AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ನೀವು ಸರ್ಕಾರದಿಂದ ಗೌರವಿಸಲ್ಪಡುವ ಸಾಧ್ಯತೆಯಿದೆ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಶ್ರಾವಣ ಮಾಸ ಶುಕ್ಲ ಪಕ್ಷದ ಪಂಚಮೀ ತಿಥಿ ಮಂಗಳವಾರ ಸಹಭಾಗಿತ್ವ, ನಿರಾಕರಣ, ವಿವಾಹದ ಚಿಂತೆ, ಬಾರದ ಹಣದ ಚಿಂತೆ ಇದೆಲ್ಲ ಇಂದಿನ ಭವಿಷ್ಯ. ಇಂದು ಯಾವ ರಾಶಿಗಳ ಜನರ ಭವಿಷ್ಯ ಹೇಗಿರಲಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

ಇಂದು ನೀವು ಸರ್ಕಾರದಿಂದ ಗೌರವಿಸಲ್ಪಡುವ ಸಾಧ್ಯತೆಯಿದೆ
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Jul 29, 2025 | 1:00 AM

Share

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು: ವರ್ಷ, ಚಾಂದ್ರ ಮಾಸ: ಶ್ರಾವಣ, ಸೌರ ಮಾಸ: ಕರ್ಕಾಟಕ, ಮಹಾನಕ್ಷತ್ರ: ಪುಷ್ಯಾ, ವಾರ: ಮಂಗಳ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ : ವರಿಯಾನ್, ಕರಣ: ವಣಿಜ, ಸೂರ್ಯೋದಯ – 06 : 16 am, ಸೂರ್ಯಾಸ್ತ – 07 : 01 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ 15:50 – 17:26 ಗುಳಿಕ ಕಾಲ 09:28 – 11:04 ಯಮಗಂಡ ಕಾಲ 12:39 – 14:15

ನಾಗರ ಪಂಚಮೀ, ನಾಗಪಂಚಮೀ ಎಂದು ಕರೆಯುವ ದಿನ ಇಂದು. ಪಂಚಮೀ ತಿಥಿ ಸರ್ಪದ ಆಧಿಪತ್ಯದ್ದು. ಶ್ರಾವಣ ದೈವಿಕ ಮಾಸ. ವರ್ಷ ಋತುವಿನಲ್ಲಿ ಅನಂತ, ವಾಸುಕಿಗಳೇ ಮೊದಲಾದ ಶ್ರೇಷ್ಠ ನಾಗರನ್ನು ಆರಾಧಿಸಿ, ಅವರ ಅನುಗ್ರಹ ಪಡೆಯುವುದು. ರೋಗಿಗಳೂ ಸಂತಾನಾಪೇಕ್ಷಿಗಳೂ ಸರ್ಪಗಳ ಅನುಗ್ರಹ ಪಡೆಯಬಹುದು.

