Horoscope Today 20 January 2025: ವ್ಯಾಪಾರಸ್ಥರಿಗೆ ಲಾಭ, ಸಂಬಂಧಗಳಲ್ಲಿ ಒಡಕು ಬರಬಹುದು ಎಚ್ಚರ

ಶಾಲಿವಾಹನ ಶಕೆ 1947ರ ಮಾರ್ಗಶಿರ ಮಾಸದ ಕೃಷ್ಣ ಪಕ್ಷದ ಪಂಚಮಿಯ ದಿನದ ನಿತ್ಯ ಪಂಚಾಂಗವನ್ನು ಮತ್ತು ಎಲ್ಲಾ 12 ರಾಶಿಗಳಿಗೆ ದಿನದ ಭವಿಷ್ಯವನ್ನು ಒಳಗೊಂಡಿದೆ. ಪ್ರತಿಯೊಂದು ರಾಶಿಗೂ ಆರ್ಥಿಕ, ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಮೇಲೆ ದಿನದ ಪ್ರಭಾವವನ್ನು ವಿವರಿಸಲಾಗಿದೆ. ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳನ್ನು ತಿಳಿದುಕೊಳ್ಳಲು ಈ ಲೇಖನ ಸಹಾಯ ಮಾಡುತ್ತದೆ.

Horoscope Today 20 January 2025: ವ್ಯಾಪಾರಸ್ಥರಿಗೆ ಲಾಭ, ಸಂಬಂಧಗಳಲ್ಲಿ ಒಡಕು ಬರಬಹುದು ಎಚ್ಚರ
ವ್ಯಾಪಾರಸ್ಥರಿಗೆ ಲಾಭ, ಸಂಬಂಧಗಳಲ್ಲಿ ಒಡಕು ಬರಬಹುದು ಎಚ್ಚರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: Jan 20, 2025 | 12:02 AM

ಮೇಷ ರಾಶಿ: ಗಂಭೀರ ವ್ಯಕ್ತಿತ್ವದಿಂದ ತಮಾಷೆಯನ್ನು ನಿರೀಕ್ಷಿಸಲಾಗದು. ಉತ್ತಮ ವ್ಯಕ್ತಿಗಳನ್ನು ಸಂಪಾದಿಸಲು ನೀವು ಸೋಲುವಿರಿ. ಆದಾಯದ ಕಡೆಗೆ ವಿಶೇಷಗಮನವು ಇರಲಿದೆ. ನಿಮ್ಮಲ್ಲಿರುವ ಒಳ್ಳೆಯದನ್ನು ನಿಜವಾಗಿಯೂ ಪ್ರಶಂಸಿಸಲು ನಿಮ್ಮಿಬ್ಬರಿಗೂ ಸ್ವಲ್ಪ ಅಂತರದ ಅಗತ್ಯವಿದೆ. ಉದ್ಯಮದ ವಿಸ್ತಾರಕ್ಕೆ ಇರುವ ತೊಡಕನ್ನು ಅನುಭವಿಗಳ ಜೊತೆ ಚರ್ಚಿಸಿ. ಒಂದೇ ಕೆಲಸವನ್ನು ನಿರಂತರ ಮಾಡಿ ಶಿಸ್ತನ್ನು ರೂಢಿಸಿಕೊಳ್ಳುವಿರಿ. ದೊಡ್ಡ ಕನಸನ್ನು ಇಟ್ಟುಕೊಳ್ಳುವುದು ಸೂಕ್ತವಾಗಬಹುದು. ಇತರರ ಧಾರ್ಮಿಕ ನಂಬಿಕೆಯನ್ನು ನೀವು ಘಾಸಿಮಾಡುವಿರಿ. ಅನಂತರದ ಹತಾಶೆಯಿಂದ ಕಷ್ಟವಾದೀತು. ದೂರದ ಬಂಧುವಿನ ಭೇಟಿಯಾಗಿ ಪರಿಚಯ ಮಾಡಿಕೊಳ್ಳುವಿರಿ. ಸಂಗಾತಿಯ ಮಾತನ್ನು ನಿರ್ಲಕ್ಷಿಸಿದ್ದು ಬೇಸರಕ್ಕೆ ಕಾರಣವಾಗಬಹುದು. ನೀವು ಸ್ವತಂತ್ರವಾಗಿದ್ದರೂ ಬೆರೆಯಲು ಮನಸ್ಸಾಗದು. ಭೂಮಿಯ ವ್ಯವಹಾರದಿಂದ ಲಾಭವು ಕಡಿಮೆ ಇರಲಿದೆ.

