AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ: ಈ ರಾಶಿಯವರು ಈ ದಿನ ಮಾತನಾಡುವ ಬದಲು ಮಾತು ಕೇಳುವುದು ಉತ್ತಮ, ಇಲ್ಲದಿದ್ದರೆ..

Today Horoscope ಏಪ್ರಿಲ್ 22, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today - ದಿನ ಭವಿಷ್ಯ: ಈ ರಾಶಿಯವರು ಈ ದಿನ ಮಾತನಾಡುವ ಬದಲು ಮಾತು ಕೇಳುವುದು ಉತ್ತಮ, ಇಲ್ಲದಿದ್ದರೆ..
ದಿನ ಭವಿಷ್ಯ
ಆಯೇಷಾ ಬಾನು
| Edited By: |

Updated on:Apr 22, 2021 | 11:07 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲಪಕ್ಷ, ದಶಮಿ ತಿಥಿ, ಬುಧವಾರ, ಏಪ್ರಿಲ್ 22, 2021. ಆಶ್ಲೇಷ ನಕ್ಷತ್ರ, ರಾಹುಕಾಲ :ಇಂದು ಮಧ್ಯಾಹ್ನ 1.48 ರಿಂದ ಇಂದು ಸಂಜೆ 3.22 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.55. ಸೂರ್ಯಾಸ್ತ: ಸಂಜೆ 6.33.

ತಾ.22-04-2021 ರ ಗುರುವಾರದ ರಾಶಿಭವಿಷ್ಯ

ಮೇಷ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಶುಭ ಸಂಖ್ಯೆ: 8

ವೃಷಭ: ಅಪಮಾನ, ಅಪವಾದದಂತಹ ಸಮಸ್ಯೆಗೆ ಸಿಲುಕದಂತೆ ಜಾಗರೂಕರಾಗಿರಿ. ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವುದು ಉತ್ತಮ. ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವರು. ಶುಭ ಸಂಖ್ಯೆ: 3

ಮಿಥುನ: ಉದ್ಯೋಗ ಪ್ರಾಪ್ತಿ, ಉದ್ಯಮದಲ್ಲಿ ಪ್ರಗತಿ ಇರುವುದು. ಹಳೆಯ ಸಾಲ ತೀರುವುದು. ಅನೇಕ ಮೂಲಗಳಿಂದ ಧನಪ್ರಾಪ್ತಿಯ ಯೋಗವಿದೆ. ಬಂಧುವರ್ಗದಲ್ಲಿಯ ಅಸಮಾಧಾನಗಳು ಪರಿಹಾರವಾಗುವವು. ಶುಭ ಸಂಖ್ಯೆ: 7

ಕಟಕ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 1

ಸಿಂಹ: ಎಲ್ಲವೂ ಇದ್ದಂತೆ ಇರಲಿ ಎಂಬ ಮನೋಭಾವನೆ ಇರುವುದು. ಕೆಲಸದಲ್ಲಿ ಬದಲಾವಣೆ ತರಲು ಪ್ರಯತ್ನಿಸಿ. ವಿದೇಶ ಪ್ರಯಾಣದ ಯೋಗವಿದೆ. ಉದ್ಯೋಗದಲ್ಲಿ ಪ್ರಗತಿ ಮುಂದುವರೆಯುವುದು. ಶುಭ ಸಂಖ್ಯೆ: 9

ಕನ್ಯಾ: ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಅನವಶ್ಯಕ ಭಯ ಅಗತ್ಯವಿಲ್ಲ, ನಿಮ್ಮ ಸೇವೆ ಫಲ ನೀಡುವುದು. ಸಂಕಷ್ಟದ ಮಧ್ಯೆಯೂ ಸಂತೋಷದ ದಿನಗಳಿವೆ. ಆಗಂತುಕರೊಂದಿಗೆ ಜಾಗೃತೆ ಅಗತ್ಯ. ಶುಭ ಸಂಖ್ಯೆ: 4

ತುಲಾ: ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಉದ್ಯೋಗದಲ್ಲಿ ಅಭಿವೃದ್ಧಿ ಇರುವುದು. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಲೆಕ್ಕಾಚಾರ ತಪ್ಪದಂತೆ ಎಚ್ಚರವಹಿಸಿರಿ.ಮನೆಯಲ್ಲಿ ಮಂಗಲಕಾರ್ಯ ಜರುಗುವುದು. ಶುಭ ಸಂಖ್ಯೆ: 8

ವೃಶ್ಚಿಕ: ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೇ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ಶುಭ ಸಂಖ್ಯೆ: 2

ಧನು: ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ. ಶುಭ ಸಂಖ್ಯೆ: 6

ಮಕರ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 5

ಕುಂಭ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 7

ಮೀನ: ವ್ಯಾಪಾರಾದಿ ಉದ್ಯಮಗಳಲ್ಲಿ ಪ್ರಗತಿಯಿದ್ದು ಧನಲಾಭ, ಐಶ್ವರ್ಯವೃದ್ಧಿಯಿದೆ. ಆದರೆ ವ್ಯವಹಾರಿಕ ಕಿರಿಕಿರಿ ಇರುವದು. ಅನಿರೀಕ್ಷಿತ ಧನಲಾಭವೂ ಇದೆ. ಕೈಗೊಂಡ ಕಾರ್ಯಗಳಿಗೆ ವಿಘ್ನ ತೋರಿದರೂ ನೆರವೇರುತ್ತದೆ. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:27 am, Thu, 22 April 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