ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಜನವರಿ 06) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಮಾರ್ಗಶೀರ್ಷ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ದಶಮೀ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಧೃತಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 07 ಗಂಟೆ 00 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 16 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:49 ರಿಂದ 11:14ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:03 ರಿಂದ 03:27ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:00 ರಿಂದ 08:25ರ ವರೆಗೆ.
ಧನು ರಾಶಿ : ನಿಮ್ಮ ಹಠದ ಸ್ವಭಾವವು ಜೊತೆಗಾರರಿಗೆ ಕಿರಿಕಿರಿ ಆದೀತು. ನೀವಂದುಕೊಂಡಂತೆ ಎಲ್ಲವೂ ಆಗಬೇಕು ಎನ್ನುವುದು ತಲೆಯಿಂದ ತೆಗೆಯುವುದು ಅವಶ್ಯಕ. ಸಂಗಾತಿಯ ಬದಲಾವಣೆಯು ನಿಮಗೆ ಅನಿರೀಕ್ಷಿತ ಆದೀತು. ಇನ್ನೊಬ್ಬರ ಅನುಭವವು ನಿಮಗೆ ಪಾಠವಾಗಬಹುದು. ನಿಮ್ಮ ವಸ್ತುಗಳು ಕಾಣೆಯಾಗಿದ್ದು ಹಲವು ದಿನಗಳ ಅನಂತರ ತಿಳಿದೀತು. ಭೂಮಿಯ ಲಾಭದ ವಿಚಾರದಲ್ಲಿ ಸರಿಯಾದ ಮಾತುಕತೆಗಳು ಆಗಲಿ. ಆರೋಪ ಪ್ರತ್ಯಾರೋಪಗಳಿಂದ ಪರಸ್ಪರ ಕಲಹವೂ ಆಗುವುದು. ದುಸ್ಸಾಧ್ಯ ಎನಿಸಿದ ಕಾರ್ಯವನ್ನು ಮಾಡಲು ಪ್ರಯತ್ನಿಸುವುದು ಬೇಡ. ಸ್ಥಿರಾಸ್ತಿಯನ್ನು ಮಾರಾಟ ಮಾಡುವ ಪ್ರಯತ್ನದಲ್ಲಿ ಇರುವಿರಿ. ಇಂದಿನ ಮನೆಯ ಕೆಲಸದಿಂದ ನಿಮಗೆ ಶ್ರಮವಾಗುವುದು. ಹಳೆಯ ಆಸೆಯನ್ನು ನೀವು ತೀರಿಸಿಕೊಳ್ಳುವ ಅವಕಾಶವಿರಲಿದೆ. ಮನಸ್ಸಿಗೆ ಸಹೋದರನ ಮಾತು ಘಾಸಿಮಾಡೀತು. ಇಂದು ನಿಮ್ಮ ಅನಗತ್ಯ ಮಾತುಗಳು ಕಲಹಕ್ಕೆ ಕಾರಣವಾಗಬಹುದು.
ಮಕರ ರಾಶಿ : ಇಂದು ಆರ್ಥಿಕ ದೃಷ್ಟಿಕೋನವನ್ನು ಇಟ್ಟುಕೊಂಡೇ ನಿಮ್ಮ ಎಲ್ಲ ಯೋಜನೆಗಳನ್ನು ಆರಂಭಿಸಯವಿರಿ. ಅಸಮಾಧಾನವನ್ನು ಯಾವುದಾದರೂ ತಂತ್ರದಿಂದ ಸರಿಮಾಡಿಕೊಳ್ಳುವಿರಿ. ಮನೋರಂಜನೆಯು ನಿಮಗೆ ಮುಖ್ಯವಾದೀತು. ಆಪ್ತರಿಗಾಗಿ ಕೊಟ್ಟ ಸಮಯವೂ ವ್ಯರ್ಥವಾದೀತು. ಸ್ಥಿರಾಸ್ತಿಗಾಗಿ ಹೆಚ್ಚು ಓಡಾಡುವಿರಿ. ವಿದೇಶ ಪ್ರಯಾಣವು ನಿಮಗೆ ಇಷ್ಟವಿಲ್ಲದಿದ್ದರೂ ಮಾಡುವುದು ಅನಿವಾರ್ಯವಾದೀತು. ಬೇಕಾದಷ್ಟು ಕೆಲಸಗಳಿದ್ದರೂ ಯಾರ ಬಳಿಯೂ ಹೇಳಿಕೊಳ್ಳುವುದಿಲ್ಲ. ಉದ್ಯಮದ ಮಿತ್ರನನ್ನು ಮನೆಗೆ ಆಹ್ವಾನಿಸುವಿರಿ. ಉದ್ಯಮವು ಬೆಳೆಯುತ್ತಿರುವುದು ಸಂತೋಷ ಕೊಡುವುದು. ಚಾಲಕರಿಗೆ ಕರ್ತವ್ಯಕ್ಕೆ ಪ್ರಶಂಸೆ ಸಿಗುವುದು. ಅರಿವಿಲ್ಲದೆ ಇಂದಿನ ತುರ್ತು ಕಾರ್ಯವನ್ನು ಮರೆಯುವಿರಿ. ಅಸಹಜ ವರ್ತನೆಯಿಂದ ಸಂಗಾತಿಗೆ ಅನುಮಾನ ಬರುವುದು. ಮಕ್ಕಳ ಶಿಕ್ಷಣದ ಬಗ್ಗೆ ನಿಮಗೆ ತೃಪ್ತಿ ಇರದು.