ವೃಷಭ ರಾಶಿ: ಸಮರ್ಪಕ ಉತ್ತರದಿಂದ ಸಂತೋಷವಾಗಬಹುದು. ಖಾಲಿಯಾಗಿ ಇರುವ ಬದಲು ಏನನ್ನಾದರೂ ಮಾಡಿ. ಭವಿಷ್ಯಕ್ಕೆ ಉಪಯೋಗವಾಗಬಹುದು. ಉತ್ಕಟವೂ ಯೋಗ್ಯವೂ ಆದ ಇಚ್ಛೆಯು ಪೂರ್ಣವಾಗುವುದು. ಸಂಬಂಧಗಳಲ್ಲಿ ಒಡಕು ಬರಬಹುದು. ಪ್ರೀತಿಯ ವಿಷಯದಲ್ಲಿ ಪರಿಚಿತರ ಜೊತೆ ಚರ್ಚಿಸುವಿರಿ. ಮಕ್ಕಳ ವಿಚಾರದಲ್ಲಿ ನೀವು ಮೃದುವಾಗುವಿರಿ. ಇನ್ನೊಬ್ಬರ ವಸ್ತುವನ್ನು ನೀವು ಇಟ್ಟುಕೊಳ್ಳಲಿದ್ದೀರಿ. ವಿದೇಶದಲ್ಲಿ ಇರುವವರಿಗೆ ಆರೋಗ್ಯವು ಕೆಡಬಹುದು. ಯಶಸ್ಸು ನಿಮ್ಮ ಮೇಲಿನ ನಕಾರಾತ್ಮಕ ತಂತ್ರಗಳಿಗೆ ವಿರಾಮ ಸಿಗಲಿದೆ. ವ್ಯಾಪಾರಸ್ಥರು ಲಾಭವನ್ನು ಗಳಿಸುವತ್ತ ಯೋಜನೆ ರೂಪಿಸಿಕೊಳ್ಳುವುದು. ಬಂಧುಗಳ ಕಿರಿಕಿರಿಯನ್ನು ಸಹಿಸುವುದು ನಿಮಗೆ ಕಷ್ಟವಾದೀತು. ಮನಸ್ಸಿಗೆ ಭಾರವಾದ ವಿಚಾರವನ್ನು ನೀವು ಹೇಗಾದರೂ ಮಾಡಿ ತಲೆಯಿಂದ ತೆಗೆಯಿರಿ. ಧಾರ್ಮಿಕ ಕಾರ್ಯದಲ್ಲಿ ಶ್ರದ್ಧೆ ಇರುವುದು. ಆಹಾರದಿಂದ ಆರೋಗ್ಯವನ್ನು ಕೆಡಿಸಿಕೊಳ್ಳುವಿರಿ. ನಿಮಗೆ ಬೇಕಾದ ವಸ್ತುವೇ ಆದರೂ ಯಾರು ಕೇಳಿದರೂ ಕೊಡುವಿರಿ.

