Horoscope Today 25 January 2025: ಮನೋವಿಕಾರಕ್ಕೆ ಆಸ್ಪದ ಕೊಡುವುದು ಬೇಡ
ಶಾಲಿವಾಹನ ಶಕೆ 1947ರ ಮಾರ್ಗಶಿರ ಮಾಸದ ಕೃಷ್ಣ ಪಕ್ಷದ ಪಂಚಮಿಯ ದಿನದ ನಿತ್ಯ ಪಂಚಾಂಗವನ್ನು ಮತ್ತು ಎಲ್ಲಾ 12 ರಾಶಿಗಳಿಗೆ ದಿನದ ಭವಿಷ್ಯವನ್ನು ಒಳಗೊಂಡಿದೆ. ಪ್ರತಿಯೊಂದು ರಾಶಿಗೂ ಆರ್ಥಿಕ, ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಮೇಲೆ ದಿನದ ಪ್ರಭಾವವನ್ನು ವಿವರಿಸಲಾಗಿದೆ. ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳನ್ನು ತಿಳಿದುಕೊಳ್ಳಲು ಈ ಲೇಖನ ಸಹಾಯ ಮಾಡುತ್ತದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಮೂಲಾ, ಯೋಗ: ಧ್ರುವ, ಕರಣ: ಬವ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 27 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09: 54 ರಿಂದ 11:20ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:11ರಿಂದ 03:36 ರವರೆಗೆ, ಗುಳಿಕ ಬೆಳಿಗ್ಗೆ 07:03 ರಿಂದ 08:28 ರವರೆಗೆ.
ಮೇಷ ರಾಶಿ: ರಾಜಕೀಯದ ಸಂಪರ್ಕ ಏರ್ಪಡಬಹುದು. ಇಂದು ನೀವು ಊಹಿಸದ್ದನ್ನೂ ಪಡೆಯುವ ಅವಕಾಶವು ಸಿಗಲಿದೆ. ಮನೋವಿಕಾರಕ್ಕೆ ಆಸ್ಪದ ಕೊಡುವುದು ಬೇಡ. ನಿಮಗೆ ಸೂಚಿತ ದಿಕ್ಕಿನಲ್ಲಿ ತೆರಳಿ ಕಾರ್ಯವನ್ನು ಸಾಧಿಸಿಕೊಳ್ಳಿ. ಹೊಸ ಅನ್ವೇಷಣೆಯ ಬಗ್ಗೆ ನಿಮಗೆ ಕುತೂಹಲ ಹೆಚ್ಚುವುದು. ಸುಮ್ಮನೇ ಒತ್ತಡವಿದ್ದಂತೆ ತೋರಿಸುವಿರಿ. ಅಪನಂಬಿಕೆಯಿಂದ ಮನಸ್ಸು ಕುಗ್ಗುವುದು. ಯಾರ ಮೇಲೂ ನಂಬಿಕೆ ಇಡುವುದು ಕಷ್ಟವಾದೀತು. ಆಪತ್ತಿನಿಂದ ಜಾರಿಕೊಳ್ಳುವ ಮಾರ್ಗ ನಿಮಗೆ ತಿಳಿಯುವುದು. ಅತಿಥಿಗಳ ಸತ್ಕಾರವನ್ನು ಮಾಡುವಿರಿ. ಸಂಗಾತಿಯ ಜೊತೆ ಸರಸದಿಂದ ಕಾಲ ಕಳೆಯುವಿರಿ. ಯಾರಿಂದಲೂ ಏನನ್ನೂ ಪಡೆಯುವ ಮನಸ್ಸಾಗದು. ಯಾವುದನ್ನೂ ತೋರಿಕೆಗೆ ಮಾಡುವುದು ಬೇಡ. ಅನ್ಯರ ಮೂಲಕ ನಿಮ್ಮ ಕಾರ್ಯವು ಆಗಲಿದೆ. ಕಳೆದ ವ್ಯರ್ಥ ಕಾಲವನ್ನು ಮತ್ತೆ ಸೇರಿಸಲಗಾದು ಎಂದು ವ್ಯಥೆಪಡುವುದು ಬೇಡ. ಭವಿಷ್ಯದ ಬಗ್ಗೆ ಉತ್ತಮವಾದ ಯೋಜನೆಯನ್ನು ರೂಪಿಸಿಕೊಳ್ಳಿ.
