AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾವಿದರು ಉತ್ತಮ‌ ಅವಕಾಶವನ್ನು ಅನಿರೀಕ್ಷಿತವಾಗಿ ಪಡೆಯುವಿರಿ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಶ್ರಾವಣ ಮಸ ಶುಕ್ಲ ಪಕ್ಷದ ಸಪ್ತಮೀ ತಿಥಿ ಗುರುವಾರ ವೈದ್ಯರಲ್ಲಿ ಚುರುಕು ತನ, ಆರ್ಥಿಕ ಅಸಮತೋಲನ, ಸಹಾಸದಿಂದ‌ ಗಾಯ, ಅತಿಯಾದ ಆಡಂಬರ‌ ಇವೆಲ್ಲ ಈ ದಿನದ ವಿಶೇಷ. ಇಂದು ಯಾವ ರಾಶಿಗಳ ಜನರ ಭವಿಷ್ಯ ಹೇಗಿರಲಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

ಕಲಾವಿದರು ಉತ್ತಮ‌ ಅವಕಾಶವನ್ನು ಅನಿರೀಕ್ಷಿತವಾಗಿ ಪಡೆಯುವಿರಿ
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ|

Updated on: Jul 31, 2025 | 1:01 AM

Share

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು: ವರ್ಷ, ಚಾಂದ್ರ ಮಾಸ: ಶ್ರಾವಣ, ಸೌರ ಮಾಸ: ಕರ್ಕಾಟಕ, ಮಹಾನಕ್ಷತ್ರ: ಪುಷ್ಯಾ, ವಾರ: ಗುರು, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಚಿತ್ರಾ, ಯೋಗ: ಶಿವ, ಕರಣ: ಕೌಲವ, ಸೂರ್ಯೋದಯ – 06 : 17 am, ಸೂರ್ಯಾಸ್ತ – 07 : 01 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ 14:15 -15:50 ಗುಳಿಕ ಕಾಲ 09:28 – 11:04 ಯಮಗಂಡ ಕಾಲ 06:17 – 07:53

ಮೇಷ ರಾಶಿ: ಪರಸ್ಪರ ಒಪ್ಪಿಗೆಯೊಂದಿಗೆ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿ. ಇಂದು ಸಣ್ಣ ಸಮಮಸ್ಯೆಗಳು ಹೆಚ್ಚು. ಸಲಹೆಯನ್ನು ಉಚಿತವಾಗಿ ಕೊಡಲು ಹೋಗಿ ಅಪಮಾನವಾಗಬಹುದು. ಸಿಕ್ಕಿದಷ್ಟನ್ನೇ ಸ್ವೀಕರಿಸಿ ತೃಪ್ತಿಪಡಿ. ಆಪತ್ತಿನಲ್ಲಿ ಸಹಾಯ ಮಾಡಲಿಲ್ಲ ಎಲ್ಲರನ್ನೂ ಶಪಿಸುವ ಅವಶ್ಯಕತೆ ಇಲ್ಲ ವಿದ್ಯಾಭ್ಯಾಸದಿಂದ ಲಾಭವಿದೆ ಎಂದು ಅನ್ನಿಸಿ ಶ್ರಮವಹಿಸುವಿರಿ. ವ್ಯವಹಾರಗಳಲ್ಲಿ ಮಾರುಕಟ್ಟೆ ವಿಸ್ತರಿಸಲು ಬಹಳ ಶ್ರಮಪಡುವಿರಿ. ಪ್ರತಿಭೆಯ ಅನಾವರಣವು ನಿಮ್ಮ ಉತ್ಸಾಹವನ್ನು ಹೆಚ್ಚಿಸುವುದು. ಎಲ್ಲ ವಿಚಾರಗಳಲ್ಲೂ ನಿಮ್ಮದೇ ಅಭಿಪ್ರಾಯ ಹೇಳುವುದಕ್ಕಿಂತ ಇತರರ ಅಭಿಪ್ರಾಯಗಳಿಗೂ ಬೆಲೆ ಕೊಡಿ. ಹೊಸ ನೀರು ಹರಿದು ಬರಬಹುದು. ಸ್ತ್ರೀರೋಗತಜ್ಞರಿಗೆ ಬೇಡಿಕೆ ಹೆಚ್ಚಾಗಿ ಸಂಪಾದನೆ ಅಧಿಕವಾಗಬಹುದು. ಯಾವುದೂ ಮಿತಿ ಮೀರದಂತೆ ನೋಡಿಕೊಳ್ಳಿ. ಕಳೆದ ಸಮಯವನ್ನು ನೀವು ಮೆಲುಕು ಹಾಕಿ ಸಮಯ ವ್ಯರ್ಥವಾಗಬಹುದು. ಕಲಾವಿದರು ಉತ್ತಮ‌ ಅವಕಾಶವನ್ನು ಅನಿರೀಕ್ಷಿತವಾಗಿ ಪಡೆಯುವಿರಿ. ಎಲ್ಲವನ್ನೂ ಆಸ್ವಾದಿಸುವ ಮನೋಭಾವ ಇರಲಿ.

