AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 29 January: ಇಂದು ಈ ರಾಶಿಯವರಿಗೆ ಅಂದುಕೊಂಡಿದ್ದನ್ನು ಸಾಧಿಸಿದ ತೃಪ್ತಿ

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ಏಕಾದಶೀ ತಿಥಿ ಗುರುವಾರ ಅಪಖ್ಯಾತಿ, ಶ್ರಮ ಕಡಿಮೆ, ನಿಶ್ಚಿತತೆ, ಸಾಮರಸ್ಯ, ದೈವಭಕ್ತಿ, ಸಮ್ಮಾನ, ಹೂಡಿಕೆ ಇವೆಲ್ಲ ಇಂದಿನ ವಿಶೇಷ.

Horoscope Today 29 January: ಇಂದು ಈ ರಾಶಿಯವರಿಗೆ ಅಂದುಕೊಂಡಿದ್ದನ್ನು ಸಾಧಿಸಿದ ತೃಪ್ತಿ
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Jan 29, 2026 | 12:14 AM

Share

ಮೇಷ ರಾಶಿ:

ದೈವಭಕ್ತಿ ಶ್ರದ್ಧೆಗಳು ನಿಮ್ಮ ಆತ್ಮಸ್ಥೈರ್ಯವನ್ನು ಹೆಚ್ಚಿಸುವುದು. ಇನ್ನೊಬ್ಬರಿಗೆ ಕೊಡುವ ಸಮಯು ವ್ಯರ್ಥವಾಗುವುದು. ನಿರಂತರ ಕೆಲಸದಿಂದ ನಿಮಗೆ ಸ್ವಲ್ಪ ವಿಶ್ರಾಂತಿಯ ಅವಶ್ಯಕತೆ ಇದೆ. ಯಾವ ಬಂಧನಕ್ಕೂ ಒಳಪಡದೇ ಮನಸ್ಸು ಮುಕ್ತವಾಗಿರಲು ಬಯಸುವುದು. ಸಾಮರಸ್ಯದ ಅಭಾವವು ದ್ವೇಷಕ್ಕೆ ಕಾರಣವಾಗುವುದು. ಅಭ್ಯಾಸ ವಿಷಯದಲ್ಲಿ ನಿಮಗೆ ಪೂರ್ಣ ತೃಪ್ತಿ ಇರದು. ಸಿಕ್ಕ ವಸ್ತುವನ್ನು ಸರಿಯಾಗಿ ಬಳಸಿಕೊಳ್ಳಿ. ನಿಮ್ಮನ್ನು ಸ್ನೇಹಿತರು ಕಡೆಗಣಿಸಬಹುದು.

ವೃಷಭ ರಾಶಿ:

ರಾಜಕೀಯ ವ್ಯಕ್ತಿಗಳಿಂದ ನೀವು ಸಾಮಾಜಿಕ ಕಾರ್ಯಕ್ಕೆ ಹಣವನ್ನು ಪಡೆಯುವಿರಿ. ಆಪ್ತರನ್ನು ನೀವು ಕಳೆದುಕೊಳ್ಳುವ ಸಾಧ್ಯತೆ ಇದೆ. ನಿಮ್ಮೊಳಗಿರುವ ತರತಮಭಾವವನ್ನು ಪ್ರಕಟಿಸಲಾರಿರಿ. ನಿಮ್ಮ ಅನುಮಾನದ ಬುದ್ಧಿಯನ್ನು ಕಡಿಮೆ ಮಾಡಿ, ಯಾವುದಾದರೂ ಸದ್ವಿಚಾರಕ್ಕೆ ಗಮನಕೊಡಿ. ನಿಮ್ಮವರು ನಿಮ್ಮನ್ನು ಬೇರೆ ಕೆಲಸಗಳಿಗೆ ಕರೆದುಕೊಂಡು ಹೋಗುವರು. ನಿಮ್ಮ ಪಕ್ಷಪಾತವು ಕೆಲವರಿಗೆ ಇಷ್ಟವಾಗದು. ನೀವು ವಹಿಸಿಕೊಂಡ ನಿರ್ಮಾಣ ಕೆಲಸಗಳು ನಿಧಾನವಾಗುವುದು.

