
ನಿಮ್ಮ ವ್ಯವಹಾರದ ಬಗ್ಗೆ ಸಲ್ಲದ ಮಾತುಗಳು ಕೇಳಿ, ಅದರೆ ಮನಸ್ಸಿಗೆ ಹಾಕಿಕೊಳ್ಳುವ ಅವಶ್ಯಕತೆ ಇಲ್ಲ. ಮಕ್ಕಳ ಜಗಳದಲ್ಲಿ ಮಧ್ಯಪ್ರವೇಶಿಸಿ ಸಮಾಧಾನ ಮಾಡುವಿರಿ. ಆಪ್ತರಿಗೆ ಉಡುಗೊರೆ ಕೊಡಲಿದ್ದೀರಿ. ಯಾವುದಾದರೂ ಆಮಿಷಕ್ಕೆ ಬಲಿಯಾಗುವ ಸಾಧ್ಯತೆ ಇದೆ. ನೀವು ನಿಮ್ಮ ನಿಯಂತ್ರಣದಲ್ಲಿ ಇದ್ದರೆ ಯಾವ ಏರಿಳಿತವೂ ನಿಮ್ಮನ್ನು ಏನೂ ಮಾಡಲಾಗದು. ಸಂಗಾತಿಯನ್ನು ದೂರ ಕಳಿಸಿಕೊಂಡು ಸಂಕಟಪಡುವಿರಿ. ನಿಮ್ಮ ಆದಾಯವು ಹೆಚ್ಚು ಮಾಡಿಕೊಳ್ಳುವ ಆಕಾಂಕ್ಷೆಯು ಇರಲಿದೆ. ಸಹೋದ್ಯೋಗಿಗಳ ಸಹಕಾರದಿಂದ ಒತ್ತಡವನ್ನು ಕಡಿಮೆ ಆಗುವುದು.
ಕಳೆದುಕೊಂಡಿದ್ದನ್ನು ನೀವು ಪುನಃ ಪಡೆದುಕೊಳ್ಳುವ ಪ್ರಯತ್ನದಲ್ಲಿ ನೀವು ಇರುವಿರಿ. ಲೆಕ್ಕಕ್ಕೆ ಸಿಗದೇ ಇರುವ ಎಷ್ಟೋ ಹಣವನ್ನು ಕಳೆದುಕೊಳ್ಳಬೇಕಾಗುವುದು. ಕೇಳಬಾರದ ವಿಚಾರಗಳನ್ನು ಬಂಧುಗಳಿಂದ ಪಡೆಯುವಿರಿ. ಅತಿಯಾದ ಸಂತೋಷದ ಕ್ಷಣವು ನಿಮ್ಮ ಪಾಲಿಗೆ ಇರಲಿದೆ. ದೀರ್ಘಕಾಲದ ಸ್ನೇಹವು ಮತ್ತೆ ಹೊಸದಾಗಿ ಆರಂಭವಾಗಲಿದೆ. ಯಾವುದನ್ನೂ ಹೆಚ್ಚು ಕಾಲ ಉಳಿಸಿಕೊಳ್ಳುವುದು ಕಷ್ಟ. ನಿಮ್ಮ ಸೋಲನ್ನು ಒಪ್ಪಿಕೊಳ್ಳದೇ ವಾದಿಸುವಿರಿ. ನಿಮ್ಮ ಪರೀಕ್ಷೆಯ ದಿನವು ಇಂದಾಗಿದ್ದು ಫಲಿತಾಂಶವೂ ನಿಮ್ಮ ವರ್ತನೆಯ ಮೇಲಿರುವುದು.
