Horoscope for 5th June 2024: ಬುಧವಾರದ ದಿನಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ? ತಿಳಿದುಕೊಳ್ಳಿ

| Updated By: ರಮೇಶ್ ಬಿ. ಜವಳಗೇರಾ

Updated on: Jun 04, 2024 | 8:26 PM

2024 ಜೂನ್ 05ರ ದಿನ ಭವಿಷ್ಯ: ಬುಧವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ರಾಶಿ ಭವಿಷ್ಯ ಹೇಗಿರಲಿದೆ? ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.

Horoscope for 5th June 2024: ಬುಧವಾರದ ದಿನಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ? ತಿಳಿದುಕೊಳ್ಳಿ
ದಿನಭವಿಷ್ಯ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಬುಧವಾರ (ಜೂನ್ 05) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಭರಣೀ, ಯೋಗ: ಅತಿಗಂಡ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 58 ನಿಮಿಷಕ್ಕೆ, ರಾಹು ಕಾಲ 12:31 ರಿಂದ 14:08 ವರೆಗೆ, ಯಮಘಂಡ ಕಾಲ ಬೆಳಗ್ಗೆ 07:41 ರಿಂದ 09:18ರ ವರೆಗೆ, ಗುಳಿಕ ಕಾಲ 10:54 ರಿಂದ ಬೆಳಿಗ್ಗೆ 12:31ರ ವರೆಗೆ.

ಮೇಷ ರಾಶಿ :ನಿಮ್ಮ ಹಿಂದಿನ ಶ್ರಮಕ್ಕೆ ಫಲವು ಪ್ರಾಪ್ತವಾಗಿ ಖುಷಿ ಎನಿಸುವುದು. ಜೀವನದಲ್ಲಿ ನಮಗಾಗಿ ನಾವು ಬದುಕಬೇಕೇ ಹೊರತು ಬೇರೆಯವರಿಗೋಸ್ಕರವಲ್ಲ ಎಂಬ ಯೋಚನೆ ಬರುವುದು. ನೀವು ಕೆಲಸದಲ್ಲಿ ಇತರರಿಗೆ ಸಹಾಯ ಮಾಡಬಹುದು, ಆದರೆ ಅವರ ಕೆಲಸದಲ್ಲಿ ಹಸ್ತಕ್ಷೇಪ ಮಾಡದಂತೆ ಎಚ್ಚರಿಕೆ ವಹಿಸಿ. ಪ್ರವಾಸ ಮತ್ತು ಸಾರಿಗೆ ಉದ್ಯಮಿಗಳಿಗೆ ಉತ್ತಮ ಲಾಭ ದೊರೆಯುವ ಸಾಧ್ಯತೆ ಇದೆ. ಇಂದು ಸಂಗಾತಿಗೆ ನಿಮ್ಮ ಮೇಲೆ ಅಭಿಮಾನ ಬರಬಹುದು. ಅವಿವಾಹಿತರು ವಿವಾಹದ ಬಗ್ಗೆ ಬಂಧುಗಳ ಜೊತೆ ಚರ್ಚಿಸುವಿರಿ. ಮನಸ್ಸಿನ ನಿಯಂತ್ರಣವು ಲಯವನ್ನು ತಪ್ಪಬಹುದು. ಆಸ್ತಿ ಸಮಸ್ಯೆ ಸೌಹಾರ್ದಯುತವಾಗಿ ಬಗೆಹರಿಯುವುದು. ಹೊಸತನ್ನು ಕಲಿಯುವ ಉತ್ಸಾಹದಲ್ಲಿ ಇರುವಿರಿ. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸುವಿರಿ. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ.