ತುಲಾ ರಾಶಿ: ವೃತ್ತಿಯ ಕೆಲಸಗಳ ತರಬೇತಿಯನ್ನು ಪಡೆಯುವ ಅವಶ್ಯಕತೆ ಇದೆ. ಇಂದು ವ್ಯವಸ್ಥೆಯ ಮುಖ್ಯಸ್ಥರಾದವರಿಗೆ ಮುನ್ನಡೆಸುವುದು ಕಷ್ಟವಾಗುವುದು. ಆಯಾಸದಿಂದ ಯಾವ ಉತ್ಸಾಹವೂ ನಿಮ್ಮಲ್ಲಿ ಇರದು. ನಿರ್ದಯೆಯು ನಿಮ್ಮ ಸ್ವಭಾವವಲ್ಲದಿದ್ದರೂ ಸಂದರ್ಭವು ಅದನ್ನು ಸೃಷ್ಟಿಸುವುದು. ಯಾವುದನ್ನೂ ಒಪ್ಪಿಕೊಳ್ಳುವ ಮನೋಭಾವ ನಿಮ್ಮದಾಗದು. ಸ್ತ್ರೀ ಸಮೂಹದ ಮುಖ್ಯಸ್ಥರಾಗುವಿರಿ. ಅನಗತ್ಯ ಖರ್ಚಿನ ನಡುವೆ ಸದುಪಯೋಗವಾಯಿತು ಎಂಬ ಸಂತೋಷವು ಇರಲಿದೆ. ನಂಬಿಕೊಂಡವರೂ ನಿಮ್ಮ ಕೈ ಬಿಡಬಹುದು. ದ್ವಂದ್ವನೀತಿಯನ್ನು ನೀವು ಬಿಡುವುದಿಲ್ಲ. ಇಂದು ನೀವು ಕೆಲವು ಅನಗತ್ಯ ಖರ್ಚುಗಳನ್ನು ಸಹ ಅನುಭವಿಸಬಹುದು. ನೀವು ಕೊಟ್ಟ ಕೆಲಸವನ್ನು ಕಳಪೆಯಾಗಿ ಮಾಡುವರು. ದುಂದುವೆಚ್ಚ ಮಾಡುವ ಸಾಧ್ಯತೆಯೂ ಇದೆ. ಆಪ್ತರು ನಿಮಗೆ ಪ್ರೀತಿಯಿಂದ ಆತಿಥ್ಯವನ್ನು ಕೊಡಿಸುವರು. ಅನಾರೋಗ್ಯವು ತುರ್ತು ಚಿಕಿತ್ಸೆ ಮಾಡುವತನಕ ಕರೆದುಕೊಂಡು ಹೋಗುವುದು. ಭೂಮಿಯ ವಿಚಾರದಲ್ಲಿ ನಷ್ಟವಾಗಿ ತೊಂದರೆ ಪಡುವಿರಿ.

ವೃಶ್ಚಿಕ ರಾಶಿ: ನೀವು ಸ್ಪಷ್ಟವಾಗಿದ್ದರೆ ಧೈರ್ಯ ತಾನಾಗಿಯೇ ಬರುತ್ತದೆ. ಯಾರಿಗೋ ಕೊಡಬೇಕಾದ ಹಣವು ಅನಿರೀಕ್ಷಿತವಾಗಿ ನಿಮ್ಮ ಕೈ ಸೇರುವುದು. ಇದನ್ನು ತುರ್ತು ಕಾರ್ಯಕ್ಕೆ ಬಳಸಿಕೊಳ್ಳುವಿರಿ. ಅನುಭವಿಗಳ ಜೊತೆಗಿನ ಒಡನಾಟದದಿಂದ ಉದ್ಯಮವು ಹೆಚ್ಚಾಗುವುದು. ಭೂ ವಿವಾದವು ನಿಮಗೆ ಬೇಸರ ತರಿಸಬಹುದು. ವಿನಿಮಯ ಯಾವಾಗಲೂ ಸರಿಯಾಗಿ ಇರಲಿ. ನಿಮಗೆ ಪೋಷಕರ ಬೆಂಬಲವು ಪರೋಕ್ಷವಾಗಿ ಸಿಕ್ಕರೂ ಪ್ರತ್ಯಕ್ಷ ಬೆಂಬಲವನ್ನು ನೀವು ನಿರೀಕ್ಷಿಸುವಿರಿ. ಅಶಿಸ್ತಿನ ನಿಮ್ಮ ವರ್ತನೆಯು ಸಂಗಾತಿಗೆ ಕಿರಿಕಿರಿಯನ್ನು ಉಂಟುಮಾಡೀತು. ಅನಪೇಕ್ಷಿತ ಮಾತುಗಳನ್ನು ಕಡಿಮೆ ಮಾಡುವುದು ಉತ್ತಮ. ನಿಮ್ಮ ಕೆಲಸಗಳೇ ಆಗದಿರುವಾಗ ಇನ್ನೊಬ್ಬರ ಕೆಲಸವನ್ನೂ ಮಾಡಿಕೊಡಬೇಕಾದೀತು. ಅನಧಿಕೃತ ಹಣವು ನಿಮ್ಮ ಖಾತೆಗ ಜಮಾ ಆಗಬಹುದು. ಮನೆಗೆ ಬೇಕಾದ ಹಲವಾರು ವಸ್ತುಗಳನ್ನು ಖರೀದಿಸುವಿರಿ. ವಿದ್ಯಾಭ್ಯಾಸದ ಕಾರಣಕ್ಕೆ ಮನೆಯನ್ನು ಬಿಡುವುದು ನಿಮಗೆ ಕಷ್ಟವಾದೀತು. ಸಾಲ ಕೊಟ್ಟ ಹಣವು ನಿಮಗೆ ಮರಳಿ ಬರುವುದು.

