AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಗುರುವಾರದ ದಿನ ಭವಿಷ್ಯ

ಇಂದಿನ (2023 ಮಾರ್ಚ್ 23) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭ ಎಂದು  ತಿಳಿದುಕೊಳ್ಳಿ.

Horoscope Today: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಗುರುವಾರದ ದಿನ ಭವಿಷ್ಯ
ಪ್ರಾತಿನಿಧಿಕ ಚಿತ್ರ Image Credit source: sfgate.com
ಗಂಗಾಧರ​ ಬ. ಸಾಬೋಜಿ
| Edited By: ಆಯೇಷಾ ಬಾನು|

Updated on:Mar 23, 2023 | 8:24 AM

Share

ಪ್ರತಿ ದಿನ ಸೂರ್ಯ, ಚಂದ್ರ ಹುಟ್ಟುತ್ತಾರೆ. ಭೂಮಿ ತಿರುಗುತ್ತಿರುತ್ತೆ. ಪ್ರತಿಯೊಬ್ಬರ ಜೀವನವು ನಡೆಯುತ್ತಲೇ ಇರುತ್ತೆ. ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗಾದರೆ ಇಂದಿನ (2023 ಮಾರ್ಚ್ 23) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭ ಎಂದು  ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಗುರು, ತಿಥಿ : ದ್ವಿತೀಯ, ನಿತ್ಯನಕ್ಷತ್ರ : ರೇವತೀ, ಯೋಗ : ಐಂದ್ರ, ಕರಣ : ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 36 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02 :10 ರಿಂದ 03:41ರವರೆಗೆ, ಯಮಘಂಡ ಕಾಲ 06:36 ರಿಂದ 08:07ರ ವರೆಗೆ, ಗುಳಿಕ ಕಾಲ 09:38 ರಿಂದ ಮಧ್ಯಾಹ್ನ 11:09ರ ವರೆಗೆ.

ಸಿಂಹ: ಮಕ್ಕಳ ಬಗ್ಗೆ ಹೆಚ್ಚು ಕಾಳಜಿಯನ್ನು ಇರಿಸಿಕೊಳ್ಳುವುದು ಉತ್ತಮ. ಅನೇಕ ದಿನಗಳಿಂದ ಸಣ್ಣ ಪುಟ್ಟ ಅನಾರೋಗ್ಯದ ತೊಂದರೆಯಾಗಲಿದ್ದು ವೈದ್ಯರ ಸಲಹೆಯನ್ನು ಪಡೆಯುವುದು ಉತ್ತಮ. ಅಪರಿಚಿತರ ವರ್ತನೆಯಿಂದ ಸಹವಾಸವನ್ನು ಮಾಡಬೇಡಿ. ಸಹಾಯವನ್ನು ಮಾಡಿ ಸಮಯವನ್ನು ವ್ಯರ್ಥಮಾಡಬೇಡಿ. ವೃತ್ತಿಯಿಂದ ನಿಮಗೆ ಬೇಸರವುಂಟಾಗಬಹುದು. ಯಾವುದೇ ನಿರ್ಧಾರಗಳನ್ನು ಇಂತಹ ಸಂದರ್ಭಗಳಲ್ಲಿ ತೆಗೆದುಕೊಳ್ಳಬೇಡಿ. ಹಣವು ಖರ್ಚಾಗುವುದೆಂಬ ಆತಂಕ ಬೇಡ. ಆದಿತ್ಯಹೃದಯವನ್ನು ಪಠಿಸಿ.

ಕನ್ಯಾ: ಆಲಸ್ಯವನ್ನು ಇಂದು ಮೈಗೂಡಿಸಿಕೊಂಡಿರುತ್ತೀರಿ. ಫಲವು ಸಿಗುವ ತನಕ ಪ್ರಯತ್ನವನ್ನು ಬಿಡಬೇಡಿ. ವಿದ್ಯಾರ್ಥಿಗಳು ಶಿಕ್ಷಕರಿಂದ ಉಪದೇಶವನ್ನು ಪಡೆಯುವರು. ಮಕ್ಕಳಿಂದ ತಲೆ ತಗ್ಗಿಸುವ ಕೆಲಸವಾಗಲಿದೆ. ಸಮಾಜಸೇವೆಗೆ ನಿಮ್ಮನ್ನು ತೊಡಗಿಸಿಕೊಳ್ಳುವ ಹಂಬಲದಲ್ಲಿ ಇರುತ್ತೀರಿ. ಆರೋಗ್ಯದ ವ್ಯತ್ಯಸವನ್ನು ಗಮನಿಸುತ್ತ ವೈದ್ಯರ ಸಲಹೆಯನ್ನು ನಿರಾಕರಿಸದೇ ಹಾಗೆಯೇ ನಡೆದುಕೊಳ್ಳಿ. ಬೆಳಗಿನಿಂದ ಮನಸ್ಸು ಭಾರವಾದಂತೆ ಅನ್ನಿಸುವುದು. ಬಹಳ ದಿನಗಳಿಂದ ಇದ್ದ ಆಸೆಯನ್ನು ಇಂದು ಪೂರೈಸಿಕೊಳ್ಳುವಿರಿ. ಚಕ್ರಾಣಿಯಾದ ಮಹಾವಿಷ್ಣುವಿನ ಸ್ತೋತ್ರಮಾಡಿ.