ವೃಷಭ ರಾಶಿ: ಕಾರ್ಯಗಳಲ್ಲಿ ಅದೃಷ್ಟವು ಸಂಪೂರ್ಣವಾಗಿ ಸಹಕರಿಸಬಹುದು. ಮನೆಯ ವಾತಾವರಣವು ಆಹ್ಲಾದಕರವಾಗಿರುತ್ತದೆ. ದೈಹಿಕ ಮತ್ತು ಮಾನಸಿಕ ಆಯಾಸದಿಂದ ಪರಿಹಾರ.ವಸಹೋದರರ ಭಿನ್ನಾಭಿಪ್ರಾಯವನ್ನು ಮೂರನೆಯವರು ಸರಿ ಮಾಡುವರು. ಇಂದಿನ ಕೆಲಸಗಳ ಯೋಜನೆ ಬಗ್ಗೆ ಸರಿಯಾದ ದೃಷ್ಟಿ ಇರಲಿ. ದೂರಪ್ರಯಾಣ ಸುಖಕರವಾಗಿ ಇರುವುದು.‌ ಇಂದು ನಿಮಗೆ ಒಡಹುಟ್ಟಿದವರು ಸಾಕಷ್ಟು ವಿರೋಧವನ್ನು ಮಾಡಿಯಾರು. ಖರ್ಚಿಗೆ ತಕ್ಕಂತೆ ಆದಾಯವೂ ಬರುವುದರಿಂದ ಆರ್ಥಿಕ ಸ್ಥಿತಿಯು ಸಮತೋಲನದಲ್ಲಿ ಇರವುದು. ಕೆಲಸದಿಂದ ಏನನ್ನಾದರೂ ಸಾಧಿಸಲು ಪ್ರಯತ್ನಿಸಿ. ಹಿರಿಯರ ಆರೋಗ್ಯ ಸಮಸ್ಯೆಗಳು ಸರಿಯಾಗಬಹುದು. ನಿಮ್ಮವರನ್ನು ಸತ್ಕಾರ್ಯಕ್ಕೆ ಮನವೊಲಿಸಲು ಶ್ರಮಪಡಬೇಕಾದೀತು. ಸ್ಥಿರಾಸ್ತಿಗೆ ಸಂಬಂಧಿಸಿದ ಸರ್ಕಾರಿ ಕಾನೂನು ತೊಡಕುಗಳು ಇಂದು ನಿವಾರಣೆಯಾಗುವುದು. ಸ್ಪರ್ಧಾತ್ಮಕ ವಿಚಾರದಲ್ಲಿ ಹಿಂದುಳಿಯಬೇಕಾಗುವುದು. ನಿಮ್ಮ ಅಪೂರ್ಣ ಕಾರ್ಯಗಳನ್ನು ಇಂದು ಪೂರ್ಣಮಾಡಿಕೊಳ್ಳುವಿರಿ. ಹೊಸ ಉಪಕ್ರಮಗಳು ನಿಮಗೆ ಯಶಸ್ಸು ಕೊಡುವುದು.

