AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope – ದಿನ ಭವಿಷ್ಯ; ಹೊಟ್ಟೆಕಿಚ್ಚು ಮಾಡುವ ಈ ರಾಶಿಯವರಿಗೆ ತಕ್ಕ ಶಾಸ್ತಿಯಾಗಲಿದೆ

Today Horoscope ಏಪ್ರಿಲ್ 24, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope - ದಿನ ಭವಿಷ್ಯ; ಹೊಟ್ಟೆಕಿಚ್ಚು ಮಾಡುವ ಈ ರಾಶಿಯವರಿಗೆ ತಕ್ಕ ಶಾಸ್ತಿಯಾಗಲಿದೆ
ದಿನ ಭವಿಷ್ಯ
ಆಯೇಷಾ ಬಾನು
| Edited By: |

Updated on: Apr 24, 2021 | 6:36 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲಪಕ್ಷ, ದ್ವಾದಶಿ ತಿಥಿ, ಶನಿವಾರ, ಏಪ್ರಿಲ್ 24, 2021. ಪುಬ್ಬೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9.03 ರಿಂದ ಇಂದು ಬೆಳಿಗ್ಗೆ 10.37 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.54. ಸೂರ್ಯಾಸ್ತ: ಸಂಜೆ 6.34.

ತಾ.24-04-2021 ರ ಶನಿವಾರದ ರಾಶಿಭವಿಷ್ಯ

ಮೇಷ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 6

ವೃಷಭ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 1

ಮಿಥುನ: ಧನಮದಕ್ಕಿಂತ ವಿದ್ಯಾ ಮದ ಅಪಾಯಕಾರಿ ಆದರಿಂದ ತೊಂದರೆ ಆಗುವ ಸಾಧ್ಯತೆ ಇದೆ ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವದು. ಶುಭ ಸಂಖ್ಯೆ: 9

ಕಟಕ: ಕೃಷಿಮೂಲದ ಲಾಭ ದೊರೆಯುವುದು. ಸಹೋದ್ಯೋಗಿಗಳ ಸಹಾಯ ಅಪೃಕ್ಷಿಸದೇ ಸ್ವಂತಬಲದಿಂದ ಕೆಲಸ ನಿರ್ವಹಿಸಿರಿ. ಕೈಗೊಂಡ ಕಾರ್ಯಗಳು ಯಶಸ್ವಿಯಾಗುವವು. ನೌಕರರಿಗೆ ಕಿರಿಕಿರಿಯಾಗುವ ಸಂಭವವಿದೆ. ಶುಭ ಸಂಖ್ಯೆ: 4

ಸಿಂಹ: ವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವುದು. ಶುಭ ಸಂಖ್ಯೆ: 7

ಕನ್ಯಾ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 8

ತುಲಾ: ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ. ಸಾಧನೆಗೆ ಸೂಕ್ತ ಅವಕಾಶ ದೊರೆಯುವುದು. ಹಣಕಾಸಿನ ತೊಂದರೆಗಳು ಪರಿಹಾರವಾಗುವವು. ವ್ಯವಹಾರಗಳಲ್ಲಿ ಗೌಪ್ಯತೆ ಇರಲಿ. ಹಿತಶತ್ರುಗಳಿಂದ ತೊಂದರೆಯಾಗುವ ಸಧ್ಯತೆ ಇದೆ. ಶುಭ ಸಂಖ್ಯೆ: 3

ವೃಶ್ಚಿಕ: ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವುದು. ಸತತ ಪ್ರಯತ್ನವಿಲ್ಲದೇ ಫಲ ದೊರೆಯಲಾರದು. ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬುದ್ದಿಯಿಂದ ತಾಳ್ಮೆಕಳೆದುಕೊಳ್ಳದೇ ಮುಂದುವರೆಯಿರಿ. ಶುಭ ಸಂಖ್ಯೆ: 1

ಧನು: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 6

ಮಕರ: ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವುದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು. ಶುಭ ಸಂಖ್ಯೆ: 5

ಕುಂಭ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 2

ಮೀನ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ . ಶುಭ ಸಂಖ್ಯೆ: 5

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!