Horoscope: ಅಪರಿಚಿತರ ಮೂಲಕ ನಿಮ್ಮ ಹಣವನ್ನು ಕಳೆದುಕೊಳ್ಳಲಿದ್ದೀರಿ-ಎಚ್ಚರ

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಜನವರಿ 04 ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Horoscope: ಅಪರಿಚಿತರ ಮೂಲಕ ನಿಮ್ಮ ಹಣವನ್ನು ಕಳೆದುಕೊಳ್ಳಲಿದ್ದೀರಿ-ಎಚ್ಚರ
ರಾಶಿ ಭವಿಷ್ಯ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jan 04, 2024 | 12:46 AM

ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಜನವರಿ 04) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಮಾರ್ಗಶೀರ್ಷ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಚಿತ್ರಾ, ಯೋಗ: ಅತಿಗಂಡ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 59 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 15 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:02 ರಿಂದ 03:26ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:59 ರಿಂದ 08:24ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:49 ರಿಂದ 11:13ರ ವರೆಗೆ.

ಧನು ರಾಶಿ : ಹೂಡಿಕೆಯನ್ನು ನೀವು ಒತ್ತಾಯದಿಂದ ಮಾಡಿದರೂ ಅದರ ಫಲದಿಂದ ಸಂತೋಷವಂತೂ ಸಿಗಲಿದೆ. ಭೂಮಿಯ ವ್ಯವಹಾರವು ಪೂರ್ಣವಾಗಿ ಗೊತ್ತಾಗಲು ಸಮಯವನ್ನು ತೆಗೆಸುಕೊಳ್ಳುವಿರಿ. ಸ್ನೇಹಿತರ ನಿರೀಕ್ಷೆಯಲ್ಲಿ ಹೆಚ್ಚಿನ‌ ಸಮಯವು ಕಳೆದುಹೋಗುವುದು. ಅಪರಿಚಿತರ ಮೂಲಕ ನಿಮ್ಮ ಹಣವನ್ನು ಕಳೆದುಕೊಳ್ಳಲಿದ್ದೀರಿ. ವೃತ್ತಿಯಲ್ಲಿ ನಿಮಗೆ ವಿರಾಮವು ಇಂದು ಸಿಗದೇ ನಿಮ್ಮ ಸ್ವಂತ ಕಾರ್ಯವನ್ನು ಕೈ ಬಿಡಬೇಕಾಗುವುದು. ಒಪ್ಪಿಕೊಂಡ ಕೆಲಸದಲ್ಲಿ ಯಶಸ್ಸು ಸಾಧಿಸುವುದು ಆಗದು.‌ ಸಂಗಾತಿಯ ಬೆಂಬಲವು ನಿಮ್ಮ‌‌ ಕಾರ್ಯಗಳಿಗೆ ಸಿಗಲಿದೆ. ಅಗತ್ಯವಿದ್ದಾಗ ಮಾತ್ರ ಸಾಲದ ಬಗ್ಗೆ ಆಲೋಚಿಸಿ. ಸರ್ಕಾರಿ ಉದ್ಯೋಗದವರು ವರ್ಗಾವಣೆಯಿಂದ ದೂರವಿರಬೇಕಾಗಬಹುದು. ಗೃಹ ನಿರ್ಮಾಣದ ಕಾರ್ಯವನ್ನು ಕೆಲವು ದಿನ ಮುಂದೂಡುವುದು ಉತ್ತಮ. ಹಣದ ಕೊರೆತೆ ಇಲ್ಲದಿದ್ದರೂ ಹಳೆಯ ಮನೆಯನ್ನೇ ಅವಶ್ಯಕತೆಗೆ ಸರಿಯಾಗಿ ಗಟ್ಟಿ ಮಾಡಿಕೊಳ್ಳಿ.