ಮಿಥುನ ರಾಶಿ: ವ್ಯವಹಾರಗಳಲ್ಲಿ ವಿನಮ್ರತೆಯನ್ನ ಕಾಪಾಡಿಕೊಳ್ಳಿ.ದಿನವು ಆರ್ಥಿಕವಾಗಿ ಅತ್ಯುತ್ತಮವಾಗಿರಬಹುದು. ನಿಮ್ಮ ಮೇಲೆ ಹೆಚ್ಚಿನ ಕಣ್ಣು ಇರುವ ಕಾರಣ ಬಹಳ ಜಾಗರೂಕತೆ ಅವಶ್ಯಕ. ಎಲ್ಲ ಕೆಲಸವನ್ನೂ ಬೇರೆಯವರೇ ಮಾಡಲಿ ಎಂಬ ಮಾನಸಿಕ ಸ್ಥಿತಿಯನ್ನು ಬಿಡುವುದು ಒಳ್ಳೆಯದು. ನಿಮಗೆ ಸಾಧ್ಯವಾದ ಕೆಲಸಗಳನ್ನು ಮಾಡಿ. ಭೂಮಿಯ ವ್ಯವಹಾರದವರಿಗೆ ನಂಬಿಕೆ ದ್ರೋಹ ಆಗಬಹುದು. ದಾಂಪತ್ಯದಲ್ಲಿ ಅನ್ಯೋನ್ಯತೆ ಮೂಡುವುದು ಕಷ್ಟವಾದೀತು. ಕೋಪವನ್ನು ನಿಯಂತ್ರಿಸುವುದು ಅವಶ್ಯಕ. ಇಲ್ಲವಾದರೆ ಕೆಟ್ಟ ಹೆಸರನ್ನು ಪಡೆಯಬೇಕಾಗಬಹುದು. ರಾಜಕೀಯ ವ್ಯಕ್ತಿಗಳಿಗೆ ಹುದ್ದೆ ದೊರೆಯುವುದು. ನೀವು ಪ್ರೇಮದಲ್ಲಿ ಬಿದ್ದುದರಿಂದ ಹಿರಿಯರು ನಿಮ್ಮ ಪ್ರೀತಿಗೆ ಒಪ್ಪಿಗೆ ನೀಡುವರು. ವೃತ್ತಿಯಲ್ಲಿ ಬಹಳ ಜಾಣ್ಮೆಯಿಂದ ಕೆಲಸವನ್ನು ಮಾಡುವಿರಿ. ವೈವಾಹಿಕ ಜೀವನದ ಬಗ್ಗೆ ಮಾತನಾಡುತ್ತಾ ಹಳೆಯದನ್ನು ನೆನಪಿಸಿಕೊಳ್ಳುವಿರಿ. ಚಿಂತನೆಯ ಜೊತೆ ನಿಮ್ಮ ಮುಂದಿನ ಹೆಜ್ಜೆ ಇರಲಿ. ಶಿಸ್ತಿಗೆ ಹೆಚ್ಚು ಗಮನವನ್ನು ಇಂದು ಕೊಡುವಿರಿ. ಸಂಗಾತಿಯ ಮನೋರಥವನ್ನು ಇಂದು ನೀವು ಈಡೇರಿಸುವುದು ಕಷ್ಟವಾಗುವುದು.

