸಿಗಲಿದೆ. ನಿಮ್ಮ ಶ್ರಮವು ದುರುಪಯೋಗವಾಗುವುದು. ಅಪರಿಚಿತ ವ್ಯಕ್ತಿಗಳ ಜೊತೆ ವ್ಯಾಪರ ಸಂಬಂಧವು ಬರುವುದು. ದೂರಪ್ರಯಾಣದಿಂದ ನಿಮಗೆ ಖರ್ಚಾಗುವುದು ಗೊತ್ತಾಗದೇ ಹೋಗಬಹುದು. ನ್ಯಾಯಸಮ್ಮತ ಮಾರ್ಗದಲ್ಲಿ ನೀವು ಇರುವುದು ಸೂಕ್ತ. ಹಿರಿಯರ ಜೊತೆ ಔಚಿತ್ಯ ರೀತಿಯಿಂದ ವ್ಯವಸ್ಥೆ ವ್ಯವಹರಿಸಿ. ಸ್ತ್ರೀಯರಿಂದ ಅಪಮಾನವಾಗುವ ಸಾಧ್ಯತೆ ಇದೆ. ಆಕಸ್ಮಿಕ ಧನಲಾಭವು ನಿಮಗೆ ಆಶ್ಚರ್ಯ ಉಂಟಾಗಬಹುದು. ಸಂಗಾತಿಯ ಜೊತೆ ಆರಾಮಾಗಿ ಮಾತನಾಡುವಿರಿ. ಕುಟುಂಬದ ಜೊತೆ ಕಳೆಯುವ ಕಾಲವು ನಿಮಗೆ ನೆನಪಿನಲ್ಲಿ ಉಳಿಯುವಂತೆ ಆಗುವುದು. ಕಾರ್ಯದಲ್ಲಿ ಶ್ರದ್ಧೆಯನ್ನು ಇಟ್ಟುಕೊಳ್ಳುವುದು ಮುಖ್ಯವಾಗುವುದು.

ಸಿಂಹ ರಾಶಿ:

ಮೌನವನ್ನು ನಿಮ್ಮ ಶಕ್ತಿಯಾಗಿಸಿಕೊಳ್ಳಿ. ಎಲ್ಲವನ್ನೂ ಹೇಳಬೇಕಿಲ್ಲ. ಅನಪೇಕ್ಷಿತ ಮಾತನ್ನು ಬಿಡುವುದು ಒಳ್ಳೆಯದು. ಅಧಿಕಾರದ ಹಿಡಿತ ತಪ್ಪುವ ಸಾಧ್ಯತೆ ಇದೆ. ನಿಮ್ಮ ಇಷ್ಟದ‌ ಕಾರ್ಯವನ್ನು ಮಾಡಿ ಸಂತೋಷಗೊಳ್ಳುವಿರಿ. ಕೃಷಿಯಲ್ಲಿ ಲಾಭವನ್ನು ಪಡೆಯಲು ಹೆಚ್ಚಿನ ಓಡಾಟ ಮಾಡಬೇಕಾಗುವುದು. ಚಿಂತಿತ ಕಾರ್ಯವನ್ನು ಪೂರೈಸಲು ನಿಮಗೆ ಬುದ್ಧಿಯು ಸೂಚಿಸದು. ಆಸ್ತಿಯನ್ನು ಪಡೆದುಕೊಳ್ಳಲು ನ್ಯಾಯಾಲಯಕ್ಕೆ ಹೋಗಬೇಕಾದೀತು. ಸಂಗಾತಿಯು ನಿಮ್ಮ‌ ನಡೆಯನ್ನು ಅನುಮಾನಸಿಬಹುದು. ಯಾರದೋ ಬಲವಂತಕ್ಕೆ ಸಿಕ್ಕಿಕೊಳ್ಳುವಿರಿ. ಉದ್ಯೋಗವನ್ನು ಬದಲಾಯಿಸಲು ಇರುವ ಉದ್ಯೋಗವನ್ನು ಬಿಟ್ಟುಬಿಡುವಿರಿ. ಸ್ಪರ್ಧಾತ್ಮಕ ಪರೀಕ್ಷೆಗೆ ನಿಮ್ಮ ಪ್ರಯತ್ನ ಸಾಲದು. ಒಳಗಿಟ್ಟ ಯೋಜನೆ ನಿಧಾನವಾಗಿ ರೂಪ ಪಡೆಯುತ್ತದೆ. ಹುಡುಗಾಟದ ಮನೋಭಾವವು ಇರಲಿದೆ. ಸ್ನೇಹಿತರ ಕೆಲವು ಸಂಗತಿಗಳು ನಿಮಗೆ ಇಷ್ಟವಾಗದು. ನಿಮ್ಮನ್ನು ಪ್ರಶಂಸಿಸಿದಂತೆ ಕಂಡರೂ ಅದು ತೆಗಳಿಕೆಯಾಗಿರಲಿದೆ. ಯಾರ ಜೊತೆಯೂ ಅಸಂಬದ್ಧ ಚರ್ಚೆಗೆ ಹೋಗುವುದು ಬೇಡ.