ಮಕರ ರಾಶಿ : ನಿಮ್ಮ ಇಷ್ಟದ ಕ್ಷೇತ್ರದಲ್ಲಿ ಅನ್ಯರ ಆಗಮನವು, ಸಲಹೆಯನ್ನು ಕೊಡುವುದು ಇಷ್ಟವಾಗದು. ಅಚ್ಚುಕಟ್ಟಾದ ಕಾರ್ಯಕ್ಕೆ ಪ್ರಸಿದ್ಧಿ ಸಿಗುವುದು. ಸಂಗಾತಿಯ ಸಂಪತ್ತಿನಿಂದ ನಿಮಗೆ ಬೇಕಾದುದನ್ನು ಪಡೆಯುವಿರಿ. ಅತಿಯಾದ ಬಾಯಾರಿಕೆ ಆಗಬಹುದು. ಯಾರ ಮಾತನ್ನು ಒಪ್ಪಿಕೊಳ್ಳದೇ ನಿಮ್ಮದೇ ಆದ ದಾರಿಯಲ್ಲಿ ನಡೆಯುವಿರಿ. ಕಛೇರಿಯ ಕೆಲಸದಲ್ಲಿ ನಿಮ್ಮ ಮಧ್ಯೆ ಅನಗತ್ಯರ ಪ್ರವೇಶದಿಂದ ಕೋಪಗೊಳ್ಳುವಿರಿ. ಅಲ್ಪ ಆದಾಯದಲ್ಲಿ ತೃಪ್ತಿ ಹೊಂದಬೇಕಾದೀತು. ಹೆಚ್ಚಿನ ಆದಾಯದಿಂದ ದುರಭ್ಯಾಸವು ಹೆಚ್ಚಾಗಬಹುದು. ಶಿಕ್ಷಕರು ವೇತನವನ್ನು ಹೆಚ್ಚಿಸಿಕೊಳ್ಳುವರು. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದು ಉತ್ತಮ. ವಿದ್ಯಾರ್ಥಿಗಳ ಉತ್ಸಾಹವನ್ನು ಕುಗ್ಗಸುವುದು ಬೇಡ. ಸರಿಯಾದ ಮಾರ್ಗವನ್ನು ತೋರಿಸಿ. ನಿಮ್ಮ ಮಕ್ಕಳ ವರ್ತನೆಯಿಂದ ಬೇಸರ ಆಗುವುದು. ಬೇರೆಯವರಿಂದ ದೂರನ್ನೂ ಕೇಳಬೇಕಾದೀತು. ವಿಚಲಿತವಾಗದೇ ತಾಳ್ಮೆಯಿಂದ ವ್ಯವಹರಿಸಿ.

ಕುಂಭ ರಾಶಿ : ಮಕ್ಕಳಿಗೆ ಬೇಕಾದ ವ್ಯವಸ್ಥೆಯನ್ನು ಮಾಡುವ ಹೊರೆಯನ್ನು ಹೊತ್ತು ಓಡಾಟಮಾಡುವಿರಿ. ಬಾಯಿಯ ಚಪಲಕ್ಕೆ ವಿರುದ್ಧ ಆಹಾರವನ್ನು ತಿಂದು ಹೊಟ್ಟೆಯನ್ನು ಹಾಳುಮಾಡಿಕೊಳ್ಳಬೇಕಾಗುವುದು. ಕೆಲಸದ ಸ್ಥಳದಲ್ಲಿ ನಿಮ್ಮ ಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಗಲಿದೆ. ಆರೋಗ್ಯದ ಬಗ್ಗೆ ಎಚ್ಚರವಹಿಸಿ. ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲಕರವಿದ್ದರೂ ಅದನ್ನು ಬಳಸಿಕೊಳ್ಳುವ ಜಾಣತನವೂ ಅಗತ್ಯವಿದೆ. ಶುಭ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶಗಳಿದ್ದರೂ ಕಾರ್ಯದ ಒತ್ತಡದಿಂದ ಸಾಧ್ಯವಾಗದು. ನಿಮ್ಮ ಬದುಕಿನ ಬದಲಾವಣೆಯನ್ನು ಅನಿವಾರ್ಯವಾಗಿ ಮಾಡಿಕೊಳ್ಳಬೇಕಾಗಬಹುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗುವುದು. ಸಹೋದ್ಯೋಗಿಗಳಿಗೆ ಸಹಕರಿಸುವ ಮನಸ್ಸಾಗುವುದು. ಮೋಜಿನ ಕಾರಣಕ್ಕೆ ಸುತ್ತಾಟ ಮಾಡುವಿರಿ. ಬಂಧುಗಳ ಜೊತೆ ಅನಗತ್ಯ ವಾಗ್ವಾದ ಬೇಡ. ನಿಮ್ಮ ಮೇಲಿನ‌ ಪ್ರೀತಿ ಕಡಿಮೆ‌ ಆಗುವುದು.‌ ಯಾವುದೂ ಬೇಡವೆನ್ನುವ ಭಾವವು ಇರುವುದು.

