Horoscope Today -ದಿನ ಭವಿಷ್ಯ: ಈ ರಾಶಿಯ ಹಿರಿಯರಿಗೆ ಅನಾರೋಗ್ಯ ಸಂಭವ
Today Horoscope ಏಪ್ರಿಲ್ 23, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲಪಕ್ಷ, ಏಕಾದಶಿ ತಿಥಿ, ಶುಕ್ರವಾರ, ಏಪ್ರಿಲ್ 23, 2021. ಮಖೆ ನಕ್ಷತ್ರ, ರಾಹುಕಾಲ :ಇಂದು ಬೆಳಿಗ್ಗೆ 10.39 ರಿಂದ ಇಂದು ಬೆಳಿಗ್ಗೆ 12.13 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.55. ಸೂರ್ಯಾಸ್ತ: ಸಂಜೆ 6.33.
ತಾ.23-04-2021 ರ ಶುಕ್ರವಾರದ ರಾಶಿಭವಿಷ್ಯ
ಮೇಷ: ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 7
ವೃಷಭ: ಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು. ಮಂಗಲ ಕಾರ್ಯ ಜರುಗುವುದು. ಶುಭ ಸಂಖ್ಯೆ: 2
ಮಿಥುನ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವದು. ಶುಭ ಸಂಖ್ಯೆ: 9
ಕಟಕ: ವಾಸಸ್ಥಾನ, ಉದ್ಯೋಗಸ್ಥಾನ ಬದಲಾವಣೆಯ ಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ವ್ಯವಹಾರಿಕ ಸೂಕ್ಷ್ಮತೆಯಿಂದ ಹಾನಿ ತಪ್ಪಿಸಿರಿ. ವೃಥಾಚಿಂತೆ ಇರುವುದು. ಹೊಸ ವ್ಯವಹಾರಗಳು ಬೇಡ. ಶುಭ ಸಂಖ್ಯೆ: 4
ಸಿಂಹ: ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೇ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ಶುಭ ಸಂಖ್ಯೆ: 6
ಕನ್ಯಾ: ಅನಿಸಿಕೆಗಿಂತ ವಾಸ್ತವ ಬೇರೆ ಇರುವುದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವುದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 5
ತುಲಾ: ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವದು. ಶುಭ ಸಂಖ್ಯೆ: 2
ವೃಶ್ಚಿಕ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 8
ಧನು: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 4
ಮಕರ: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವದು. ವಾದ-ವಿವಾದ, ಹಠಸಾಧನೆ ಬೇಡ. ಶುಭ ಸಂಖ್ಯೆ: 1
ಕುಂಭ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 3
ಮೀನ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 3
Published On - 6:19 am, Fri, 23 April 21