ಕನ್ಯಾ ರಾಶಿ:

ಇಂದು ಮುಖ್ಯ ವಿಚಾರದ ನಿರ್ಧಾರ ತೆಗೆದುಕೊಳ್ಳುವುದು ಕಷ್ಟವಾಗಬಹುದು. ನಿಮಗೆ ಇಂದು ಏನಾದರೂ ಹೊಸತನ್ನು ಮಾಡಬೇಕು ಎಂದು ಅನ್ನಿಸುವುದು. ಇಂದು ಯಾರನ್ನೂ ನಂಬುವ ಸ್ಥಿತಿಯಲ್ಲಿ ನೀವು ಇರಲಾರಿರಿ. ಸಾಮಾಜಿಕ ಕಾರ್ಯದಲ್ಲಿ ಅವಮಾನದ ಕಾರಣದಿಂದ ಅದನ್ನು ಮಾಡಲು ಹಿಂದೇಟು ಹಾಕುವಿರಿ. ಅವಿಶ್ರಾಂತ ಕಾರ್ಯದಿಂದ ಮನಸ್ಸಿಗೆ ತೊಂದರೆ ಸಾಧ್ಯ. ಅಪರಿಚಿತ ಕರೆಗಳು ನಿಮಗೆ ಹಿಂಸೆಯನ್ನು ಕೊಡಬಹುದು. ಪಾಲುದಾರಿಕೆಯಲ್ಲಿ ನಿಮಗೆ ಪೂರ್ಣ ಸಮಾಧಾನ ಇರದು. ವಿವಾಹವಾದರೂ ಭವಿಷ್ಯದ ಬಗ್ಗೆ ನಕಾರಾತ್ಮಕ ಆಲೋಚನೆಯು ಇರಲಿದೆ. ನಿಮಗೆ ಅಭದ್ರತೆಯು ಕಾಡಬಹುದು. ಮಕ್ಕಳ ಸಂತೋಷದಲ್ಲಿ ನೆಮ್ಮದಿ ಇರಲಿದೆ. ನಿಮ್ಮ ಗೌಪ್ಯ ಸಂಗತಿಗಳನ್ನು ಯಾರ ಜೊತೆಗಾದರೂ ಗೊತ್ತಿಲ್ಲದೇ ಹಂಚಿಕೊಳ್ಳುವಿರಿ. ಹೃದಯದ ಧ್ವನಿ ಕೇಳಿದರೆ ತಪ್ಪಾಗದು. ಕಲೆ, ಸಂಗೀತ ಮನಸ್ಸಿಗೆ ಔಷಧಿ. ನಿಮ್ಮ ಬಗ್ಗೆ ಬಂಧುಗಳು ಮಾತಾನಾಡಿಕೊಳ್ಳುವುದು ಗೊತ್ತಾದೀತು. ಒಳ್ಳೆಯ ಮಾತುಗಳು ಸಕಾರಾತ್ಮಕ ಪರಿಣಾಮವನ್ನು ಉಂಟುಮಾಡುವುದು.

