
ನಿಮಗೆ ಸೂಚಿತ ದಿಕ್ಕಿನಲ್ಲಿ ತೆರಳಿ ಕಾರ್ಯವನ್ನು ಸಾಧಿಸಿಕೊಳ್ಳಿ. ಹೊಸ ಅನ್ವೇಷಣೆಯ ಬಗ್ಗೆ ನಿಮಗೆ ಕುತೂಹಲ ಹೆಚ್ಚುವುದು. ಸುಮ್ಮನೇ ಒತ್ತಡವಿದ್ದಂತೆ ತೋರಿಸುವಿರಿ. ಅಪನಂಬಿಕೆಯಿಂದ ಮನಸ್ಸು ಕುಗ್ಗುವುದು. ಯಾರ ಮೇಲೂ ನಂಬಿಕೆ ಇಡುವುದು ಕಷ್ಟವಾದೀತು. ಆಪತ್ತಿನಿಂದ ಜಾರಿಕೊಳ್ಳುವ ಮಾರ್ಗ ನಿಮಗೆ ತಿಳಿಯುವುದು. ಯಾವುದನ್ನೂ ತೋರಿಕೆಗೆ ಮಾಡುವುದು ಬೇಡ. ಅನ್ಯರ ಮೂಲಕ ನಿಮ್ಮ ಕಾರ್ಯವು ಆಗಲಿದೆ. ಕಳೆದ ವ್ಯರ್ಥ ಕಾಲವನ್ನು ಮತ್ತೆ ಸೇರಿಸಲಗಾದು ಎಂದು ವ್ಯಥೆಪಡುವುದು ಬೇಡ.
ಮೌನದಿಂದ ಇದ್ದರೆ ಯಾವ ಸಂಗತಿಯೂ ನಿಮ್ಮ ಬಳಿ ಬಾರದು. ಸಂಗಾತಿಯನ್ನು ನೀವು ಸರಿಯಾಗಿ ತಿಳಿದುಕೊಳ್ಳಲಾಗದು. ನಿಮ್ಮ ಕೆಲವು ನಿರೀಕ್ಷೆಯು ಹುಸಿಯಾಗಬಹುದು. ಧನಸಂಪಾದನೆಯ ಚಿಂತೆ ನಿಮಗೆ ಕಾಡಲು ಆರಂಭವಾಗಲಿದೆ. ಆಲಸ್ಯದಿಂದ ನಿಮ್ಮ ಸಾಮರ್ಥ್ಯವು ಕಡಿಮೆ ಆಗಲಿದೆ. ಮಕ್ಕಳಿಗೆ ಬೇಕಾದ ವಸ್ತುಗಳನ್ನು ಕೊಡಿಸುವಿರಿ. ಬಂಧುಗಳಿಂದ ಅವಶ್ಯಕವಾದ ಸಂಪತ್ತನ್ನು ನಿರೀಕ್ಷಿಸುವಿರಿ. ಸಣ್ಣ ಸಣ್ಣ ವಿಚಾರಗಳಿಗೂ ಸಿಟ್ಟಾಗುವುದನ್ನು ಕಡಿಮೆ ಮಾಡಿ. ಓದುವಿಕೆಯಲ್ಲಿ ಆಸಕ್ತಿಯು ಹೆಚ್ಚಾಗಬಹುದು.