ವೃಷಭ ರಾಶಿ: ಮನೆಯ ನವೀಕರಣದ ಯೋಜನೆಯನ್ನು ಮಾಡುವಿರಿ. ಕೆಲವು ಹಳೆಯ ವಿಷಯಗಳನ್ನು ಇಟ್ಟುಕೊಂಡು ವಾಗ್ವಾದ ಮಾಡುವಿರಿ. ವೈಯಕ್ತಿಕ ಜೀವನದ ಸಮಸ್ಯೆಯನ್ನು ಯಾರೊಂದಿಗೂ ಹಂಚಿಕೊಳ್ಳಲು ಮನಸ್ಸಾಗದು. ಮೌನದಿಂದ ಇದ್ದರೆ ಯಾವ ಸಂಗತಿಯೂ ನಿಮ್ಮ ಬಳಿ ಬಾರದು. ಸಂಗಾತಿಯನ್ನು ನೀವು ಸರಿಯಾಗಿ ತಿಳಿದುಕೊಳ್ಳಲಾಗದು. ನಿಮ್ಮ ಕೆಲವು ನಿರೀಕ್ಷೆಯು ಹುಸಿಯಾಗಬಹುದು. ಧನಸಂಪಾದನೆಯ ಚಿಂತೆ ನಿಮಗೆ ಕಾಡಲು ಆರಂಭವಾಗಲಿದೆ. ಆಲಸ್ಯದಿಂದ ನಿಮ್ಮ ಸಾಮರ್ಥ್ಯವು ಕಡಿಮೆ ಆಗಲಿದೆ. ಮಕ್ಕಳಿಗೆ ಬೇಕಾದ ವಸ್ತುಗಳನ್ನು ಕೊಡಿಸುವಿರಿ. ಬಂಧುಗಳಿಂದ ಅವಶ್ಯಕವಾದ ಸಂಪತ್ತನ್ನು ನಿರೀಕ್ಷಿಸುವಿರಿ. ತಾಯಿಯ ಪ್ರೀತಿಯು ನಿಮಗೆ ಸಿಗಲಿದೆ. ಏಕಮುಖವಾದ ನಿರ್ಧಾರದಿಂದ ಸಫಲತೆಯು ಇರದು. ಸಣ್ಣ ಸಣ್ಣ ವಿಚಾರಗಳಿಗೂ ಸಿಟ್ಟಾಗುವುದನ್ನು ಕಡಿಮೆ ಮಾಡಿ. ಓದುವಿಕೆಯಲ್ಲಿ ಆಸಕ್ತಿಯು ಹೆಚ್ಚಾಗಬಹುದು.
ಮಿಥುನ ರಾಶಿ: ನಿಮ್ಮ ವಿದ್ಯೆಯ ಪ್ರದರ್ಶನಕ್ಕೆ ಅವಕಾಶ ಸಿಗಲಿದೆ. ನೀವು ಮನೆಯಿಂದ ಹೊರಗೆ ಸುತ್ತಾಡಲು ಇಂದು ಖುಷಿಯಾಗುವುದು. ಸಂಗಾತಿಯ ಜೊತೆ ಎಲ್ಲಿಗಾದರೂ ಹೋಗಬೇಕು ಎಂಬ ಮನಸ್ಸಾದೀತು. ನಕಾರಾತ್ಮಕ ಅಂಶಗಳನ್ನು ಬಿಟ್ಟು ಒಳ್ಳೆಯದರ ಕಡೆ ಯೋಚಿಸಿ. ನೀವು ಇಂದು ಸ್ವಂತ ವಾಹನವನ್ನು ಬಾಡಿಗೆ ಕೊಡುವಿರಿ. ಇರುವ ಸಾಲವನ್ನು ತೀರಿಸಿಕೊಳ್ಳಲುಬೇಕಾದ ಯೋಜನೆ ಮಾಡಿ. ವಿವಾಹ ಸಂಬಂಧದಲ್ಲಿ ದುಡುಕಿ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಯಾವ ಕಾರಣಕ್ಕೂ ಸಾಲವನ್ನು