ತುಲಾ ರಾಶಿ:

ಹೊರಗಿನ ವಸ್ತುಗಳನ್ನು ಸರಿಪಡಿಸುವುದು, ಶುಚಿಗೊಳಿಸುವುದು, ವ್ಯವಸ್ಥೆ ಮಾಡುವುದರಲ್ಲಿ ಮನಸ್ಸು ಹೂಡಿದರೆ ಒಳಗಿನ ಗೊಂದಲವೂ ನಿವಾರಣೆಯಾಗುತ್ತದೆ. ಇಂದು ನಿಮ್ಮ ಎಂತಹ ಎಚ್ಚರಿಕೆಯೂ ಹಾದಿ ತಪ್ಪಿಸೀತು. ಬೇಗನೆ ಯಶಸ್ಸು ಸಿಗುವುದೆಂದು ದಾರಿ ಬದಲಿಸಬಾರದು. ಸಂಕುಚಿತ ಸ್ವಭಾವವನ್ನು ದೂರ ಮಾಡಿಕೊಳ್ಳುವುದು ಉತ್ತಮ. ನಿಮ್ಮದಾದ ಕಾರ್ಯದಲ್ಲಿ ನೀವು ತೊಡಗಿಗೊಳ್ಳಿ. ಖಾಲಿ ಇರುವುದು ಬೇಡ. ವಾಹನ ಸಂಚಾರದಲ್ಲಿ ಅಡಚಣೆ ಆಗಲಿದೆ. ಶತ್ರುಗಳಿಂದ ನಿಮಗೆ ಆಗಬೇಕಾದ ಕಾರ್ಯವಾಗಬಹುದು. ಇಷ್ಟವಿಲ್ಲದ ವೃತ್ತಿಯನ್ನು ಅವಲಂಬಿಸಿ ಕಷ್ಟಪಡುವಿರಿ. ಸಹೋದ್ಯೋಗಿಗಳ ಅಸಹಕಾರವು ಅವರ ಮೇಲೆ ದ್ವೇಷವನ್ನು ಮೂಡಿಸಬಹುದು. ಆಕಸ್ಮಿಕವಾಗಿ ನಿಮಗೆ ಧನನಷ್ಟವಾಗಲಿದ್ದು ಚಿಂತೆ ಕಾಡುವುದು. ನಿಮ್ಮ ಸಣ್ಣ ತಪ್ಪೂ ಅಪಹಾಸ್ಯಕ್ಕೀಡಾಗುವುದು. ಗುರಿಯ ಬಗ್ಗೆ ಸರಿಯಾದ ಮಾರ್ಗದರ್ಶನ ಪಡೆದುಕೊಳ್ಳಿ. ನಿಮ್ಮ‌ ಸಂಕಲ್ಪವು ಫಲಿಸಲಿದ್ದು ಖುಷಿಯಾಗುವುದು. ಪ್ರಯಾಣದಲ್ಲಿ ಜಾಗರೂಕತೆ ಅವಶ್ಯಕ.

ವೃಶ್ಚಿಕ ರಾಶಿ:

ಗೌರವ ಮತ್ತು ಅಪಮಾನಗಳ ಬಗ್ಗೆ ಅತಿಯಾಗಿ ಯೋಚಿಸಬೇಡಿ. ಇಂದು ವೃತ್ತಿಯಲ್ಲಿ ಸಮಯ ಬದಲಾವಣೆ ಆಗುವ ಸಾಧ್ಯತೆ ಇದೆ‌. ಇನ್ನೊಬ್ಬರಿಗೆ ಸಹಾಯ ಮಾಡಲು ಕೂಡಿಟ್ಟ ಹಣವನ್ನು ತೆಗೆಯಬೇಕಾದೀತು. ನಿಗದಿತ ಸಮಯಕ್ಕೆ ಕೆಲಸವಾಗದೇ ಇರುವ ಕಾರಣ ಕೆಲಸವನ್ನು ಕೊಟ್ಟವರು ನಿಮ್ಮ ಮೇಲೆ ಮುನಿಸಿಕೊಂಡಾರು. ಪ್ರೇಮವನ್ನು ಒಪ್ಪಿಕೊಳ್ಳಲಾರರು. ಆದರೆ ಪೀಡಿಸುವುದು ಬೇಡ. ಕಳೆದ ಸಮಯವನ್ನು ಮೆಲುಕು ಹಾಕುವಿರಿ. ಯಾರ ಜೊತೆಯೂ ಅಸಂಬದ್ಧ ಚರ್ಚೆಗೆ ಹೋಗುವುದು ಬೇಡ. ಜಾಡ್ಯದಿಂದ ಇಂದು ಕಛೇರಿಗೆ ವಿಳಂಬವಾಗಿ ಹೋಗುವಿರಿ. ಬೆಲೆಬಾಳುವ ವಸ್ತುಗಳನ್ನು ಖರೀದಿಸಲಿದ್ದು ಅದರ ರಕ್ಷಣೆಯನ್ನು ಮಾಡಬೇಕಾಗುವುದು. ಹೊಸ ವಿಚಾರಗಳ ಕಲಿಕೆಗೆ ಅವಕಾಶಗಳು ಸಿಗುವುದು.‌ ವ್ಯಾಪಾರವನ್ನು ಹೆಚ್ಚಿನ ಆದಾಯ ಬರುವಂತೆ ಮಾಡಿಕೊಳ್ಳುವಿರಿ. ಹಳೆಯ ವಾಹನದಿಂದ ನಿಮಗೆ ಲಾಭವೇ ಆಗುವುದು. ಬಹಳ ದಿನಗಳಿಂದ ಕಾಣಿಸಿಕೊಳ್ಳದ ನೋವು ಕಾಣಿಸಿಕೊಳ್ಳಬಹುದು. ಸಹೋದ್ಯೋಗಿಗಳ ಜೊತೆ ಆಪ್ತವಾಗಿ ಮಾತನಾಡುವಿರಿ.

ಧನು ರಾಶಿ:

