AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಕೆಲಸಗಳು ನಿಧಾನಗತಿಯಲ್ಲಿ ಆಗುವುದು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಜ್ಯೇಷ್ಠ ಮಾಸ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿ ಬುಧವಾರ ನಯವಂಚಕತೆ, ಸಂಗಾತಿಯ ಭಿನ್ನಮತ, ಉದ್ಯಮದ ವಿಸ್ತಾರ, ಪರಸ್ಪರ ನಿಂದನೆ ಇವೆಲ್ಲ ಈ ದಿನದ ವಿಶೇಷ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲಾಫಲ ಎನ್ನುವುದನ್ನು ತಿಳಿದುಕೊಳ್ಳಿ.

ಸರ್ಕಾರಿ ಕೆಲಸಗಳು ನಿಧಾನಗತಿಯಲ್ಲಿ ಆಗುವುದು
ಜ್ಯೋತಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Jun 25, 2025 | 1:03 AM

Share

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಮೃಗಶಿರಾ, ಯೋಗ : ಆಯುಷ್ಮಾನ್, ಕರಣ: ಶಕುನಿ, ಸೂರ್ಯೋದಯ – 06 : 07 am, ಸೂರ್ಯಾಸ್ತ – 07 : 03 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ12:35 – 14:12, ಯಮಘಂಡ ಕಾಲ 07:44 – 09:21, ಗುಳಿಕ ಕಾಲ 10:58 – 12:35

ತುಲಾ ರಾಶಿ: ಹೊಸ ಉದ್ಯಮದ ಜೊತೆ ಹೊಸ ಅಧಿಕಾರ ನಿಮ್ಮ ಉತ್ಸಾಹವನ್ನು ಹೆಚ್ಚಿಸುವುದು. ನಿಮ್ಮ ನಡೆ ಹಾಗು ನುಡಿಗಳು ಕೆಲವರಿಗೆ ವಿರೋಧದಂತೆ ಭಾಸವಾಗಬಹುದು. ಮನಸ್ಸು ಶಕ್ತಿಯನ್ನು ಕಳೆದುಕೊಳ್ಳಬಹುದು. ಪರಿಹಾರದ ದಾರಿಗಳು ಆ ಕ್ಷಣದಲ್ಲಿ ಸ್ಫುರಿಸುವುದು. ವ್ಯಾಪಾರಿಗಳಿಗೆ ನಷ್ಟವಾಗುವ ಸಂಭವವಿದ್ದು, ಅದರ ಸುಧಾರಣೆಗೆ ಹೆಚ್ಚುವರಿ ಹಣ ಖರ್ಚಾಗುತ್ತದೆ. ಸಂಗಾತಿಯೊಂದಿಗೆ ಸರಿಯಾದ ಸಂಭಾಷಣೆ ಮತ್ತು ಸಹಕಾರದಿಂದ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ, ಸಂತೋಷದ ಕ್ಷಣಗಳು ನಿಮ್ಮ ದಿನವನ್ನು ಅಲಂಕರಿಸಬಹುದು. ಸಾಲ ಮಾಡಿಯಾದರೂ ಏನನ್ನಾದರೂ ಸಾಧಿಸಬೇಕು ಎಂಬ ಆತುರವಿರುವುದು. ದುಷ್ಕೃತ್ಯಕ್ಕೆ ಹಣದ ಸಹಾಯವನ್ನು ಮಾಡಿದರೆ ನಿಮಗೆ ಮುಂಬರುವ ದಿನಗಳ ತೊಂದರೆಗಳು ಬರಬಹುದು. ಉದ್ಯೋಗದಲ್ಲಿ ಒತ್ತಡವನ್ನು ನಿವಾರಿಸಿಕೊಳ್ಳಲು ಯಾರದ್ದಾದರೂ ಸಹಾಯವನ್ನು ಪಡೆಯುವಿರಿ. ದೂರದ ಊರಿಗೆ ಹೋಗಬೇಕಾಗುವುದು. ನಿಮಗೆ ಸಿಗಬೇಕಾದ ಗೌರವವು ಗೊಂದಲದಲ್ಲಿ ಇದ್ದು ಕೊನೆಗೂ ನಿಮಗೇ ಸಿಗಲಿದೆ. ತಾಳ್ಮೆಯನ್ನು ಕಳೆದುಕೊಳ್ಳದೇ ಎಲ್ಲರ ಜೊತೆ ವ್ಯವಹರಿಸಿ.

