AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope ದಿನ ಭವಿಷ್ಯ -ಮಿಥುನ ರಾಶಿಯವರಿಗೆ ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು

ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಚತುರ್ದಶಿ ತಿಥಿ, ಸೋಮವಾರ, ಏಪ್ರಿಲ್ 12, 2021. ರೇವತಿ ನಕ್ಷತ್ರ ರಾಶಿ ಭವಿಷ್ಯ.

Horoscope ದಿನ ಭವಿಷ್ಯ -ಮಿಥುನ ರಾಶಿಯವರಿಗೆ ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು
ರಾಶಿ ಭವಿಷ್ಯ
ರಾಜೇಶ್ ದುಗ್ಗುಮನೆ
| Edited By: |

Updated on: Apr 12, 2021 | 6:37 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಚತುರ್ದಶಿ ತಿಥಿ, ಸೋಮವಾರ, ಏಪ್ರಿಲ್ 12, 2021. ರೇವತಿ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7:35 ರಿಂದ ಇಂದು ಬೆಳಿಗ್ಗೆ 9:8 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.02. ಸೂರ್ಯಾಸ್ತ: ಸಂಜೆ 6.31.

ತಾ.12-04-2021 ರ‌ ಸೋಮವಾರದ ರಾಶಿಭವಿಷ್ಯ

ಮೇಷ: ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ.ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ. ಶುಭಸಂಖ್ಯೆ: 7

ವೃಷಭ: ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು.ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು.ಶುಭಸಂಖ್ಯೆ: 4

ಮಿಥುನ: ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯುವದು. ಆರ್ಥಿಕ ಸುಧಾರಣೆ ಕಂಡುಬರುವದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವದು. ಶುಭಸಂಖ್ಯೆ: 1

ಕರ್ಕ: ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ.ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ.ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನಡೆ ಕಂಡುಬರುವದು.ಶುಭಸಂಖ್ಯೆ: 9

ಸಿಂಹ: ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಭ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರಿಯಿರಿ. ಶುಭಸಂಖ್ಯೆ: 4

ಕನ್ಯಾ: ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವದು. ಆರ್ಥಿಕ ಅಭಿವೃದ್ಧಿ ಕಂಡುಬರುವದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವದು. ಶತೃಗಳೂ ಸೌಮ್ಯರಾಗುವ ಕಾಲ ಇರುವದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಶುಭಸಂಖ್ಯೆ: 8

ತುಲಾ: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭಸಂಖ್ಯೆ: 5

ವೃಶ್ಚಿಕ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭಸಂಖ್ಯೆ: 2

ಧನು: ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಶುಭಸಂಖ್ಯೆ: 6

ಮಕರ: ಆರಂಭದಲ್ಲಿ ಹರ್ಷ, ಉತ್ಸಾಹ ಇರುವದು ಕೊನೆಗೆ ಮನೋವ್ಯಥೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವದು. ಗ್ರಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವವು. ಶ್ರೀಲಕ್ಷ್ಮೀಸ್ತೋತ್ರ ಪಠಿಸಿರಿ.ಶುಭಸಂಖ್ಯೆ: 7

ಕುಂಭ: ದಿಟ್ಟತನ, ಮನೋಸ್ಥೈರ್ಯ, ನೇರ,ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವದು.ಶುಭಸಂಖ್ಯೆ: 1

ಮೀನ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು. ಶುಭಸಂಖ್ಯೆ: 5

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್