Horoscope:ನಿಮ್ಮ ಮಾತು ಸುಳ್ಳಾಗಲಿದ್ದು ನಂಬಿಕೆಯನ್ನು ಕಳೆದುಕೊಳ್ಳುವಿರಿ-ಎಚ್ಚರ

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಜನವರಿ 05 ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Horoscope:ನಿಮ್ಮ ಮಾತು ಸುಳ್ಳಾಗಲಿದ್ದು ನಂಬಿಕೆಯನ್ನು ಕಳೆದುಕೊಳ್ಳುವಿರಿ-ಎಚ್ಚರ
ರಾಶಿ ಭವಿಷ್ಯ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jan 05, 2024 | 12:45 AM

ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಜನವರಿ 05) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಮಾರ್ಗಶೀರ್ಷ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ನವಮೀ, ನಿತ್ಯನಕ್ಷತ್ರ: ಸ್ವಾತಿ, ಯೋಗ: ಸುಕರ್ಮ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 07 ಗಂಟೆ 00 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 15 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:13 ರಿಂದ 12:38ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:27 ರಿಂದ 04:51ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:25 ರಿಂದ 09:49ರ ವರೆಗೆ.

ಧನು ರಾಶಿ : ನೌಕರರಿಗೆ ಸರಿಯಾದ ಕಾರ್ಯವನ್ನು ಹಂಚಿ, ಆಗಬೇಕಾದುದನ್ನು ಪೂರೈಸಿಕೊಳ್ಳುವಿರಿ. ಅಜ್ಞಾತವಾಸದಿಂದ ಹೊರಬಂದಂತೆ ಎಲ್ಲರೂ ನಿಮ್ಮನ್ನು ಮಾತನಾಡಿಸಿಯಾರು. ನಿಮ್ಮ ಮಾತು ಸುಳ್ಳಾಗಲಿದ್ದು ನಂಬಿಕೆಯನ್ನು ಕಳೆದುಕೊಳ್ಳುವಿರಿ. ನಿಮ್ಮವರು ನೀವಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳುವರು. ಕುಟುಂಬದಲ್ಲಿ ನಿಮ್ಮ ಪ್ರಾಮುಖ್ಯವು ಅರಿವಿಗೆ ಬರಬಹುದು. ಬೇಡದ ಆಲೋಚನೆಯನ್ನು ದೂರಮಾಡಿಕೊಳ್ಳಿ. ಪ್ರೇಮಕ್ಕಾಗಿ ಹೆಚ್ಚು ಖರ್ಚನ್ನು ಮಾಡಬೇಕಾದೀತು. ಹಿತಶತ್ರುಗಳ ಬಗ್ಗೆ ನಿಮ್ಮ ಊಹೆಯು ಸುಳ್ಳಾಗಬಹುದು. ಆರೋಗ್ಯವು ಬಡವಾದಂತೆ ತೋರುವುದು. ಸೋಲಿನ ಚಿಂತೆಯನ್ನು ಬಿಟ್ಟು ಸ್ಪರ್ಧೆಯಲ್ಲಿ ತೊಡಗಿ. ಉದ್ಯೋಗವನ್ನು ಬಿಡುವ ಸಂದರ್ಭವೂ ಬರಬಹುದು. ಮನೋ ವ್ಯಥೆಯನ್ನು ಯಾರ ಬಳಿಯಾದರೂ ಹೇಳಿಕೊಳ್ಳುವಿರಿ. ಸಂಬಂಧಗಳಲ್ಲಿ ವಿಷಮತೆ ಕಾಣಿಸಿಕೊಂಡೀತು. ನಿಮ್ಮ ಗುರಿಯನ್ನು ತಲುಪಲು ಬೇರೆ ಮಾರ್ಗವನ್ನೂ ಅನುಸರಿಸಬೇಕಾದೀತು.