ನಕಾರಾತ್ಮಕ ಅಂಶಗಳನ್ನು ಬಿಟ್ಟು ಒಳ್ಳೆಯದರ ಕಡೆ ಯೋಚಿಸಿ. ನೀವು ಇಂದು ಸ್ವಂತ ವಾಹನವನ್ನು ಬಾಡಿಗೆ ಕೊಡುವಿರಿ. ಇರುವ ಸಾಲವನ್ನು ತೀರಿಸಿಕೊಳ್ಳಲು ಬೇಕಾದ ಯೋಜನೆ ಮಾಡಿ. ವಿವಾಹ ಸಂಬಂಧದಲ್ಲಿ ದುಡುಕಿ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಯಾವ ಕಾರಣಕ್ಕೂ ಸಾಲವನ್ನು ಮಾಡಲು ಹೋಗುವುದು ಬೇಡ. ನೀವು ಕಾರ್ಯದಲ್ಲಿ ಮಗ್ನರಾಗಿದ್ದು ಯಾವ ವಿಷಯಕ್ಕೂ ಭಾಗಿಯಾಗಲಾರಿರಿ. ಭೂಮಿಯ ವ್ಯವಹಾರದಿಂದ ಲಾಭವಿಲ್ಲದಿದ್ದರೂ ಅದನ್ನೇ ನಡೆಸಲು ಇಷ್ಟಪಡುವಿರಿ. ಯಾರ ಜೊತೆಗೂ ಪಕ್ಷಪಾತವನ್ನು ಇಟ್ಟುಕೊಳ್ಳುವುದು ಬೇಡ.
ಸಹೋದರರ ಹಣಕಾಸಿಗೆ ಕಲಹವಾಗಬಹುದು. ಸ್ತ್ರೀಯರು ಇಂದಿನ ವ್ಯಾಪಾರದಲ್ಲಿ ಅಧಿಕ ಲಾಭವನ್ನು ಗಳಿಸುವರು. ಕೂಡಿಬರುವ ವಿವಾಹಕಾಲವನ್ನು ಅಲ್ಲಗಳೆಯುವುದು ಬೇಡ. ಮನೋರಂಜನೆಯಲ್ಲಿ ಪಾಲ್ಗೊಳ್ಳುವಿರಿ. ಸಮಯಕ್ಕಾಗಿ ಕಾದು ನೋಡಿ. ದಿನಚರಿಯನ್ನು ಬದಲಾಯಿಸಿಕೊಳ್ಳುವುದು ಬೇಕಾಗಬಹುದು. ಇಂದು ಕಡಿಮೆ ಕಾರ್ಯದಲ್ಲಿ ಹೆಚ್ಚು ಲಾಭವನ್ನು ನಿರೀಕ್ಷಿಸುವಿರಿ. ಯಾರಿಗಾದರೂ ನೀವು ಹಣವನ್ನು ಕೊಡುವ ಸಂದರ್ಭವು ಬರಬಹುದು. ಜಾಣತನದಿಂದ ಇಂದಿನ ಕಾರ್ಯವನ್ನು ಮಾಡುವಿರಿ.
ಸಾಹಿತ್ಯ ಕ್ಷೇತ್ರಕ್ಕೆ ನಿಮ್ಮ ಕೊಡುಗೆ ಸಿಗಲಿದೆ. ಹೊಸ ಗೃಹವನ್ನು ಖರೀದಿಸುವ ವಿಚಾರವನ್ನು ದಂಪತಿಗಳು ಚರ್ಚಿಸುವರು. ಮಾತಿನಿಂದ ನಿಮಗೆ ಆದಾಯ ಬರಬಹುದು. ಉದ್ಯೋಗಕ್ಕಾಗಿ ನೀವು ವಿದೇಶಕ್ಕೆ ತೆರಳುವ ಆಸೆ ಇರಲಿದೆ. ಸಂಗಾತಿಯ ವಿಷಯದಲ್ಲಿ ವಾಗ್ವಾದ ನಡೆಯಲಿದೆ. ಮಕ್ಕಳಿಂದ ನಿಮಗೆ ಅಸಮಾಧಾನ ಇರಲಿದೆ. ಅವಿವಾಹಿತರು ವಿವಾಹದ ಬಯಕೆಯನ್ನು ತಾಯಿಯ ಜೊತೆ ಹಂಚಿಕೊಳ್ಳುವರು. ಸಂಗಾತಿಯ ಮಾತಿಗೆ ಏನಾದರೂ ಪ್ರತಿಕ್ರಿಯೆಯನ್ನು ನೀಡಿ. ಎಲ್ಲರೆದುರು ಸಭ್ಯರಂತೆ ತೋರುವಿರಿ.