ಇಂದು ನಿಮ್ಮ ಸಂವೇದನೆಗಳು ಇತರರ ಮನಸ್ಸನ್ನು ತಿಳಿಯುವುದು. ನ್ಯಾಯಾಲಯದಲ್ಲಿ ಜಯ ಸಿಕ್ಕರೂ ಅದನ್ನು ಪಡೆಯುವ ಬಗೆ ನಿಮಗೆ ಅರಿಯದಾಗದು. ಎರಡು ದೋಣಿಯಲ್ಲಿ ಕಾಲು ಹಾಕಿ ಸಾಗಲಾಗದು. ಖರ್ಚನ್ನು ‌ನಿಭಾಯಿಸುವ ಕೌಶಲವನ್ನು ಅನುಭವಿಗಳಿಂದ ಪಡೆಯಬೇಕು. ಸಭ್ಯತೆಯ ಮಾತಿನಿಂದ ನೀವು ಕೆಲಸಗಳನ್ನು ಮಾಡಿಸಿಕೊಳ್ಳುವಿರಿ. ಉದ್ಯೋಗದಲ್ಲಿ ಗೊಂದಲ ಬರಬಹುದು. ಕಾರ್ಯಕ್ಷೇತ್ರದಲ್ಲಿ ಹೆಚ್ಚು ಸಮಯ ಕೆಲಸವನ್ನು ಮಾಡಬೇಕಾಗುವುದು. ಹೇಗಾದರೂ ಬರುವ ಹಣದಲ್ಲಿ ಉಳಿತಾಯ ಮಾಡಿಕೊಳ್ಳಿ. ನೂತನ ವಸ್ತ್ರಗಳನ್ನು ಖರೀದಿಸುವಿರಿ. ಆರ್ಥಿಕತೆಯ ತೊಂದರೆಯಿಂದ ನಿಮ್ಮ ಕೆಲವು ವಸ್ತುಗಳನ್ನು ಮಾರಾಟ ಮಾಡುವಿರಿ. ನಿಮ್ಮ ಅಪ್ರಾಮಣಿಕತೆಯು ಕೆಲವರಿಗೆ ಗೊತ್ತಾಗಬಹುದು. ಯಾರಿಗೋ ನೀಡಿದ ಸಣ್ಣ ಸಹಾಯ ದೊಡ್ಡ ಪುಣ್ಯವಾಗಿ ಮರಳುತ್ತದೆ. ಹಠದ ಸ್ವಭಾವದಿಂದ ಸಹೋದ್ಯೋಗಿಗಳಿಗೆ ಸಹಾಯವನ್ನು ಮಾಡುವುದಿಲ್ಲ. ನಿಮ್ಮದೇ ವಸ್ತುವು ನಿಮಗೆ ಹೊಸದರಂತೆ ತೋರುವುದು. ಸ್ಪರ್ಧಾತ್ಮಕ ಚಟುವಟಿಕೆಗಳಿಗೆ ಪೋಷಕರ ಸಹಕಾರ ಸಿಗಲಿದೆ.

ಮಕರ ರಾಶಿ:

ಮನಸ್ಸು ಹಲವಾರು ವಿಚಾರಗಳ ನಡುವೆ ಓಡಾಡುತ್ತದೆ. ಒಂದೇ ಕೆಲಸಕ್ಕೆ ಒತ್ತು ಕೊಟ್ಟರೆ ಜಯ ಖಚಿತ. ಜಾಣ ಕಿವುಡುತನವನ್ನು ತೋರಿಸುವಿರಿ.‌ ಇಂದು ನಿಮಗೆ ನ್ಯಾಯಾಲಯದ ವಿಚಾರದಲ್ಲಿ ಬೇಸರವೆನಿಸಬಹುದು. ಸಾಲವನ್ನು ಮಾಡಬೇಕಾಗಿಬರಬಹುದು. ಅಪರಿಚಿತರ ಜೊತೆ ವಿವಾದಕ್ಕೆ ಎಡೆಮಾಡಿಕೊಡುವಿರಿ. ಸಹೋದರನಿಂದ ಯಾವ ಸಹಕಾರವನ್ನು ನಿರೀಕ್ಷಿಸದೇ ಕಾರ್ಯಪ್ರವೃತ್ತರಾಗುವಿರಿ. ನಿಮ್ಮ ಸ್ವಭಾವವನ್ನು ಮರೆಮಾಚುವುದು ಕಷ್ಟಸಾಧ್ಯ. ಅಚಾತುರ್ಯದಿಂದ ತಪ್ಪು ನಡೆಯಬಹುದು. ಹಳೆಯ ಹೂಡಿಕೆಯು ಪ್ರಯೋಜನಕ್ಕೆ ಬರಲಿದೆ. ಕಛೇರಿಯ ಒತ್ತಡದಿಂದ ವಿರಾಮವನ್ನು ಪಡೆದು ಕುಟುಂಬಕ್ಕೆ ಸಮಯವನ್ನು ಕೊಡುವಿರಿ. ಬರವಣಿಗೆ, ಮಾತು, ಬೋಧನೆಗೆ ಶುಭ. ನ್ಯಾಯವನ್ನು ಬಿಟ್ಟು ವರ್ತಿಸುವುದು ಬೇಡ. ನಂಬಿಕೆಯನ್ನು ಉಳಿಸಿಕೊಳ್ಳಲು ನೀವು ಕಷ್ಟಪಡಬೇಕಾದೀತು. ಹೊಸ ಮಿತ್ರರ ಜೊತೆ ಸಮಾಲೋಚನೆಯನ್ನು ಮಾಡುವಿರಿ. ಬಹಳ‌ ದಿನಗಳ‌ ಅನಂತರ ಮನೆಯ ಬಗ್ಗೆ ಆಲೋಚನೆ ಬರಲಿದೆ. ನಿರುದ್ಯೋಗವೇ ನಿಮಗೆ ಅಭ್ಯಾಸವಾಗುವ ಸಾಧ್ಯತೆ ಇದೆ.