ವೃಶ್ಚಿಕ ರಾಶಿ: ಆಯುಧ ಭೀತಿಯು ಇರಲಿದೆ. ಮಕ್ಕಳ ಪ್ರೀತಿಯಲ್ಲಿ ನೀವು ಕಳೆದುಹೋಗುವಿರಿ. ಕ್ರೀಡೆಯಲ್ಲಿ ಹೆಚ್ಚು ಮನಸ್ಸುಳ್ಳವರಾಗುವಿರಿ. ಸರ್ಕಾರಿ ಕೆಲಸಗಳು ನಿಧಾನಗತಿಯಲ್ಲಿ ಆಗುವುದು. ಆಸ್ತಿಯ ವಿಚಾರದಲ್ಲಿ ಕಾನೂನಿನ ತೊಂದರೆಗಳು ಇದ್ದು ಅದನ್ನು ಸರಿಪಡಿಸಿಕೊಳ್ಳಲು ಓಡಾಟಗಳಾಗಬಹುದು. ಬೇಸರದಿಂದ ಏಕಾಂತವಾಗಬೇಕಾಗುವುದು. ಆರ್ಥಿಕವಾಗಿ ಸುಧಾರಣೆ ಕಾಣುವ ದಿನವಾಗಿದ್ದು, ನೀಡಿದ ಸಾಲವನ್ನು ಮರಳಿ ಪಡೆಯುವ ಅವಕಾಶವಿದೆ. ಸಂಗಾತಿಯೊಂದಿಗೆ ಸಂತೋಷದ ಕ್ಷಣಗಳಿರಬಹುದು, ಆದರೆ ಅವರ ಅನಗತ್ಯ ಬೇಡಿಕೆಗಳಿಗೆ ಒಪ್ಪಿಕೊಳ್ಳಬೇಡಿ. ದಿನದ ಯೋಜನೆಗಳು ಒಳ್ಳೆಯದಾಗುವುದು. ಸಂಪೂರ್ಣವಾಗಿ ತಿಳಿದುಕೊಂಡು ಒಪ್ಪಿಕೊಳ್ಳಿ. ಭಾರವಾದ ವಸ್ತುಗಳನ್ನು ಎತ್ತಲು ಹೋಗುವುದು ಬೇಡ. ಓದಿನಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಉನ್ನತ ವ್ಯಾಸಂಗಕ್ಕೆ ತೆರಳುವ ಮನಸ್ಸು ಮಾಡುವಿರಿ. ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಹೆಚ್ಚು ಆಸಕ್ತಿ ಮೂಡಲಿದೆ. ಸಂಗಾತಿಗೆ ಉಡುಗೊರೆಯನ್ನು ಕೊಟ್ಟು ಸಂತೋಷಗೊಳಿಸುವಿರಿ.

ಧನು ರಾಶಿ: ನಿಮ್ಮ ಗಳಿಕೆ ಸಾಲವೆಂದೆನಿಸುವುದು. ಇಂದು ಕಛೇರಿಯಲ್ಲಾಗಲಿ ನಿಮ್ಮ ಮಾತನ್ನು ಬೆಂಬಲಿಸತ್ತಾರೆ. ಅನಿರೀಕ್ಷಿತ ಸಂಪತ್ತು ಸಿಗುವ ಸಾಧ್ಯತೆ ಇದೆ. ಇಂದು ಬಂದ ಅತಿಥಿಯ ಜೊತೆ ಹರಟೆಯನ್ನು ಹೊಡೆಯುತ್ತೀರಿ. ಖರ್ಚು ನಿಮ್ಮ ಹಣಕಾಸು ಸ್ಥಿತಿಯನ್ನು ಹದಗೆಡಿಸಬಹುದು. ಕೆಲಸದ ಹಣವನ್ನು ಪಡೆಯಲು ಬಾಕಿ ಇರುವುದು. ವ್ಯಾಸಂಗವನ್ನು ನಿರ್ಲಕ್ಷಿಸುವುದು ಪೋಷಕರ ಅಸಮಾಧಾನಕ್ಕೆ ಕಾರಣವಾಗುತ್ತದೆ, ಆದ್ದರಿಂದ ಸಮತೋಲನ ಅವಶ್ಯಕ. ಇಂದು ಉಚಿತ ಸಮಯ ಸಿಗುವ ಸಾಧ್ಯತೆ ಇದೆ. ಸ್ತ್ರೀಯರ ಜೊತೆಗಿನ ಸಂಬಂಧ ಹಾಳಾಗುವುದು. ಮನೆಯಲ್ಲಿ ನಡೆದ ಕಲಹದಿಂದ ಕಛೇರಿಯಲ್ಲಿ ಕೆಲಸ ಮಾಡಲು ಅಸಾಧ್ಯವಾದೀತು. ಆದಾಯವು ನಿಮ್ಮ ನಿರೀಕ್ಷೆಯನ್ನು ತಲುಪಬಹುದು. ಬಂಧುಗಳು ತಾವು ಮಾಡಿದ ತಪ್ಪನ್ನು ನಿಮ್ಮ ಮೇಲೆ ಹಾಕಲು ಯತ್ನಿಸುವರು. ಕೆಲಸವಿಲ್ಲದೇ ಮನೆಯಲ್ಲಿ ಕುಳಿತಿರುವುದು ಹಿಂಸೆಯಾದೀತು. ಆತುರಾತುರದಿಂದ ನೀವು ಮಾಡುವ ನಿರ್ಧಾರಗಳು ಮುಜುಗರ ಉಂಟುಮಾಡಲಿದೆ. ನಿಮಗೆ ಪ್ರಶಂಸೆಯು ಬಲವನ್ನು ಕೊಡುವುದು.

