Rashi Bhavishya: ಹೊಸ ಸಂಬಂಧದ ಕಡೆ ನಿಮ್ಮ ಚಿತ್ತ ಇರಲಿದೆ, ಸಂಗಾತಿಯ ಭಾವನೆಗೆ ಬೆಲೆ ಕೊಡಿ

ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಜನವರಿ 11) ಭವಿಷ್ಯಹೇಗಿದೆ ಎಂಬುದು ಇಲ್ಲಿದೆ.

Rashi Bhavishya: ಹೊಸ ಸಂಬಂಧದ ಕಡೆ ನಿಮ್ಮ ಚಿತ್ತ ಇರಲಿದೆ, ಸಂಗಾತಿಯ ಭಾವನೆಗೆ ಬೆಲೆ ಕೊಡಿ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Jan 11, 2024 | 12:10 AM

ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 11) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನುರ್ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಮಾರ್ಗಶೀರ್ಷ, ಪಕ್ಷ: ಕೃಷ್ಣ, ವಾರ: : ಗುರು, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಉತ್ತರಾಷಾಢಾ, ಯೋಗ: ವ್ಯಾಘಾತ, ಕರಣ: ನಾಗವಾನ್, ಸೂರ್ಯೋದಯ ಬೆಳಗ್ಗೆ 07 ಗಂಟೆ 01 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 19 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 14:05 ರಿಂದ 15:30ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:02 ರಿಂದ 08:26ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:51 ರಿಂದ 11:16ರ ವರೆಗೆ.

ಸಿಂಹ ರಾಶಿ: ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲು ನ್ಯಾಯಯುತವಾದ ಮಾರ್ಗದಲ್ಲಿ ಹೋಗುವಿರಿ. ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾದ ಸ್ಥಿತಿ‌ಯು ಬರಬಹುದು. ಸಣ್ಣ ಆರೋಗ್ಯದ ತೊಂದರೆಯೂ ನಿಮ್ಮ‌ ಮನಸ್ಸಿಗೆ ಕಿರಿಕಿರಿಯನ್ನು ಉಂಟುಮಾಡುವುದು. ಕಾರ್ಯದಲ್ಲಿ ವೇಗವು ಕುಂಠಿತವಾಗುವುದು. ಇಂದು ಸಮಯವನ್ನು ಕಳೆಯುವುದು ಕಷ್ಟವಸದೀತು. ಸರ್ಕಾರದ ಸೌಲಭ್ಯವು ನಿಮಗೆ ಸಿಗದೇ ಹೋಗಬಹುದು. ನಿಮ್ಮ ಕೆಲಸವು ಸಂದೇಹಕ್ಕೆ ಆಸ್ಪದ ಕೊಡುವುದು ಬೇಡ. ಯಶಸ್ಸನ್ನು ಪಡೆಯುವ ಹಂಬಲವಿರಲಿದೆ. ನೀವು ನೋಡಿದ್ದೇ ಸತ್ಯ ಎಂದು ತಿಳಿದುಕೊಳ್ಳುವುದು ಬೇಡ. ಯಾರಿಗೂ ನಿಮ್ಮ ಅವಶ್ಯಕತೆ ಇಲ್ಲದೇ ಹೋಗಬಹುದು. ನಿಮ್ಮ ಮಾತು ಹಲವು ಗೊಂದಲಗಳಿಗೆ ಕಾರಣವಾದೀತು. ಸ್ನೇಹಿತರಿಗೆ ಸಾಲವಾಗಿ ಹಣವನ್ನು ಪುನಃ ಬರುವ ನಿರೀಕ್ಷೆ ಇಲ್ಲದೇ ಕೊಡುವಿರಿ.

ಕನ್ಯಾ ರಾಶಿ: ನಿಮ್ಮ ಅನಾರೋಗ್ಯಕ್ಕೆ ಮಿತ್ರರು ಸಹಾಯವನ್ನು ಮಾಡಬಹುದು. ಹಿರಿಯರಲ್ಲಿ ಗೌರವದಿಂದ ಮಾತನಾಡಿ. ಅಹಂಕಾರದಿಂದ ನಿಮ್ಮ ಬಗ್ಗೆ ಸದಭಿಪ್ರಾಯವು ಹೋಗಬಹುದು. ಮನಶಾಂತಿಗಾಗಿ ಧಾರ್ಮಿಕ ಕಾರ್ಯಗಳನ್ನು ಮಾಡಿಸುವಿರಿ. ಅಕಾಲದಲ್ಲಿ ಸೇವಿಸಿದ ಆಹಾರದಿಂದ ನಿಮಗೆ ಆರೋಗ್ಯವು ಹಾಳಾಗುವುದು. ಮನೆಯಲ್ಲಿ ನೌಕರರ ಕಾರಣಕ್ಕೆ ಸಿಟ್ಟಾಗುವಿರಿ. ಹೊಸ ಸಂಬಂಧದ ಕಡೆ ನಿಮ್ಮ ಚಿತ್ತವು ಇರಲಿದೆ. ಹಳೆಯ ಉದ್ಯೋಗಕ್ಕೆ ಪುನಃ ಮರಳುವಿರಿ. ನಿರಂತರ ಕೆಲಸವನ್ನು ಮಾಡುವುದು ಇಷ್ಟವಾಗಲಿದೆ. ಸಂಗಾತಿಯ ಭಾವನೆಗೆ ಬೆಲೆ ಕೊಟ್ಟು ಸಂತೋಷಪಡಿಸುವಿರಿ. ವೈವಾಹಿಕ ಸಂಬಂಧವನ್ನು ಸರಿಯಾಗಿ ಇಟ್ಟುಕೊಳ್ಳಿ. ಮನೋರಂಜನೆಗೆ ಹೋದರೂ ಸರಿಯಾದ ಆಸ್ವಾದನೆ ಸಿಗದು. ಅತಿಯಾದ ಹಸಿವಾಗಬಹುದು. ಸಮಯಕ್ಕೆ ಆಹಾರವು ಸಿಗದೇ ಇರಬಹುದು.