ವ್ಯಾಪಾರದ ನಷ್ಟವನ್ನು ಇನ್ನಾವುದರಿಂದಲೇ ತುಂಬಿಕೊಳ್ಳುವಿರಿ. ಮನೆಯ ವಸ್ತುಗಳನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವುದಿಲ್ಲ. ಹೂಡಿಕೆಯನ್ನು ನಿಲ್ಲಿಸುವ ಮನಸ್ಸಾಗುವುದು. ಒಳ ಮನಸ್ಸು ನಿಮ್ಮ ದಾರಿಯನ್ನು ತಪ್ಪಿಸದು. ತೀರ್ಥಕ್ಷೇತ್ರಗಳಿಗೆ ಹೋಗುವ ಮನಸ್ಸಾಗುವುದು. ನೀರಿನ ವಿಷಯದಲ್ಲಿ ಜಾಗಾರೂಕತೆ ಇರಲಿ. ಎಲ್ಲ ಸನ್ನಿವೇಶಕ್ಕೂ ಒಂದೇ ಪರಿಹಾರವು ಇರದು. ಒಂದೇ ವಿಚಾರವನ್ನು ಹೆಚ್ಚು ಯೋಚಿಸಿದಷ್ಟೂ ಮನಸ್ಸು ದುರ್ಬಲವಾಗಬಹುದು. ಅಲ್ಪ ಮೊತ್ತವನ್ನು ಸಾಮಾಜಿಕ ಕಾರ್ಯಕ್ಕೆ ಕೊಡುವಿರಿ.
ಚಟುವಟಿಕೆಯಿಂದ ಇದ್ದರೂ ನಿಮ್ಮ ಕೆಲಸ ಮಾತ್ರ ಆಗದೇ ಇರುವುದು. ಪಾಲುದಾರಿಕೆಯನ್ನು ಪಡೆಯುವ ಮೊದಲು ಸಾಧ್ಯಾಸಾಧ್ಯತೆಗಳ ಬಗ್ಗೆ ಗಮನವಿರಲಿ. ನಿಮ್ಮ ಜೀವನಕ್ಕೆ ಆಗದವರ ಬಗ್ಗೆ ತಾತ್ಸಾರ ಭಾವ ಬರಬಹುದು. ನಿಮ್ಮ ಉದ್ಯೋಗಕ್ಕೆ ಯಾರಿಂದಲಾದರೂ ಹೂಡಿಕೆಯನ್ನು ಮಾಡಿಸಿಕೊಳ್ಳುವಿರಿ. ಪ್ರಭಾವೀ ವ್ಯಕ್ತಿಗಳಿಂದ ನಿಮಗೆ ವಂಚನೆಯಾಗಿದೆ ಎಂದನಿಸಬಹುದು. ನಿಯಮಿತ ಚೌಕಟ್ಟನ್ನು ಬಿಟ್ಟು ಆಚೆ ಬರಲು ಆಗದು. ನಿಮ್ಮ ನಡತೆಯಿಂದ ಕುಲಕ್ಕೆ ಅವಮಾನವಾಗಬಹುದು. ನಿದ್ರೆಯನ್ನು ಹೆಚ್ಚು ಮಾಡುವಿರಿ. ಜವಾಬ್ದಾರಿಯನ್ನು ಪಡೆದ ಬೆನ್ನಲ್ಲೇ ಹಿತಶತ್ರುಗಳನ್ನೂ ಹೆಚ್ಚಿಸಿಕೊಳ್ಳುವಿರಿ.
ಇಂದು ಮನೆಯಲ್ಲಿ ಹಬ್ಬದ ವಾತಾವರಣ ಇರಲಿದ್ದು ನೀವೂ ಬಹಳ ದಿನಗಳ ಅನಂತರ ಇಂತಹ ಸಂತೋಷವನ್ನು ಪಡೆಯುವಿರಿ. ಸಾಲಕ್ಕಾಗಿ ಮತ್ತೆ ಮತ್ತೆ ದೂರವಾಣಿ ಕರೆಗಳು ಪೀಡಿಸಬಹುದು. ಇಂದು ವ್ಯಾಪಾರವನ್ನು ಮಾಡುವ ಮನಸ್ಸು ಇಲ್ಲದಿದ್ದರೂ ಮನೆಯಲ್ಲಿ ಕುಳಿತು ಬೇಸರವಾಗಬಹುದು. ನಿಮಗೆ ಬೇಕಾದ ವ್ಯವಸ್ಥೆಯನ್ನು ನೀವು ಮಾಡಿಕೊಳ್ಳುವಿರಿ. ಸ್ನೇಹಿತರ ತಮಾಷೆಯು ನಿಮಗೆ ಇಷ್ಟವಾಗದು. ದ್ವಿಚಕ್ರ ವಾಹನವನ್ನು ಓಡಿಸುವಾಗ ಎಚ್ಚರ ಇರಲಿ. ಸಂಗಾತಿಯ ಮನಃಸ್ಥಿತಿಗೆ ಪೂರಕವಾಗಿ ನಿಮ್ಮ ಆಲೋಚನೆಯೂ ಇರಲಿದ್ದು ನಿಮಗೆ ಖುಷಿಯಾಗುವುದು.