ಮಾಡಲು ಹೋಗುವುದು ಬೇಡ. ನೀವು ಕಾರ್ಯದಲ್ಲಿ ಮಗ್ನರಾಗಿದ್ದು ಯಾವ ವಿಷಯಕ್ಕೂ ಭಾಗಿಯಾಗಲಾರಿರಿ. ಸಂಗಾತಿಯ ಸಣ್ಣ ತಪ್ಪೂ ದೊಡ್ಡದಾಗಿ ಕಾಣಿಸುವುದು. ಸರ್ಕಾರದಿಂದ ಆಗಬೇಕಾದ ಕಾರ್ಯಕ್ಕೆ ಹೆಚ್ಚು ಓಡಾಟ ಮಾಡಬೇಕಾದೀತು. ಭೂಮಿಯ ವ್ಯವಹಾರದಿಂದ ಲಾಭವಿಲ್ಲದಿದ್ದರೂ ಅದನ್ನೇ ನಡೆಸಲು ಇಷ್ಟಪಡುವಿರಿ. ಯಾರ ಜೊತೆಗೂ ಪಕ್ಷಪಾತವನ್ನು ಇಟ್ಟುಕೊಳ್ಳುವುದು ಬೇಡ.
ಕರ್ಕಾಟಕ ರಾಶಿ: ಕಷ್ಟದಿಂದ ನಿಮಗೊಂದು ಉನ್ನತ ಸ್ಥಾನ ಪ್ರಾಪ್ತವಾಗಲಿದೆ. ಮಾತುಗಳು ನಿಮ್ಮ ಮಿತಿಯಲ್ಲಿ ಇರಲಿ. ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ, ಅನಂತರ ಯೋಚಿಸಿ ಪ್ರಯೋಜನವಾಗದು. ಸಹೋದರರ ಹಣಕಾಸಿಗೆ ಕಲಹವಾಗಬಹುದು. ಸ್ತ್ರೀಯರು ಇಂದಿನ ವ್ಯಾಪಾರದಲ್ಲಿ ಅಧಿಕ ಲಾಭವನ್ನು ಗಳಿಸುವರು. ಕೂಡಿಬರುವ ವಿವಾಹಕಾಲವನ್ನು ಅಲ್ಲಗಳೆಯುವುದು ಬೇಡ. ಮನೋರಂಜನೆಯಲ್ಲಿ ಪಾಲ್ಗೊಳ್ಳುವಿರಿ. ಸಮಯಕ್ಕಾಗಿ ಕಾದು ನೋಡಿ. ದಿನಚರಿಯನ್ನು ಬದಲಾಯಿಸಿಕೊಳ್ಳುವುದು ಬೇಕಾಗಬಹುದು. ಇಂದು ಕಡಿಮೆ ಕಾರ್ಯದಲ್ಲಿ ಹೆಚ್ಚು ಲಾಭವನ್ನು ನಿರೀಕ್ಷಿಸುವಿರಿ. ಹಳೆಯ ಕೆಲಸಗಳು ವ್ಯರ್ಥವಾಗಬಹುದು. ಧಾರ್ಮಿಕ ಕಾರ್ಯದಲ್ಲಿ ಅಲ್ಪ ಕಾಲ ಭಾಗಿಯಾಗುವಿರಿ. ಯಾರಿಗಾದರೂ ನೀವು ಹಣವನ್ನು ಕೊಡುವ ಸಂದರ್ಭವು ಬರಬಹುದು. ಜಾಣತನದಿಂದ ಇಂದಿನ ಕಾರ್ಯವನ್ನು ಮಾಡುವಿರಿ. ಹಣಕಾಸಿನ ವ್ಯವಸ್ಥೆಯನ್ನು ಸರಿ ಮಾಡಿಕೊಳ್ಳುವುದು ಸೂಕ್ತ. ಕೆಲವೊಮ್ಮೆ ಸುಮ್ಮನಿರುವುದೂ ದೊಡ್ಡ ಕೆಲಸವನ್ನು ಮಾಡಿಸುತ್ತದೆ.