ಮಿಥುನ ರಾಶಿ: ಇಂದು ಸಂಗಾತಿಯ ಜೊತೆ ಕಾಲ ಕಳೆಯಲು ಯೋಜನೆ ಬೇಕು. ತಾಳ್ಮೆಯಿಂದ ಬರುವ ಆಪತ್ತಿಗೆ ಮಾರ್ಗವೂ ಇದೆ. ಚಿತ್ತಚಾಂಚಲ್ಯವು ಕಾರ್ಯದ ಗತಿಯನ್ನು ತಗ್ಗಿಸೀತು. ಕಾರ್ಯದ ನಿರುತ್ಸಾಹವನ್ನು ನಿಮ್ಮದೇ ಆದ ವಿಧಾನದಿಂದ ಸರಿ ಮಾಡಿಕೊಳ್ಳುವಿರಿ. ಜನರ ಜೊತೆ ಮಾತನಾಡುವಾಗ ನಿಮ್ಮ ಮಾತುಗಳು ಸ್ಪಷ್ಟವಾಗಿ ಇರಲಿ. ಹಳೆಯ ಪ್ರೇಮವು ಆರಂಭವಾಗಬಹುದು. ಭವಿಷ್ಯದ ಬಗ್ಗೆ ಏನೇನೋ ಕಲ್ಪನೆಯನ್ನು ಇಟ್ಟುಕೊಂಡು ಹತಾಶರಾಗಬೇಕಾಗುವುದು. ನಿಮ್ಮ ಮನಸ್ಸಿಗೆ ಬಾರದೇ ಇರುವ ಯಾವುದನ್ನೂ ನೀವು ಒಪ್ಪಿಕೊಳ್ಳಲಾರಿರಿ. ವಿದ್ಯಾರ್ಥಿಗಳಿಗೆ ಅಧ್ಯಯನದ ವಿಚಾರದಲ್ಲಿ ಏಕಾಗ್ರತೆಯ ಕೊರತೆ ಇರಲಿದ್ದು ಧ್ಯಾನ, ಯೋಗಾಭ್ಯಾಸವನ್ನು ಮಾಡಬೇಕಾಗಬಹುದು. ರಾಜಕೀಯ ವ್ಯಕ್ತಿಗಳಿಂದ ನಿಮಗೆ ಸ್ವಲ್ಪಮಟ್ಟಿನ ಲಾಭವಾಗುವುದು. ನಿತ್ಯಕರ್ಮದಲ್ಲಿ ವ್ಯತ್ಯಾಸವಾದ ಕಾರಣ ಎಲ್ಲವೂ ವೇಗವಾಗಿ ಮಾಡಬೇಕಾದೀತು. ಕೆಲವು ವಿಚಾರಗಳನ್ನು ನಿರ್ಲಕ್ಷಿಸದೇ ಇದ್ದರೆ ದೊಡ್ಡದಾಗಬಹುದು.

ಕರ್ಕಾಟಕ ರಾಶಿ: ಮೃದು ಮಾತಿನಿಂದ ಕಾರ್ಯವಾಗದು. ಮೇಲಧಿಕಾರಿಗಳಿಗೆ ನೀವು ವರದಿಯನ್ನು ನೀಡಬೇಕಾಗುವುದು. ಹಳೆಯದನ್ನು ನೀವು ನೆನೆದು ಸಂಕಟಪಡುವಿರಿ. ವಿನಾಕಾರಣ ಮಿತ್ರರನ್ನು ದೂರ ಮಾಡಿಕೊಳ್ಳುವಿರಿ. ನಿಮ್ಮ ಬಗ್ಗೆ ನೀವೇ ಪ್ರಶಂಸೆ ಮಾಡಿಕೊಳ್ಳುವಿರಿ. ಕೃಷಿಯಲ್ಲಿ ಆಸಕ್ತಿ ಉಂಟಾಗಬಹುದು. ಹೇಳಿಕೊಂಡಷ್ಟು ನೀವು ಸಣ್ಣವರಾಗುವಿರಿ. ನಿಮ್ಮ ಹೆಸರನ್ನು ಹೇಳಿ ಯಾರಾದರೂ ವಂಚಿಸಿಯಾರು. ರಮಣೀಯ ಸ್ಥಳಕ್ಕೆ ಸಂಗಾತಿಯ ಜೊತೆ ಹೋಗಲಿದ್ದೀರಿ. ಇಂದಿನ ಕನಸು ನಿಮಗೆ ಭೀತಿಯನ್ನು ತಂದೀತು. ನಿಮ್ಮ ನೋವನ್ನು ಕೇಳಲು ಯಾರೂ ಇಲ್ಲವೆಂದು ಬೇಸರವಾಗಬಹುದು. ಕೋಪದ ವಿಚಾರದಲ್ಲಿ ನೀವು ಬದಲಾಗಬೇಕಾದ ಅವಶ್ಯಕತೆ ಇರಲಿದೆ. ಕಳೆದುಕೊಂಡ ಸಂಬಂಧವನ್ನು ಮತ್ತೆ ಕೂಡಿಸಿಕೊಳ್ಳಲು ಪ್ರಯತ್ನಶೀಲರಾಗುವಿರಿ. ಹೂಡಿಕೆಯನ್ನು ಮಾಡಲು ಎಲ್ಲರಿಂದ ಮಾಹಿತಿಯನ್ನು ಸಂಗ್ರಹಿಸುವಿರಿ. ಇಂದು ಆಹಾರದಿಂದ ನಿಮಗೆ ಆರೋಗ್ಯವು ಕೆಡಬಹುದು.

