AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಶನಿವಾರದ ದಿನ ಭವಿಷ್ಯ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮಾರ್ಚ್ 25) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope Today: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಶನಿವಾರದ ದಿನ ಭವಿಷ್ಯ
ಇಂದಿನ ರಾಶಿ ಭವಿಷ್ಯImage Credit source: freepik
Rakesh Nayak Manchi
|

Updated on: Mar 25, 2023 | 6:15 AM

Share

ಪ್ರತಿ ದಿನ ಸೂರ್ಯ, ಚಂದ್ರ ಹುಟ್ಟುತ್ತಾರೆ. ಭೂಮಿ ತಿರುಗುತ್ತಿರುತ್ತೆ. ಪ್ರತಿಯೊಬ್ಬರ ಜೀವನವು ನಡೆಯುತ್ತಲೇ ಇರುತ್ತೆ. ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗಾದರೆ ಇಂದಿನ (2023 ಮಾರ್ಚ್ 25) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭ ಎಂದು  ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಶನಿ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಭರಣೀ, ಯೋಗ : ವಿಷ್ಕಂಭ, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 34 ನಿಮಿಷಕ್ಕೆ, ಸೂರ್ಯಾಸ್ತ ಬೆಳಗ್ಗೆ 06 ಸಂಜೆ 42 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:36 ರಿಂದ 11:07ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:09 ರಿಂದ ಮಧ್ಯಾಹ್ನ 03:40ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:34 ರಿಂದ 08:05ರ ವರೆಗೆ.

ಸಿಂಹ: ನಿಮ್ಮ ಬಳಿ ಸಂಪತ್ತಿರುವುದು ತಿಳಿದು ಇಂದು ಅದನ್ನು ಪಡೆಯಲು ನಿಮ್ಮವರು ಪ್ರಯತ್ನಿಸಬಹುದು. ಸದವಕಾಶಗಳು ಸಿಗಲಿವೆ ಇಂದು ನಿಮಗೆ. ಬಹಳ ದಿನದ ಕಾರ್ಯಗಳನ್ನು ಬೇಗನೆ ಮುಗಿಸಲಿದ್ದೀರಿ. ಮಕ್ಕಳು ನಿಮಗೆ ಅಪಮಾನ ಮಾಡುವ ಸಾಧ್ಯತೆ ಇದೆ. ನಿಮ್ಮ ನಾಯಕತ್ವವು ಎಲ್ಲರಿಗೂ ತಿಳಿಯುವುದು. ಅಧಿಕಾರಿಗಳಿಂದ ಮೆಚ್ಚುಗೆಯು ಸಿಗಲಿದೆ. ನೂತನ ಕೆಲಸಗಳು ನಿಮ್ಮನ್ನು ಹುಡುಕಿಕೊಂಡು ಬರಲಿದೆ. ಮುಂದಿನ ದಿನಕ್ಕೆ ಲಾಭವೂ ಆಗಲಿದೆ. ಕುಟುಂಬದ ಕೀರ್ತಿಯನ್ನು ಬೆಳೆಸುವವರಿದ್ದೀರಿ. ರಕ್ಷಣೆಯ ವ್ಯವಸ್ಥೆಯಲ್ಲಿ ಇರುವವರಿಗೆ ಶುಭಸುದ್ದಿ ಇರಲಿದೆ. ಶಿವಕವಚ ಓದಿ.

ಕನ್ಯಾ: ಇಂದು ಚಂಚಲವಾದ ಮನಸ್ಸನ್ನು ಏಕಾಗ್ರಗೊಳಿಸಲು‌ ಮನೆಯಿಂದ ದೂರ ಹೋಗಬೇಕಾದೀತು. ನೀವೇ ಆಯ್ದುಕೊಂಡ ಕ್ಷೇತ್ರವು ನಿಮಗೆ ಯಶಸ್ಸನ್ನು ಕೊಡಲಿದೆ. ಶ್ರಮದ ಅವಶ್ಯಕತೆ ಬಹಳ ಇರಲಿದೆ. ಸ್ನೇಹವು ಬಲಗೊಳ್ಳಬಹುದು. ಪ್ರಸಿದ್ಧ ತೀರ್ಥಕ್ಷೇತ್ರಕ್ಕೆ ಹೋಗುವ ನಿಮ್ಮ ಕನಸು ನನಸಾಗಲಿದೆ. ಕುಟುಂಬದಲ್ಲಿ ವಿವಾಹವಾರ್ತೆ ಕೇಳಿಬರಲಿದೆ. ವ್ಯಾಪಾರವು ನಿಮಗೆ ಲಾಭವನ್ನು ತರಿಸುವುದು. ಆಪ್ತರ ಭೇಟಿಯಿಂದ ಸಂತಸವಾಗಲಿದೆ. ಪ್ರಯಾಣವು ಮಾಡಿ ಆಯಾಸ ಪಡುವಿರಿ. ತಂದೆಗೆ ನೀವು ಕೊಡುವ ಉಡುಗೊರೆಯಿಂದ ಸಂತೋಷವಾಗಲಿದೆ. ಓಡಾಟವೂ ವ್ಯರ್ಥವಾದೀತು. ಧಾರ್ಮಿಕ ಕೆಲಸಗಳು ನಿಮಗೆ ಶ್ರೇಯಸ್ಸನ್ನು ತರುವುದು. ಮನೆಯಿಂದ ಹೊರಡುವಾಗ ಗೋಗ್ರಾಸವನ್ನು ಕೊಡಿ.

