Rashi Bhavishya: ರಾಶಿಭವಿಷ್ಯ, ಈ ರಾಶಿಯವರ ಮಾತಿನಲ್ಲಿ ಮಾಧುರ್ಯ ಇಲ್ಲದಿದ್ದರೆ ಸಂಬಂಧದಲ್ಲಿ ಕಹಿಯಾದೀತು

| Updated By: Rakesh Nayak Manchi

Updated on: Jan 10, 2024 | 12:30 AM

ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಜನವರಿ 10) ಭವಿಷ್ಯಹೇಗಿದೆ ಎಂಬುದು ಇಲ್ಲಿದೆ.

Rashi Bhavishya: ರಾಶಿಭವಿಷ್ಯ, ಈ ರಾಶಿಯವರ ಮಾತಿನಲ್ಲಿ ಮಾಧುರ್ಯ ಇಲ್ಲದಿದ್ದರೆ ಸಂಬಂಧದಲ್ಲಿ ಕಹಿಯಾದೀತು
ನಿತ್ಯಭವಿಷ್ಯ
Image Credit source: iStock Photo
Follow us on

ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 10) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನುರ್ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಮಾರ್ಗಶೀರ್ಷ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಪೂರ್ವಾಷಾಢಾ, ಯೋಗ: ಧ್ರುವ, ಕರಣ: ಶಕುನಿ, ಸೂರ್ಯೋದಯ ಬೆಳಗ್ಗೆ 07 ಗಂಟೆ 01 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 18 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:40 ರಿಂದ 02:05ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:26 ರಿಂದ 09:51ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:15 ರಿಂದ 12:40ರ ವರೆಗೆ.

ಸಿಂಹ ರಾಶಿ: ನಿಮ್ಮ ಇಂದಿನ ವ್ಯವಹಾರ ಮತ್ತು ವ್ಯಾಪಾರಗಳನ್ನು ಶಾಂತಿಯಿಂದ ನಡೆಸಬೇಕು ಎಂಬ ತೀರ್ಮಾನವನ್ನು ತೆಗೆದುಕೊಳ್ಳುವಿರಿ. ಹಣದ ಬಗ್ಗೆ ನಿಮ್ಮ ಚಿಂತೆ ದೂರವಾಗಬಹುದು. ನೀವು ದೇಶದಿಂದ ಹೊರಗೆ ಹೋಗುವ ಬಗ್ಗೆ ಯೋಚಿಸಬಹುದು. ಸೂಕ್ತವಾದ ದಾರಿಯನ್ನೂ ಕಂಡುಕೊಳ್ಳುವುದು ಉತ್ತಮ. ವ್ಯವಹಾರದ ಬೆಳವಣಿಗೆಗೆ ಮಾಡಿದ ಪ್ರಯತ್ನಗಳು ಇಂದು ಫಲಪ್ರದವಾಗದು. ತಾಳ್ಮೆ ಮತ್ತು ಪ್ರತಿಭೆಯಿಂದ ಶತ್ರು ಗೆಲ್ಲುವಲ್ಲಿ ನೀವು ಯಶಸ್ಸನ್ನು ಗಳಿಸುವಿರಿ. ನಿಮ್ಮದಾದ ಚಿಂತನೆ, ಕಾರ್ಯದಿಂದ ಯಶಸ್ಸನ್ನು ಪಡೆಯಲು ನೀವು ಬಹಳ ಸಮಯ ಕಾಯಬೇಕಾಗಬಹುದು. ಉಗುರಿನಿಂದ ಹೋಗುವುದಕ್ಕೆ ಕತ್ತಿಯನ್ನು ಬಳಸುವುದು ಬೇಕೆ? ಸಣ್ಣ ವಿಷಯಕ್ಕೆ ಸ್ನೇಹಿತರ ಜೊತೆಗಿನ ಸಂಬಂಧವು ಹಾಳಾಗಬಹುದು. ನಿಮ್ಮಿಂದ ಕಾರ್ಯವನ್ನು ಮಾಡಿಸಿಕೊಂಡು ಕೈ ಬಿಡಬಹುದು. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು ಯೋಗ್ಯ ಚಿಕಿತ್ಸೆಯನ್ನು ಕೊಡುವಿರಿ.

