AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope ದಿನ ಭವಿಷ್ಯ | ತುಲಾ ರಾಶಿಯವರಿಗೆ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆಗಳಿವೆ

ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಪಂಚಮಿ ತಿಥಿ, ಶುಕ್ರವಾರ, ಏಪ್ರಿಲ್ 01, 2021. ಜ್ಯೇಷ್ಠ ನಕ್ಷತ್ರ, ರಾಹುಕಾಲ ರಾಶಿ ಭವಿಷ್ಯ.

Horoscope ದಿನ ಭವಿಷ್ಯ | ತುಲಾ ರಾಶಿಯವರಿಗೆ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆಗಳಿವೆ
ರಾಶಿ ಭವಿಷ್ಯ
ರಾಜೇಶ್ ದುಗ್ಗುಮನೆ
| Updated By: ಆಯೇಷಾ ಬಾನು|

Updated on: Apr 02, 2021 | 6:32 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಪಂಚಮಿ ತಿಥಿ, ಶುಕ್ರವಾರ, ಏಪ್ರಿಲ್ 01, 2021. ಜ್ಯೇಷ್ಠ ನಕ್ಷತ್ರ, ರಾಹುಕಾಲ : ಇಂದು ಬೆಳಿಗ್ಗೆ 10:47 ರಿಂದ ಇಂದು ಮಧ್ಯಾಹ್ನ 12:19ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.10. ಸೂರ್ಯಾಸ್ತ: ಸಂಜೆ 6.29.

ತಾ.02-04-2021 ರ ಶುಕ್ರವಾರದ ರಾಶಿಭವಿಷ್ಯ

ಮೇಷ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವದು. ಶುಭ ಸಂಖ್ಯೆ: 7

ವೃಷಭ: ಕುಟುಂಬದಲ್ಲಿ ಭಿನ್ನಾಭಿಪ್ರಾಯ ಇರುವದು. ವೈವಾಹಿಕ ಚಿಂತೆ ಇರುವದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ.ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ: 1

ಮಿಥುನ: ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ.ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ. ಶುಭ ಸಂಖ್ಯೆ: 4

ಕರ್ಕ: ಮಾತಿನಂತೆಯೇ ಎಲ್ಲವೂ ನಡೆಯುವದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವದು.ಲಾಭದಾಯಕ ಹುದ್ದೆ ದೊರೆಯುವದು. ಶುಭ ಸಂಖ್ಯೆ: 4

ಸಿಂಹ: ವ್ಯವಹಾರದಲ್ಲಿ ಹಾನಿ ಕಂಡುಬರುವದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವದು. ಶುಭ ಸಂಖ್ಯೆ:  8

ಕನ್ಯಾ: ದೂರಾಲೋಚನೆ ಮಾಡಿ ಕಾರ್ಯ ನಿರ್ವಹಿಸಿರಿ. ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ನೆಮ್ಮದಿಯ ಜೀವನ ಇರುವದು. ಉದ್ಯೋಗವನ್ನು ವಿಸ್ತರಿಸುವ ಕಾಲ ಇರುವದು. ಶುಭ ಸಂಖ್ಯೆ: 3

ತುಲಾ: ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆಗಳಿವೆ.ವ್ಯವಹಾರದಲ್ಲಿ ಮಂದಗತಿ ಇರುವದು. ವ್ಯಾಪಾರದಲ್ಲಿ ಜಾಗರೂಕತೆ ಅವಶ್ಯ. ಹಾನಿ ತಡೆಗಟ್ಟುವ ಪ್ರಯತ್ನಕ್ಕೆ ಫಲ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಶುಭಫಲವಿದೆ. ಶುಭ ಸಂಖ್ಯೆ: 6

ವೃಶ್ಚಿಕ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಆರ್ಥಿಕ ಸಂಕಷ್ಟ ದೂರಾಗುವದು. ಶುಭ ಸಂಖ್ಯೆ: 8

ಧನು: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 2

ಮಕರ: ವ್ಯವಹಾರಿಕ ಏಳ್ಗೆ ಇರುವದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ.ವಿವಿಧ ಸೌಭಾಗ್ಯಪ್ರಾಪ್ತಿ..ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್,ವಾಹನ,ಮಶಿನರಿಗಳಿಂದ ತೊಂದರೆ. ಶುಭ ಸಂಖ್ಯೆ: 5

ಕುಂಭ: ದೂರ ಪ್ರಯಾಣದ ಅವಶ್ಯಕತೆ ಕಂಡುಬರುವದು. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ಅನೇಕ ರೀತಿಯ ಸೌಭಾಗ್ಯಗಳು ದೊರೆಯುವವು.ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಮಶಿನರಿಗಳಿಂದ ತೊಂದರೆ ಸಾಧ್ಯತೆ. ಶುಭ ಸಂಖ್ಯೆ: 7

ಮೀನ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು. ಶುಭ ಸಂಖ್ಯೆ: 1

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..