Horoscope: ರಾಶಿಭವಿಷ್ಯ, ಈ ರಾಶಿಯವರು ಪ್ರಯತ್ನಕ್ಕೆ ಫಲವು ಇಂದೇ ಸಿಗಲಿ ಎಂಬ ನಿರೀಕ್ಷೆ ಮಾಡುವುದು ಬೇಡ

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಜನವರಿ 08 ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Horoscope: ರಾಶಿಭವಿಷ್ಯ, ಈ ರಾಶಿಯವರು ಪ್ರಯತ್ನಕ್ಕೆ ಫಲವು ಇಂದೇ ಸಿಗಲಿ ಎಂಬ ನಿರೀಕ್ಷೆ ಮಾಡುವುದು ಬೇಡ
ಪ್ರಾತಿನಿಧಿಕ ಚಿತ್ರImage Credit source: iStock Photo
Follow us
TV9 Web
| Updated By: Rakesh Nayak Manchi

Updated on: Jan 08, 2024 | 12:45 AM

ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 08) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಮಾರ್ಗಶೀರ್ಷ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಗಂಡ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 07-00 ಗಂಟೆಗೆ, ಸೂರ್ಯಾಸ್ತ ಸಂಜೆ 06-17 ಕ್ಕೆ, ರಾಹು ಕಾಲ ಬೆಳಗ್ಗೆ 08:26 ರಿಂದ 09:50ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 11:15 ರಿಂದ ಮಧ್ಯಾಹ್ನ 12:39ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:04 ರಿಂದ 03:28ರ ವರೆಗೆ.

ಧನು ರಾಶಿ : ಇಂದು ನಿಮ್ಮ ಬಲವಾದ ಇಚ್ಛಾಶಕ್ತಿಯಿಂದ ತೊಡಕುಗಳನ್ನು ನಿವಾರಿಸಿಕೊಂಡು ಕಾರ್ಯವನ್ನು ಸಾಧಿಸುವಿರಿ. ಕಛೇರಿಯಲ್ಲಿ ನೀವು ಇಂದು ಕೇಂದ್ರಬಿಂದುವಾಗಿರಬಹುದು. ವಾಹನ ಸಂಚಾರದಲ್ಲಿ ವ್ಯತ್ಯಯವಾಗುವುದು‌. ಎಲ್ಲ ರೀತಿಯಿಂದಲೂ ಅನುಕೂಲವಾಗಲಿ ಎಂಬ ಮನೋಭಾವವು ಇರಲಿದೆ. ಹಿತಶತ್ರುಗಳ ತೊಂದರೆಯ ನಡುವೆಯೂ ನಿಮ್ಮ ಅಭಿವೃದ್ಧಿಯು ಆಗಲಿದೆ. ಇದರಿಂದ‌ ನಿಮ್ಮ ಅಳಿದುಳಿದ ಶತ್ರುಗಳು ನಾಶವಾಗುವರು. ಕೆಲವರ ಬಗೆಗಿನ ಮನೋಭಾವವನ್ನು ತಿದ್ದಿಕೊಳ್ಳಬೇಕಾಗುವುದು. ನಿಮ್ಮದೇ ಶ್ರಮದಿಂದ ಭೂಲಾಭವನ್ನು ಮಾಡಿಕೊಂಡರೂ ನಿಮಗೆ ಸಲ್ಲದ ಮಾತುಗಳನ್ನು ಕೇಳಬೇಕಾದೀತು. ಆಸ್ತಿಯ ಗಳಿಕೆಯಲ್ಲಿ ಎಲ್ಲವೂ ಅನಾಯಾಸವಾಗಿ ನಡೆಯದು. ಬಹಳ ದಿನಗಳ ಅನಂತರ ಮನೆಯಲ್ಲಿ ಧಾರ್ಮಿಕ ಕಾರ್ಯದಲ್ಲಿ ಆಸಕ್ತಿಯು ಬರಬಹುದು. ಸಣ್ಣ ವಿಚಾರಕ್ಕೆ ನೀವು ಕೋಪಗೊಂಡು ಮನಸ್ಸನ್ನು ಹಾಳು ಮಾಡಿಕೊಳ್ಳುವಿರಿ.

