AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ಹಣಕಾಸಿನ ತೊಂದರೆಗಳು ಪರಿಹಾರವಾಗುವವು

ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ನವಮಿ ತಿಥಿ, ಮಂಗಳವಾರ, ಏಪ್ರಿಲ್ 20, 2021. ಪುನರ್ವಸು ನಕ್ಷತ್ರ ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರಿಗೆ ಹಣಕಾಸಿನ ತೊಂದರೆಗಳು ಪರಿಹಾರವಾಗುವವು
ರಾಶಿ ಭವಿಷ್ಯ
ರಾಜೇಶ್ ದುಗ್ಗುಮನೆ
| Edited By: ಆಯೇಷಾ ಬಾನು|

Updated on: Apr 20, 2021 | 6:22 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ನವಮಿ ತಿಥಿ, ಮಂಗಳವಾರ, ಏಪ್ರಿಲ್ 20, 2021. ಪುನರ್ವಸು ನಕ್ಷತ್ರ, ರಾಹುಕಾಲ: ಇಂದು ಸಂಜೆ 3.23 ರಿಂದ ಇಂದು ಸಂಜೆ 4.57 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.56. ಸೂರ್ಯಾಸ್ತ: ಸಂಜೆ 6.33.

ತಾ.20-04-2021 ರ ಮಂಗಳವಾರದ ರಾಶಿಭವಿಷ್ಯ ಮೇಷ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭಸಂಖ್ಯೆ: 7

ವೃಷಭ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭಸಂಖ್ಯೆ: 3

ಮಿಥುನ: ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದರಿಂದ ತೊಂದರೆ ಆಗುವ ಸಾಧ್ಯತೆ ಇದೆ ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವದು. ಶುಭಸಂಖ್ಯೆ: 8

ಕರ್ಕ: ಕೃಷಿಮೂಲದ ಲಾಭ ದೊರೆಯುವದು. ಸಹೋದ್ಯೋಗಿಗಳ ಸಹಾಯ ಅಪೃಕ್ಷಿಸದೇ ಸ್ವಂತಬಲದಿಂದ ಕೆಲಸ ನಿರ್ವಹಿಸಿರಿ.ಕೈಗೊಂಡ ಕಾರ್ಯಗಳು ಯಶಸ್ವಿಯಾಗುವವು. ನೌಕರರಿಗೆ ಕಿರಿಕಿರಿಯಾಗುವ ಸಂಭವವಿದೆ. ಶುಭಸಂಖ್ಯೆ: 4

ಸಿಂಹ: ವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ.ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವದು. ಶುಭಸಂಖ್ಯೆ: 9

ಕನ್ಯಾ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭಸಂಖ್ಯೆ: 2

ತುಲಾ: ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ. ಸಾಧನೆಗೆ ಸೂಕ್ತ ಅವಕಾಶ ದೊರೆಯುವದು. ಹಣಕಾಸಿನ ತೊಂದರೆಗಳು ಪರಿಹಾರವಾಗುವವು. ವ್ಯವಹಾರಗಳಲ್ಲಿ ಗೌಪ್ಯತೆ ಇರಲಿ. ಹಿತಶತ್ರುಗಳಿಂದ ತೊಂದರೆಯಾಗುವ ಸಧ್ಯತೆ ಇದೆ. ಶುಭಸಂಖ್ಯೆ: 6

ವೃಶ್ಚಿಕ: ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವದು. ಸತತ ಪ್ರಯತ್ನವಿಲ್ಲದೇ ಫಲ ದೊರೆಯಲಾರದು. ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬುದ್ದಿಯಿಂದ ತಾಳ್ಮೆಕಳೆದುಕೊಳ್ಳದೇ ಮುಂದುವರೆಯಿರಿ. ಶುಭಸಂಖ್ಯೆ: 4

ಧನು: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭಸಂಖ್ಯೆ: 5

ಮಕರ: ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು. ಶುಭಸಂಖ್ಯೆ: 7

ಕುಂಭ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ. ಶುಭಸಂಖ್ಯೆ: 9

ಮೀನ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ . ಶುಭಸಂಖ್ಯೆ: 3

Dina Bhavishya

ದಿನ ಭವಿಷ್ಯಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