AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope ದಿನ ಭವಿಷ್ಯ | ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ ಈ ರಾಶಿಯವರಿಗೆ ಈ ತಿಂಗಳಿಂದ ಒಳ್ಳೆ ಕಾಲ

Today Horoscope ಏಪ್ರಿಲ್ 01, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope ದಿನ ಭವಿಷ್ಯ | ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ ಈ ರಾಶಿಯವರಿಗೆ ಈ ತಿಂಗಳಿಂದ ಒಳ್ಳೆ ಕಾಲ
ದಿನ ಭವಿಷ್ಯ
ಆಯೇಷಾ ಬಾನು
| Updated By: ಪೃಥ್ವಿಶಂಕರ|

Updated on: Apr 01, 2021 | 6:46 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಚೌತಿ ತಿಥಿ, ಗುರುವಾರ, ಏಪ್ರಿಲ್ 01, 2021. ವಿಶಾಖ ನಕ್ಷತ್ರ, ರಾಹುಕಾಲ :ಇಂದು ಮಧ್ಯಾಹ್ನ 1.51 ರಿಂದ ಇಂದು ಸಂಜೆ 3.23ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.10. ಸೂರ್ಯಾಸ್ತ: ಸಂಜೆ 6.29.

ತಾ.01-04-2021 ರ ಗುರುವಾರದ ರಾಶಿಭವಿಷ್ಯ

ಮೇಷ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸ ಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 7

ವೃಷಭ: ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಶುಭ ಸಂಖ್ಯೆ: 1

ಮಿಥುನ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 3

ಕರ್ಕ: ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 9

ಸಿಂಹ: ಧನ ಅಪವ್ಯಯವಾಗುವ ಲಕ್ಷಣಗಳಿವೆ ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವುದು. ಶ್ರಮಿಕವರ್ಗಕ್ಕೆ ಉನ್ನತಿ ಇರುವುದು. ಕೌಟುಂಬಿಕ ಸಂಬಂಧಗಳು ಫಲಿಸುವವು. ಋಣಪರಿಹಾರವಾಗುವುದು. ಶುಭ ಸಂಖ್ಯೆ: 4

ಕನ್ಯಾ: ಮಾನಸಮ್ಮಾನಗಳು ದೊರೆಯುವವು. ಕಂಕಣಬಲ ಕೂಡಿಬರುವುದು. ಮನೋಭಿಲಾಷೆಗಳು ಈಡೇರುವವು. ಆದರೆ ಉದ್ಯೋಗದಲ್ಲಿ ನಿರಾಸಕ್ತಿ ಇರುವುದು ಮತ್ತು ವ್ಯವಹಾರದಲ್ಲಿ ಅಸಮಾಧಾನ ಕಂಡುಬರುವುದು. ಶುಭ ಸಂಖ್ಯೆ: 6

ತುಲಾ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂತ ಅಧಿಕ ಖರ್ಚು ಇರುವುದು. ಶುಭ ಸಂಖ್ಯೆ: 2

ವೃಶ್ಚಿಕ: ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವುದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವುದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವದಿಲ್ಲ. ಶುಭ ಸಂಖ್ಯೆ: 7

ಧನು: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ: 8

ಮಕರ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವುದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 3

ಕುಂಭ: ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 4

ಮೀನ: ಹೊಸ ಯೋಜನೆಗಳು ಬೇಡ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವುದು. ಕೊಟ್ಟ ಸಾಲ ಮರುಪಾವತಿ ಆಗಲಾರದು, ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಧ್ಯತೆ ಇದೆ. ಶುಭ ಸಂಖ್ಯೆ: 1 ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?