Horoscope ದಿನ ಭವಿಷ್ಯ; ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಿಸುವ ಸಾಧ್ಯತೆ

ವೃಶ್ಚಿಕ ರಾಶಿಯವರಿಗೆ ಅನಾರೋಗ್ಯ ಉಂಟಾಗುವ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು.

  • TV9 Web Team
  • Published On - 6:30 AM, 17 Apr 2021
Horoscope ದಿನ ಭವಿಷ್ಯ; ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಿಸುವ ಸಾಧ್ಯತೆ
ದಿನ ಭವಿಷ್ಯ

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲಪಕ್ಷ, ಪಂಚಮಿ ತಿಥಿ, ಶನಿವಾರ, ಏಪ್ರಿಲ್ 17, 2021. ಮೃಗಶಿರ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9:6 ರಿಂದ ಇಂದು ಬೆಳಿಗ್ಗೆ 10 : 40 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.59. ಸೂರ್ಯಾಸ್ತ: ಸಂಜೆ 6.32.

ತಾ.17-04-2021 ರ ಶನಿವಾರದ ರಾಶಿಭವಿಷ್ಯ.
**

ಮೇಷ: ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 3

ವೃಷಭ: ಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಮಂಗಳ ಕಾರ್ಯ ಜರುಗುವವು. ಶುಭ ಸಂಖ್ಯೆ: 9

ಮಿಥುನ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು.ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವುದು. ಶುಭ ಸಂಖ್ಯೆ: 6

ಕಟಕ: ವಾಸಸ್ಥಾನ,ಉದ್ಯೋಗಸ್ಥಾನ ಬದಲಾವಣೆಯ ಯೋಗವಿದೆ.ಕೌಟುಂಬಿಕ ಸಮಸ್ಯೆಗಳು ದೂರಾಗುವವು. ವ್ಯವಹಾರಿಕ ಸೂಕ್ಷ್ಮತೆಯಿಂದ ಹಾನಿ ತಪ್ಪಿಸಿರಿ. ವೃಥಾಚಿಂತೆ ಇರುವುದು. ಹೊಸ ವ್ಯವಹಾರಗಳು ಬೇಡ. ಶುಭ ಸಂಖ್ಯೆ: 1

ಸಿಂಹ: ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೇ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ಶುಭ ಸಂಖ್ಯೆ: 7

ಕನ್ಯಾ: ಅನಿಸಿಕೆಗಿಂತ ವಾಸ್ತವ ಬೇರೆ ಇರುವದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲಿ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವುದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 3

ತುಲಾ: ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವುದು. ಶುಭ ಸಂಖ್ಯೆ: 2

ವೃಶ್ಚಿಕ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವುದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 5

ಧನು: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 8

ಮಕರ: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ವಾದ-ವಿವಾದ, ಹಠಸಾಧನೆ ಬೇಡ. ಶುಭ ಸಂಖ್ಯೆ: 1

ಕುಂಭ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 4

ಮೀನ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 9

Dina Bhavishya

ದಿನ ಭವಿಷ್ಯ

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937