ತುಲಾ: ಇಂದು ನಿಮ್ಮ ವೇಗಕ್ಕೆ ಕೆಲಸಗಳು ಆಗುತ್ತಿಲ್ಲ ಎಂಬ ತುಡಿತ ಇರಲಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಇಂದು ನೀವು ನಿಶ್ಚಿಂತರು. ಅಲಂಕಾರದ ವಸ್ತುಗಳನ್ನು ಇಷ್ಟಪಟ್ಟು ಖರೀದಿಸುವಿರಿ. ಏಕಾಗ್ರತೆಗಾಗಿ ಮಾಡಿದ ಪ್ರಯತ್ನಗಳು ಇಂದು ನಿಮಗೆ ಫಲವನ್ನು ಕೊಡುವುದು. ಉದ್ಯೋಗವನ್ನು ಬದಲಿಸುವ ಆಲೋಚನೆಗಳನ್ನು ಮಾಡುವಿರಿ. ಸಂಗಾತಿಯಿಂದ ಹಣದ ಸಹಾಯವು ದೊರೆಯಬಹುದು. ನಿಮಗೆ ಕುಟುಂಬವು ಬೆಂಬಲವನ್ನು ನೀಡುತ್ತದೆ. ನಿಮ್ಮ ವೃತ್ತಿಯಲ್ಲಿ ಪ್ರಸಿದ್ಧರಾಗುತ್ತೀರಿ. ದುಬಾರಿ ವಸ್ತುವನ್ನು ಖರೀದಿಸಲಿದ್ದೀರಿ. ಇನ್ನೊಬ್ಬರ ವಸ್ತುಗಳ ಮೇಲೆ ಬಯಕೆ ಆಗಬಹುದು. ಆಸೆಗಳನ್ನು ಹಿಡಿತದಲ್ಲಿ ಇಡಿ.

ವೃಶ್ಚಿಕ: ಸಾಮಾಜಿಕವಾದ ಕೆಲಸ ಮಾಡುತ್ತಿದ್ದರೆ ನಿಮಗೆ ಟೀಕೆಗಳು ಬರಲಿದೆ. ಕಟ್ಟಡವನ್ನು ನಿರ್ಮಿಸುವ ಕಾರ್ಯದಲ್ಲಿ ನೀವು ಯಶಸ್ವಿಯಾಗುವಿರಿ. ಸ್ಥಿರಾಸ್ತಿಯ ಖರೀದಿಯನ್ನು ಮಾಡುವಿರಿ. ಸಮಾಜಸೇವೆಯಿಂದ ನಿಮಗೆ ಕೀರ್ತಿಯು ಲಭಿಸುವುದು. ಇಷ್ಟು ದಿನ ಕಷ್ಟಪಟ್ಟು ಕಟ್ಟುತ್ತಿದ್ದ ಸಾಲವು ಇಂದಿಗೆ ಮುಕ್ತಾಯವಾಗಿ ನೆಮ್ಮದಿಯನ್ನು ಕಾಣುವಿರಿ. ಬಟ್ಟೆ ಉದ್ಯಮಕ್ಷೇತ್ರವು ನಿಮ್ಮ ಕೆಲಸವನ್ನು ನೋಡಿ ನಿಮ್ಮನ್ನು ಕೈಬೀಸಿ ಕರೆಯುವುದು. ಆರ್ಥಿಕವಾಗಿ ಇಂದು ಸಬಲರಾಗುವಿರಿ. ವಾತಾವರಣದ ಕಾರಣದಿಂದ ಅನಾರೋಗ್ಯವು ಉಂಟಾಗಬಹುದು. ಅತಿಯಾದ ಮಧುರ ಪದಾರ್ಥವನ್ನು ಸೇವಿಸಬೇಡಿ.

-ಲೋಹಿತಶರ್ಮಾ ಇಡುವಾಣಿ

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