ನೀವು ಹೇಳುವ ಸುಳ್ಳುಗಳೇ ಸತ್ಯವಾಗಬಹುದು. ನೆನಪಿನ ಶಕ್ತಿಗೆ ಸೂಕ್ತವಾದ ಪರಿಹಾರವನ್ನು ಮೊದಲು ಮಾಡಿಕೊಳ್ಳಬೇಕಾಗುವುದು. ಕೆಲವು ಶುಭ ಸೂಚನೆಗಳು ನಿಮಗೆ ಗೊತ್ತಾಗಲಿದ್ದು ನಿರೀಕ್ಷೆಯೂ ಎಂದಿಗಿಂತ ಹೆಚ್ಚಿರಲಿದೆ. ಮಾತುಗಾರರು ಎಂದಿನ ವಾಚಾಳಿತನವನ್ನು ಕಡಿಮೆಮಾಡುವರು. ಮನೆಯ ಕಾರ್ಯದಲ್ಲಿ ಸಮಯವು ಕಳೆದುಹೋಗುವುದು. ನಿಮಗೆ ಗೊತ್ತೇ ಇರದ ಕೆಲಸವನ್ನು ನೀವು ಮಾಡಬೇಕಾದೀತು. ಹೂಡಿಕೆಯ ನಷ್ಟದಿಂದ ವಿಚಲಿತರಾಗಬೇಕಾಗಿಲ್ಲ. ಎಲ್ಲದಕ್ಕೂ ವಿಧಿಯನ್ನು ಹೀಗಳೆಯುವುದಕ್ಕಿಂತ ನಿಮ್ಮ ಪ್ರಯತ್ನವನ್ನು ಮುಂದುವರೆಸಿರಿ.
ಸ್ನೇಹತರ ಜೊತೆ ಮೋಜಿನಲ್ಲಿ ದಿನವನ್ನು ಮುಗಿಸುವಿರಿ. ಮಾರಾಟಕ್ಕೆ ಬೇಕಾದ ವ್ಯವಸ್ಥೆಯನ್ನು ರೂಪಿಸಿಕೊಳ್ಳುವಿರಿ. ಜಾಹಿರಾತು ವಿಭಾಗದಲ್ಲಿ ಇರುವವರಿಗೆ ಅವಕಾಶವು ಹೆಚ್ಚು ಸಿಗಬಹುದು. ವಾಗ್ಮಿಗಳು ಸಿಕ್ಕ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವರು. ನಿಮ್ಮ ಉಪಕಾರಕ್ಕೆ ಪ್ರತ್ಯುಪಕಾರವು ಸಿಗದೇ ಇರಬಹುದು. ಎಲ್ಲ ತಪ್ಪಿಗೂ ನೀವೇ ಕಾರಣಕರ್ತರಾಗಬಹುದು. ನಿಮ್ಮ ಕರ್ತವ್ಯವನ್ನು ಮಾಡಲು ಹಿಂದೇಟು ಹಾಕುವಿರಿ. ಲೆಕ್ಕಪತ್ರದ ವಿಚಾರದಲ್ಲಿ ನಿಷ್ಠುರವಾದ ಮನೋಭಾವವನ್ನು ಇಟ್ಟುಕೊಳ್ಳುವಿರಿ. ನಿಮ್ಮ ಮನಸ್ಸಿಗೆ ಹಿಡಿಸದೇ ಇರುವವರಿಂದ ದೂರ ಉಳಿಯುವಿರಿ.