ಕುಂಭ ರಾಶಿ:

ಕುಟುಂಬದಲ್ಲಿ ಆಹಾರ, ನಿದ್ರೆ, ದಿನಚರಿಯಲ್ಲಿ ಶಿಸ್ತು ತರಬೇಕಾದ ದಿನ. ಸರಳತೆ ನಿಮ್ಮ ರಕ್ಷಾಕವಚ. ಸ್ಥಿರಾಸ್ತಿಯಿಂದ ಕೆಲವು ಲಾಭಗಳೂ ಆಗಲಿವೆ. ನಿಮ್ಮ ಗುರಿಯನ್ನು ಇಂದು ಯಾರಾದರೂ ಬದಲಿಸಬಹುದು. ಯಾರಾದರೂ ನಿಮ್ಮ ಕಿವಿಕಚ್ಚಬಹುದು. ನಿಮ್ಮ ಮನಸ್ಸು ಹೊಸ ಪರಿವರ್ತನೆಯ ಕಡೆ ಹೊರಳುವುದು. ಅಶುಭವಾರ್ತೆಗೆ ನೀವು ಕಿವಿಯಾಗಬೇಕಾದೀತು. ಆಸ್ತಿಯನ್ನು ಪಡೆಯುವ ಬಗ್ಗೆ ಉತ್ಸಾಹವಿರಲಿದೆ. ಸುಲಭವಾಗಿ ದೊರೆಯುವುದನ್ನು ಇಂಸು ಇಷ್ಟಪಡುವುದಿಲ್ಲ. ಒಂಟಿತನವು ನಿಮಗೆ ಅಭ್ಯಾಸವಾಗಲಿದ್ದು ನಿಶ್ಚಿಂತೆಯಿಂದ ಇರುವಿರಿ. ಲೆಕ್ಕ ಶೋಧಕರು ಹೆಚ್ಚಿನ ಒತ್ತಡದಲ್ಲಿ ಇರುವರು. ಅನವಶ್ಯಕ ಖರ್ಚನ್ನು ತಡೆಯುವುದೇ ಸಾಧನೆ. ಅಪರಿಚಿತರ ಜೊತೆ ಸಲುಗೆಯ ವ್ಯವಹಾರವು ಬೇಡ. ಸಂಗಾತಿಯ ಮಾತು ನಿಮಗೆ ಇಷ್ಟವಾಗದಿರುವುದು. ವಾಹನ ಖರೀದಿಗೆ ನಿಮ್ಮ‌ ಸಹಮತವಿರದು. ನಿಜವನ್ನು ಮುಚ್ಚಿಡಬೇಕಾಗುವುದು. ಉದ್ವೇಗದಲ್ಲಿ ಏನಾದರೂ ಹೇಳುವಿರಿ. ಸಹನೆಯು ಕೈತಪ್ಪಿ ಹೋಗುವುದು.