ಮಕರ ರಾಶಿ : ನಿಮ್ಮ ಅದೃಷ್ಟವನ್ನು ಸರಿಯಾಗಿ ಬೆಳೆಸಿಕೊಂಡು ಆಗಬೇಕಾದುದನ್ನು ಮಾಡಿಸಿಕೊಳ್ಳುವಿರಿ. ನಿಮ್ಮ ನಡವಳಿಕೆಯನ್ನು ಇತರರಿಗೆ ಸಾಬೀತುಮಾಡಬೇಕಿಲ್ಲ. ಉದ್ಯೋಗಿಗಳಿಗೆ ಉನ್ನತ ಅಧಿಕಾರಿಗಳ ಜೊತೆ ಸರಿಯಾದ ಹೊಂದಾಣಿಕೆಯನ್ನು ಮಾಡಿಕೊಳ್ಳುವಿರಿ. ಆತ್ಮೀಯ ಸಂಬಂಧವು ಕಾರಣಾಂತರಗಳಿಂದ ಕಡಿತವಾಗಿದ್ದು ನೀವು ಪುನಃ ಸ್ಥಾಪಿಸಿಕೊಂಡು ಎಂದಿನಂತೆ ನೆಮ್ಮದಿಯಿಂದ ಇರುವಿರಿ. ಮುರಿದ ಸಂಬಂಧಗಳು ಎಷ್ಟೇ ಆದರೂ ಸರಿಯಾಗಿ ಕೂಡಿಕೊಳ್ಳುವುದು ಕಷ್ಟವಾದೀತು. ಇಂದಿನ ಕಾರ್ಯಗಳಲ್ಲಿ ತೊಂದರೆಗಳು ಎದ್ದು ಕಾಣಿಸುವುದು. ಜಾಣ್ಮೆಯನ್ನು ಪ್ರದರ್ಶಿಸಲು ಹೋಗಿ ಮುಗ್ಗರಿಸುವಿರಿ. ಯಾರಾದರೂ ರಾಜಕೀಯ ವ್ಯಕ್ತಿಗಳ ಸಂಪರ್ಕವನ್ನು ನೀವು ಮಾಡುವಿರಿ. ದೈವದ ಮೇಲೆ ಭಕ್ತಿ ಉಂಟಾದೀತು. ಸ್ತ್ರೀಯರು ತಾಳ್ಮೆಯನ್ನು ಕಳೆದುಕೊಂಡು ಕೂಗಾಡಬಹುದು. ನಿಮ್ಮ ಅಭಿಪ್ರಾಯವನ್ನು ಹೇಳಬೇಕಾದಲ್ಲಿ ಹೇಳುವ ರೀತಿಯಲ್ಲಿ ಹೇಳಿ.