ಸಿಂಹ ರಾಶಿ: ಸೇವೆಯಿಂದ ನಿವೃತ್ತಿಯು ಬೇಸರ ತರಿಸುವುದು. ಪರರ ಗುಣದಲ್ಲಿ ಅಸೂಯೆ ಇಟ್ಟುಕೊಳ್ಳುವಿರಿ. ಸಂಗಾತಿಯ ಪ್ರೀತಿಗೆ ನೀವು ಸೋಲಬಹುದು. ಎಷ್ಟೋದಿನಗಳಿಂದ ಬಯಸಿದ್ದ ವಸ್ತುವನ್ನು ನೀವು ಅನಾಯಾಸವಾಗಿ ಯಾರಿಂದಲೋ ಪಡೆಯುವುರಿ. ನಿಮ್ಮ ಬಗ್ಗೆ ಇರುವ ಕಾಳಜಿಗೆ ನೀವು ಮನಸೋಲುವಿರಿ. ಮನೆಯ ಕೆಲಸಲ್ಲಿ ಸಮಯವು ಹೋಗಿದ್ದೇ ಗೊತ್ತಾಗದು. ಇಂದು ನೀವು ಹೆಚ್ಚು ಉತ್ಸಾಹ ಹಾಗೂ ನಗುಮುಖದಲ್ಲಿ ಇರುವುದು ಎಲ್ಲರಿಗೂ ಗೊತ್ತಾಗಲಿದೆ. ಉತ್ತಮ ಜನರ ಒಡನಾಟವನ್ನು ಅಪೇಕ್ಷಿಸುವಿರಿ. ನಿಮ್ಮ ಹೊಸ ಸುದ್ದಿಯು ಎಲ್ಲರಿಗೂ ಅಚ್ಚರಿ ಮೂಡಿಸುವುದು. ಕುಟುಂಬದಿಂದ ದೂರವಿದ್ದರೂ ಮಾತುಕತೆಗಳ ಮೂಲಕ ಹತ್ತಿರವಾಗುವಿರಿ. ಹೊಸ ಯೋಜನೆಗಳು ನಿಮ್ಮ ತಲೆಯಲ್ಲಿ ಓಡುತ್ತಿದ್ದು ಅದನ್ನು ಕಾರ್ಯರೂಪಕ್ಕೆ ತರಲು ನೋಡುವಿರಿ. ನಿಮ್ಮ ವೈಯಕ್ತಿಕ ಕಾರ್ಯದಲ್ಲಿ ಹೆಚ್ಚು ತೊಡಗಿಕೊಳ್ಳುವಿರಿ. ನೀವು ನಿರೀಕ್ಷಿಸಿದ ಹಣವು ಬಾರದೇ ಹೋಗಬಹುದು.

ಕನ್ಯಾ ರಾಶಿ: ವ್ಯಾಪಾರದ ವಿಚಾರದಲ್ಲಿ ಮನೆಯವರ ಜೊತೆ ಜಗಳ ಮಾಡಿಕೊಳ್ಳುವಿರಿ. ನಿಮಗೆ ದ್ವಂದ್ವಗಳು ಒಂದು ಸರಿಯಾದ ನಿರ್ಧಾರಕ್ಕೆ ಬರಲು ಅನುಕೂಲ ಮಾಡಿಕೊಡುವುದಿಲ್ಲ. ನೀವು ಇಂದು ಉದ್ವೇಗದ ವರ್ತನೆಯನ್ನು ತಪ್ಪಿಸಿ. ಕುಟುಂಬದ ಸದಸ್ಯರು ನಿಮ್ಮಿಂದ ಹೆಚ್ಚು ತಿಳುವಳಿಕೆಯನ್ನು ಬಯಸಬಹುದು. ಒಂದನ್ನು ಪಡೆಯಲು ಅದಕ್ಕೆ ಯೋಗ್ಯವಾದ ಮತ್ತೊಂದನ್ನು ತ್ಯಾಗಮಾಡಬೇಕಾಗಬಹುದು. ಒಂದೇ ರೀತಿ ಜೀವನ ಶೈಲಿಯಿಂದ ಆಚೆ ಬರುವುದು ನಿಮಗೆ ಮುಖ್ಯವಾದೀತು. ಮೇಲ್ವಿಚಾರಕರು ನಿಮ್ಮ ಕೆಲಸದ ದಕ್ಷತೆಯನ್ನು ಹೊಗಳುವರು. ಸಂಗಾತಿಯು ಸಾಲವನ್ನು ಮಾಡಲು ಪ್ರಚೋದನೆ ಕೊಡಬಹುದು. ಕತ್ತಲೆಯಲ್ಲಿ ಗುದ್ದಾಟ ಮಾಡಿ ಆಯಾಸ ಮಾಡಿಕೊಳ್ಳುವಿರಿ. ಕಳೆದುಕೊಂಡ ವಿಶ್ವಾಸವನ್ನು ಮತ್ತೆ ಕೂಡಿಸಲು ಪ್ರಯತ್ನಿಸುವಿರಿ. ಅದು ಕನ್ನಡಿಯ ಗಾಜಿನಂತೆ. ಎಷ್ಟೇ ಕೂಡಿಸಿದರೂ ಬಿರುಕು ಎದ್ದು ತೋರುವುದು.