ಮೀನ ರಾಶಿ:

ಇಂದು ನಿಮ್ಮ ಕರ್ತವ್ಯಶಕ್ತಿ ಜಾಗೃತವಾಗುತ್ತದೆ. ತಡವಾಗುತ್ತಿದ್ದ ಕೆಲಸ ಒಂದು ಚಿಕ್ಕ ಪ್ರಯತ್ನದಿಂದ ಚಲನೆ ಪಡೆಯುತ್ತದೆ. ನಕಾರಾತ್ಮಕ ಆಲೋಚನೆಯಿಂದಲೇ ನೀವು ದೂರವಾಗುವುದು ಉತ್ತಮ. ನಿಮಗೆ ಸಿಗುವ ಕೆಲವು ಜವಾಬ್ದಾರಿಗಳಲ್ಲಿ ಹಿನ್ನಡೆಯಾಗಲಿದೆ. ಅತಿಯಾದ ನಿದ್ರೆಯಿಂದ ಮನಸ್ಸು ಕುಗ್ಗುವುದು. ವ್ಯಾಪಾರದಲ್ಲಿ ಶತ್ರುಗಳು ಕಾಣಿಸಿಕೊಳ್ಳುವರು. ಸಂಗಾತಿಗೆ ನಿಮ್ಮ‌ ವಾಸ್ತವದ ಉದ್ಯೋಗದ ವಾಸ್ತವ ಚಿತ್ರಣವನ್ನು ಕೊಡುವಿರಿ. ಆಕಸ್ಮಿಕವಾಗಿ ಸ್ನೇಹಿತರಿಂದ ಉಡುಗೊರೆ ಸಿಗಲಿದೆ. ಧಾರ್ಮಿಕ ಶ್ರದ್ಧೆಯಿಂದ ಅನುಕೂಲತೆ ಇರಲಿದೆ. ಮಿತ್ರರ ಧನಸಹಾಯದಿಂದ ವಾಹನವನ್ನು ಖರೀದಿಸುವಿರಿ. ವಿದೇಶದ ಜೊತೆ ವ್ಯಾಪಾರದ ಸಂಪರ್ಕವನ್ನು ಬೆಳೆಸಿಕೊಳ್ಳುವಿರಿ.‌ ಶರೀರದ ದಣಿವು ಕಂಡರೂ ಮನಸ್ಸು ಹೋರಾಡಲು ಸಿದ್ಧ. ನಿಮ್ಮ‌‌ಕೆಲಸದ ಬಗ್ಗೆ ಹಗುರವಾಗಿ ಮಾತನಾಡಿಯಾರು. ಶುಭಸಮಯವನ್ನು ನಿರೀಕ್ಷೆಯಷ್ಟೇ ಮಾಡಬಹುದು. ಪಾಪಿ ಸಮುದ್ರಕ್ಕಿಳಿದರೂ ಮೊಣಕಾಲು ನೀರು ಎಂಬಂತಾಗುವುದು. ನಿಮ್ಮಷ್ಟಕ್ಕೆ ಕಾರ್ಯದಲ್ಲಿ ಮಗ್ನರಾಗಿರುವಿರಿ. ಶತ್ರುಗಳು ಸಂಧಾನಕ್ಕೆ ಕರೆದರೆ ಮಾತ್ರ ಹೋಗಿ.

19 ಡಿಸೆಂಬರ್​​ 2025ರ ಶುಕ್ರವಾರದ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಮಾರ್ಗಶೀರ್ಷ, ಸೌರ ಮಾಸ : ಧನು, ಮಹಾನಕ್ಷತ್ರ : ಮೂಲಾ, ವಾರ : ಶುಕ್ರ, ಪಕ್ಷ : ಕೃಷ್ಣ, ತಿಥಿ : ಅಮಾವಾಸ್ಯಾ, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ಅತಿಗಂಡ, ಕರಣ : ವಣಿಜ, ಸೂರ್ಯೋದಯ – 06 – 44 am, ಸೂರ್ಯಾಸ್ತ – 05 – 59 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:57 – 12:22, ಯಮಗಂಡ ಕಾಲ 15:10- 16:35, ಗುಳಿಕ ಕಾಲ 08:09 – 09:33

-ಲೋಹಿತ ಹೆಬ್ಬಾರ್ – 8762924271 (what’s app only)

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್