ಧನು ರಾಶಿ: ರಂಗುರಂಗಾಗಿ ಇಂದು ಕಾಣಿಸುವಿರಿ. ಯಾವುದರಲ್ಲಿಯೂ ಸುಖ ಕಾಣುವ ಮನಸ್ಸು ಆಗದು. ನಕಾರಾತ್ಮಕತೆ ನಿಮ್ಮ ಸಂತೋಷವನ್ನು ಹಾಳುಮಾಡುವುದು. ಇಂದು ನೀವು ಮಕ್ಕಳ ವಿಚಾರವಾಗಿ ಮಾಡಿದ ಶ್ರಮವು ಇಂದು ಫಲಿಸುವುದು. ಮಕ್ಕಳಿಂದ ನಿಮಗೆ ಅವಶ್ಯಕವಾದ ಸಹಕಾರವು ದೊರೆಯುವುದು. ಸಂಗಾತಿಯ ಬಗ್ಗೆ ಹೇಳಲು ಮುಜಗರ. ಪ್ರೇಮವೂ ನಿಮಗೆ ನೆಮ್ಮದಿಯನ್ನು ಹಾಳುಮಾಡುವುದು. ಮನೆಯಲ್ಲಿ ನಿಮ್ಮ ವಿವಾಹಕ್ಕೆ ಬೇಕಾದ ತಯಾರಿಯನ್ನು ಮಾಡುತ್ತಿರುವರು. ಬಂಧುಗಳೂ ನಿಮ್ಮನ್ನು ಪ್ರಶಂಸೆ ಮಾಡುವರು‌. ಊರಿನಲ್ಲಿ ನಿಮಗೆ ಹೆಚ್ಚು ಗೌರವ ಸಿಗಲಿದೆ. ನಿಮ್ಮ ಅಪೂರ್ಣ ಕೆಲಸವು ಇಂದು ಪೂರ್ಣಗೊಳ್ಳುತ್ತದೆ. ನಿಮ್ಮ ವಿಮರ್ಶೆ ಬಹಳಷ್ಟು ಸರಿಯಾಗಿಯೇ ಇರಲಿದೆ. ಹಿತಶತ್ರುಗಳಿಂದ ನೀವು ದೂರವಿರುವುದು ಅವಶ್ಯಕ. ಕೆಲಸದ ನಿಮಿತ್ತ ಪ್ರಯಾಣ ಮಾಡಬೇಕಾಗುವುದು. ನಿಮ್ಮ ಪ್ರಯಾಣದಿಂದ ಇಂದು ತುಂಬಾ ಪ್ರಯೋಜನ ಆಗದು. ಬಾಂಧವರ ಜೊತೆ ಸ್ನೇಹದಿಂದ ಇರುವಿರಿ. ಬೇಡ ಕೆಲಸಕ್ಕೆ ಸಾಲವನ್ನು ಮಾಡಬೇಕಾಗುವುದು.