ಸಿಂಹ ರಾಶಿ: ವೈದ್ಯವೃತ್ತಿಯವರಿಗೆ ಒತ್ತಡ ಅಧಿಕ. ಸರಿಯಾದ ಸಮಯಕ್ಕೆ ಏನನ್ನೂ ಮಾಡಲಾಗದ ಸ್ಥಿತಿ. ವಿವಾಹ ಜೀವನವನ್ನು ಆನಂದಿಸುವಿರಿ. ಮಕ್ಕಳ ಜೊತೆ ಬಹಳ ಸಂತೋಷದಿಂದ ಪಾಲ್ಗೊಳ್ಳುವಿರಿ. ಸಾಹಿತ್ಯ ಕ್ಷೇತ್ರಕ್ಕೆ ನಿಮ್ಮ ಕೊಡುಗೆ ಸಿಗಲಿದೆ. ಹೊಸ ಗೃಹವನ್ನು ಖರೀದಿಸುವ ವಿಚಾರವನ್ನು ದಂಪತಿಗಳು ಚರ್ಚಿಸುವರು. ಮಾತಿನಿಂದ ನಿಮಗೆ ಆದಾಯ ಬರಬಹುದು. ಉದ್ಯೋಗಕ್ಕಾಗಿ ನೀವು ವಿದೇಶಕ್ಕೆ ತೆರಳುವ ಆಸೆ ಇರಲಿದೆ. ಸಂಗಾತಿಯ ವಿಷಯದಲ್ಲಿ ವಾಗ್ವಾದ ನಡೆಯಲಿದೆ. ಮಕ್ಕಳಿಂದ ನಿಮಗೆ ಅಸಮಾಧಾನ ಇರಲಿದೆ. ನಿಮ್ಮ ಹಳೆಯ ಸಮಸ್ಯೆಯನ್ನು ಸರಿಮಾಡಿಕೊಳ್ಳುವಿರಿ. ಸಮಾಜ ನಿಮ್ಮನ್ನು ಗೌರವಿಸುವ ಬಗ್ಗೆ ಆಸಕ್ತಿ ತೋರಿಸುವುದು. ಅವಿವಾಹಿತರು ವಿವಾಹದ ಬಯಕೆಯನ್ನು ತಾಯಿಯ ಜೊತೆ ಹಂಚಿಕೊಳ್ಳುವರು. ಸಂಗಾತಿಯ ಮಾತಿಗೆ ಏನಾದರೂ ಪ್ರತಿಕ್ರಿಯೆಯನ್ನು ನೀಡಿ. ಎಲ್ಲರೆದುರು ಸಭ್ಯರಂತೆ ತೋರುವಿರಿ.
ಕನ್ಯಾ ರಾಶಿ: ಪ್ರವಾಸದಲ್ಲಿ ವಿಪತ್ತು ಬರಬಹುದು. ಅದನ್ನು ನಿವಾರಿಸಿಕೊಳ್ಳಲು ಸಮಯ ಬೇಕಾಗುವುದು. ಗೌರವವನ್ನು ನೀವು ನಿರೀಕ್ಷಿಸಿದಷ್ಟು ಪಡೆಯಲಾಗದು. ಅತಿಯಾದ ಕೋಪವನ್ನು ನೀವು ಯಾವ ಮಾರ್ಗದಿಂದಲಾದರೂ ಕಡಿಮೆ ಮಾಡಿಕೊಳ್ಳುವುದು ಉತ್ತಮ. ಹತಾಶೆಯಿಂದ ಅಧ್ಯಾತ್ಮದ ಕಡೆ ಒಲವು ಹೆಚ್ಚಬಹುದು. ಎಲ್ಲ ಕೆಲಸದಲ್ಲಿಯೂ ನಿಮ್ಮ ನಿರೀಕ್ಷೆಯ ಸುಳ್ಳಾಗಿ ಎಲ್ಲರಿಂದ ಹೇಳಿಸಿಕೊಳ್ಳಬೇಕಾಗುವುದು. ಆರೋಗ್ಯದ ಬಗ್ಗೆ ಅತಿಯಾದ ಚಿಂತೆಯಿಂದ ಮತ್ತಷ್ಟು ಹಾಳುಮಾಡಿಕೊಳ್ಳುವಿರಿ. ಮುಖಂಡರ ವ್ಯಕ್ತಿತ್ವದ ಮೇಲೆ ಕಪ್ಪು ಚುಕ್ಕೆ ಬೀಳಬಹುದು. ಯಾರ ಮಾತನ್ನೂ ಕೇಳುವ ಸಹನೆ ಇಲ್ಲವಾದೀತು. ವಿದ್ಯಾರ್ಥಿಗಳು ಓದಿನ ಬಗ್ಗೆ ಗಮನವನ್ನು ಕೊಡುವುದು ಕಷ್ಟವಾಗಬಹುದು. ಹಿರಿಯರ ಉಪದೇಶದಲ್ಲಿ ಆಸಕ್ತಿ ಕಡಿಮೆ ಆಗುವುದು. ಸ್ಥಿರಾಸ್ತಿಯ ವಿಚಾರವಾಗಿ ನೆರೆಯವರ ಜೊತೆ ಕಲಹವಾಗಬಹುದು. ಮಾಡಿಕೊಂಡ ಸಾಲವನ್ನು ತೀರಿಸಲು ಸ್ನೇಹಿರಿಂದ ಸಹಾಯ.