ತುಲಾ ರಾಶಿ: ನಿಮ್ಮ ಹೊಂದಿಕೊಳ್ಳುವ ಗುಣವನ್ನು ಎಲ್ಲರೂ ಶ್ಲಾಘಿಸುವರು. ಕೃತಘ್ನರಾಗಿ ಮೆರೆಯುವುದು ಬೇಡ. ಜಾರಿ ಬೀಳಲು ಹೆಚ್ಚು ಸಮಯ ಬೇಡ. ಕೊಟ್ಟ ಹಣವು ಮರಳಿ ನಿಮ್ಮ ಸಂಪತ್ತು ಹೆಚ್ಚಾಗಬಹುದು. ನಿಮ್ಮದಾದ ಸ್ವಂತ ನಿಲುವಿನಲ್ಲಿ ಜೀವಿಸುವುದನ್ನು ಕಲಿಯಬೇಕಿದೆ. ಸಂಬಂಧಗಳನ್ನು ಬಲಪಡಿಸಲು ಕುಟುಂಬದ ಜೊತೆ ಸಮಯ ಕಳೆಯಿರಿ. ಅಗತ್ಯವಿದ್ದರೆ ನಿಮ್ಮ ಹಿರಿಯರ ಸಹಾಯವನ್ನು ಪಡೆಯಿರಿ. ವೃತ್ತಿಯ ಆಕರ್ಷಣೆಗೆ ಮರುಳಾಗಬಹುದು. ಹೊಸ ಆಸ್ತಿ ವ್ಯವಹಾರಗಳಲ್ಲಿ ಆಕರ್ಷಕ ಕೊಡುಗೆಗಳನ್ನು ನಿರೀಕ್ಷಿಸಬಹುದು. ವೃತ್ತಿಯಲ್ಲಿ ಅನಿರೀಕ್ಷಿತ ಒತ್ತಡಗಳು ಬರಲಿದ್ದು ಇಂದಿನ ಕಾರ್ಯವನ್ನು ಹಾಳುಮಡುವುದು. ಸ್ತ್ರೀಯರು ಕೆಲವರ ಬಗ್ಗೆ ಇರುವ ಪೂರ್ವಾಗ್ರಹವನ್ನು ಕಳೆದುಕೊಳ್ಳುವರು. ಪ್ರೀತಿಯು ನಿಮಗಾಗದವರ ಮೂಲಕ ಎಲ್ಲರಿಗೂ ತಿಳಿಯುವುದು. ಇದರಿಂದ ನಿಮಗೆ ಬಹಳ ಮುಜುಗರವಾಗಬಹುದು. ತಾಳ್ಮೆಯನ್ನು ಕಳೆದುಕೊಳ್ಳದೇ ವರ್ತಿಸಿ.