ವೃಷಭ ರಾಶಿ :ನಿಮ್ಮ ಸ್ವಭಾವಕ್ಕೆ ಜನರು ಸಕ್ಕರೆಯನ್ನು ಇರುವೆಗಳು ಮುತ್ತಿದಂತೆ ಜನರು‌ ಮುತ್ತುವರು. ಸಾಲದ ವಿಚಾರ ಬಂದರೆ ಮೌನವಹಿಸಿ, ಎದ್ದು ಹೋಗಿ ಪಿತ್ರಾರ್ಜಿತ ಸಂಪತ್ತು ನಿಮಗೆ ಉಪಯೋಗವಾಗಬಹುದು. ಕೆಲಸದ ಸ್ಥಳದಲ್ಲಿ ಹಿರಿಯರು, ಕಿರಿಯರು ಮತ್ತು ಮೇಲಧಿಕಾರಿಗಳಿಂದ ಕೆಲವು ಹೊಸ ಕಾರ್ಯಗಳನ್ನು ಕಲಿಯುವ ಅವಕಾಶವನ್ನು ನೀವು ಪಡೆಯುತ್ತೀರಿ. ವ್ಯಾಪಾರ ವೆಚ್ಚಗಳಿಗಾಗಿ ನೀವು ಕೆಲವು ದಿನಗಳವರೆಗೆ ಕಾಯಬೇಕಾಗುತ್ತದೆ. ಕ್ರಿಯಾಶೀಲತೆಗೆ ನಿಮಗೆ ಯಾವುದೇ ಪ್ರಶಂಸೆ ಸಿಗದಿರುವುದು ನಿಮಗೆ‌ ಕಷ್ಟವಾದೀತು. ಹಣಕಾಸಿನ ವಿಷಯದಲ್ಲಿ ಕೆಲವು ಲಾಭಗಳನ್ನು ನಿರೀಕ್ಷಿಸುವಿರಿ‌‌. ಕಚೇರಿಯಲ್ಲಿ ಕೆಲಸದ ಹೊರೆ ನಿಮ್ಮ ಸ್ವಂತ ಕೆಲಸವನ್ನು ಮಾಡಲು ಸ್ವಲ್ಪ ಸಮಯವನ್ನು ನೀಡುತ್ತದೆ. ನಿಮ್ಮ ವ್ಯಾಯಾಮದಲ್ಲಿ ಮಿತಿ ಇರಲಿ. ಇಲ್ಲವಾದರೆ ದೇಹಾರೋಗ್ಯ ಕೆಡಬಹುದು. ಉತ್ತಮ ಆರೋಗ್ಯದಿಂದ ಆನಂದಿಸುವಿರಿ.

ಮಿಥುನ ರಾಶಿ :ಇಂದು ದಾಂಪತ್ಯಜೀವನದಲ್ಲಿ ಬಹಳ ಗೊಂದಲವಾಗಬಹುದು. ಇನ್ಮೊಂದು ಜೀವವನ್ನು ಗರ್ಭದಲ್ಲಿ ಹೊತ್ತಿರುವವರು ನಡಿಗೆಯಲ್ಲೂ ಮನಸ್ಸಿನಲ್ಲೂ ಮಾತಿನಲ್ಲೂ ಎಚ್ಚರ, ಸಾವಧಾನತೆಯಿರಲಿ. ಕಚೇರಿಯಲ್ಲಿ ಯಾವುದೇ ಕೆಲಸವನ್ನು ಮಾಡುವಾಗ ಬಹಳ ಎಚ್ಚರಿಕೆಯಿಂದ ಇರಿ. ನಿಮ್ಮ ಕೆಲಸವನ್ನು ಮರುಪರಿಶೀಲಿಸಬಹುದು. ಉದ್ಯಮಿಯು ವ್ಯವಹಾರದ ವಿಷಯಗಳಲ್ಲಿ ಚಿಂತನಶೀಲವಾಗಿ ಮುಂದುವರಿಯಬೇಕು. ಸಂಗಾತಿಯ ಜೊತೆ ಸಂತೋಷದಿಂದ ಸಮಯವನ್ನು ಕಳೆಯುವಿರಿ. ಗೊತ್ತಿಲ್ಲದೇ ಯಾರ ಬಗ್ಗೆಯೂ ನಿಮ್ಮ ಮಾತುಗಳನ್ನು ಹರಿ ಬಿಡುವುದು ಬೇಡ. ಅದೇ ನಿಮ್ಮ ತಲೆಯನ್ನು ದಿನವಿಡೀ ಕೊರೆಯಬಹುದು. ಈ ದಿನ ಕೆಲಸದಲ್ಲಿ, ನಿಮ್ಮ ದಕ್ಷತೆಯಿಂದ ಮುಖ್ಯವಾದವರನ್ನು ನೀವು ಮೆಚ್ಚಿಸಲು ಸಾಧ್ಯವಾಗುತ್ತದೆ. ಆಸ್ತಿ ವ್ಯವಹಾರವು ನಿಮಗೆ ಅನುಕೂಲವಾಗುವ ಸಾಧ್ಯತೆಯಿದೆ.