ಮಿಥುನ ರಾಶಿ:

ಇಂದು ನಿಮ್ಮ ಮನಸ್ಸು ಬಹಳ ಖಿನ್ನತೆಗೆ ಹೋಗಬಹುದು. ಯಾವ ವಿಚಾರವನ್ನೂ ತೀರ್ಮಾನಿಸಲಾಯಿತು ಆಗದು. ವ್ಯಾಪಾರದಲ್ಲಿ ನಿಮ್ಮ ಜಾಣ್ಮೆಯನ್ನು ತೋರಿಸುವಿರಿ. ಮಕ್ಕಳ ಶಿಕ್ಷಣದ ವಿಚಾರದಲ್ಲಿ ನಿಮಗೆ ಸಮಾಧಾನವು ಪೂರ್ಣವಾಗಿ ಇರದು. ಅಹಂಕಾರದ ಮಾತುಗಳು ಇತರರಿಗೆ ಹಿಂಸೆಯಾದೀತು. ಪ್ರಖ್ಯಾತ ವ್ಯಕ್ತಿಗಳನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ದೊಡ್ಡ ಅಪಾಯದಿಂದ ನೀವು ಸುರಕ್ಷಿತರಾಗಿರುವಿರಿ. ಸಂಗಾತಿಯ ಇಂಗಿತವನ್ನು ತಿಳಿಯಲು ಪ್ರಯತ್ನಿಸುವಿರಿ.

ಕರ್ಕಾಟಕ ರಾಶಿ:

ಮನೋರಂಜನೆಯಲ್ಲಿ ಪಾಲ್ಗೊಂಡು ಮನಸ್ಸು ಹಗುರಾಗುವುದು. ಅಧಿಕಾರದಿಂದ ಕೂಡಿದ ಮಾತು ನಿಮಗೆ ಪ್ರಯೋಜನವಾಗದು. ನಿಮ್ಮ ಸ್ವಭಾವದಲ್ಲಿ ಆದ ಬದಲಾವಣೆಯುಂದ ಅಚ್ಚರಿಯಾದೀತು. ದೊಡ್ಡ ಅಪಾಯದಿಂದ ತಪ್ಪಿಸಿಕೊಳ್ಲಕುವುರಿ. ನಿಮ್ಮದಲ್ಲದ್ದನ್ನು ನಿಮ್ಮದೆಂದು ವಾದಿಸಲು ಹೋಗಬೇಡಿ. ಮನೆಯ ಕೆಲಸವು ಬಹಳ ಆಯಾಸವನ್ನು ಕೊಡಬಹುದು. ವ್ಯಾಪಾರದಲ್ಲಿ ಪೂರೈಕೆ ಮಾಡುವವರಿಗೆ ಹೆಚ್ಚು ಬೇಡಿಕೆ ಕಾಣಿಸುವುದು. ಉದ್ಯಮದ ಹೊಸ ಕೇಂದ್ರವನ್ನು ನಿರ್ಮಿಸುವ ಸಾಧ್ಯತೆ ಇದೆ.

ಸಿಂಹ ರಾಶಿ:

ನಿಮ್ಮ ಪ್ರಾಮಾಣಿಕತೆಗೆ ಬೆಲೆ ಇಲ್ಲವೆನಿಸುವುದು. ನಿಮ್ಮ ಮಾತುಗಳು ಅರಣ್ಯರೋದನದಂತೆ ನಿಷ್ಪ್ರಯೋಜಕವಾದೀತು. ಹಿತಶತ್ರುಗಳ ತಂತ್ರಕ್ಕೆ ಬಲಿಯಾಗಿ ಬೇಸರಗೊಳ್ಳುವಿರಿ. ಆರೋಗ್ಯದ ರಕ್ಷಣೆಯಲ್ಲಿ ಹಿನ್ನಡೆಯಾದೀತು. ಅಪರಿಚಿತರ ವಿದ್ಯಾಭ್ಯಾಸಕ್ಕೆ ನಿಮ್ಮಿಂದ ಸಹಾಯವು ಸಿಗಲಿದೆ. ಎತ್ತರದ ಪ್ರದೇಶವನ್ನು ಏರುವ ಸಾಹಸ ಮಾಡುವಿರಿ. ಅಧಿಕಾರಿಗಳು ವೃತ್ತಿಯನ್ನು ಸರಿಯಾಗಿ ನಿರ್ವಹಿಸುವರು. ಅಜ್ಞಾನವನ್ನು ಯಾರಿಂದಲಾದರೂ ದೂರಮಾಡಿಕೊಳ್ಳಿ.

ಕನ್ಯಾ ರಾಶಿ:

ರಾಜಕಾರಣದಿಂದ ನಿಮ್ಮ ಯಶಸ್ಸಿಗೆ ತೊಂದರೆ. ಸಮ್ಮಾನಗಳನ್ನು ಪಡೆಯುವ ಆಸೆ ಇದ್ದರೂ ಯೋಗವು ಬೇಕಾಗುತ್ತದೆ. ಯಾರನ್ನೋ ನಂಬಿ ನೀವು ಇರುವ ಸಣ್ಣ ಕೆಲಸವನ್ನೂ ಬಿಡುವಿರಿ. ಹಿತಶತ್ರುಗಳ ಪಿತೂರಿಯು ನಿಮ್ಮ ಶ್ರೇಯಸ್ಸಿಗೆ ತೊಂದರೆಯನ್ನು ಮಾಡೀತು. ಯಾರನ್ನೋ ಹೊಗಳಿ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಪರೋಕ್ಷವಾಗಿಯಾದರೂ ಹಿರಿಯರ ಆಶೀರ್ವಾದ ಪಡೆಯಿರಿ. ಆಗದವರು ನಿಮ್ಮ ರಹಸ್ಯ ವಿಚಾರಗಳನ್ನು ತಿಳಿದುಕೊಳ್ಳಲು ಇಚ್ಛಿಸುವರು. ನಿರುದ್ಯೋಗದ ಸಮಸ್ಯೆ ದೂರಾಗುವುದು.

ತುಲಾ ರಾಶಿ:

ವಾಹನವನ್ನು ಚಲಾಯಿಸುವಾಗ ಜಾಗರೂಕತೆ ಇರಲಿ. ನಿಮ್ಮ ಸ್ವಭಾವವು ಇತರರಿಗೂ ಗೊತ್ತಾದೀತು. ವಿದೇಶದ ವ್ಯಕ್ತಿಗಳ ಸಂಪರ್ಕ ಉಂಟಾಗುವುದು. ನಿರಪೇಕ್ಷೆಯಿಂದ ಕೆಲಸ ಮಾಡಿದರೆ, ಅಧಿಕ ಸಂತೋಷ. ನಿಮ್ಮ ಗೌರವಕ್ಕೆ ತೊಂದರೆಯಾಗುವುದು. ಕಠೋರ ಮಾತುಗಳಿಂದ ನಿಮ್ಮ ವಲಯ ಖಾಲಿಯಾಗಿ, ಒಂಟಿಯಾಗುವಿರಿ. ಯೌವನಾವಸ್ಥೆಯಲ್ಲಿ ಇರುವವರಿಗೆ ಯಾರನ್ನಾದರೂ ಪ್ರೀತಿಸುವ ಇಚ್ಛೆಯು ಬರಬಹುದು. ಸಹೋದರರ ನಡುವೆ ಭಿನ್ನಾಭಿಪ್ರಾಯ ಬರಬಹುದು. ಜೀವನದ ಬಗ್ಗೆ ನಕಾರಾತ್ಮಕ ಅಂಶಗಳೇ ಕಾಣಿಸುವುದು.