ವೃಶ್ಚಿಕ ರಾಶಿ; ಕಾರ್ಯಕ್ಕೆ ಹೊರಡುವ ಮೊದಲೇ ತನ್ನ್ನಿಂದ ಏನೂ ಆಗದು ಎಂಬ ಭಾವವನ್ನು ಮೊದಲು ತಲೆಯಿಂದ ತೆಗೆದುಹಾಕಬೇಕು. ನೀವು ಶಿಸ್ತಿಗೆ ಒಳಪಟ್ಟಷ್ಟು ನಿಮ್ಮ ಕೆಲಸಗಳು ಸುಲಲಿತವಾಗುವುದು. ಮನೆಯಲ್ಲಿ ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ಪ್ರಯಾಣವು ನಿಮಗೆ ಶಾಶ್ವತವಾದ ಸಿಹಿ ನೆನಪನ್ನು ನೀಡಬಹುದು. ಮಾನಸಿಕ ಶಾಂತಿಗಾಗಿ ಕೆಲ ಸಮಯ ಧ್ಯಾನ ಮಾಡುವುದನ್ನು ಪರಿಗಣಿಸಿ. ಸಂಗಾತಿಯ ಹೆಸರಿನಲ್ಲಿ ಸ್ಥಿರಾಸ್ತಿಯನ್ನು ಖರೀದಿಸುವಿರಿ. ಚಟುವಟಿಕೆಯಿಂದ ಇರುವ ನೀವು ನಿಷ್ಕ್ರಿರಾಗಬೇಕಾಗಬಹುದು. ಎಷ್ಟೇ ಸೌಕರ್ಯವಿದ್ದರೂ ಇನ್ನಷ್ಟು ಬೇಕೆನಿಸಬಹುದು. ಆರ್ಥಿಕ ಸ್ಥಿತಿಯು ನಿಮಗೆ ಸಮಾಧಾನ ಕೊಡುವುದು. ಹಳೆಯ ವಸ್ತುಗಳು ನಿಮಗೆ ಭಾರವಾದೀತು. ತಾಳ್ಮೆಯನ್ನು ಕಳೆದುಕೊಂಡು ಎಲ್ಲರೆದುರು ಸಣ್ಣವರಾಗಬೇಕಾದೀತು. ಕಠೋರ ಮಾತುಗಳು ನಿಮ್ಮರಿಗೆ ಇಷ್ಟವಾಗದು. ನಿಮ್ಮ ಬಗ್ಗೆ ಸಲ್ಲದ್ದನ್ನು ಹೇಳಬಹುದು.

ಧನು ರಾಶಿ: ಈ ದಿನವನ್ನು ಬಹಳ ಆನಂದದಿಂದ ಕಳೆಯುವಿರಿ. ಏಕೆಂದರೆ ನೀವು ಇಂದು ಸಕಾರಾತ್ಮಕ ಚಿಂತನೆಯಲ್ಲಿ ಇರುವಿರಿ. ವಿದ್ಯಾಭ್ಯಾಸದ ಕಾರಣಕ್ಕೆ ಅಪಮಾನವಾಗಬಹುದು. ನಿಮ್ಮ ನಂಬಿಕೆಗೆ ಘಾಸಿಯಾಗಬಹುದು. ನಿಮಗೆ ಬರುವ ಆಸ್ತಿಯಲ್ಲಿ ಕಿರಿಕಿರಿ ಮಾಡುವಿರಿ. ಉತ್ತಮ ಆದಾಯದ ಭರವಸೆ ನೀಡುವ ಹೂಡಿಕೆಗಳಲ್ಲಿ ಹಣ ಹಾಕುವುದನ್ನು ಪರಿಗಣಿಸಿ. ನಿಮ್ಮ ಪೂರ್ವಜರ ಆಸ್ತಿಗೆ ಸಂಬಂಧಿಸಿದಂತೆ ಶುಭ ಸುದ್ದಿಯನ್ನು ನಿರೀಕ್ಷಿಸಬಹುದು. ಆಪತ್ತನ್ನು ತಪ್ಪಿಸಲು ಹೋಗಿ ಸಂಪತ್ತು ಹೋಗಬಹುದು. ಮನೆಯಲ್ಲಿರುವ ಮಕ್ಕಳ ಜೊತೆ ಸ್ವಲ್ಪ ತಾಳ್ಮೆಯನ್ನು ಕಾಪಾಡಿಕೊಳ್ಳಿ. ಸಂಬಂಧಗಳನ್ನು ಬೆಳೆಸಿಕೊಳ್ಳುವ ಇಚ್ಛೆ ಇದ್ದರೂ ಮುನ್ನುಗ್ಗಲು ಮನಸ್ಸು ಇರದು. ತಂದೆಯ ಜೊತೆಗಿನ ಮನಸ್ತಾಪವು ನಿಮ್ಮ ನೆಮ್ಮದಿಯನ್ನು ಹಾಳು ಮಾಡೀತು. ಎಲ್ಲದಕ್ಕೂ ಮುನ್ನುಗಬೇಕೆನ್ನುವ ನಿಮ್ಮ ಯೋಚನೆ ಬದಲಾಗುವುದು. ಭೂಮಿಯ ಬಗ್ಗೆ ಆಸಕ್ತಿಯು ಕಡಿಮೆಯಾಗಲಿದೆ.