ಕಟಕ ರಾಶಿ :ನೀವು ಒಪ್ಪಿಕೊಂಡ ಕಾರ್ಯವನ್ನು ಬಿಡದೆ ಮುನ್ನಡೆಸುವ ಛಾತಿ ನಿಮ್ಮ ಯಶಸ್ಸಿನ ಗುಟ್ಟುಗಳಲ್ಲೊಂದು. ಗೊತ್ತಿದ್ದೂ ಉದ್ವೇಗಕ್ಕೆ ಒಳಗಾಗಬೇಡಿ. ಕೆಲಸದ ಸ್ಥಳದಲ್ಲಿ ಕೆಲವು ಅಪೂರ್ಣ ಕೆಲಸದ ಬಗ್ಗೆ ನೀವು ವಿಚಲಿತರಾಗುವಿರಿ. ಉದ್ಯೋಗಸ್ಥರು ನಿಮ್ಮ ಜೀವನದ ಪ್ರತಿಯೊಂದು ಅಂಶದಲ್ಲಿ ಸಮತೋಲನವನ್ನು ಕಾಯ್ದುಕೊಳ್ಳಬೇಕು. ಇದು ನಿಮ್ಮ ಯಶಸ್ಸಿನ ಸೂತ್ರವಾಗಿದೆ. ಯಾರನ್ನೂ ನೀವು ಪೂರ್ಣವಾಗಿ ನಂಬಲಾರಿರಿ. ಸಂಗಾತಿಯ ಬಗ್ಗೆ ಕುತೂಹಲವಿರಬಹುದು. ಅತಿಯಾಗುವುದು ಬೇಡ. ಆದರೆ ಅತಿರೇಕಕ್ಕೆ ಹೋಗುವ ಸಾಧ್ಯತೆ ಇದೆ. ದೈಹಿಕ ದಾರ್ಢ್ಯವನ್ನು ನೀವು ಚೆನ್ನಾಗಿರಿಸಿಕೊಳ್ಳುವಿರಿ. ಸುಲಭವಾಗಿ ಸಿಕ್ಕುವುದನ್ನು ಬಿಟ್ಟಕೊಳ್ಳುವಿರಿ. ನಿಮ್ಮ ಬೆರೆಯುವಿಕೆಯು ಕಡಿಮೆ ಆಗಬಹುದು. ನಿಮ್ಮ ತಿಳುವಳಿಕೆ ಮತ್ತು ಸಭ್ಯತೆಯಿಂದ ಎಲ್ಲರೂ ಬಹಳ ಪ್ರಭಾವಿತರಾಗಬಹುದು.

ಸಿಂಹ ರಾಶಿ :ಇಂದು ಯಾರದೋ ಜೊತೆ ವ್ಯಾಪಾರದ ಕಾರಣಕ್ಕೆ ದೂರ ಪ್ರಯಾಣ ಮಾಡುವ ಸಾಧ್ಯತೆ ಇದೆ. ನೀವು ವಾಹನವನ್ನು ಚಾಲನೆ ಮಾಡುವುದು ಬೇಡ. ಉದ್ಯೋಗ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇಂದು ಶುಭ ದಿನ. ನಿಮ್ಮ ಆತ್ಮಸಾಕ್ಷಿಯಾಗಿ ಕೆಲಸ ಮಾಡುವುದರಿಂದ ವೇತನ ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ಆತ್ಮಸಾಕ್ಷಿಯಾಗಿ ಕೆಲಸ ಮಾಡುವುದರಿಂದ ವೇತನ ಹೆಚ್ಚಾಗುವ ಸಾಧ್ಯತೆ ಇದೆ. ಕೆಲವು ಆಸ್ತಿ ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಹೊಸ ಯೋಜನೆಯನ್ನು ಪಡೆದುಕೊಳ್ಳುವಿರಿ. ನೀವು ಇಂದು ಎಲ್ಲರ ಜೊತೆ ವಿನಯದಿಂದ ಮಾತನಾಡಬೇಕು. ಧಾವಂತದಲ್ಲಿ ಏನನ್ನಾದರೂ ಮಾಡಿಕೊಳ್ಳುವಿರಿ. ರಾಜಕೀಯದಲ್ಲಿ ಸಂಪರ್ಕ ಪ್ರದೇಶವು ವಿಶಾಲವಾಗಿರುತ್ತದೆ. ಯಾರಮೇಲೂ ಅವಲಂಬಿತವಾಗುವುದು ನಿಮಗೆ ಇಷ್ಟವಾಗದು. ಕೆಲವು ಹೊಸ ಅವಕಾಶಗಳು ಸಿಗುವುದು.