ಮಕರ ರಾಶಿ: ನಿಮಗೆ ಎಸೆದ ಸವಾಲಿಗರಲ್ಲ ಪ್ರತ್ಯುತ್ತರ ಕೊಡುತ್ತ ಹೋದರೆ ಅಂತ್ಯವಿಲ್ಲದ್ದಾಗುತ್ತದೆ. ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳಿ. ಭೂಮಿಯ ಕ್ರಯ ಮತ್ತು ವಿಕ್ರಯದಲ್ಲಿ ನಷ್ಟವನ್ನು ಅನುಭವಿಸಬೇಕಾಗಬಹುದು. ಇಂದು ನೀವು ಮಾಡಿದ ಖರ್ಚು ಸದುಪಯೋಗವಾಗಿದೆ ಎಂದುಕೊಳ್ಳುವುದು ಬೇಡ. ವೃತ್ತಿಯಲ್ಲಿ ಬೆಳೆಯುವ ಕನಸು ದೊಡ್ಡದಾಗುವುದು. ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ಕಷ್ಟ. ನಿಮ್ಮ ಸಾಮಾಜಿಕ ಚಟುವಟಿಕೆಗಳಿಗೆ ಅಡ್ಡಗಾಲು ಹಾಕಬಹುದು. ಸಂಗಾತಿಯನ್ನು ಅತಿಯಾಗಿ ಇಷ್ಟಪಡುವಿರಿ. ಅತಿಯಾದ ಕೆಲಸದ ಕಾರಣ ನಿಮಗಾದ ಮಾನಸಿಕ‌ ಒತ್ತಡಕ್ಕೆ ವಿಶ್ರಾಂತಿ ಅವಶ್ಯಕವಾದೀತು. ಎಲ್ಲ ಜವಾಬ್ದಾರಿಗಳೂ ನಿಮಗೆ ಬೇಕು ಎಂಬ ದುರಾಸೆ ಬೇಡ. ಆರೋಗ್ಯ ಸಮಸ್ಯೆಗಳು ನಿಮ್ಮ ಸರಿಯಿಲ್ಲದ ದಿನಚರಿಯಿಂದ ಬರಲಿದೆ. ಅಮೂಲ್ಯ ವಸ್ತುವಿನ ಬಗ್ಗೆ ನಿಷ್ಕಾಳಜಿ ಸರಿಯಲ್ಲ. ವ್ಯಾಪಾರಸ್ಥರು ಅಧಿಕ ಲಾಭವನ್ನು ಗಳಿಸುವರು. ಸಿಕ್ಕಷ್ಟು ಆಹಾರವನ್ನು ತೃಪ್ತಿಕರವಾಗಿ ಸೇವಿಸಿ.

ಕುಂಭ ರಾಶಿ: ಒತ್ತಡಗಳಿಂದ ಹೊಸ ಪರಿಚಯ, ಅವರಿಂದ ಎಂದೋ ಬಯಸಿದ್ದ ಕೆಲಸವೂ ಆಗಲಿದೆ. ನಿಮಗೆ ಸಿಗಬೇಕಾದ ಸವಲತ್ತುಗಳನ್ನು ಪಡೆದುಕೊಳ್ಳಲು ಸಾಧ್ಯವಾಗದು. ಆಲಸ್ಯವು ನಿಮ್ಮ ಒಳ್ಳೆತನಕ್ಕೆ ಮುಳುವಾಗಬಹುದು. ನಿಮ್ಮ ಗುರಿಯನ್ನು ಯಾರಾದರೂ ತಪ್ಪಿಸಬಹುದು. ಇಂದು ನೀವು ಬಹಳ ಕಾರ್ಯದಲ್ಲಿ ಮಗ್ನರಾಗುವಿರಿ. ಬೇರೆಯವರ ಮಾತನ್ನೊಂದನ್ನೇ ನಂಬಿ ಮೋಸಹೋಗುವಿರಿ. ನಿಮ್ಮ ಪ್ರೀತಿಯು ಹಿತವಾದ ಅನುಭವವನ್ನು ಕೊಡುವುದು. ನಿಮ್ಮ ಹೇಳಿಕೆಗೆ ಸ್ಪಷ್ಟನೆಯನ್ನು ಕೊಡುವಿರಿ. ಕಳೆದುಕೊಂಡ ವಸ್ತುವು ನಿಮಗೆ ಸಿಗಲಿದೆ. ಆಕಸ್ಮಿಕವಾಗಿ ನೀವು ಮೋಜಿನ ಬಲೆಗೆ ಸಿಲುಕಿಕೊಳ್ಳುವ ಸಂಭವವಿದೆ. ನಿಮ್ಮ ಸಂತೋಷವನ್ನು ಕಸಿದುಕೊಳ್ಳುವ ಮಾತುಗಳನ್ನು ನಿಮ್ಮವರು ಆಡಬಹುದು. ಕೇಳಿಸಿಕೊಂಡಿಲ್ಲ ಎಂಬ ಮನೋಭಾವವಿರಲಿ. ಹೂಡಿಕೆಯಲ್ಲಿ ಜಾಗರೂಕತೆ ಇರಲಿ. ಇಂದಿನ ಆದಾಯವು ಮಧ್ಯಮಕ್ಕಿಂತ ಚೆನ್ನಾಗಿ ಇರುವುದು. ಚಂಚಲ ಮನಸ್ಸು ಸಹಜವಾದುದನ್ನು ಗುರುತಿಸಲಾರದು.