ಮಕರ ರಾಶಿ: ಕಿಟಕಿ ಮುಚ್ಚಿದೆ ಎಂದ ಮಾತ್ರಕ್ಕೆ ದ್ವಾರವೂ ಮುಚ್ಚಿರುತ್ತದೆ ಎಂದು ತಿಳಿದುಕೊಳ್ಳುವುದು ಮೂರ್ಖತನ. ಹಣಕಾಸು ಲಾಭಗಳು ನಿಮ್ಮ ಪರಿಸ್ಥಿತಿಯನ್ನು ಬಲಪಡಿಸುತ್ತದೆ. ಇಂದು ಕುಟುಂಬದಲ್ಲಿ ಸಂತೋಷವನ್ನು ತುಂಬುವಿರಿ. ನಿಮ್ಮ ಕಾರ್ಯಯೋಜನೆಗಳ ಬಗ್ಗೆ ಸೂಕ್ಷ್ಮವಾಗಿರಿ. ಕೆಲವು ವಿಚಾರಗಳನ್ನು ಬಹಳ ಚಾಣಾಕ್ಷತೆಯಿಂದ ಮಾಡಬೇಕು. ದುಡಿಮೆಯ ಸ್ವಲ್ಪ ಭಾಗವನ್ನಾದರೂ ಇತರಿಗೆ ಕೊಡಬೇಕು ಎಂದು ಅನ್ನಿಸಬಹುದು. ಆಪ್ತರಿಂದ ಸಲಹೆಯನ್ನು ಕೇಳಲು ನಿಮಗೆ ಮುಜುಗರವಾಗಬಹುದು. ಒಬ್ಬರಾದರೂ ತಾಳ್ಮೆಯಿಂದ ಇರಬೇಕಾದೀತು. ನಿಮ್ಮ ಕನಸನ್ನು ಪೂರ್ಣ ಮಾಡಿಕೊಳ್ಳುತ್ತಿರುವುದು ನಿಮಗೆ ಖುಷಿಯಾಗಲಿದೆ. ಭೋಜನವನ್ನು ಸಮಯ ಮೀರಿ ಮಾಡುವುದು ಬೇಡ. ನಿಮ್ಮ ಬದಲಾವಣೆಯು ಪೂರ್ಣ ಸತ್ಯವಾಗಿರದು. ಬಂಧುವರ್ಗದಿಂದ ಸೇವೆಯಾಗಬಹುದು.