ಕನ್ಯಾ ರಾಶಿ :ನೀವು ಹೊಸ ವಸ್ತುಗಳನ್ನು ಖರೀದಿಸುವಿರಿ. ಇದರಿಂದ ಮನೆಯಲ್ಲಿ ಕಿರಿಕಿರಿಯ ವಾತಾವರಣವೂ ನಿರ್ಮಾಣವಾಗುವುದು. ಕುಟುಂಬದಲ್ಲಿ ಸಣ್ಣ ಮಟ್ಟಿನ ಕಲಹವೂ ಆದೀತು. ನಿಮ್ಮ ಸಹೋದ್ಯೋಗಿಗಳು ಮತ್ತು ಮೇಲಧಿಕಾರಿಗಳು ಕೆಲಸದ ಸ್ಥಳದಲ್ಲಿ ನಿಮ್ಮ ಪ್ರೀತಿಯ ನಡವಳಿಕೆಯಿಂದ ಸಂತೋಷಪಡುತ್ತಾರೆ. ಯಾವ ಕಾರ್ಯವನ್ನೂ ಪೂರ್ಣವಾದ ಮನಸ್ಸಿನಿಂದ ಮಾಡಲಾರಿರಿ. ನಿಮ್ಮ ಬಗ್ಗೆ ನಂಬಿಕೆ ಕಡಿಮೆ ಆಗಬಹುದು. ಕುಟುಂಬದ ಬಗ್ಗೆ ನಿಮಗೆ ಹೆಮ್ಮೆ ಎನಿಸಬಹುದು. ವಿನಾಕಾರಣ ವಾಗ್ವಾದದಿಂದ ನೀವು ಬೇಸರವಾಗಬಹುದು. ಹಳೆಯ ಬಂಧುಗಳನ್ನು ಭೇಟಿಯಿಂದ ನಿಮ್ಮಲ್ಲಿ ಉತ್ಸಾವಿರುವುದು. ನೀವು ಹೊಸ ಯೋಜನೆಯ ಬಗ್ಗೆ ಅಧಿಕ ಆಲೋಚನೆ ಇರಲಿದೆ. ಆಚಾತುರ್ಯದಿಂದ ಅನಂತರ ಪಶ್ಚಾತ್ತಾಪ ಪಡುವಿರಿ. ಯಾರ ಪ್ರೀತಿಯನ್ನೂ ಕಡೆಗಾಣಿಸುವುದು ಬೇಡ.

ತುಲಾ ರಾಶಿ :ಇಂದು ಮಂದಗತಿಯಲ್ಲಿ ಸಾಗುತ್ತಿದ್ದ ಸರ್ಕಾರಕ್ಕೆ ಸಂಬಂಧಿಸಿದ ಕಾರ್ಯಗಳು ವೇಗವನ್ನು ಪಡೆಯುವುವು. ವ್ಯರ್ಥ ಓಡಾಟಗಳು ಆಗುತ್ತವೆ. ಆ ಕಾರ್ಯಕ್ಕೊಸ್ಕರ ಖರ್ಚನ್ನೂ ಮಾಡುವಿರಿ. ಉದ್ಯೋಗಸ್ಥರು ತ್ವರಿತ ಯಶಸ್ಸನ್ನು ಸಾಧಿಸಲು ತಪ್ಪು ದಾರಿ ಹಿಡಿಯುವುದನ್ನು ತಪ್ಪಿಸಿ. ಇಲ್ಲದಿದ್ದರೆ ಅದು ನಿಮ್ಮ ವೃತ್ತಿಜೀವನ ಧಕ್ಕೆ ಉಂಟಾಗಬಹುದು. ವ್ಯವಹಾರದ ದೃಷ್ಟಿಯಿಂದ ಸಮಯವು ಅನುಕೂಲಕರವಾಗಿಲ್ಲ. ಉದ್ಯೋಗಕ್ಕೆ ಸಂಬಂಧಿಸಿದಂತೆ ನಿಮ್ಮ ಮಾತುಗಳಿಗೆ ಪ್ರಾಶಸ್ತ್ಯ ಸಿಗಬಹುದು. ಜಟಿಲ ಸಮಸ್ಯೆಗಳನ್ನು ಸರಳಗೊಳಿಸುವಿರಿ. ಆರ್ಥಿಕವಾದ ಕೆಲವು ವಿಚಾರಗಳಲ್ಲಿ ಗೌಪ್ಯತೆಯನ್ನು ಇಟ್ಟುಕೊಳ್ಳುವಿರಿ‌. ಬಂಧುಗಳ ಸಲಹೆಯು ಸಮಸ್ಯೆಯನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಲು ನಿಮಗೆ ಸಹಾಯ ಮಾಡುತ್ತದೆ. ಅನಿರೀಕ್ಷಿತವಾಗಿ ದೂರದ ಊರಿಗೆ ಪ್ರಯಾಣ ಮಾಡಬೇಕಾಗಬಹುದು.