ಅತಿಯಾದ ಕೋಪವನ್ನು ನೀವು ಯಾವ ಮಾರ್ಗದಿಂದಲಾದರೂ ಕಡಿಮೆ ಮಾಡಿಕೊಳ್ಳುವುದು ಉತ್ತಮ. ಹತಾಶೆಯಿಂದ ಅಧ್ಯಾತ್ಮದ ಕಡೆ ಒಲವು ಹೆಚ್ಚಬಹುದು. ಎಲ್ಲ ಕೆಲಸದಲ್ಲಿಯೂ ನಿಮ್ಮ ನಿರೀಕ್ಷೆಯ ಸುಳ್ಳಾಗಿ ಎಲ್ಲರಿಂದ ಹೇಳಿಸಿಕೊಳ್ಳಬೇಕಾಗುವುದು. ಆರೋಗ್ಯದ ಬಗ್ಗೆ ಅತಿಯಾದ ಚಿಂತೆಯಿಂದ ಮತ್ತಷ್ಟು ಹಾಳುಮಾಡಿಕೊಳ್ಳುವಿರಿ. ವಿದ್ಯಾರ್ಥಿಗಳು ಓದಿನ ಬಗ್ಗೆ ಗಮನವನ್ನು ಕೊಡುವುದು ಕಷ್ಟವಾಗಬಹುದು. ಹಿರಿಯರ ಉಪದೇಶದಲ್ಲಿ ಆಸಕ್ತಿ ಕಡಿಮೆ ಆಗುವುದು. ಸ್ಥಿರಾಸ್ತಿಯ ವಿಚಾರವಾಗಿ ನೆರೆಯವರ ಜೊತೆ ಕಲಹವಾಗಬಹುದು. ಮಾಡಿಕೊಂಡ ಸಾಲವನ್ನು ತೀರಿಸಲು ಸ್ನೇಹಿರಿಂದ ಸಹಾಯ.
ಹಣವನ್ನು ಅಲ್ಪ ಹೂಡಿಕೆ ಮಾಡಿ ಪರೀಕ್ಷಿಸಿಕೊಳ್ಳಿ. ಸಂತೋಷದ ಸುದ್ದಿಯನ್ನು ಆನಂದಿಸುವ ಮನಃಸ್ಥಿತಿ ಇಂದು ನಿಮ್ಮಲ್ಲಿ ಇರದು. ಸದಾ ಅವಕಾಶಗಳನ್ನು ಹುಡುಕುತ್ತಲೇ ಇರುವಿರಿ. ಸ್ನೇಹಿತರ ಮೇಲೆ ಕೂಗಾಡುವಷ್ಟು ಸಲುಗೆ ಬೇಡ. ಉದ್ಯೋಗದಲ್ಲಿ ಒತ್ತಡವನ್ನು ನಿವಾರಿಸಿಕೊಳ್ಳಲು ಯಾರದ್ದಾದರೂ ಸಹಾಯವನ್ನು ಪಡೆಯುವಿರಿ. ತಾಳ್ಮೆಯನ್ನು ಕಳೆದುಕೊಳ್ಳದೇ ಎಲ್ಲರ ಜೊತೆ ವ್ಯವಹರಿಸಿ. ಉನ್ನತ ಸ್ಥಾನದ ನಿರೀಕ್ಷೆಯುಳ್ಳವರು ವಿರುದ್ಧ ದಿಕ್ಕಿನಲ್ಲಿ ಹೋದರೆ ಆಗದು. ಹಿರಿಯರ ಜೊತೆ ಕಳೆದ ಸಮಯವು ನಿಮಗೆ ಉಪಯೋಗಕ್ಕೆ ಬರಲಿದೆ.