ಮಕರ ರಾಶಿ: ಕುಟುಂಬದ ವ್ಯವಹಾರವು ಬಯಲಾಗಲಿದೆ.‌ ಇಂದು ನಿಮಗೆ ಸೇವೆಯಲ್ಲಿ ಸಂತೋಷ ಸಿಗಲಿದೆ. ನೀವು ತೊಂದರೆಗೆ ಸಿಲುಕದಂತೆ ದಾಟಲು ನಿಮಗೆ ಯಾರಿಂದಲಾದರೂ ಸೂಚನೆ ಬರಬಹುದು. ಸಹೋದರ ಒಡನಾಟ ದೂರವಾಗುವುದು. ಸಂಗಾತಿಯ ಮಾತುಗಳನ್ನು ಕೇಳಿ ನೀವು ತಾಳ್ಮೆಯಿಂದ ಇದ್ದರೆ ನಿಜವಾಗಿಯೂ ದೊಡ್ಡವರೇ. ಮಾತನಾಡುವಾಗ ಪದಗಳನ್ನು ಸರಿಯಾಗಿ ಬಳಸುವುದು ಉತ್ತಮ. ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳನ್ನು ಕೊಡಿ. ಬರಬೇಕಾದ ಹಣವು ಮಧ್ಯವರ್ತಿಗಳ ಕೈಯ್ಯಲ್ಲಿರುತ್ತದೆ. ಕೆಲವನ್ನು ಕೇಳಿ ಪಡೆಯಬೇಕಾಗುವುದು. ಕುಟುಂಬದಲ್ಲಿ ಖುಷಿಯ ವಾತಾವರಣ ಇರಲಿದೆ. ಮಕ್ಕಳು ನಿಮ್ಮನ್ನು ವಿಧವಿಧವಾಗಿ ಪ್ರಶ್ನಿಸಬಹುದು. ಉನ್ನತ ಶಿಕ್ಷಣವನ್ನು ಪಡೆಯಲು ನೀವು ಸಫಲರಾಗಬಹುದು. ಉದ್ಯೋಗದಲ್ಲಿ ನಿಮ್ಮ ಕಣ್ತಪ್ಪಿನಿಂದ ಆದ ತಪ್ಪಿಗೆ ನೀವೇ ಜವಾಬ್ದಾರಿ ಆಗಿರುವಿರಿ.

ಕುಂಭ ರಾಶಿ: ಶತ್ರುಗಳಿಂದ ನಿಮ್ಮ ಚಟುವಟಿಕೆಗಳ ವೀಕ್ಷಣೆ ನಡೆಯಲಿದೆ. ಆತುರದಲ್ಲಿ ಏನಾದರೂ ನಿರ್ಧಾರವನ್ನು ತೆಗದುಕೊಳ್ಳಬೇಡಿ. ಪ್ರತ್ಯಕ್ಷವಾಗಿ ಕಂಡಿದ್ದು ಮಾತ್ರ ಸತ್ಯವಲ್ಲವೆಂಬುದನ್ನು ನೀವು ಅರಿತುಕೊಳ್ಳಬೇಕು. ಕುಟುಂಬದ ಬೆಂಬಲದಿಂದ ಉತ್ತಮ ಫಲಿತಾಂಶ ಸಿಗುತ್ತವೆ. ತಂದೆಯ ಸಲಹೆಯಿಂದ ಹಣದ ಲಾಭವನ್ನು ಸಾಧಿಸಬಹುದು. ಪ್ರೀತಿಯ ಕಥೆಯಲ್ಲಿ ಹೊಸ ತಿರುವು ಹಾಗೂ ಸಂಗಾತಿಯೊಂದಿಗೆ ಮದುವೆಯ ಕುರಿತು ಚರ್ಚೆ ನಡೆಯುತ್ತದೆ. ಆದ್ದರಿಂದ ಯಾವುದೇ ನಿರ್ಧಾರವನ್ನು ತಾಳ್ಮೆಯಿಂದಿರಿ. ಹತ್ತಿರದ ವ್ಯಕ್ತಿಗಳು ಕಾರಣಾಂತರಗಳಿಂದ ದೂರಾಗಬಹುದು. ಸ್ವಂತ ವ್ಯವಹಾರಗಳಿಗೆ ಮಧ್ಯವರ್ತಿಗಳನ್ನು ಬಳಸಿಕೊಳ್ಳಬೇಡಿ. ನಿಮ್ಮ ಮೇಲಿನ ನಂಬಿಕೆಯಿಂದ ಸುಳ್ಳನ್ನೂ ನಂಬುವ ಸಾಧ್ಯತೆ ಇದೆ. ಒತ್ತಡವುಂಟು ಮಾಡುವ ಕೆಲಸಗಳನ್ನು ಕೈಬಿಡಿ. ಸಮಯ ಸಂದರ್ಭಗಳನ್ನು ನೋಡಿಕೊಂಡು ಮಾತನಾಡಿ. ಅಪಹಾಸ್ಯಕ್ಕೆ ಸಿಕ್ಕಿಕೊಳ್ಳುವ ಸಾಧ್ಯತೆಬಿದೆ. ನಿಮಗೆ ಸಿಗುವ ಸೂಚನೆಗಳನ್ನು ಗಮನಿಸಿಕೊಂಡು ವ್ಯವಹಾರಾದಿಗಳನ್ನು ಮಾಡಿ. ಸ್ನೇಹವು ಬೇರೆಯಾಗಲಿದೆ.