ವೃಶ್ಚಿಕ ರಾಶಿ:

ನಿಮ್ಮ ಯೋಜನೆಗೆ ಯಾವ ಸ್ಪಂದನ ಇಲ್ಲದೇ ಅದು ಹಾಳಾಗುವುದು. ಸ್ನೇಹಿತರಿಗಾಗಿ ಮಾಡಿದ ಸಾಲವು ಕೊನೆಗೆ ನಿಮಗೇ ಸುತ್ತಿಕೊಳ್ಳುವುದು. ಸಂಶೋಧನೆಗೆ ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳುವಿರಿ. ಯಾರದೋ ದಾಳವಾಗಿ ಇಂದು ಕೆಲಸವನ್ನು ಮಾಡಬೇಕಾಗಬಹುದು. ಸರ್ಕಾರಿ ಉದ್ಯೋಗಿಗಳ ಸ್ಥಾನವು ಹೆಚ್ಚಾಗಬಹುದು. ನಿಮ್ಮನ್ನು ನಿರ್ಲಕ್ಷಿಸುವ ಸ್ಥಳದಲ್ಲಿ ಇರಲು ಇಷ್ಟಪಡುವುದಿಲ್ಲ. ಎಲ್ಲ ತಪ್ಪುಗಳಿಗೂ ಸಂಗಾತಿಯನ್ನು ಬೊಟ್ಟು ಮಾಡಿ ತೋರಿಸುವಿರಿ.

ಧನು ರಾಶಿ:

ಶತ್ರುಗಳಿಂದ ನಿಮಗೆ ವಂಚನೆಯಾಗಿದ್ದು ವಿಳಂಬವಾಗಿ ಗೊತ್ತಾಗುವುದು. ಮಿತ್ರರಿಂದ ನಿಮ್ಮ ಇಚ್ಛೆಯು ಪೂರ್ಣವಾಗುವುದು. ಸಿಟ್ಟಿನ ಸ್ವಭಾವದಿಂದ ಮನೆಯಲ್ಲಿ ಅಸಮಾಧಾನ ಇರುವುದು. ಎಲ್ಲ ವಿಚಾರದಲ್ಲಿಯೂ ಒಂದಿಲ್ಲೊಂದು ಕಿರಿಕಿರಿ ಕಾಣಿಸೀತು. ಸಮಾಧಾನದಿಂದ ಆಲೋಚಿಸಲು ನಿಮಗೆ ಬಾರದು. ಬಹಳ ದಿನಗಳ ಅನಂತರ ಬಂಧುಗಳ ಮನೆಗೆ ಹೋಗಲಿದ್ದೀರಿ. ಸಂಗಾತಿಯ ವಿಚಾರದಲ್ಲಿ ಉದ್ವೇಗಕ್ಕೆ ಒಳಗಾಗುವುದು ಬೇಡ.

ಮಕರ ರಾಶಿ:

ಪ್ರಚೋದನಕಾರಿ ಮಾತುಗಾರರಿಗೆ ಅವಕಾಶವು ಸಿಗಲಿದೆ. ಸಂಸ್ಥೆಯ ಜವಾಬ್ದಾರಿಯನ್ನು ಹೊತ್ತು ಅದನ್ನು ನಿಮ್ಮ ಹಿಡಿತದಲ್ಲಿ ಇರುವಂತೆ ನೋಡಿಕೊಳ್ಳಿ. ಜನರನ್ನು ನಿರ್ವಹಿಸುವ ಕಾರ್ಯಕ್ಕೆ ನಿಮಗೆ ಪ್ರಶಂಸೆ ಸಿಗಲಿದೆ. ಆಸ್ತಿಯ ಖರೀದಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸರಿಯಾಗಿ ಪಡೆಯಿರಿ. ಬಹಳ ದಿನಗಳ ಅನಂತರ ಸಮಾಜಮುಖಿಯಾಗಿ ಕಾಣಿಸುವಿರಿ. ನಿಮ್ಮ ಪಾಲಿಗೆ ಬಂದಿದ್ದನ್ನು ಬಿಟ್ಟುಕೊಡಲಾರಿರಿ. ಇನ್ನೊಬ್ಬರ ಸಂಕಷ್ಟವನ್ನು ನಿವಾರಿಸಲು ಉತ್ಸಾಹದಿಂದ ಇರುವಿರಿ. ಮನೆಯಲ್ಲಿ ಸಂತೋಷದಿಂದ ಕಾಲ ಕಳೆಯುವಿರಿ.