ಸೋಲನ್ನು ಸವಾಲಾಗಿ ಸ್ವೀಕರಿಸುವ ಮನೋಭಾವವು ಬರಬಹುದು. ಕುಟುಂಬದ ಜೊತೆ ಸುಳ್ಳು ಹೇಳಿ, ನಿಮ್ಮ ನಿಜವಾದ ಕಾರ್ಯವನ್ನು ಮುಚ್ಚಿಡುವಿರಿ. ತಾಯಿಯನ್ನು ಬಹಳ ಚೆನ್ನಾಗಿ ನೋಡಿಕೊಳ್ಳುವಿರಿ. ಯಾರಿಗೂ ನೋವಾಗದಂತೆ ಎಚ್ಚರಿಕೆಯಿಂದ ಮುನ್ನಡೆಯುವುದು ಶ್ರೇಯಸ್ಕರ. ನೂತನ ಉದ್ಯಮಕ್ಕೆ ಹೆಚ್ಚು ಆದ್ಯತೆ ಇರಲಿದೆ. ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವಾಗ ನಿಮ್ಮ ಖರ್ಚಿನ ಅಂದಾಜು ತಪ್ಪಿಹೋಗಬಹುದು. ವಾಹನ ಸವಾರಿಯನ್ನು ಬಹಳ ಉತ್ಸಾಹದಿಂದ ಮಾಡುವಿರಿ.
ವ್ಯಾವಹಾರಿಕ ಜಾಣ್ಮೆಯನ್ನು ನೀವು ಇಟ್ಟುಕೊಂಡು ಲಾಭವನ್ನು ಪಡೆಯುವಿರಿ. ನಿಮಗೆ ವಿದ್ಯೆಯನ್ನು ನೀಡಿದವರು ಅನೇಕ ವರ್ಷಗಳ ಅನಂತರ ಸಿಗಬಹುದು. ಮಕ್ಕಳ ವಿದ್ಯಾಭ್ಯಾಸಕ್ಕೆ ನಿಮ್ಮ ಶ್ರಮ ಬೇಕಾಗುವುದು. ನಿಮ್ಮ ಯೋಜನೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕಾಗಬಹುದು. ಆಸ್ತಿಯನ್ನು ಮಾಡುವ ಚಿಂತನೆ ಅಧಿಕವಾಗಿರುವುದು. ಹಣಕಾಸಿನ ವ್ಯವಹಾರ ಮಾಡಲು ಧೈರ್ಯವು ಸಾಕಾಗದು. ನಿಮ್ಮ ಇಷ್ಟವಾದ ವಸ್ತುವು ಕಣ್ಮೆಯಾರಿಗಿರುವುದು ಇಂದು ಗೊತ್ತಾಗುವುದು. ಇಂದು ಆರ್ಥಿಕ ಸಹಾಯವನ್ನು ಇನ್ನೊಬ್ಬರಿಂದ ಪಡೆಯುವಿರಿ.
ನಿಮ್ಮ ಕೆಲಸದಿಂದ ಉತ್ತಮ ಹೆಸರು ಕುಟುಂಬಕ್ಕೆ ಸಿಗುವುದು. ನೀವೇ ಕೊಟ್ಟ ಹಣವನ್ನು ಪುನಃ ಕೇಳಲು ಮುಜುಗರವಾದೀತು. ಸಾಲದ ಬಗ್ಗೆ ನಿಮ್ಮನ್ನು ಮತ್ತೆ ಮತ್ತೆ ಎಚ್ಚರಿಸಬೇಕಾಗುವುದು. ಉನ್ನತ ಶಿಕ್ಷಣವನ್ನು ಪಡೆಯಲು ನೀವು ಸಫಲರಾಗಬಹುದು. ಉದ್ಯೋಗದಲ್ಲಿ ನಿಮ್ಮ ಕಣ್ತಪ್ಪಿನಿಂದ ಆದ ತಪ್ಪಿಗೆ ನೀವೇ ತಲೆಕೊಡಬೇಕಾದೀತು. ನಿಮ್ಮ ಬಗ್ಗೆ ನಕಾರಾತ್ಮಕ ಅಂಶಗಳು ಕೇಳಿಬರಬಹುದು. ತುರ್ತು ಹಣವು ಬೇಕಾಗಿದ್ದು ಸಾಲವನ್ನು ಮಾಡಲು ನಿಮಗೆ ಭಯವಾಗಬಹುದು. ನಿಮ್ಮ ಸ್ವಂತ ಕೆಲಸಕ್ಕಾಗಿ ವಿರಾಮ ಸಿಗದು.