ಕರ್ಕಾಟಕ ರಾಶಿ: ಸಮಯದಲ್ಲಿ ಬಹಳ ವಿವೇಚನೆಯಿಂದ ಕ್ರಮವನ್ನು ಕಾಪಾಡಿಕೊಳ್ಳುವ ಅವಶ್ಯಕತೆಯಿದೆ. ಕೆಲಸದ ಪ್ರದೇಶದಲ್ಲಿ ಕೆಲಸವು ಶಾಂತಿಯುತವಾಗಿ ಪೂರ್ಣಗೊಳ್ಳುತ್ತದೆ. ಭಿನ್ನಮತವನ್ನು ನೀವು ಇಂದೇ ಉಪಶಮನ ಮಾಡಿಕೊಳ್ಳುವುದು ಉತ್ತಮ. ಭೂಮಿಯ ಉತ್ಪನ್ನದ ವ್ಯವಹಾರವು ಬಹಳ ಚೆನ್ನಾಗಿ ಆಗಬಹುದು. ಸರ್ಕಾರದಿಂದ ಬರಬೇಕಾದ ಹಣವು ಬಂದು ಸಾಲದಿಂದ ನೀವು ಮುಕ್ತವಾಗುವಿರಿ. ಯಾವುದೇ ದುರಭ್ಯಾಸವು ನಿಮಗೆ ಕೆಟ್ಟ ಹೆಸರನ್ನು ತರಬಹುದು. ಸಾಹಸಪ್ರಿಯರಿಗೆ ಹೊಸ ವಿಚಾರಗಳು ಬರಬಹುದು. ಇಂದು ನಿಮ್ಮ ಹಣದ ಒಳಹರಿವು ತೃಪ್ತಿಕರವಾಗಿರುತ್ತದೆ. ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಹೋಗುವ ಅವಕಾಶ ಸಿಗಬಹುದು. ವ್ಯಾಪಾರದಲ್ಲಿ ಚೇತರಿಕೆ ಕಂಡು ಸಂತಸವಾಗುವುದು. ನಿಮ್ಮ ಕಾರ್ಯಕ್ಷಮತೆಯನ್ನು ಸಂಸ್ಥೆಯು ಪ್ರಶಂಸಿಸುವುದು.‌ ಯಾರೋ ಮಾಡಿದ ತಪ್ಪಿಗೆ ನಿಮಗೆ ಶಿಕ್ಷೆಯಾಗಬಹುದು. ಪ್ರೇಮ ಜೀವನದಲ್ಲಿ ಪ್ರೀತಿ ಹೆಚ್ಚಾಗಿ ಉತ್ಸಾಹದಿಂದ ಇರುವಿರಿ. ಯಾರಾದರೂ ತಪ್ಪು ತಿಳಿದಾರು ಎಂಬ ಭಾವವು ನಿಮ್ಮನ್ನು ಕಾಡಬಹುದು. ಪ್ರಾಣಿಗಳ ಮೇಲೆ ಅಪಾರ ದಯೆ ಬರಬಹುದು.

ಸಿಂಹ ರಾಶಿ: ನಿಮ್ಮ ಪ್ರತಿಭೆಯಿಂದ ಕೆಲವು ಹೊಸ ಯಶಸ್ಸು ಮತ್ತು ಹೊಸ ಆದೇಶಗಳನ್ನು ಪಡೆಯಬಹುದು. ಪುಣ್ಯ ಸ್ಥಳಗಳ ದರ್ಶನದಿಂದ ನಿಮಗೆ ಮಾನಸಿಕ ಅಶಾಂತಿ ದೂರಾಗುವುದು. ಸ್ನೇಹಿತರಿಗೆ ಮಾಡಿದ ಸಹಾಯದಿಂದ ನಿಮಗೆ ಅನುಕೂಲವಗಲಿದೆ. ಉನ್ನತ ಅಧಿಕಾರಿಗಳಿಗೆ ಮುಂಬಡ್ತಿ ದೊರೆಯುವ ಸಾಧ್ಯತೆ ಇದೆ. ವಾಹನ ಚಾಲನೆ ವೇಳೆ ಅವಸರ ಬೇಡ. ಖರ್ಚನ್ನು ನಿಭಾಯಿಸುವುದು ನಿಮಗೆ ಬಹಳ ಕಷ್ಟವಾದೀತು. ನಿಮ್ಮ ಉಪಕಾರವೇ ನಿಮಗೆ ಹಿಂದಿರುಗಿ ಬರಲಿದೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಹೆಚ್ಚು ಶ್ರದ್ಧೆಯು ಬರಬಹುದು. ನಿಮ್ಮನ್ನು ಕಛೇರಿಯಲ್ಲಿ ಗಮನಿಸಬಹುದು. ಹಾಗಾಗಿ ಸಣ್ಣ ನಡೆಯೂ ದೊಡ್ಡ ಸುದ್ದಿಗೆ ಕಾರಣವಾಗಬಹುದು. ಏಕಾಂತವು ನಿಮಗೆ ಹಿತವೆನಿಸಬಹುದು. ಯಾರಾದರೂ ನಿಮ್ಮನ್ನು ತೆಗಳಿದರೆ ಅದನ್ನು ನೀವು ಸಕಾರಾತ್ಮಕವಾಗಿ ಸ್ವೀಕರಿಸಿ. ಬಂಧುಗಳ ಚರಾಸ್ತಿಯು ಸಿಗಬಹುದು. ಸಂಗಾತಿಯ ಮಾತನ್ನು ನಿರ್ಲಕ್ಷಿಸಿದ ಕಾರಣ ಸಿಟ್ಟಾಗಬಹುದು. ಆದಾಯದ ಮೂಲಗಳು ಹೆಚ್ಚಾಗುವುದು.‌ ನಂಬಿದವರಿಗೆ ಬೇಕಾದ ವ್ಯವಸ್ಥೆ ಮಾಡುವಿರಿ.