ತುಲಾ ರಾಶಿ: ಕುಟುಂಬವನ್ನು ಪಾರದರ್ಶಕವಾಗಿ ಇಟ್ಟುಕೊಳ್ಳಬೇಕಾಗುವುದು. ವಿದೇಶ ಪ್ರವಾಸದ ವಾರ್ತೆಯಿಂದ ಸಂತಸ. ಇಂದು ಅನೇಕ ಕೆಲಸವನ್ನು ಒತ್ತಡವಿಲ್ಲದೇ ನಿರ್ವಹಿಸುವಿರಿ. ಹಣವನ್ನು ಅಲ್ಪ ಹೂಡಿಕೆ ಮಾಡಿ ಪರೀಕ್ಷಿಸಿಕೊಳ್ಳಿ. ಸಂತೋಷದ ಸುದ್ದಿಯನ್ನು ಆನಂದಿಸುವ ಮನಃಸ್ಥಿತಿ ಇಂದು ನಿಮ್ಮಲ್ಲಿ ಇರದು. ಸದಾ ಅವಕಾಶಗಳನ್ನು ಹುಡುಕುತ್ತಲೇ ಇರುವಿರಿ. ಸ್ನೇಹಿತರ ಮೇಲೆ ಕೂಗಾಡುವಷ್ಟು ಸಲುಗೆ ಬೇಡ. ಉದ್ಯೋಗದಲ್ಲಿ ಒತ್ತಡವನ್ನು ನಿವಾರಿಸಿಕೊಳ್ಳಲು ಯಾರದ್ದಾದರೂ ಸಹಾಯವನ್ನು ಪಡೆಯುವಿರಿ. ನಿಮಗೆ ಸಿಗಬೇಕಾದ ಗೌರವವು ಗೊಂದಲದಲ್ಲಿ ಇದ್ದು ಕೊನೆಗೂ ನಿಮಗೇ ಸಿಗಲಿದೆ. ತಾಳ್ಮೆಯನ್ನು ಕಳೆದುಕೊಳ್ಳದೇ ಎಲ್ಲರ ಜೊತೆ ವ್ಯವಹರಿಸಿ. ಉನ್ನತ ಸ್ಥಾನದ ನಿರೀಕ್ಷೆಯುಳ್ಳವರು ವಿರುದ್ಧ ದಿಕ್ಕಿನಲ್ಲಿ ಹೋದರೆ ಆಗದು. ಹಿರಿಯರ ಜೊತೆ ಕಳೆದ ಸಮಯವು ನಿಮಗೆ ಉಪಯೋಗಕ್ಕೆ ಬರಲಿದೆ. ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಸರಿಮಾಡಿಕೊಳ್ಳಿ.
