AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ; ತುಲಾ ರಾಶಿಯವರು ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಾಧ್ಯತೆ

ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಸಪ್ತಮಿ ತಿಥಿ, ಸೋಮವಾರ, ಏಪ್ರಿಲ್ 19, 2021. ಪುನರ್ವಸು ನಕ್ಷತ್ರ.

Horoscope Today - ದಿನ ಭವಿಷ್ಯ; ತುಲಾ ರಾಶಿಯವರು ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಾಧ್ಯತೆ
ರಾಶಿ ಭವಿಷ್ಯ
ರಾಜೇಶ್ ದುಗ್ಗುಮನೆ
| Edited By: |

Updated on:Apr 19, 2021 | 10:08 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಸಪ್ತಮಿ ತಿಥಿ, ಸೋಮವಾರ, ಏಪ್ರಿಲ್ 19, 2021. ಪುನರ್ವಸು ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7:31ರಿಂದ ಇಂದು ಬೆಳಿಗ್ಗೆ 9: 05 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.57. ಸೂರ್ಯಾಸ್ತ: ಸಂಜೆ 6.32.

ತಾ.18-04-2021 ರ ಶನಿವಾರದ ರಾಶಿಭವಿಷ್ಯ.

ಮೇಷ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವದು. ಶುಭಸಂಖ್ಯೆ: 6

ವೃಷಭ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಶುಭಸಂಖ್ಯೆ: 4

ಮಿಥುನ: ಕುಟುಂಬದಲ್ಲಿ ಭಿನ್ನಾಭಿಪ್ರಾಯ ಇರುವದು. ವೈವಾಹಿಕ ಚಿಂತೆ ಇರುವದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ.ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭಸಂಖ್ಯೆ: 8

ಕರ್ಕ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭಸಂಖ್ಯೆ: 5

ಸಿಂಹ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಶುಭಸಂಖ್ಯೆ: 9

ಕನ್ಯಾ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ. ಶುಭಸಂಖ್ಯೆ: 8

ತುಲಾ: ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. ಶುಭಸಂಖ್ಯೆ: 7

ವೃಶ್ಚಿಕ: ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆಗಳಿವೆ.ವ್ಯವಹಾರದಲ್ಲಿ ಮಂದಗತಿ ಇರುವದು. ವ್ಯಾಪಾರದಲ್ಲಿ ಜಾಗರೂಕತೆ ಅವಶ್ಯ. ಹಾನಿ ತಡೆಗಟ್ಟುವ ಪ್ರಯತ್ನಕ್ಕೆ ಫಲ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಶುಭಫಲವಿದೆ. ಶುಭಸಂಖ್ಯೆ: 3

ಧನು: ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವ ಎಚ್ಚರಿಕೆ ವಹಿಸಿರಿ. ಅನೀರೀಕ್ಷಿತವಾಗಿ ಬರುವ ವಿಘ್ನಗಳು ತಾವಾಗಿಯೇ ಪರಿಹಾರ ಕಾಣುವವು. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಶುಭಸಂಖ್ಯೆ: 8

ಮಕರ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ. ಶುಭಸಂಖ್ಯೆ: 6

ಕುಂಭ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವದು. ಗುರುಬಲ ವೃದ್ಧಿಸುವದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವದು. ಶುಭಸಂಖ್ಯೆ: 1

ಮೀನ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ . ಶುಭಸಂಖ್ಯೆ: 3

Dina Bhavishya

ದಿನ ಭವಿಷ್ಯಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:45 am, Mon, 19 April 21

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