ಕುಂಭ ರಾಶಿ:

ಸ್ನೇಹವು ದೂರ ಮಾಡಿಕೊಳ್ಳುವಿರಿ. ಹೊಸ ಕೆಲಸಗಳ ಕಡೆ ಗಮನ ಇರುವುದು. ಸುಂದರ ಸ್ಥಳಗಳಿಗೆ ಹೋಗಿ ಮನಸ್ಸು ಹಗುರಾಗುವುದು. ಮನಸ್ಸಿನ ಬಂಧಗಳು ಸಡಿಲಾಗುವುದು. ಅಹಂಕಾರವು ಕಡಿಮೆ ಮಾಡಿಕೊಳ್ಳುವುದು ಉತ್ತಮ. ಯಾವ ಕಾರ್ಯವನ್ನೇ ಮಾಡುವುದಾದರೂ ಪ್ರಮಾಣದ ಅಗತ್ಯವಿರಲಿದೆ. ಮನೆಯ ಸದ್ಯರ ಜೊತೆ ಹೆಚ್ಚು ಸಮಯ ಕಾಲಹರಣ ಮಾಡುವಿರಿ. ಹಿತಶತ್ರುಗಳ ಬಾಧೆಯು ಕಾಣಿಸಿಕೊಳ್ಳುವುದು. ಪತ್ರ ವ್ಯವಹಾರಗಳಿಲ್ಲದೇ ಯಾವದನ್ನೂ ಒಪ್ಪಿಕೊಳ್ಳುವುದು ಬೇಡ.

ಮೀನ ರಾಶಿ:

ಆಪ್ತರನ್ನು ದೂರ ಮಾಡಿಕೊಳ್ಳುವಿರಿ. ನೌಕರರಿಗೆ ನೀವು ಕೊಡುವ ವ್ಯವಸ್ಥೆಯಿಂದ ಸಂತೋಷವಾಗಲಿದೆ. ಸೋತರೂ ಗೆದ್ದವರ ಜೊತೆ ನಿಮ್ಮ ಪ್ರತಿಷ್ಠೆಯನ್ನು ತೋರಿಸುವಿರಿ. ಪ್ರಯತ್ನವೇ ಇಲ್ಲದೇ ಫಲವನ್ನು ಬಯಸುವುದು ಸರಿಯಲ್ಲ. ಹಣದ ವಿಚಾರದಲ್ಲಿ ನಿಮಗೆ ಇಂದು ಲೋಭವು ಇರದು. ನೀವು ಇಂದು ಯಾರ ಮಾತನ್ನೂ ನಂಬುವ ಮನಃಸ್ಥಿತಿಯಲ್ಲಿ ಇಲ್ಲ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುವರು.

ಜನವರಿ 29,​​ 2026ರ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಮೃಗಶಿರಾ, ಯೋಗ : ಬ್ರಹ್ಮ, ಕರಣ : ಭದ್ರ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 21 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 14:04 – 15:29, ಯಮಗಂಡ ಕಾಲ 06:54- 08:20, ಗುಳಿಕ ಕಾಲ 09:46 – 11:12

-ಲೋಹಿತ ಹೆಬ್ಬಾರ್ – 8762924271 (what’s app only)