ನಿಮ್ಮೆದುರೇ ನಿಮ್ಮ ಸಹೋದರರನ್ನು ಹೊಗಳುವುದು ನಿಮಗೆ ಆಗದು. ಯಾರ ಜೊತೆಗಾದರೂ ವೈಮನಸ್ಯವಿದ್ದರೆ ಕುಳಿತು ಮಾತನಾಡಿಕೊಂಡು ಸರಿ ಮಾಡಿಕೊಳ್ಳುವಿರಿ. ನಿಮಗೆ ನಿಮ್ಮವರ ಭಾವವನ್ನು ಸರಿಯಾಗಿ ಅಂದಾಜು ಮಾಡಲಾಗದು. ಹೊಸ ಕಾರ್ಯವನ್ನು ಆರಂಭಿಸಲು ವಿಘ್ನ ಬಾರದೇ ಇದ್ದರೆ, ಮುಂದೆ ಅದು ಬರುವ ಸೂಚನೆಯಾಗಲಿದೆ. ಬರುವ ಆದಾಯಕ್ಕೆ ವಿಘ್ನವು ಬರಬಹುದು. ಅಂತರ್ಜಾಲದಿಂದ ನಿಮಗೆ ಕೆಲಸಕ್ಕೆ ಕರೆ ಬರಬಹುದು. ನಿರಾಕರಿಸುವುದು ಉತ್ತಮ. ಸ್ನೇಹವು ಸಡಿಲವಾಗುವ ಸಾಧ್ಯತೆ ಇದೆ.
ವ್ಯಾಪಾರವು ಕೆಲವು ಆಕಸ್ಮಿಕ ತಿರುವನ್ನು ಪಡೆಯಬಹುದು. ಆತ್ಮೀಯರ ಬಗ್ಗೆ ಕಾಳಜಿ ಹೆಚ್ಚಿರುವುದು. ಚರಾಸ್ತಿಯ ನಷ್ಟಕ್ಕೆ ನೀವೇ ಕಾರಣವಾಗುವಿರಿ. ಆಸ್ತಿಯ ಕಡತಗಳ ಬಗ್ಗೆ ಗಂಭೀರ ಚಿಂತನೆ ಅಗತ್ಯ. ವೃತ್ತಿಯ ಸ್ಥಳದಲ್ಲಿ ಬದಲಾವಣೆಯನ್ನು ಬಯಸುವಿರಿ. ನಿಮ್ಮ ವಸ್ತುಗಳನ್ನು ರಕ್ಷಣೆ ಮಾಡಿಕೊಳ್ಳುವುದು ಉತ್ತಮ. ಶತ್ರುಗಳ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಇರಲಿದೆ. ನಿಮ್ಮ ಪ್ರಾಮಾಣಿಕತೆಯ ಮಾರ್ಗವನ್ನು ಬಿಡುವುದು ಬೇಡ. ನಿಮಗೆ ಕೊಟ್ಟ ಜವಾಬ್ದಾರಿಯನ್ನು ಪೂರ್ಣ ಮಾಡುವಿರಿ.
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಭಾನು ಪಕ್ಷ : ಶುಕ್ಲ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಅಶ್ವಿನೀ, ಯೋಗ : ಸಿದ್ಧ, ಕರಣ : ವಣಿಜ, ಸೂರ್ಯೋದಯ – 06 – 54 am, ಸೂರ್ಯಾಸ್ತ – 06 – 19 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 16:54 – 18-19 ಯಮಗಂಡ ಕಾಲ 12:37 – 14:02, ಗುಳಿಕ ಕಾಲ 15:28 – 16:54
-ಲೋಹಿತ ಹೆಬ್ಬಾರ್ – 8762924271 (what’s app only)