ವೃಶ್ಚಿಕ ರಾಶಿ :ಇಂದು ನಿಮ್ಮವರ ಅನಾರೋಗ್ಯವನ್ನು ಸರಿಪಡಿಸಿಕೊಳ್ಳುವತ್ತ ನಿಮ್ಮ ಗಮನವಿರಲಿದೆ. ಸ್ನೇಹಿತರ ಜೊತೆ ಹೆಚ್ಚು ಕಾಲವನ್ನು ವ್ಯಯಿಸುವಿರಿ. ಬಹಳ ದಿನಗಳಿಂದ ಹೋಗಬೇಕು ಎಂದುಕೊಂಡ ಸ್ಥಳಗಳಿಗೆ ಹೋಗಿ ಬರುತ್ತೀರಿ. ಉದ್ಯೋಗಸ್ಥರಿಗೆ ಲಾಭದಾಯಕ ದಿನ. ನಿಮ್ಮ ಜ್ಞಾನ ಮತ್ತು ನಡವಳಿಕೆಯಿಂದಾಗಿ ಅನೇಕ ಹೊಸ ಜನರು ನಿಮ್ಮ ಜೊತೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಾರೆ. ಇಂದಿನ ನಿಮ್ಮ‌ ಕಾರ್ಯಗಳ ಬಗ್ಗೆ ಸ್ಪಷ್ಟತೆ ಇರಲಿ. ಯಾವುದನ್ನೂ ಸಡಿಲ ಮಾಡಿಕೊಳ್ಳದೇ ಮುಗಿಸಿ. ಚರಾಸ್ತಿಯನ್ನು ಉಳಿಸಿಕೊಳ್ಳುವ ಬಗ್ಗೆ ಚರ್ಚೆಗಳು ನಡೆಯಬಹುದು. ವೃತ್ತಿಯ ಸಮಸ್ಯೆಗಳನ್ನು ನಿವಾರಿಸಲು ನಿಮಗೆ ಅವಕಾಶ ದೊರೆಯಲಿದೆ. ಮನೆಯಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ತರಲು ನೀವು ಕೋಪವನ್ನು ನಿಯಂತ್ರಣ ಮಾಡಿಕೊಳ್ಳಬೇಕು. ನೀವು ಕೆಲವು ಒಳ್ಳೆಯ ಸುದ್ದಿಯನ್ನು ಕೇಳುವಿರಿ.

ಧನು ರಾಶಿ :ಇಂದು ಬಹಳ ದಿನಗಳ ಅನಂತರ ನಿಮ್ಮ ವ್ಯಾಪಾರದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುವುದು. ನಿರ್ಲಕ್ಷ್ಯದಿಂದ ವ್ಯಾಪಾರದಲ್ಲಿ ವಂಚನೆ ಸಾಧ್ಯವಾದೀತು. ಕುಟುಂಬಕ್ಕೆ ಸ್ವಲ್ಪ ಸಮಯವನ್ನು ಕೊಡಿ. ಏನು ಮಾಡಬೇಕು ಎಂಬುದನ್ನು ಅರಿತು ಕಾರ್ಯಪ್ರವೃತ್ತರಾಗಿ. ಉದ್ಯಮಿಗಳು ತಮ್ಮ ತಾಳ್ಮೆ ಮತ್ತು ಆತ್ಮವಿಶ್ವಾಸವನ್ನು ಕಳೆದುಕೊಳ್ಳಬಾರದು. ಬದಲಿಗೆ ಆತ್ಮವಿಶ್ವಾಸದಿಂದ ಮುಂದುವರೆದರೆ ಯಶಸ್ಸು ನಿಮ್ಮದಾಗಲಿದೆ. ಇಂದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಸಮಯ. ಇಂದು ನಿಮಗೆ ಎಲ್ಲ ರೀತಿಯಲ್ಲೂ ಲಾಭವಾಗಲಿದೆ ಎಂದು ಮನಸ್ಸು ಹೇಳುವುದು. ಅಧಿಕಾರಿಗಳ ಜೊತೆ ಮಾತಿನ ಚಕಮಕಿ ನಡೆಯಬಹುದು. ಪ್ರಾರ್ಥನೆಯ ಪರಿಣಾಮ ನಿಮ್ಮ ಮನಸ್ಸು ಎಂದಿಗಿಂತ ನೆಮ್ಮದಿಯಿಂದ ಇರಲಿದೆ. ಬಂಧುಗಳ ಎದುರು ಸ್ವಾಭಿಮಾನವನ್ನು ಇಟ್ಟುಕೊಳ್ಳುವಿರಿ.