ಲಾಭಾಕ್ಕಾಗಿ ವ್ಯಾಪಾರದಲ್ಲಿ ಹೊಸದಾದ ಆಕರ್ಷಕ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಔದಾಸೀನ್ಯದಿಂದ ವ್ಯಾಪಾರದಲ್ಲಿ ನಷ್ಟವಾಗಲಿದೆ. ಇಂದಿನ ಪ್ರಯಾಣದಿಂದ ಹಿಂಸೆ ಆಗಬಹುದು. ಮಿತ್ರರಿಂದ ಸಿಗಬೇಕಾದ ಹಣಕ್ಕೆ ಕತ್ತರಿ ಬೀಳುವುದು. ನಿರೀಕ್ಷಿತ ಫಲವು ಲಭಿಸದು. ಆಧ್ಯಾತ್ಮಿಕ ಮೇಲೆ ಪ್ರೀತಿ ಹೆಚ್ಚಾಗಿ ಲೌಕಿಕ ವಿಚಾರಕ್ಕೆ ಆಸಕ್ತಿ ಕಡಿಮೆಯಾಗಲಿದೆ. ಸಹೋದ್ಯೋಗಿಗಳ ಮೇಲೆ ನಿಮಗೆ ಅಸೂಯೆ ಉಂಟಾಗಬಹುದು. ನಿಮ್ಮ ಇಚ್ಛಾಶಕ್ತಿಯು ವಹಿಸಿದ ಕೆಲಸವನ್ನು ಪೂರ್ಣಗೊಳಿಸಲು ಸಹಕಾರಿ. ನಿಮ್ಮ ಯೋಜನೆ ಉತ್ತಮವಿದ್ದರೂ ಅದನ್ನು ಕಾರ್ಯರೂಪಕ್ಕೆ ತರಲು ಕಷ್ಟವಾದೀತು.
ಯಂತ್ರದ ವ್ಯಾಪಾರದಿಂದ ನಿಮಗೆ ಲಾಭವು ಅಧಿಕವಾಗುವುದು. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡಿಕೊಂಡು ಅನಂತರ ಬೇಸರಿಸುವರು. ಉದ್ಯಮದ ಕಾರಣ ಇರುವ ಸ್ಥಳದಿಂದ ದೂರ ಹೋಗಬೇಕಾಗುವದು. ಬೇಡದ ಕಾರ್ಯಕ್ಕೆ ಯಾರಾದರೂ ಪ್ರಚೋದಿಸಿಯಾರು. ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು. ಒಂದೇ ಕಾರ್ಯಕ್ಕೆ ಮತ್ತೆ ಮತ್ತೆ ವಿಘ್ನಗಳು ಬರುತ್ತಿದ್ದು ದೈವಜ್ಞರನ್ನು ಸಂಪರ್ಕಿಸಿ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದು ಉತ್ತಮ. ನಿಮ್ಮ ಬಗ್ಗೆ ಯಾರಿಗೂ ಗೊತ್ತಿಲ್ಲ ಮಾಹಿತಿಯು ಪ್ರಕಟವಾಗಬಹುದು. ಸ್ವಂತ ವಾಹನ ಸಂಚಾರದಿಂದ ಭಯವಾಗಲಿದೆ.
ದಿನನಿತ್ಯದ ಬಳಕೆಯ ವಸ್ತುಗಳ ವ್ಯಾಪಾರ ಮಾಡುವವರ ಮಾರಾಟ ನಿರೀಕ್ಷೆಗಿಂತ ಹೆಚ್ಚಾಗಿರುತ್ತದೆ. ಎಲ್ಲದಕ್ಕೂ ಸಂಶಯಪಟ್ಟು ಗೊಂದಲವಾಗಲಿದೆ. ಸರ್ಕಾರ ಕಾರ್ಯವು ಇಂದು ಪೂರ್ಣವಾಗದು ಎಂದು ಅಂದುಕೊಂಡಿದ್ದರೂ ಕೊನೆಗೆ ಕೆಲಸವಾಗುವುದು. ಎಲ್ಲರ ಮೇಲೂ ಅನುಮಾನ ಪಡುವ ದುರಭ್ಯಾಸವು ಬೆಳೆಯಬಹುದು. ನಿಮ್ಮ ವಾಹನಕ್ಕಾಗಿ ಖರ್ಚನ್ನು ಮಾಡಬೇಕಾಗುವುದು. ಸಿಕ್ಕ ಅವಕಾಶವನ್ನು ಪ್ರೀತಿಸಿ. ಅದೇ ಮಹತ್ತ್ವದ ಮಾರ್ಗದಲ್ಲಿ ತೋರುವುದು. ಪ್ರೀತಿಯ ವಿಷಯದಲ್ಲಿ ಇಂದು ದುಃಖವುಂಟಾಗಬಹುದು. ಮನಸ್ತಾಪವನ್ನು ದ್ವೇಷವಾಗಿ ಪರಿವರ್ತಿಸಿಕೊಳ್ಳುವುದು ಬೇಡ.