ಕನ್ಯಾ ರಾಶಿ: ನಿಮ್ಮ ಅದೃಷ್ಟವು ಕೈ ಹಿಡಿಯುವುದು ಕಷ್ಟ. ನಿಮ್ಮ ಗುರಿಯ ಬಗ್ಗೆ ನಿಮಗೆ ಇರಬೇಕಾದ ಬದ್ಧತೆಯ ಕೊರತೆ ಇರಲಿದೆ. ಆದಾಯ ಹೆಚ್ಚಿಸುವ ಪ್ರಯತ್ನಗಳು ಸಫಲವಾದಂತೆ ಕಾಣುತ್ತದೆ. ಅದನ್ನು ಸರಿಯಾಗಿ ಮುಂದುವರಿಸುವುದು ನಿಮ್ಮ ಕೈಯಲ್ಲಿದೆ. ಸಂಗಾತಿಯ ಮಾತಿನಿಂದ ಸಾಲವನ್ನು ಮಾಡಬೇಕಾಗುವುದು. ನೀವು ಇತರರ ಒಳ್ಳೆಯದನ್ನು ಯೋಚಿಸುವಿರಿ ಹಾಗೂ ಒಳ್ಲೆಯ ಮನಸ್ಸಿನಿಂದ ಸೇವೆ ಮಾಡುತ್ತೀರಿ. ನೀವು ಹೊಸ ಹೂಡಿಕೆ ಮಾಡಬೇಕಾದರೆ ಅದು ಶುಭವಾಗುತ್ತದೆ. ಕುಟುಂಬದಲ್ಲಿಯೂ ಶಾಂತಿ ಮತ್ತು ಸಂತೋಷ ಇರುತ್ತದೆ. ನಿಮಗಿಂತ ಭಿನ್ನವಾದ ವ್ಯಕ್ತಿಗಳ ಬಗ್ಗೆ ಯೋಚಿಸದೇ ನಿಮ್ಮ ನಿಲುವೇ ಸರಿ ಎಂಬಂತೆ ವರ್ತಿಸುವಿರಿ. ಮಕ್ಕಳನ್ನು ಸಂತೋಷವಾಗಿ ಇಡುವುದು ಆಗದು. ಬಹಳ ದಿನಗಳಿಂದ ಒತ್ತಡದಲ್ಲಿ ಇದ್ದ ಕಾರಣ ಇಂದು ಎಲ್ಲವನ್ನೂ ಮರೆಯು ದಿನದ ಹೆಚ್ಚಿನ ಸಮಯವನ್ನು ವಿಶ್ರಾಂತಿಯಲ್ಲಿಯೇ ಕಳೆಯುವಿರಿ. ದಾನದಿಂದ ಪುಣ್ಯವನ್ನು ಗಳಿಸುವಿರಿ.