ಮಕರ ರಾಶಿ : ದುಶ್ಚಟದ ಬಗ್ಗೆ ಎಲ್ಲರಿಂದ ಹೇಳಿಸಿಕೊಳ್ಳುವಿರಿ. ಸ್ನೇಹಿತರಿಂದ ಅನಿರೀಕ್ಷಿತ ಉಡುಗೊರೆಗಳು ಸಿಗುವ ಸಾಧ್ಯತೆ ಇದೆ. ಕಷ್ಟಪಟ್ಟು ಪ್ರಯತ್ನಿಸಿ, ನಿಮಗೆ ಅದೃಷ್ಟದ ಬೆಂಬಲವೂ ಸಿಗಲಿದೆ. ಎಲ್ಲರ ಜೊತೆ ಕಲಹವನ್ನು ಮಾಡಿಕೊಳ್ಳುವಿರಿ. ಸ್ನೇಹಿತರಿಗೆ ಸ್ಪಂದಿಸಬೇಕಾಗುವುದು. ಸಹೋದ್ಯೋಗಿಗಳಿಂದ ಕಾರ್ಯಗಳಿಗೆ ವಿಘ್ನವುಮನಡಾಗುವುದು. ಸತ್ಯಸಂಗತಿಯನ್ನು ನಂಬುವ ಸ್ಥಿತಿಯಲ್ಲಿ ನೀವಿರಲಾರಿರಿ. ಸಾಲದಿಂದ ಬಿಡುಗಡೆ ಹೊಂದಲು ಆದಾಯದ ಮೂಲವನ್ನು ಹೆಚ್ಚಿಸಿಕೊಳ್ಳುವಿರಿ. ಸ್ಥಿರಾಸ್ತಿಯ ಸಂಪಾದನೆಗೆ ಆಪ್ತರ ಮಾರ್ಗದರ್ಶನವನ್ನು ಪಡೆದುಕೊಳ್ಳುವುದು ಉತ್ತಮ. ಕೊಡುಕೊಳ್ಳುವ ವ್ಯವಹಾರದಲ್ಲಿ ದಾಖಲೆಗಳು ಸರಿಯಾಗಿರಲಿ. ಇಂದು ವಿದೇಶಕ್ಕೆ ಪ್ರಯಾಣ ಹೋಗುವ ಅವಕಾಶಗಳು ತೆರೆದುಕೊಳ್ಳಬಹುದು. ನಿಮ್ಮ ಪ್ರಯತ್ನಕ್ಕೆ ಫಲವು ಇಂದೇ ಸಿಗಲಿ ಎಂಬ ನಿರೀಕ್ಷೆ ಬೇಡ. ಇಂದು ನೀವು ತಂದೆಯವರಿಗೆ ಎದುರು ಮಾತನಾಡಿ ಅವರ ಮನಸ್ಸನ್ನು ನೋಯಿಸುವಿರಿ.