ಮೀನ ರಾಶಿ: ಉದ್ಯೋಗದ ಸ್ಥಾನ ಬದಲಾವಣೆಯಿಂದ ಮಾನಸಿಕ ನೆಮ್ಮದಿ. ಇಂದು ಧಾರ್ಮಿಕ ಕಾರ್ಯಗಳಿಂದ ನಿಮ್ಮ ಹಣದ‌ ಸಂಪಾದನೆಯಾಗಲಿದೆ. ಇದು ನಿಮ್ಮ ಮನಸ್ಸಿಗೆ ಶಾಂತಿಯನ್ನೂ ನೆಮ್ಮದಿಯನ್ನೂ ನೀಡುತ್ತದೆ. ಹಾಸ್ಯದಿಂದ ಇನ್ನೊಬ್ಬರಿಗೆ ನೋವಾಂಟಾಗಬಹುದು. ದ್ವೇಷವನ್ನು ದೂರ ಮಾಡಿಕೊಳ್ಳಲಾಗದು. ಆರ್ಥಿಕ ಬಿಕ್ಕಟ್ಟಿನಿಂದ ಹೊರಬರುವ ಅವಕಾಶವಿದೆ. ಪೋಷಕರ ಸಲಹೆಗಳು ನಿಮ್ಮ ನಿರ್ಧಾರವನ್ನು ಬದಲಿಸುತ್ತಸದೆ. ಸಂಬಂಧಗಳಲ್ಲಿ ಅನುಮಾನಗಳನ್ನು ತೊಡೆದುಹಾಕಿ, ಮನಸ್ಸಿನ ವಿಷಯಗಳನ್ನು ಸ್ಪಷ್ಟವಾಗಿ ಚರ್ಚಿಸುವುದು ಉತ್ತಮ. ಸಂಬಂಧದಲ್ಲಿ ವ್ಯವಹಾರವನ್ನು ಬಹಳ ಜಾಗರೂಕತೆಯಿಂದ ಮಾಡಬೇಕಿದೆ. ಸಿಟ್ಟನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವಿರಿ. ಆಪ್ತರ ನಡುವಿನ ಸಂಬಂಧವು ಹಾಳಾಗಲಿದೆ. ಸಂಗಾತಿಯ ಆದಾಯವು ಹೆಚ್ಚಾಗಲಿದೆ. ಸರ್ಕಾರಿ ಕೆಲಸದಲ್ಲಿರುವವರಿಗೆ ಹೆಚ್ಚಿನ ಸ್ಥಾನ ಸಿಗುವ ಸಾಧ್ಯತೆ ಇದೆ. ಸಂಗಾತಿಯ ಜೊತೆ ಪ್ರಯಾಣ ಮಾಡಲಿರುವಿರಿ. ವಸ್ತುಗಳು ಕಾಣೆಯಾಗಬಹುದು. ಎಲ್ಲವನ್ನೂ ನಿಮ್ಮ ಮೇಲೆ‌ ಹೇರಬಹುದು. ನಿಮ್ಮ ಪ್ರಾಮಾಣಿಕತೆಯ ಮಾರ್ಗವನ್ನು ಬಿಡುವುದು ಬೇಡ.

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