AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope ದಿನ ಭವಿಷ್ಯ | ಈ ರಾಶಿಯವರಿಗೆ ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು

Today Horoscope ಏಪ್ರಿಲ್ 03, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope ದಿನ ಭವಿಷ್ಯ | ಈ ರಾಶಿಯವರಿಗೆ ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು
ದಿನ ಭವಿಷ್ಯ
ಆಯೇಷಾ ಬಾನು
| Updated By: Skanda|

Updated on: Apr 03, 2021 | 6:58 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಷಷ್ಠಿ ತಿಥಿ, ಶನಿವಾರ, ಏಪ್ರಿಲ್ 03, 2021. ಮೂಲ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9.14 ರಿಂದ ಇಂದು ಬೆಳಿಗ್ಗೆ 10.46ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.09. ಸೂರ್ಯಾಸ್ತ: ಸಂಜೆ 6.29.

ತಾ.03-04-2021 ರ ಶನಿವಾರದ ರಾಶಿಭವಿಷ್ಯ

ಮೇಷ: ವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವುದು. ಶುಭ ಸಂಖ್ಯೆ: 6

ವೃಷಭ: ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವುದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 1

ಮಿಥುನ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 9

ಕರ್ಕ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 4

ಸಿಂಹ: ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವುದರಿಂದ ಉತ್ತಮ ಫಲ ದೊರೆಯುವುದು. ಸುಮ್ಮನೇ ಕೂಡದ ಜಾಯಮಾನ ಇರುವದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವುದು. ಶುಭ ಸಂಖ್ಯೆ: 7

ಕನ್ಯಾ: ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಅಗೌರವ ಆಗುವ ಸಂಭವ ಇರುವುದರಿಂದ ಸೂಕ್ಷ್ಮವಾಗಿರುವುದು ಉತ್ತಮ. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭ ಸಂಖ್ಯೆ: 8

ತುಲಾ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವುದು. ಗುರುಬಲ ವೃದ್ಧಿಸುವುದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ಶುಭ ಸಂಖ್ಯೆ: 3

ವೃಶ್ಚಿಕ: ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವುದು. ವ್ಯಾಜ್ಯಗಳು ಅಂತ್ಯ ಕಾಣುವವು. ಗ್ರಹ ಸೌಖ್ಯವಿರುವುದು. ಶುಭ ಸಂಖ್ಯೆ: 5

ಧನು: ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ. ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು. ಶುಭ ಸಂಖ್ಯೆ: 9

ಮಕರ: ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ, ಅಪೇಕ್ಷಿತ ಕೆಲಸಗಳು ನೆರವೇರುವವು, ಧನಲಾಭ, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಹಿರಿಯರಿಗೆ ಕೀರ್ತಿದಾಯಕ. ಆಲಸ್ಯದಿಂದ ತೊಂದರೆ ಇರುವುದು ಗುರುಸ್ತೋತ್ರ ಪಾರಾಯಣ ಮಾಡಿರಿ. ಶುಭ ಸಂಖ್ಯೆ: 2

ಕುಂಭ: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು. ಶುಭ ಸಂಖ್ಯೆ: 6

ಮೀನ: ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಶುಭ ಸಂಖ್ಯೆ: 8 ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