ಇಂದು ನಿಮಗೆ ಸಾಮಾಜಿಕ ಕಾರ್ಯಗಳಿಗೆ ಪ್ರೇರಣೆ ಸಿಗಬಹುದು. ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಓಡಾಟವು ಅಧಿಕವಾಗಿ ಇರುವುದು. ಉದ್ಯಮದ ನಿಮಿತ್ತ ದೂರ ಪ್ರಯಾಣ ಹಾಗೂ ಕಾರ್ಯ ಸಫಲವಾಗದೇ ಬೇಸರ. ದಿನದ ಕೆಲಸವೇ ಇಂದು ಬಹಳ ಆಗಲಿದ್ದು ಇನ್ನೊಬ್ಬರ ಕೆಲಸವನ್ನು ಮಾಡಿಕೊಡಲು ತಾಳ್ಮೆ ಇರಲಾರದು. ಹೂಡಿಕೆಗೆ ಯಾರಿಂದಲಾದರೂ ಪ್ರೇರಣೆ ಸಿಗಬಹುದು. ಇಂದು ನಿಮ್ಮ ಉತ್ಸಾಹವನ್ನು ಯಾರಿಂದಲೂ ಸಾಧ್ಯವಾಗದು. ಆದಾಯದ ವಿಚಾರದಲ್ಲಿ ಹಿನ್ನಡೆಯಾಗಿದ್ದು ನಿಮ್ಮ ತಂತ್ರವು ಪೂರ್ಣವಾಗಿ ಫಲಿಸದು.
ಕಛೇರಿ ಕೆಲಸವು ನಿಮ್ಮ ಸ್ವಂತ ಕೆಲಸಕ್ಕೆ ತೊಂದರೆಯನ್ನು ಕೊಡಬಹುದು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನವನ್ನು ನೀಡುವರು. ಯಾರದೋ ವಿವಾಹದ ಕಾರ್ಯಕ್ಕೆ ಓಡಾಟ ಮಾಡಬೇಕಾದೀತು. ನಿಮ್ಮ ಭೂವ್ಯವಹಾರವನ್ನು ಸರಿಯಾಗಿ ಇಟ್ಟುಕೊಳ್ಳಿ. ಸಂಗಾತಿಯ ಜೊತೆ ಭಿನ್ನಮತವು ಬರಬಹುದು. ಕುಟುಂಬದ ಹಿರಿಯರ ಅನಾರೋಗ್ಯದ ಕಾರಣ ನಿಮ್ಮ ಸ್ವಂತ ಕಾರ್ಯವನ್ನು ಮಾಡಿಕೊಳ್ಳಲಾಗದು. ಆಭರಣ ಖರೀದಿಗೆ ಉತ್ತಮ ದಿನವಿದಾಗಲಿದೆ. ಉದ್ಯೋಗವನ್ನು ನಂಬಿ ಜೀವನ ಸಾಗಿಸುವವರಿಗೆ ಬೇಸರ ಎದುರಾಗಬಹುದು.
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರ ಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಉತ್ತರಾಷಾಢ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಶತಭಿಷಾ, ಯೋಗ : ವ್ಯತಿಪಾತ್, ಕರಣ : ಗರಜ, ಸೂರ್ಯೋದಯ – 06 – 54 am, ಸೂರ್ಯಾಸ್ತ – 06 – 17 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12-36 – 15:01, ಯಮಗಂಡ ಕಾಲ 08:20 – 09:45, ಗುಳಿಕ ಕಾಲ 11:10 – 12:36
-ಲೋಹಿತ ಹೆಬ್ಬಾರ್ – 8762924271 (what’s app only)