ಕುಂಭ ರಾಶಿ: ನೀವು ಯಾರನ್ನಾದರೂ ಅಳೆಯುವ ಮೊದಲು ಅವರೇ ನಿಮ್ಮ ಬಗ್ಗೆ ಎಲ್ಲವನ್ನೂ ಹೇಳಬಹುದು. ಇನ್ನೊಬ್ಬರ ನಿರ್ಧಾರಗಳನ್ನು ನಿಯಂತ್ರಿಸುವ ಮೂಲಕ ನೀವು ಎಂದಿಗೂ ಪ್ರೀತಿ ಮತ್ತು ಮೆಚ್ಚುಗೆಯನ್ನು ಪಡೆಯುವುದಿಲ್ಲ. ಮನೆಯ ಪುನರ್ನಿರ್ಮಾಣ ಮಾಡಲು ನಿಮಗೆ ಸಹಾಯ ಸಿಗಲಿದೆ. ಕೆಲಸದಲ್ಲಿ ನಿಮ್ಮ ಬದ್ದತೆಗಳ ಬಗ್ಗೆ ಹೆಚ್ಚು ಗಮನಹರಿಸಬೇಕು. ಪ್ರಯಾಣದಿಂದ ಆಗಬೇಕಾದ ಉತ್ತಮ ಫಲಿತಾಂಶವನ್ನು ನಿರೀಕ್ಷಿಸಬಹುದು. ನಿಮ್ಮ ಸುತ್ತಲೂ ನಡೆಯುವುದನ್ನು ಹತ್ತಿರದಿಂದ ಗಮನಿಸಿ, ನೀವು ನಿಮ್ಮನ್ನು ಸರಿಯಾಗಿ ಕಂಡುಕೊಳ್ಳಿ. ವೃತ್ತಿ ಜೀವನದಲ್ಲಿ ಗೌರವವನ್ನು ಪಡೆಯಬೇಕು ಎನಿಸುವುದು. ಅನಗತ್ಯ ಖರ್ಚಿಗೆ ಇಂದು ಹಲವು ಹಾದಿಗಳು ನಿಮ್ಮ ಕಣ್ಣಿಗೆ ಬೀಳಬಹುದು. ಆರ್ಥಿಕ ವ್ಯವಸ್ಥೆಯು ಎತ್ತು ಏರಿಗೆ ಕೋಣ ನೀರಿಗೆ ಎನ್ನುವ ಸ್ಥಿತಿಯು ಬರಬಹುದು. ಒಂದು ಕಡೆ ಬಾಗಲು ಮುಚ್ಚಿದರೆ ಇನ್ಮೊಂದು ಕಡೆ ಕಿಟಕಿ ತೆರುವುದು.

ಮೀನ ರಾಶಿ: ವ್ಯವಹಾರದ ಹಿನ್ನಡೆಯಿಂದ ಹತಾಶೆಯಾಗುವ ಸಾಧ್ಯತೆ ಇದೆ. ನಿಜವಾದ ಸ್ನೇಹಿತ ನಿಮ್ಮ ಅಗತ್ಯದ ಸಮಯದಲ್ಲಿ ಜೊತೆಯಾಗುವರು. ಅಂತಹವರನ್ನು ಕಳೆದುಕೊಂಡು ಅನಂತರ ಸಂಕಟಪಡುವಿರಿ. ನೀವು ಇನ್ನೊಬ್ಬರ ಅಹಂಕಾರವನ್ನು ಹೆಚ್ಚಿಸಲು ಹೋಗುವುದು ಬೇಡ. ಅತ್ಯಂತ ಮುಖ್ಯವೆಂದು ಪರಿಗಣಿಸುವ ವಿಷಯಗಳಲ್ಲಿ ನಿಮ್ಮ ಪ್ರಯತ್ನಗಳನ್ನು ಮುಂದುವರೆಸಿ. ಬಹಳ ದಿನಗಳಿಂದ ಇದ್ದ ಆಸ್ತಿಯ ಮೇಲಿನ ಮೋಹವು ಕಡಿಮೆ ಆಗುವುದು. ವಾಗ್ಸಮರದಲ್ಲಿ ನಿಮ್ಮದೇ ಮೇಲುಗೈ. ಇಂದು ನಿಮ್ಮ ಪ್ರಯತ್ನದಲ್ಲಿ ಯಶಸ್ಸು ನಿರೀಕ್ಷಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಸ್ಥಿರತೆಗಾಗಿ ಇಂದು ಹೆಚ್ಚು ಪ್ರಯತ್ನ ಮಾಡಬೇಕಾಗುತ್ತದೆ. ಕುಟುಂಬದಲ್ಲಿ ಸಾಮರಸ್ಯ ಹೆಚ್ಚಾಗಿ ಸಂತಸದ ವಾತಾವರಣ ನೀರ್ಮಾನವಾಗಲಿದೆ. ಚರಾಸ್ತಿಗೆ ಸಂಬಂಧಿಸಿದ ಶುಭ ಸುದ್ದಿ ಕೇಳುವಿರಿ. ಸ್ವಂತ ಕಾರ್ಯದ ಕಾರಣ ಕಛೇರಿಗೆ ವಿರಾಮ ಹೇಳುವಿರಿ.

ಲೋಹಿತ ಹೆಬ್ಬಾರ್ – 8762924271 (what’s app only)