ತುಲಾ: ಇಂದು ಉದ್ಯೋಗಸ್ಥರು ಒತ್ತಡಗಳು ಇಲ್ಲದೇ ನಿಶ್ಚಿಂತೆಯಿಂದ ಕೆಲಸವನ್ನು ಮಾಡುವಿರಿ. ದುಶ್ಚಟಗಳಿಗೆ ದಾಸರಾಗುವ ಸಾಧ್ಯತೆ ಇದೆ. ವಿಶ್ವಾಸಘಾತಕರು ನಿಮ್ಮ ಸುತ್ತಲೇ ಇದ್ದಾರೆ ಎಂದು ಅನ್ನಿಸುತ್ತದೆ. ಸಣ್ಣ ಅನಾಹುತವೂ ನಿಮ್ಮ ವೃತ್ತಿಗೆ ಕಂಟಕವಾದೀತು. ಸ್ತ್ರೀಯರಿಂದ ಅಪಮಾನಕ್ಕೆ ಒಳಗಾಗುವಿರಿ. ಇದು ನಿಮ್ಮ ಮನೋಬಲವನ್ನು ಕುಗ್ಗಿಸೀತು. ಸ್ವಂತ ಆಲೋಚನೆಗಳಿಂದ ಮಾಡಬೇಕಾದುದನ್ನು ಮಾಡಿಕೊಳ್ಳಿ. ಋಣಮುಕ್ತರಾಗಲು ನೀವು ಬಹಳ ಶ್ರಮಪಡಬೇಕಾಗಿದೆ. ಕ್ರೀಡೆಯಲ್ಲಿ ಆಸಕ್ತಿ ಹೆಚ್ಚಾಗಲಿದೆ‌. ಕುಬೇರಯಂತ್ರವನ್ನು ತಂದು ಮನೆಯಲ್ಲಿ ಇರಿಸಿಕೊಳ್ಳಿ. ಸಂಪತ್ತಿನ ಹರಿವು ಇರುವುದು.

ವೃಶ್ಚಿಕ: ರೂಪಕ್ಕೆ ತಕ್ಕಂತೆ ಸ್ವರೂಪವಿರುವುದಿಲ್ಲ ಎನ್ನುವ ಮಾತನ್ನು ನೆನಪಿಸಿಕೊಳ್ಳುತ್ತ ಇರಿ. ಕೆಲಸದಲ್ಲಿ ಉತ್ಸಾಹವನ್ನು ಕಳೆದುಕೊಳ್ಳುವಿರಿ. ನಿಮಗೆ ಸಲ್ಲದ ಮಾತುಗಳು ನಿಮ್ಮೆದುರು ಬರಬಹುದು. ಉದ್ವೇಗದಿಂದ ಏನನ್ನಾದರೂ ಹೇಳಲು ಹೋಗಬೇಡಿ. ನಿಮ್ಮನ್ನು ಅನ್ಯರಂತೆ ಕಂಡಾರು. ಮೇಲಧಿಕಾರಿಗಳ ಜೊತೆ ಅಥವಾ ಸಹೋದ್ಯೋಗಿಗಳ ಜೊತೆ ಕಲಹವಾದರೂ ಆದೀತು. ದಾಂಪತ್ಯದಲ್ಲಿ ಬಿರುಸಿನ ಮಾತುಗಳು ಕೇಳಿಬರಬಹುದು. ದಾಂಪತ್ಯದಲ್ಲಿ ವಿರಸವು ಮೂಡಲಿದೆ. ಮಾತನ್ನು ಕೇಳಿಸಿಕೊಳ್ಳುವರ ಜೊತೆ ಮಾತ್ರ ಮಾತನಾಡಿ. ಅನ್ಯಕಾರ್ಯಗಳಿಗೆ ಸಂಪತ್ತು ನಷ್ಟವಾಗಲಿದೆ. ಲಕ್ಷ್ಮೀಸ್ತೋತ್ರವನ್ನು ಮಾಡಿ. ಸಂಪತ್ತಿನ ವ್ಯಯವನ್ನು ತಡೆಯುವಳು.

Published On - 6:00 am, Thu, 23 March 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