Horoscope ದಿನ ಭವಿಷ್ಯ -ಈ ರಾಶಿಯವರಿಗೆ ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು

Today Horoscope ಏಪ್ರಿಲ್ 11, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

  • TV9 Web Team
  • Published On - 6:21 AM, 11 Apr 2021
Horoscope ದಿನ ಭವಿಷ್ಯ -ಈ ರಾಶಿಯವರಿಗೆ ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು
ದಿನ ಭವಿಷ್ಯ

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಚತುರ್ದಶಿ ತಿಥಿ, ಭಾನುವಾರ, ಏಪ್ರಿಲ್ 11, 2021. ಉತ್ತರಾಭಾದ್ರೆ ನಕ್ಷತ್ರ, ರಾಹುಕಾಲ :ಇಂದು ಸಂಜೆ 4.57 ರಿಂದ ಇಂದು ರಾತ್ರಿ 6.30ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.03. ಸೂರ್ಯಾಸ್ತ: ಸಂಜೆ 6.31.

ತಾ.11-04-2021 ರ ಭಾನುವಾರದ ರಾಶಿಭವಿಷ್ಯ

ಮೇಷ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವುದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 7

ವೃಷಭ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವುದು. ಉತ್ಸಾಹ ಮೂಡುವುದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 6

ಮಿಥುನ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು. ಶುಭ ಸಂಖ್ಯೆ: 9

ಕಟಕ: ವೃತ್ತಿಪರತೆಯಿಂದ ಕಾರ್ಯ ಕೈಗೂಡುವುದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಶುಭ ಸಂಖ್ಯೆ: 1

ಸಿಂಹ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 5

ಕನ್ಯಾ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವುದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 2

ತುಲಾ: ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವುದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ. ದೂರಪ್ರಯಾಣ ಯೋಗವಿದೆ. ಶುಭ ಸಂಖ್ಯೆ: 7

ವೃಶ್ಚಿಕ: ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು. ಕೋರ್ಟ್​ನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು. ಶುಭ ಸಂಖ್ಯೆ: 4

ಧನು: ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವ್ಯರ್ಥ ತಿರುಗಾಟ ಇರುವುದು ಆದರೂ ಕೀರ್ತಿದಾಯಕ ಫಲವಿದೆ. ಶುಭ ಸಂಖ್ಯೆ: 6

ಮಕರ: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವವು. ಶುಭ ಸಂಖ್ಯೆ: 8

ಕುಂಭ: ಮಾತು ಹಿಡಿತದಲ್ಲಿರಲಿ. ಅನವಶ್ಯಕ ವಾಗ್ವಾದ ಉಂಟಾಗುವ ಸಂಭವವಿದೆ. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಹಿತೈಷಿಗಳ ಸಲಹೆಯಂತೆ ಮುಂದುವರೆಯಿರಿ. ಶುಭ ಸಂಖ್ಯೆ: 3

ಮೀನ: ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಗಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ. ಶತ್ರುಬಾಧೆ ಕಂಡುಬರುವುದು. ಆರೋಗ್ಯದ ಮೇಲೆ ನಿಗಾ ಇರಲಿ. ಶುಭ ಸಂಖ್ಯೆ: 5

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

(Horoscope Today Know Your Rashi Bhavishya 2021 April 11 Basavaraj Guruji Prediction)