ವೃಶ್ಚಿಕ ರಾಶಿ; ದೂರದ ವಿವಾಹ ಸಂಬಂಧವಿಂದು ನಿಮಗೆ ಕೂಡಿಬರಲಿದೆ. ಅದನ್ನು ಗೃಹಸ್ಥಿತಿಗೆ ಅನುಸಾರವಾಗಿ ಮುಂದುವರಿಯಿರಿ. ನಿಮ್ಮ ಆಲೋಚನೆಗಳನ್ನು ಅನೇಕ ಜನರ ಜೊತೆ ಹಂಚಿಕೊಳ್ಳುವಿರಿ. ಸೋಲನ್ನು ಸವಾಲಾಗಿ ಸ್ವೀಕರಿಸುವ ಮನೋಭಾವವು ಬರಬಹುದು. ಕುಟುಂಬದ ಜೊತೆ ಸುಳ್ಳು ಹೇಳಿ, ನಿಮ್ಮ ನಿಜವಾದ ಕಾರ್ಯವನ್ನು ಮುಚ್ಚಿಡುವಿರಿ. ತಾಯಿಯನ್ನು ಬಹಳ ಚೆನ್ನಾಗಿ ನೋಡಿಕೊಳ್ಳುವಿರಿ. ಯಾರಿಗೂ ನೋವಾಗದಂತೆ ಎಚ್ಚರಿಕೆಯಿಂದ ಮುನ್ನಡೆಯುವುದು ಶ್ರೇಯಸ್ಕರ. ನೂತನ ಉದ್ಯಮಕ್ಕೆ ಹೆಚ್ಚು ಆದ್ಯತೆ ಇರಲಿದೆ. ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವಾಗ ನಿಮ್ಮ ಖರ್ಚಿನ ಅಂದಾಜು ತಪ್ಪಿಹೋಗಬಹುದು. ಅನಿರೀಕ್ಷಿತವಾಗಿ ಪ್ರಭಾವಿ ವ್ಯಕ್ತಿಗಳ ಸಂಪರ್ಕವು ಸಿಗುವುದು. ಕುಟುಂಬದಲ್ಲಿ ನಿಮ್ಮ ಪ್ರತಿ ಮಾತನ್ನು ಅನೇಕ ಅರ್ಥದಲ್ಲಿ ಗ್ರಹಿಸಬಹುದು. ವಾಹನ ಸವಾರಿಯನ್ನು ಬಹಳ ಉತ್ಸಾಹದಿಂದ ಮಾಡುವಿರಿ. ನಿಮ್ಮದೇ ಕಾರ್ಯವಾದರೂ ನಿಮಗೆ ಅದರ ಸಂಪೂರ್ಣ ಯಶಸ್ಸು ಸಿಗದು.
ಧನು ರಾಶಿ: ಸಹಜವಾಗಿಯೇ ನ್ಯಾಯಾಲಯಕ್ಕೆ ಹೋದ ವಿಚಾರವು ವಿಲಂಬವಾಗಿದ್ದು, ಅದು ಮತ್ತು ನಿದಾನ ಎನಿಸಿ, ಬೇಸರ ಕೊಡಬಹುದು. ಪ್ರೀತಿಯನ್ನು ನೀವು ಬಹಳ ಸೂಕ್ಷ್ಮವಾಗಿ ಮುಂದುವರಿಸಬೇಕಾಗುವುದು. ವ್ಯಾವಹಾರಿಕ ಜಾಣ್ಮೆಯನ್ನು ನೀವು ಇಟ್ಟುಕೊಂಡು ಲಾಭವನ್ನು ಪಡೆಯುವಿರಿ. ನಿಮಗೆ ವಿದ್ಯೆಯನ್ನು ನೀಡಿದವರು ಅನೇಕ ವರ್ಷಗಳ ಅನಂತರ ಸಿಗಬಹುದು. ಮಕ್ಕಳ ವಿದ್ಯಾಭ್ಯಾಸಕ್ಕೆ ನಿಮ್ಮ ಶ್ರಮ ಬೇಕಾಗುವುದು. ನಿಮ್ಮ ಯೋಜನೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕಾಗಬಹುದು. ಆಸ್ತಿಯನ್ನು ಮಾಡುವ ಚಿಂತನೆ ಅಧಿಕವಾಗಿರುವುದು. ಹಠದ ಸ್ವಭಾವವು ಎಲ್ಲರ ಪ್ರೀತಿಯಿಂದ ನಿಮ್ಮನ್ನು ದೂರಮಾಡಬಹುದು. ಇಂದು ಹಣಕಾಸಿನ ವ್ಯವಹಾರ ಮಾಡಲು ಧೈರ್ಯವು ಸಾಕಾಗದು. ನಿಮ್ಮ ಇಷ್ಟವಾದ ವಸ್ತುವು ಕಣ್ಮೆಯಾರಿಗಿರುವುದು ಇಂದು ಗೊತ್ತಾಗುವುದು. ಇಂದು ಆರ್ಥಿಕ ಸಹಾಯವನ್ನು ಇನ್ನೊಬ್ಬರಿಂದ ಪಡೆಯುವಿರಿ.