ಕನ್ಯಾ ರಾಶಿ: ವೃತ್ತಿಜೀವನದಲ್ಲಿ ಯಾವುದೇ ಶುಭ ಮಾಹಿತಿಯನ್ನು ಪಡೆಯಲಾಗದು. ಮನೆಯ ಹಿರಿಯ ಸದಸ್ಯರೊಂದಿಗೆ ಸಮಯ ಕಳೆಯಿರಿ. ಇಂದು ಮಹಿಳೆಯರಿಗೆ ವೃತ್ತಿಯಲ್ಲಿ ಕಿರಿಕಿರಿ ಉಂಟಾಗಲಿದೆ. ಇಂದಿನ ನಿಮ್ಮ ಕೋಪವನ್ನು ಶಾಂತ ಮಾಡಲು ಸಂಗಾತಿಯು ಶ್ರಮಪಡಬಹುದು. ನಿಮ್ಮ ಮನಸ್ಸು ಅತಿ ಚಾಂಚಲ್ಯದಿಂದ ಇರಲಿದ್ದು, ಕೆಲಸವು ಹಾಳಾಗಬಹುದು. ಮಹಿಳೆಯರು ಸಕಾರಾತ್ಮಕ ಚಿಂತನೆಯತ್ತ ಗಮನಕೊಡುವುದು ಉತ್ತಮ. ಆದಾಯವು ನಿರೀಕ್ಷಿತ ಮಟ್ಟದಲ್ಲಿದ್ದು ಖರ್ಚು ಇನ್ನೂ ಅಧಿಕವಾಗಬಹುದು. ವಾಹನ ಖರೀದಿಯ ಬಗ್ಗೆ ನಿಮಗೆ ಪೂರ್ಣ ತೃಪ್ತಿ ಇರದು. ಕೃಷಿ ಸಂಬಂಧಿಸಿದ ವ್ಯವಹಾರಗಳಲ್ಲಿ ಸ್ವಲ್ಪಮಟ್ಟಿನ ಹಿನ್ನಡೆಯಾಗಬಹುದು. ಸರ್ಕಾರಿ ಉದ್ಯೋಗಿಗಳಿಗೆ ಹೆಚ್ಚಿನ ಹುದ್ದೆಯನ್ನು ನೀಡುವ ಪ್ರಸ್ತಾಪವೂ ಬರಬಹುದು. ಅತಿಯಾದ ಆಡಂಬರವು ಇತರ ಕಣ್ಣು ಕುಕ್ಕುವುದು. ಇನ್ನೊಬ್ಬರ ಅಹಂಕಾರಕ್ಕೆ ಸೊಪ್ಪು ಹಾಕುವುದು ಬೇಡ. ನಿರ್ಲಕ್ಷ್ಯದಿಂದ ಎಲ್ಲವೂ ಸಾಧ್ಯ. ಹೂಡಿಕೆಯ ವಿಚಾರವಾಗಿ ದೀರ್ಘ ಚರ್ಚೆ ಮಾಡುವಿರಿ.

-ಲೋಹಿತ ಹೆಬ್ಬಾರ್-8762924271 (what’s app only)

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