ಮೀನ ರಾಶಿ : ಇಂದಿನ ನಿಮ್ಮ ವ್ಯಾಪಾರವು ಬಹಳ ಶಿಸ್ತುಬದ್ಧವಾಗಿರಲಿದ್ದು, ಹಣದ ಹರಿವೂ ನಿಮಗೆ ಎಣಿಸಿದಂತೆ ಇರಲಿದೆ. ಹಳೆಯ ದಾಂಪತ್ಯವಾದರೂ ಸಂತೋಷಕ್ಕೆ ಕೊರತೆ ಇಲ್ಲದಂತೆ ಇರುವಿರಿ. ಸಾಮಾಜಿಕ ಕಾರ್ಯಕ್ಕೆ ನಿಮ್ಮ ಕೊಡುಗೆಯನ್ನು ನೀಡುವಿರಿ. ಕಛೇರಿಯ ಕೆಲಸಗಳನ್ನು ವೇಗವಾಗಿ ಮಾಡಿ ಜವಾಬ್ದಾರಿಯನ್ನು ಮುಗಿಸುವಿರಿ. ಕೆಲವು ಸಂಗತಿಗಳನ್ನು ನಿರೀಕ್ಷಿಸದೇ ಬರಬಹುದು. ನಿಮ್ಮನ್ನು ಕೆಲವರು ಅನಾದರ ಮಾಡಿದಂತೆ ಕಾಣಿಸೀತು. ಖಾಸಗಿ ಸಂಸ್ಥೆಯಲ್ಲಿ ಇರುವವರಿಗೆ ವೇತನವು ಹೆಚ್ಚಾಗಬಹುದು. ನೀವು ವರ್ಗಾವಣೆಗೆ ಒತ್ತಡವನ್ನು ತರುವಿರಿ. ಅಸಮಯದ ಆಹಾರವು ನಿಮಗೆ ಅಭ್ಯಾಸವಾಗಲಿದೆ. ಮಕ್ಕಳ ಆರೋಗ್ಯಕ್ಕೆ ಖರ್ಚು ಮಾಡಬೇಕಾದೀತು. ವ್ಯವಹಾರದಲ್ಲಿ ಹೆಚ್ಚಿನ ಲಾಭವು ಬರಬಹುದು. ಪ್ರಸಾರ ಮಾಧ್ಯಮದವರು ದೂರ ಹೀಗಬೇಕಾಗಬಹುದು. ಸಾಹಿತ್ಯ ಕ್ಷೇತ್ರದಲ್ಲಿ ಇರುವವರಿಗೆ ಸಮ್ಮಾನ ಸಿಗುವುದು. ಅವಿವಾಹಿತರು ಕಂಕಣಬಲವನ್ನು ನಿರೀಕ್ಷಿಸಬಹುದು. ಪ್ರಸಿದ್ಧ ಸಂಸ್ಥೆಗೆ ಹೂಡಿಕೆ ಮಾಡಲಿದ್ದೀರಿ.

-ಲೋಹಿತ ಹೆಬ್ಬಾರ್ – 8762924271 (what’s app only)

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