ಕುಂಭ ರಾಶಿ : ನೀವು ಇತರರಿಗೆ ಸಹಾಯ ಮಾಡಿ, ನೆಮ್ಮದಿಯನ್ನು ಪಡೆಯುವಿರಿ. ಯಾರ ಸಹಾಯವನ್ನೂ ನೀವು ಅಪೇಕ್ಷಿಸುವುದಿಲ್ಲ. ಕುಟುಂಬ ಸದಸ್ಯರ ನಡುವಿನ ಮನಸ್ತಾಪವನ್ನು ನೀವು ಬಗೆಹರಿಸುವುದು ತಕ್ಕಮಟ್ಟಿಗೆ ಸಾಧ್ಯವಾಗುವುದು. ಬಾಡಿಗೆ ಮನೆಯಲ್ಲಿ ಇರುವವರು ಹೊಸ ಮನೆಗೆ ಹೋಗುವಿರಿ. ಸರ್ಕಾರದ ನಿಮ್ಮ ಕೆಲಸವು ಬೇಗನೆ ಮುಗಿದುಹೋಗುವುದು. ಯಾರ ಮೆಚ್ಚುಗೆಯೂ ನಿಮಗೆ ಸಮಾಧಾನ ತರದು. ಕಾರಣದಿಂದ ವೃಥಾ ಕಾಲಹರಣವಾಗಲಿದ್ದು ಕಛೇರಿಯ ಕೆಲಸದ ಬಗ್ಗೆಯೇ ಚಿಂತೆ ಇರುವುದು. ಮಾರಾಟದ ವಿಚಾರವಾಗಿ ನೀವು ಬೇರೆ ಊರಿಗೆ ಹೋಗಬೇಕಾಗಬಹುದು. ಅವಿವಾಹಿತರಾಗಿರುವವರಿಗೆ ಕೊರಗು ಕಾಣಿಸವಹುದು. ಆದಾಯವು ಕಡಿಮೆ ಆದಂತೆ ಅನ್ನಿಸುವುದು. ನಿಮ್ಮ ಸ್ವಭಾವಕ್ಕೆ ಹೊಂದಿಕೊಳ್ಳುವ ಸಂಗಾತಿಯು ಸಿಗುವುದು ಕಷ್ಟವಾದೀತು. ಇಂದಿನ ಪ್ರಯಾಣದಲ್ಲಿ ಅಪರಿಚಿತರ ಗೆಳೆತನವಾಗಬಹುದು.
ಮೀನ ರಾಶಿ : ಇಂದು ಕೆಲಸದ ಸ್ಥಳದಲ್ಲಿ ನಿಮ್ಮ ವ್ಯವಸ್ಥೆಯನ್ನು ಬದಲಿಸಿಕೊಳ್ಳುವಿರಿ. ಮಹಿಳಯರ ಜೊತೆ ಹೆಚ್ಚು ಸಮಯವನ್ನು ನಗಿಸುತ್ತಾ ಕಳೆಯುವಿರಿ. ಇರುವ ಒಂದು ವ್ಯಾಪಾರವನ್ನು ಕ್ರಮಬದ್ಧವಾಗಿ ನೋಡಿಕೊಳ್ಳಲಾಗದು. ಸಹವಾಸದಿಂದ ದಾರಿಯು ಬದಲಾಗುವುದು ಸಾಧ್ಯತೆ ಇದೆ. ಆಪ್ತರ ಜೊತೆಗಿನ ಮಾತುಕತೆಯು ನಿಮಗೆ ಆಹ್ಲಾದವನ್ನು ಉಂಟುಮಾಡುವುದು. ಭೂಮಿಯ ಮೇಲೆ ಸಾಲವನ್ನು ಮಾಡಬೇಕಾದೀತು. ಸಹೋದ್ಯೋಗಿಗಳು ನಿಮ್ಮನ್ನು ಎಲ್ಲದಕ್ಕೂ ಬೊಟ್ಟು ಮಾಡಿ ತೋರಿಸಿಯಾರು. ಹಳೆಯ ಕೆಲಸದಲ್ಲಿ ಮಂದಗತಿ ಇರಲಿದೆ. ವ್ಯಾಪಾರದಲ್ಲಿ ಅಲ್ಪ ಲಾಭವೇ ಆದರೂ ನೆಮ್ಮದಿ. ಯಾರಿಗೋ ಸಹಾಯ ಮಾಡಲು ಹೋಗಿ ಆಪತ್ತಿನಲ್ಲಿ ಸಿಕ್ಕಿಕೊಳ್ಳಬಹುದು. ಸ್ನೇಹಿತರ ಜೊತೆ ನೋವನ್ನು ಹಂಚಿಕೊಂಡು ಸಮಾಧಾನ ತಂದುಕಳ್ಳುವಿರಿ. ತಂದೆಯ ಜೊತೆ ಅಪರೂಪದ ಸಮಾರಂಭಕ್ಕೆ ಹೋಗುವಿರಿ. ಖರೀದಿಯಲ್ಲಿ ನೀವು ಸ್ಥೂಲವಾಗಿ ಖರ್ಚನ್ನು ಅಂದಾಜಿಸಿಕೊಳ್ಳಬೇಕಾಗುವುದು.
-ಲೋಹಿತ ಹೆಬ್ಬಾರ್ – 8762924271 (what’s app only)