ತುಲಾ ರಾಶಿ: ವ್ಯಾಪಾರದ ದೃಷ್ಟಿಯಿಂದಲೇ ಎಲ್ಲವನ್ನೂ ನೋಡುವ ಕಾರಣ, ಹಣದ ಉಳಿತಾಯದ ಬಗ್ಗೆ ಬಹಳ ಕಾಳಜಿ ಇರುವುದು. ಸಂಗಾತಿಯ ಈಡೇರಿಕೆಯನ್ನು ನೀವು ಪೂರ್ಣ ಮಾಡುವಿರಿ. ಸಮಾಜವು ನಿಮ್ಮನ್ನು ಸ್ವಾರ್ಥಿಯಂತೆ ನೋಡಬಹುದು. ವ್ಯವಹಾರದಲ್ಲಿ ಹಣದ ಲಾಭವಾಗಲಿದೆ. ತಂದೆ ತಾಯಿಯರ ಸೇವೆಯನ್ನು ಮಾಡುವ ಅವಕಾಶ ಸಿಗುವುದು. ಮನೆಯ ಕೆಲಸವು ಆಗಿಲ್ಲವೆಂದು ಕೋಪವು ಇರಲಿದ್ದು ಅದನ್ನು ಪ್ರಕಟಿಸುವಿರಿ. ನಿಮ್ಮ‌ ರಕ್ಷಣೆಯ ಬಗ್ಗೆ ಕಾಳಜಿ ಇರಲಿ. ಕೋಪವು ನಿಮ್ಮ ಇಂದಿನ ಕೆಲಸವನ್ನು ಕೆಡಿಸಬಹುದು. ನಿಮ್ಮ ಪ್ರಾಮಾಣಿಕತೆಯು ಇತರರಿಗೆ ಇಷ್ಟವಾಗುವುದು. ಉದ್ಯೋಗವನ್ನು ಕೊಡಿಸಲು ನಿಮಗೆ ಹಣವನ್ನು ಕೇಳಬಹುದು. ಸತ್ಯವನ್ನು ಹೇಳುವ ಮನಸ್ಸಿದ್ದರೂ ಬೇರೆಯವರ ಒತ್ತಡದಿಂದಾಗಿ ಹೇಳದೇ ಮುಚ್ಚಿಡುವಿರಿ. ಹಿರಿಯರ ನಂಬಿಕೆಯನ್ನು ಗಳಿಸಲು ಕಷ್ಟವಾದೀತು. ಪಾಪಪ್ರಜ್ಞೆಯಿಂದ ಹೊರಬರಲು ನಿಮಗೆ ಆಗದು.

ವೃಶ್ಚಿಕ ರಾಶಿ: ಸಾಮಾಜಿಕ ವಲಯದಿಂದ ನಿಮಗೆ ಉತ್ತಮ ಸ್ಪಂದನೆ ಸಿಗಬಹುದು. ನಿಮ್ಮ ವ್ಯಾಪಾರವು ಗುಣಮಟ್ಟದಿಂದ ಕೂಡಿರಲಿದೆ. ನಿರ್ಮಾಣದ ಕಾರ್ಯಗಳನ್ನು ನೀವು ವಹಿಸಿಕೊಳ್ಳುವ ಸಾಧ್ಯತೆ ಇದೆ. ಆತಂಕ ಮತ್ತು ನಿರಾಸಕ್ತಿಯಿಂದ ನಿಮ್ಮ ಮೇಲೆ ನಿಮಗೆ ಹಿಡಿತ ಸಾಲದು. ಪೋಷಕರ ಬೆಂಬಲವು ಆತಂಕವನ್ನು ಕಡಿಮೆ ಮಾಡಬಹುದು. ಮಾತಿನಲ್ಲಿ ಮಾಧುರ್ಯ ಇಲ್ಲದಿದ್ದರೆ ಸಂಬಂಧದಲ್ಲಿ ಕಹಿಯಾದೀತು. ವಿವಿಧ ಮೂಲಗಳಿಂದ ನಿಮಗೆ ಆದಾಯವು ಬರಲಿದ್ದು ಹೂಡಿಕೆಯ ಕಡೆ ನಿಮ್ಮ ಗಮನ ಇರುವುದು. ಕೃಷಿಯ ಉತ್ಪಾಸನೆಯು ಕುಂಠಿತವಾದಂತೆ ಅನ್ನಿಸೀತು. ನಿಮ್ಮ ಆಲಸ್ಯವನ್ನು ಹಿತಶತ್ರುಗಳು ಅವಕಾಶವಾಗಿ ತೆಗೆದುಕೊಳ್ಳುವರು. ಭೂಮಿಯಿಂದ ಇಂದು ಸಂಪತ್ತು ಸಿಗಬಹುದು. ಹಿರಿಯರ ಮಾತುಗಳು ಪೂರ್ಣವಾಗಿ ಇಷ್ಟವಾಗದು. ಬೇಡಬೆಂದು ಬಿಟ್ಟಿದ್ದನ್ನು ಮತ್ತೆ ಎತ್ತಿಕೊಳ್ಳುವುದು ಬೇಡ. ವಿದ್ಯಾರ್ಥಿಗಳು ಓದಿನ ಬಗ್ಗೆ ಹೆಚ್ಚು ಗಮನ ಹರಿಸುವುದು ಮುಖ್ಯವಾದೀತು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