ಮಕರ ರಾಶಿ: ನಿಮ್ಮ ಉದ್ಯೋಗಕ್ಕೆ ಪ್ರಭಾವಿಗಳ ಆಗಮನ. ವ್ಯಾಪಾರವು ಲಾಭದತ್ತ ಮುಖ ಮಾಡುವುದು. ಆದರೆ ಅದೃಷ್ಟ ನಿಮ್ಮ ಜೊತೆ ಇದೆ ಎಂದು ಏನೆಲ್ಲ ಮಾಡಿಕೊಳ್ಳುವುದು ಬೇಡ. ಕುಟುಂಬದ ಕಡೆಯಿಂದ ಸಂತೋಷದ ಮಾತುಗಳು ಇರುವುದು. ನಿಮ್ಮ ಕೆಲಸದಿಂದ ಉತ್ತಮ ಹೆಸರು ಕುಟುಂಬಕ್ಕೆ ಸಿಗುವುದು. ನೀವೇ ಕೊಟ್ಟ ಹಣವನ್ನು ಪುನಃ ಕೇಳಲು ಮುಜುಗರವಾದೀತು. ಸಾಲದ ಬಗ್ಗೆ ನಿಮ್ಮನ್ನು ಮತ್ತೆ ಮತ್ತೆ ಎಚ್ಚರಿಸಬೇಕಾಗುವುದು. ಉನ್ನತ ಶಿಕ್ಷಣವನ್ನು ಪಡೆಯಲು ನೀವು ಸಫಲರಾಗಬಹುದು. ಉದ್ಯೋಗದಲ್ಲಿ ನಿಮ್ಮ ಕಣ್ತಪ್ಪಿನಿಂದ ಆದ ತಪ್ಪಿಗೆ ನೀವೇ ತಲೆಕೊಡಬೇಕಾದೀತು. ಭೂಮಿಯ ವ್ಯವಹಾರದಲ್ಲಿ ಸುಮ್ಮನೆ ಕೆಲವನ್ನು ನಿಮ್ಮ ಮೇಲೆ ಬರುವಂತೆ ಮಾಡಿಕೊಳ್ಳುವಿರಿ. ನಿಮ್ಮ ಬಗ್ಗೆ ನಕಾರಾತ್ಮಕ ಅಂಶಗಳು ಕೇಳಿಬರಬಹುದು. ತುರ್ತು ಹಣವು ಬೇಕಾಗಿದ್ದು ಸಾಲವನ್ನು ಮಾಡಲು ನಿಮಗೆ ಭಯವಾಗಬಹುದು. ನಿಮ್ಮ ಸ್ವಂತ ಕೆಲಸಕ್ಕಾಗಿ ವಿರಾಮ ಸಿಗದು. ಸಂಗಾತಿಯನ್ನು ತಮಾಷೆ ಕೋಪ ತರಿಸುವಿರಿ.