ಮೀನ ರಾಶಿ: ಪ್ರಾಮಾಣಿಕತೆಯ ಪ್ರತಿಫಲನ ಮತ್ತೊಂದು ಕಡೆಗೆ ಆಗಬಹುದು. ಇಂದು ನೀವು ಮನೆಯವರಿಗೆ ತೊಂದರೆಯಾಗದಂತೆ ನೀವೇ ಉದ್ಯೋಗದ ಜೊತೆ ಉನ್ನತ ವಿದ್ಯಾಭ್ಯಾಸವನ್ನೂ ಮಾಡಬೇಕಾಗಬಹುದು. ನಿಮಗೆ ಇಂದು ಪರಿಚಿತ ವ್ಯಕ್ತಿಯ ಸಹಾಯದಿಂದ ಸಾಲವನ್ನು ಮಾಡುವಿರಿ. ಇಂದು ನೀವು ಸರ್ಕಾರದಿಂದ ಗೌರವಿಸಲ್ಪಡುವ ಸಾಧ್ಯತೆಯಿದೆ. ಹಣಕ್ಕಾಗಿ ಅಪರಿಚಿತರಿಂದ ಪೀಡೆ ಉಂಟಾಗುವುದು. ಹಳೆಯ ಸ್ನೇಹಿತರು ಬೆಂಬಲಕ್ಕೆ ನಿಲ್ಲುತ್ತಾರೆ ಮತ್ತು ಸ್ನೇಹಿತರು ಸಹ ಹೆಚ್ಚಾಗುತ್ತಾರೆ. ಇಂದು ನಿಮ್ಮ ಹೆಂಡತಿಯಿಂದ ನೀವು ಉತ್ತಮ ಬೆಂಬಲವನ್ನು ಪಡೆಯಬಹುದು. ತಂದೆಯು ನಿಮಗೆ ಏನನ್ನಾದರೂ ಮಾಡಬೇಕು ಎಂಬ ಆಸೆಯನ್ನು ಇಟ್ಟುಕೊಂಡಿರುವರು. ತಾಳ್ಮೆಯಿಂದ ಇಂದಿನ ವ್ಯವಹಾರವನ್ನು ಮಾಡಿ. ಉತ್ತಮ ಸ್ನೇಹಿತರ ಸಮೂಹವೂ ಸಹ ಹೆಚ್ಚಾಗಲಿದೆ. ನಿಮಗೆ ಗೊತ್ತಾಗದಂತೆ ಖರ್ಚು ಅಧಿಕವಾಗುವುದು. ಸ್ತ್ರೀಯರಿಗೆ ಕೆಲವು ಲಾಭಗಳು ಆಗಬಹುದು. ನಿಮ್ಮ ನೇರ ನುಡಿಗಳೇ ಇಂದು ನಿಮಗೆ ತೊಂದರೆ ತರುವುದು. ಇಂದು ನಿಮ್ಮ ತಲೆಯಲ್ಲಿ ಅಪೂರ್ಣ ಕಾರ್ಯಗಳೇ ತುಂಬಿರುವುದು.

ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್