ತುಲಾ ರಾಶಿ: ಹಿರಿಯರ ಸೇವೆಯನ್ನು ಮಾಡುವ ಆಸಕ್ತಿಯನ್ನು ಬೆಳೆಸಿಕೊಳ್ಳುವಿರಿ. ನೌಕರರನ್ನು ಚೆನ್ನಾಗಿ ಇಟ್ಟುಕೊಳ್ಳುವುದು ಮುಖ್ಯವಾಗುವುದು. ಸ್ತ್ರೀಯರ ಉಪಸ್ಥಿತಿಯು ನಿಮಗೆ ಬಲವನ್ನು ತಂದುಕೊಡುವುದು. ವಿದೇಶದ ಮಿತ್ರರ ಸಹಾಯದಿಂದ ನೀವು ಉದ್ಯಮವು ವಿಸ್ತಾರವಾಗಬಹುದು. ಅಧಿಕ ಓಡಾಟದಿಂದ ನೀವು ಆಯಾಸಗೊಳ್ಳುವಿರಿ. ಬಂದ ಹಣವನ್ನು ಜೋಪಾನವಾಗಿ ಇಟ್ಟುಕೊಳ್ಳುವ ವ್ಯವಸ್ಥೆಯನ್ನು ಮಾಡಿಕೊಳ್ಳುವುದು ಉತ್ತಮ. ಇಂದು ಹಣದ ಹರಿವು ಅಲ್ಪವಾಗಿ ಇರುವುದು. ಆಪ್ತರನ್ನು ಕಳೆದುಕೊಂಡು ಬೇಸರಿಸುವಿರಿ. ವ್ಯಾಪಾರದ ನಷ್ಟವನ್ನು ನಿಮಗೆ ಅರಗಿಸಿಕೊಳ್ಳಲಾಗದು. ನಿದ್ರೆಯು ಕಡಿಮೆಯಾದ ಕಾರಣ ಕಾರ್ಯದಲ್ಲಿ ಉತ್ಸಾಹ ಕಡಿಮೆ ಇರಲಿದೆ‌. ಪ್ರೇಮಿಯ ಜೊತೆ ಹರಟೆ ಹೊಡೆಯುತ್ತ ದಿನವನ್ನು ಕಳೆಯುವಿರಿ. ನಿದ್ರೆಯಲ್ಲಿ ದುಃಸ್ವಪ್ನಗಳು ಬೀಳಬಹುದು.

ವೃಶ್ಚಿಕ ರಾಶಿ: ಪುಣ್ಯಕ್ಷೇತ್ರದಲ್ಲಿ ಕಾಲವನ್ನು ಕಳೆಯುವುದು ನಿಮಗೆ ಇಷ್ಟವಾಗುವುದು. ದೂರ ಬಂಧುಗಳ ಭೇಟಿಯಾಗುವಿರಿ. ಪರೀಕ್ಷೆಯಲ್ಲಿ ಉತ್ತಮ‌ ಸಾಧನೆಗೆ ಸಿದ್ಧತೆಯನ್ನು ನಡೆಸುವಿರಿ. ಆದಾಯದಿಂದ ಬಂದ ಹಣವನ್ನು ಸಂಗ್ರಹಿಸಲು ಪ್ರಯತ್ನಿಸಿ. ಇಲ್ಲವಾದರೆ ಸಂಪತ್ತನ್ನು ಉಳಿಸಿಕೊಳ್ಳುವುದು ಕಷ್ಟವಾದೀತು. ಅಸಾಧ್ಯವನ್ನು ಸಾಧಿಸುವ ಹಠವು ಬೇಡವಾದೀತು. ಸಾಹೋದರ್ಯದಲ್ಲಿ ಅನಗತ್ಯ ಮಾತುಗಳು ಬರಬಹುದು. ಹಣಕಾಸಿನ ಉದ್ಯೋಗದಲ್ಲಿ ಇರುವವರಿಗೆ ಉತ್ತಮ ಅವಕಾಶವು ಸಿಗುವುದು. ಉದ್ಯಮದಲ್ಲಿ ಹಿನ್ನಡೆಯಾಗುವುದು ನಿಮಗೆ ಮೊದಲೇ ಗೊತ್ತಿದ್ದೂ ಪ್ರಯತ್ನಿಸುವಿರಿ. ಸಂಸ್ಥೆಯ ಮುಖ್ಯಸ್ಥರಾಗಲು ಆಹ್ವಾನವು ಬರಬಹುದು. ದುಃಖವನ್ನು ಸಹಿಸುವುದು ಅನಿವಾರ್ಯವಾದೀತು. ಅನಪೇಕ್ಷಿಯ ವಿಚಾರವನ್ನು ಪ್ರಸ್ತಾಪಿಸಿಕೊಂಡು ಕಾಲಹರಣ ಮಾಡುವಿರಿ.

ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