AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ: ಶ್ರೀರಾಮ ನವಮಿ ದಿನ ಯಾವ ರಾಶಿಗೆ ಯಾವ ಫಲ?

Today Horoscope: ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲಪಕ್ಷ, ನವಮಿ ತಿಥಿ, ಬುಧವಾರ, ಏಪ್ರಿಲ್ 21, 2021. ಪುಷ್ಯ ನಕ್ಷತ್ರ, ರಾಹುಕಾಲ :ಇಂದು ಬೆಳಿಗ್ಗೆ 12.14 ರಿಂದ ಇಂದು ಮಧ್ಯಾಹ್ನ 1.48ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.56. ಸೂರ್ಯಾಸ್ತ: ಸಂಜೆ 6.33.

Horoscope Today- ದಿನ ಭವಿಷ್ಯ: ಶ್ರೀರಾಮ ನವಮಿ ದಿನ ಯಾವ ರಾಶಿಗೆ ಯಾವ ಫಲ?
ದಿನ ಭವಿಷ್ಯ
ಆಯೇಷಾ ಬಾನು
| Edited By: |

Updated on:Apr 21, 2021 | 11:30 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲಪಕ್ಷ, ನವಮಿ ತಿಥಿ, ಬುಧವಾರ, ಏಪ್ರಿಲ್ 21, 2021. ಪುಷ್ಯ ನಕ್ಷತ್ರ, ರಾಹುಕಾಲ :ಇಂದು ಬೆಳಿಗ್ಗೆ 12.14 ರಿಂದ ಇಂದು ಮಧ್ಯಾಹ್ನ 1.48ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.56. ಸೂರ್ಯಾಸ್ತ: ಸಂಜೆ 6.33.

ತಾ.21-04-2021 ರ ಬುಧವಾರದ ರಾಶಿಭವಿಷ್ಯ

ಶ್ರೀರಾಮ ನವಮಿಯ ಶುಭಾಶಯಗಳು.

ಮೇಷ: ವಿನಾಕಾರಣ ನಿಂದನೆಯ ಸಂಭವವಿದೆ. ಖರ್ಚು ಹೆಚ್ಚಾಗುವ ಯೋಗ ಇರುವುದರಿಂದ ಉಳಿತಾಯದ ಯೋಜನೆ ಮಾಡಿರಿ. ಮನೆಯಲ್ಲಿ ಶಾಂತಿಯುತ ನೆಮ್ಮದಿಯ ವಾತಾವರಣ ಇರುವುದು. ಶುಭ ಸಂಖ್ಯೆ: 6

ವೃಷಭ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವುದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 1

ಮಿಥುನ: ಮನೆಯಲ್ಲಿ ಅಸಮಾಧಾನ ಇರುವುದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣ-ತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲಪ್ರದವಾಗಲಿದೆ. ವ್ಯಾಪಾರ ವೃದ್ಧಿಯಾಗುವುದು. ಶುಭ ಸಂಖ್ಯೆ: 9

ಕಟಕ: ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವುದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ. ದೂರಪ್ರಯಾಣ ಯೋಗವಿದೆ. ಶುಭ ಸಂಖ್ಯೆ: 7

ಸಿಂಹ: ಆತ್ಮೀಯರೊಂದಿಗೆ ಮನಸ್ತಾಪ ವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು. ಶುಭ ಸಂಖ್ಯೆ: 4

ಕನ್ಯಾ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 8

ತುಲಾ: ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವ ಎಚ್ಚರಿಕೆ ವಹಿಸಿರಿ. ಅನಿರೀಕ್ಷಿತವಾಗಿ ಬರುವ ವಿಘ್ನಗಳು ತಾವಾಗಿಯೇ ಪರಿಹಾರ ಕಾಣುವವು. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಶುಭ ಸಂಖ್ಯೆ: 5

ವೃಶ್ಚಿಕ: ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು. ಶುಭ ಸಂಖ್ಯೆ: 3

ಧನು: ಬದಲಾವಣೆಯನ್ನು ಸಹಜವಾಗಿ ಸ್ವೀಕರಿಸಿ. ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸುವಿರಿ. ಸಾಮಾಜಿಕ ಗೌರವಗಳು ಅರಸಿಕೊಂಡು ಬರಲಿವೆ. ಮಾಲೀಕತ್ವದ ಆಸ್ತಿ ಕೈತಪ್ಪದಂತೆ ಎಚ್ಚರಿಕೆ ವಹಿಸಿರಿ. ಧನದ ಅಪವ್ಯಯ ಆಗದಂತೆ ನೋಡಿರಿ. ಶುಭ ಸಂಖ್ಯೆ: 1

ಮಕರ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂತ ಅಧಿಕ ಖರ್ಚು ಇರುವುದು. ಶುಭ ಸಂಖ್ಯೆ: 7

ಕುಂಭ: ಧಾರ್ಮಿಕ ಕ್ಷೇತ್ರದಲ್ಲಿ ಗೌರವ ಸಮ್ಮಾನಗಳು ದೊರೆಯುವವು. ಅತಿಯಾದ ನಿರೀಕ್ಷೆಯಿಂದ ಅಸಮಾಧಾನ ಕಂಡುಬರುವುದು. ದೂರುವವರೇ ಹೊಗಳಿದರೂ ನೆಮ್ಮದಿ ಇರಲಾರದು. ಸ್ವಯಂ ಪ್ರತಿಷ್ಟೆಗೆ ಧನವ್ಯಯ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 9

ಮೀನ: ತಾಪತ್ರಯಗಳೆಲ್ಲ ದೂರವಾಗಿದ್ದು ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತದೆ. ವ್ಯಾಪಾರಾದಿ ಉದ್ಯಮಗಳು ಇಷ್ಟದಂತೆ ನಡೆಯುತ್ತದೆ. ಕೆಲವೊಮ್ಮೆ ಸಣ್ಣ ವಿಷಯಗಳಿಗೂ ಭಯ ತೋರಿದರೂ ಹಾನಿಯಿಲ್ಲ. ಶುಭ ಸಂಖ್ಯೆ: 5

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:24 am, Wed, 21 April 21

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'