ಮಕರ ರಾಶಿ :ನಿಮ್ಮಲ್ಲಿ ಹತಾಶೆಯ ಭಾವವು ಮೂಡುವುದು. ಅದನ್ನು ದೂರ ಮಾಡಿಕೊಳ್ಳಲು ಏನಾದರೂ ಇಷ್ಟವಾಗುವ ಚಟುವಟಿಕೆಯಲ್ಲಿ ಭಾಗವಹಿಸಿ. ಋಣಾತ್ಮಕ ಭಾವನೆಗಳೂ ದೂರವಾಗುವವು. ಮಾನಸಿಕ ನೆಮ್ಮದಿಯೂ ಸಿಗುವುದು. ನೀವು ಕೆಲಸ ಮಾಡುವಾಗ ಮೇಲಧಿಕಾರಿಗಳು ಮತ್ತು ಹಿರಿಯರಿಂದ ಮಾರ್ಗದರ್ಶನ ಪಡೆಯುತ್ತಿರಿ. ವ್ಯಾಪಾರಸ್ಥರು ವ್ಯವಹಾರದಲ್ಲಿ ಜಾಗರೂಕರಾಗಿರಬೇಕು. ಇಲ್ಲದಿದ್ದರೆ, ನಿಮ್ಮ ಹಣ ಬೇರೆಡೆ ಸಿಲುಕಿಕೊಳ್ಳುವ ಸಾಧ್ಯತೆ ಇದೆ. ಅನಗತ್ಯವಾಗಿ ದುಬಾರಿ ವಸ್ತುಗಳನ್ನು ಖರೀದಿಸುವುದನ್ನು ತಪ್ಪಿಸಿ. ಏನನ್ನೂ ಮಾಡಲಾಗದ ಸ್ಥಿತಿಯಲ್ಲಿ ನೀವು ಇರುವಿರಿ. ಸಂಗಾತಿಯನ್ನು ಜೊತೆ ಹೊಸ ಉದ್ಯಮವನ್ನು ಆರಂಭಿಸುವ ಹುನ್ನಾರ ನಡೆಯಲಿದೆ. ದೈಹಿಕವಾಗಿ ಸದೃಢವಾಗಿರಲು ನಿಮ್ಮ ಪ್ರಯತ್ನ ಅತಿ ಮುಖ್ಯ. ನಿಮ್ಮ ಸುತ್ತಮುತ್ತಲಿನವರಿಂದ ಸಾಕಷ್ಟು ಪ್ರಶಂಸೆ ಪಡೆಯಲಿದ್ದೀರಿ. ಬಾಕಿ ಇರುವ ಕೆಲಸದ ಕಡೆ ನಿಮ್ಮ ಗಮನ ಅವಶ್ಯಕ.

