AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ: ಈ ರಾಶಿಯವರ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮಿ ಒಲಿದು ಬರುತ್ತಾಳೆ

Today Horoscope ಏಪ್ರಿಲ್ 15, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today - ದಿನ ಭವಿಷ್ಯ: ಈ ರಾಶಿಯವರ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮಿ ಒಲಿದು ಬರುತ್ತಾಳೆ
ದಿನ ಭವಿಷ್ಯ
ಆಯೇಷಾ ಬಾನು
| Edited By: |

Updated on:Apr 15, 2021 | 9:13 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲಪಕ್ಷ, ತದಿಗೆ ತಿಥಿ, ಗುರುವಾರ, ಏಪ್ರಿಲ್ 15, 2021. ಕೃತ್ತಿಕೆ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.49 ರಿಂದ ಇಂದು ಸಂಜೆ 3.23ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.00. ಸೂರ್ಯಾಸ್ತ: ಸಂಜೆ 6.32.

ತಾ.15-04-2021 ರ ಗುರುವಾರದ ರಾಶಿಭವಿಷ್ಯ

ಮೇಷ: ದಿಟ್ಟತನ, ಮನೋಸ್ಥೈರ್ಯ, ನೇರ, ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವುದು. ಶುಭ ಸಂಖ್ಯೆ: 8

ವೃಷಭ: ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವದು ಆದರೂ ಕೀರ್ತಿದಾಯಕ ಫಲವಿದೆ. ಶುಭ ಸಂಖ್ಯೆ: 3

ಮಿಥುನ: ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮಿ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ. ಶುಭ ಸಂಖ್ಯೆ: 7

ಕಟಕ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು. ಶುಭ ಸಂಖ್ಯೆ: 8

ಸಿಂಹ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು. ಶುಭ ಸಂಖ್ಯೆ: 9

ಕನ್ಯಾ: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವವು. ಶುಭ ಸಂಖ್ಯೆ: 5

ತುಲಾ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 7

ವೃಶ್ಚಿಕ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 4

ಧನಸ್ಸು: ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 6

ಮಕರ: ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವುದು. ಶುಭ ಸಂಖ್ಯೆ: 4

ಕುಂಭ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 1

ಮೀನ: ಉದ್ಯೋಗ ಪ್ರಾಪ್ತಿ, ಉದ್ಯಮದಲ್ಲಿ ಪ್ರಗತಿ ಇರುವುದು. ಹಳೆಯ ಸಾಲ ತೀರುವುದು. ಅನೇಕ ಮೂಲಗಳಿಂದ ಧನ ಪ್ರಾಪ್ತಿಯ ಯೋಗವಿದೆ. ಬಂಧುವರ್ಗದಲ್ಲಿಯ ಅಸಮಾಧಾನಗಳು ಪರಿಹಾರವಾಗುವವು. ಶುಭ ಸಂಖ್ಯೆ: 1 ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:28 am, Thu, 15 April 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