ಕುಂಭ ರಾಶಿ : ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗವನ್ನು ದಿನಚರಿಯಲ್ಲಿ ತಂದುಕೊಳ್ಳುವುದು ಉತ್ತಮ. ಅನವಶ್ಯಕವಾಗಿ ಹಣ ಖರ್ಚು ಮಾಡುವವರಿಗೆ ಇಂದು ಹಣದ ಬೆಲೆ ಅರ್ಥವಾಗಬಹುದು. ನೀವು ಪ್ರೀತಿಯ ಮನಃಸ್ಥಿತಿಯಲ್ಲಿರುವಿರಿ. ಯಾವುದಕ್ಕೂ ನಿರಾಸೆ ಇಟ್ಟುಕೊಳ್ಳುವುದು ಬೇಡ. ಸಮಯವು ಬೇಕಾಗಬಹುದು. ಅಧಿಕ ಖರ್ಚಿನಿಂದ ಇಂದಿನ‌ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ಮನಸ್ಸಿಗೆ ನಿಮ್ಮವರು ಆಡಿದ ಮಾತುಗಳು ಹಿಂಸೆಯನ್ನು ಕೊಡಬಹುದು. ತಾಯಿಯಿಂದ ನಿಮಗೆ ಲಾಭವಾಗಬಹುದು. ಇಂದಿನ ವ್ಯರ್ಥ ಓಡಾಟದಿಂದ ನಿಮಗೆ ಆಯಾಸವಾಗುವುದು. ಇಷ್ಟರೊಳಗೆ ಆಗಬೇಕಾದ ಸರ್ಕಾರಿ ಕೆಲಸವು ಮತ್ತೂ ಮುಂದಕ್ಕೆ ಹೋಗುವುದು. ಯಂತ್ರಗಳಿಂದ ದೇಹಕ್ಕೆ ತೊಂದರೆ ಆಗಬಹುದು. ಬಂದ ಅವಕಾಶವನ್ನು ಬಿಟ್ಟು ಅನಂತರ ದುಃಖಿಸುವುದರಲ್ಲಿ ಅರ್ಥವಿರದು. ಆರ್ಥಿಕ ತೊಂದರೆಗೆ ನೀವು ಬಂಧುಗಳ ಸಹಾಯವನ್ನು ಪಡೆಯಬಹುದು.

ಮೀನ ರಾಶಿ : ನಿಮ್ಮ ಸಂತೋಷದ ಜೀವನಕ್ಕಾಗಿ ಮೊಂಡುತನವನ್ನು ಬಿಡಬೇಕಾಗುವುದು. ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಸಂಗಾತಿಯ ಜೊತೆ ವಾದದ ಸಾಧ್ಯತೆಯು ಬರಲಿದೆ. ಸಂಘರ್ಷವನ್ನು ಸೌಹಾರ್ದಯುತವಾಗಿ ಪರಿಹರಿಸಲು ಪ್ರಯತ್ನಿಸಿ. ಸ್ತ್ರೀಯರಿಗೆ ನಾನಾ ರೀತಿಯಿಂದ ಅನುಕೂಲವಾಗಬಹುದು. ಇಂದಿನ ಕಾರ್ಯಗಳಲ್ಲಿ ಪ್ರಗತಿ ಇರಲಿದ್ದು ಸಂತೋಷವಾಗುವುದು. ಉದ್ಯೋಗದಲ್ಲಿ ಭಡ್ತಿ ಸಿಗುವ ಸಾಧ್ಯತೆ ಇದೆ. ಬೆರೆಯುವುದು ಕಷ್ಟವಾದೀತು. ಸಾದಿಷ್ಟವಾದ ಭೋಜನದಿಂದ ಸಂತೃಪ್ತಿ ಇರಲಿದೆ. ಗೊಂದಲದಿಂದ ಇರುವ ಮನಸ್ಸು ಇಂದು ಪ್ರಶಾಂತವಾಗಲಿದೆ. ಆತ್ಮೀಯರ ಭೇಟಿಯಿಂದ ನಿಮಗೆ ಸಮಾಧಾನ ಸಿಗಲಿದೆ. ಸಹೋದ್ಯೋಗಿಗಳ‌ ಜೊತೆ ಭಿನ್ನಾಭಿಪ್ರಾಯ ಬಂದು ಅದು ವೈಯಕ್ತಿಕ ಶತ್ರುತ್ವ ಬರಬಹುದು. ಸಂತೋಷದ ಸಮಯವನ್ನು ನೆನಪಿಸಿಕೊಳ್ಳುವಿರಿ. ನೀವು ಪ್ರಸಿದ್ಧಿಯನ್ನು ಪಡೆಯಲು ಆಸಕ್ತಿಯು ಹೆಚ್ಚುವುದು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