ಕುಂಭ ರಾಶಿ : ವೈಚಾರಿಕ ಮನೋಭಾವವನ್ನು ಬೆಳೆಸಿಕೊಳ್ಳುವುದು ನಿಮಗೆ ಇಷ್ಟವಾದೀತು. ಬೋಧನೆಯ ವಿಚಾರದಲ್ಲಿ ಆಸಕ್ತಿಯನ್ನು ಹೆಚ್ಚಿಸಿಕೊಳ್ಳುವಿರಿ. ವ್ಯಾಪಾರದಲ್ಲಿ ಅಜಾಗರೂಕರಾಗಿ ಇರುವುದು ಸರಿಯಲ್ಲ. ಸಂಶೋಧನೆಯ ಬಗ್ಗೆ ಆಸಕ್ತಿಯು ಹೆಚ್ಚಿರುವುದು. ಸಂಗಾತಿಯ ಬೇಸರವನ್ನು ಮಾತುಗಳಿಂದ ಸರಿಮಾಡುವಿರಿ. ಅಮೂಲ್ಯ ವಸ್ತುವಿನ ಲಾಭದಿಂದ ಸಂತಸವಾಗಲಿದೆ. ಸಹಾಯವನ್ನು ಮಾಡಿ ಸಂತೃಪ್ತಿಯನ್ನು ಪಡೆಯುವಿರಿ. ಅಪರಿಚಿತರ ಜೊತೆ ವೃಥಾ ಕಲಹವಾಗಬಹುದು. ಮಕ್ಕಳ ವಿದ್ಯಾಭ್ಯಾಸದ ಚಿಂತೆ ಇರಲಿದೆ. ಕೆಲವು ಗೊಂದಲವು ಪರಿಹಾರವಾಗದೇ ಹಾಗೆಯೇ ಇರುವುದು. ನಿಮ್ಮ ಕೆಲಸಕ್ಕೆ ಅಧಿಕಾರಿಗಳು ಪ್ರಶಂಸಿಸುವರು. ಬಹಳ ದಿನಗಳಿಂದ ನಡೆಯುತ್ತಿದ್ದ ನ್ಯಾಯಾಲಯದ ವ್ಯವಹಾರವನ್ನು ಮುಕ್ತಾಯ ಮಾಡಿಕೊಳ್ಳುವಿರಿ. ಮಿತ್ರರೆಂದು ಹೇಳಿಕೊಂಡು ಯಾರಾದರೂ ಬರಬಹುದು. ಸರಿಯಾದ ಮೂಲದಿಂದ ಬಂದ ಸುದ್ದಿ ಮಾತ್ರ ನಂಬಲು ಅರ್ಹವಾಗಿರುವುದು.

ಮೀನ ರಾಶಿ : ಇಂದು ನಿಮಗೆ ಆಸೆಗಳನ್ನು ಪೂರೈಸಲು ನಿಮಗೆ ಸಾಧ್ಯವಾದರೂ ತೃಪ್ತಿಯು ಮಾತ್ರ ಇಲ್ಲವಾಗುವುದು. ನಿಮಗೆ ಕಛೇರಿಯಲ್ಲಿ ಅನುಕೂಲಕರವಾದ ವಾತಾವರಣವು ಇರಲಿದೆ. ಸ್ನೇಹಿತರ ಜೊತೆಗೆ ದೂರಪ್ರಯಾಣವನ್ನು ಮಾಡುವಿರಿ. ನಿಮ್ಮನ್ನು ನೌಕರರು ಹೋಗಳುವರು. ಎದರುರಾಗು ಅಡ್ಡಿ, ಆತಂಕಗಳನ್ನು ನೀವು ಅನಾಯಾಸವಾಗಿ ದೂರ ಸರಿಸುವಿರಿ. ನಿಮ್ಮನ್ನು ನಗಿಸುವ ಪ್ರಯತ್ನ ಮಾಡಿದರೂ ನೀವು ಯಾವುದೋ ಆಲೋಚನೆಯಲ್ಲಿಯೇ ಇರುವಿರಿ. ನಿಮ್ಮ ಇಂದಿನ ಶ್ರಮಕ್ಕೆ ತಕ್ಕುದಾದ ಫಲವು ಸಿಗಬಹುದು. ಭೂಮಿಯ ವ್ಯಾಪಾರದಲ್ಲಿ ಜಯವಾಗಲಿದೆ. ಇಂದು ಸರ್ಕಾರಿ ಕೆಲಸಕ್ಕೆ ಓಡಾಟ ಮಾಡುವಿರಿ. ನಿಮಗೆ ಕೆಲಸದಲ್ಲಿ ಅನೇಕ ಗೊಂದಲಗಳು ಇರಬಹುದು. ಕುಟುಂಬದ ಹೊಣೆಗಾರಿಕೆಯನ್ನು ನಿರ್ವಹಿಸುವುದು ಕಷ್ಟವಾಗಬಹುದು. ಅಕ್ರಮ ಕೆಲಸಗಳು ಎಲ್ಲರಿಗೂ ತಿಳಿಯಬಹುದು.

-ಲೋಹಿತ ಹೆಬ್ಬಾರ್ – 8762924271 (what’s app only)

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