ಕುಂಭ ರಾಶಿ: ನೀವು ಮಾಡಬೇಕಾದ ಕಾರ್ಯವನ್ನು ಬಹಳ ಪರಿಶ್ರಮದಿಂದ ಮಾಡುವಿರಿ. ನೀವು ಇಂದು ಅನೇಕರ ಸಹಕಾರದ ಜೊತೆ ಜವಾಬ್ದಾರಿಯಲ್ಲಿ ಯಶಸ್ವಿಯಾಗುವಿರಿ. ನಿಮ್ಮೆದುರೇ ನಿಮ್ಮ ಸಹೋದರರನ್ನು ಹೊಗಳುವುದು ನಿಮಗೆ ಆಗದು. ಯಾರ ಜೊತೆಗಾದರೂ ವೈಮನಸ್ಯವಿದ್ದರೆ ಕುಳಿತು ಮಾತನಾಡಿಕೊಂಡು ಸರಿ ಮಾಡಿಕೊಳ್ಳುವಿರಿ. ನಿಮಗೆ ನಿಮ್ಮವರ ಭಾವವನ್ನು ಸರಿಯಾಗಿ ಅಂದಾಜು ಮಾಡಲಾಗದು. ಹೊಸ ಕಾರ್ಯವನ್ನು ಆರಂಭಿಸಲು ವಿಘ್ನ ಬಾರದೇ ಇದ್ದರೆ, ಮುಂದೆ ಅದು ಬರುವ ಸೂಚನೆಯಾಗಲಿದೆ. ಮಾಡಲು ಬಂಧುಗಳನ್ನು ನೀವು ಆಡಿಕೊಳ್ಳುವಿರಿ. ಯಾರ ಮೇಲಾದರೂ ದೋಷಾರೋಪ ಮಾಡುವ ಸಂಭವವಿದೆ. ಬರುವ ಆದಾಯಕ್ಕೆ ವಿಘ್ನವು ಬರಬಹುದು. ಅಂತರ್ಜಾಲದಿಂದ ನಿಮಗೆ ಕೆಲಸಕ್ಕೆ ಕರೆ ಬರಬಹುದು. ನಿರಾಕರಿಸುವುದು ಉತ್ತಮ. ಸ್ನೇಹವು ಸಡಿಲವಾಗುವ ಸಾಧ್ಯತೆ ಇದೆ.
ಮೀನ ರಾಶಿ: ವಿನ್ಯಾಸದ ವೃತ್ತಿಯವರಿಗೆ ಔದ್ಯೋಗಿಕ ಹಿನ್ನಡೆ. ಇಂದು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯನ್ನು ಮಾಡುವರು. ಸಾಲವನ್ನು ಕೇಳಿ ಬಂದವರಿಗೆ ಅಲ್ಪವನ್ನು ಮಾತ್ರ ಕೊಡಿ. ವ್ಯಾಪಾರವು ಕೆಲವು ತಿರುವನ್ನು ಪಡೆಯಬಹುದು. ಆತ್ಮೀಯರ ಬಗ್ಗೆ ಕಾಳಜಿ ಹೆಚ್ಚಿರುವುದು. ಚರಾಸ್ತಿಯ ನಷ್ಟಕ್ಕೆ ನೀವೇ ಕಾರಣವಾಗುವಿರಿ. ಆಸ್ತಿಯ ಕಡತಗಳ ಬಗ್ಗೆ ಗಂಭೀರ ಚಿಂತನೆ ಅಗತ್ಯ. ವೃತ್ತಿಯ ಸ್ಥಳದಲ್ಲಿ ಬದಲಾವಣೆಯನ್ನು ಬಯಸುವಿರಿ. ನಿಮ್ಮ ವಸ್ತುಗಳನ್ನು ರಕ್ಷಣೆ ಮಾಡಿಕೊಳ್ಳುವುದು ಉತ್ತಮ. ಶತ್ರುಗಳ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಇರಲಿದೆ. ಸೇವಾ ಮನೋಭಾವದಿಂದ ಮಾಡುವ ಕೆಲಸಕ್ಕೆ ನಿಮಗೆ ಗೌರವ ಪ್ರಾಪ್ತವಾಗಲಿದೆ. ನಿಮ್ಮ ಪ್ರಾಮಾಣಿಕತೆಯ ಮಾರ್ಗವನ್ನು ಬಿಡುವುದು ಬೇಡ. ನಿಮಗೆ ಕೊಟ್ಟ ಜವಾಬ್ದಾರಿಯನ್ನು ಪೂರ್ಣ ಮಾಡುವಿರಿ. ತಾಯಿಯ ಕಡೆಯ ಬಂಧುಗಳಿಂದ ನಿಮಗೆ ಸಹಾಯವು ಸಿಗಲಿದೆ.
ಲೋಹಿತ ಹೆಬ್ಬಾರ್ – 8762924271 (what’s app only)