ಕುಂಭ ರಾಶಿ :ಇಂದು ಯಾರ ಮೇಲೋ ದ್ವೇಷವನ್ನು ಸಾಧಿಸುತ್ತ ಕೂರಬೇಡಿ. ಮನಸ್ಸು ಹಾಳಾಗುವುದು ಬಿಟ್ಟರೆ ಮತ್ತೇನೂ ಆಗದು. ಇಂದು ನಿಮ್ಮ ಉದ್ಯೋಗ ಸ್ಥಳದಲ್ಲಿ ಸುಧಾರಣೆ ತರಲು ಸಂವಹನ ಕೌಶಲ್ಯಗಳ ಮೇಲೆ ಗಮನಹರಿಸಿ. ವಿದೇಶಿ ಉತ್ಪನ್ನಗಳ ವ್ಯಾಪಾರ ಮಾಡುವವರು ಗುಣಮಟ್ಟದ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ವಿದ್ಯಾರ್ಥಿಗಳಿಗೆ ಅಧ್ಯಯನ ಸಂಬಂಧಿತ ಸಮಸ್ಯೆಗಳು ಕಾಡಬಹುದು. ಉದ್ಯೋಗದ ಕಾರಣಕ್ಕೆ ದೂರಪ್ರಯಾಣವನ್ನು ಮಾಡುವಿರಿ. ಉದ್ಯೋಗದಲ್ಲಿ ಕೆಲವು ಸವಾಲುಗಳು ಬರಬಹುದು. ಇಂದಿನ ಹಣದ ಅಗತ್ಯತೆಯನ್ನು ಸ್ನೇಹಿತರ ಮೂಲಕ ಪಡೆದುಕೊಳ್ಳುವಿರಿ. ಕುಟುಂಬದ ಸದಸ್ಯರ ಸಲಹೆಯಿಂದ ನೀವು ಪ್ರಯೋಜನ ಪಡೆಯಬಹುದು. ಊಹಾಪೋಹಗಳಿಗೆ ಬೆಲೆಯನ್ನು ಕೊಡುವ ಅಗತ್ಯವಿಲ್ಲ. ನೀವು ಬಂಧುಗಳ ಜೊತೆ ವ್ಯಾಪಾರ ಮಾಡಲು ತೀರ್ಮಾನಿಸುವಿರಿ.

ಮೀನ ರಾಶಿ :ಇಂದು ನೀವು ಸುಮ್ಮನೇ ಕೆಲಸವಿಲ್ಲದೇ ಕುಳಿತಿರುವ ಬದಲು ಏನನ್ನಾದರೂ ಮಾಡಿ. ನಿಮ್ಮ ಬುದ್ಧಿ, ಮನಸ್ಸುಗಳಿಗೆ ಕೆಲಸವನ್ನು ಕೊಡಿ. ಸಂಗಾತಿಯ ಜೊತೆ ಸ್ವಲ್ಪ ಕಾಲ ಕಳೆಯಿರಿ. ಮಾರ್ಕೆಟಿಂಗ್ ವಿಭಾಗಕ್ಕೆ ಸಂಬಂಧಿಸಿದ ಜನರಿಗೆ ಹೆಚ್ಚು ಪ್ರಯೋಜನಕಾರಿ ಆಗಲಿದೆ. ಉದ್ಯೋಗಸ್ಥರು ಬಾಕಿ ಉಳಿದಿರುವ ಕೆಲಸ ಪೂರ್ಣಗೊಳಿಸಲು ಹೆಚ್ಚು ಗಮನಹರಿಸಬೇಕಾಗುತ್ತದೆ. ವ್ಯವಹಾರದಲ್ಲಿ ಜಾಗರೂಕರಾಗಿರುವುದು ಒಳ್ಳೆಯದು. ಮಕ್ಕಳ ವ್ಯವಹಾರಕ್ಕೆ ಬೇಕಾದ ಹಣಕಾಸು ನೆರವನ್ನು ನಿಜವು ನೀಡುವಿರಿ. ಹೂಡಿಕೆಯಲ್ಲಿ ಆದ ಲಾಭವನ್ನು ನೀವು ಪಡೆಯುವಿರಿ. ನಿಮ್ಮನ್ನು ಬಹು ದಿನಗಳಿಂದ ಬಾಧಿಸುತ್ತಿದ್ದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಅತಿಯಾದ ಓಡಾಟವನ್ನು ನಿಲ್ಲಿಸಿ. ನೀವು ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಪ್ರತಿ ಗುರಿಯನ್ನು ಸಾಧಿಸುವಿರಿ. ವ್ಯಾಪಾರವನ್ನು ವಿಸ್ತರಿಸಲು ನೀವು ಬ್ಯಾಂಕಿನಿಂದ ಸಾಲ ತೆಗೆದುಕೊಳ್ಳಬಹುದು.

-ಲೋಹಿತ ಹೆಬ್ಬಾರ್-8762924271 (what’s app only)