Horoscope – ದಿನ ಭವಿಷ್ಯ; ಮಿಥುನ ರಾಶಿಯವರಿಗೆ ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ

ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲಪಕ್ಷ, ಹುಣ್ಣಿಮೆ ತಿಥಿ, ಮಂಗಳವಾರ, ಏಪ್ರಿಲ್ 27, 2021 ನಕ್ಷತ್ರ.

Horoscope - ದಿನ ಭವಿಷ್ಯ; ಮಿಥುನ ರಾಶಿಯವರಿಗೆ ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ
ದಿನ ಭವಿಷ್ಯ
Follow us
ರಾಜೇಶ್ ದುಗ್ಗುಮನೆ
| Updated By: ಆಯೇಷಾ ಬಾನು

Updated on: Apr 27, 2021 | 6:45 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲಪಕ್ಷ, ಹುಣ್ಣಿಮೆ ತಿಥಿ, ಮಂಗಳವಾರ, ಏಪ್ರಿಲ್ 27, 2021. ಸ್ವಾತಿ ನಕ್ಷತ್ರ, ರಾಹುಕಾಲ: ಇಂದು ಸಂಜೆ 3:23 ರಿಂದ ಇಂದು ಸಂಜೆ 4:58 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.52. ಸೂರ್ಯಾಸ್ತ: ಸಂಜೆ 6.34.

ತಾ.27-04-2021 ರ ಮಂಗಳವಾರದ ರಾಶಿಭವಿಷ್ಯ

ಮೇಷ: ಅನಿರೀಕ್ಷಿತ ಧನಲಾಭವಾಗುವದು. ಬುದ್ಧಿಕೌಶಲ್ಯದಿಂದ ಉದ್ಯೋಗದಲ್ಲಿ ಬಡ್ತಿ ಕಂಡುಬರುವದು. ಸಿಟ್ಟಿನ ಸ್ವಭಾವದಿಂದ ತೊದರೆಯಾಗುವ ಸಾಧ್ಯತೆ ಇದೆ. ಕಾರ್ಯಕ್ಷಮತೆಗೆ ತಕ್ಕ ಫಲ ದೊರೆಯುವದು.  ಶುಭ ಸಂಖ್ಯೆ: 7

ವೃಷಭ: ಕಾಯಕನಿಷ್ಠೆ ನಿಮಗೇ ಹೊರೆಯಾಗದಂತೆ ನೋಡಿಕೊಳ್ಳಿರಿ. ನಿರಂತರ ದುಡಿಮೆಯಿಂದ ಅನಾರೋಗ್ಯ ಅಥವಾ ಮಾನಸಿಕ ಕಿರಿಕಿರಿ ಆಗುವ ಸಂಭವವಿದೆ. ಹಣಕಾಸಿನಿನ ವ್ಯವಹಾರದಲ್ಲಿ ಎಚ್ಚರಿಕೆವಹಿಸಿರಿ.  ಶುಭ ಸಂಖ್ಯೆ: 1

ಮಿಥುನ: ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ.ಪರಸ್ಪರ ದೋಷಾರೋಪ ಬೇಡ.ಮಿತ್ರರ ಸಹಾಯ ದೊರೆಯುವದು.  ಶುಭ ಸಂಖ್ಯೆ: 9

ಕರ್ಕ: ಎಲ್ಲವನ್ನು ಹಗುರವಾಗಿ ಕಾಣುವದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ.  ಶುಭ ಸಂಖ್ಯೆ: 4

ಸಿಂಹ: ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವದು. ಆರ್ಥಿಕ ಅಭಿವೃದ್ಧಿ ಕಂಡುಬರುವದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವದು. ಶತೃಗಳೂ ಸೌಮ್ಯರಾಗುವ ಕಾಲ ಇರುವದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ.  ಶುಭ ಸಂಖ್ಯೆ: 5

ಕನ್ಯಾ: ಭವಿಷ್ಯತ್ತಿನ ಉಪೇಕ್ಷೆ ಮಾಡದೇ ಉಳಿತಾಯಕ್ಕೆ ಗಮನಹರಿಸಿರಿ. ಆಪತ್ತುಗಳ ಪರಿಹಾರಕ್ಕಾಗಿ ವ್ಯಥಾ ತಿರುಗಾಟದ ಸಂಭವವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ.  ಶುಭ ಸಂಖ್ಯೆ: 3

ತುಲಾ: ದೈಹಿಕ ಸಮಸ್ಯೆಗಳು ಉಲ್ಬಣವಾಗಿ ಕೆಲಸಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಮನೆಯಲ್ಲಿ ಕಾರ್ಯ ವಿರೋಧ ಇರುವದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಮಾತಿಗಿಂತ ಕೃತಿಗೆ ಮಹತ್ವ ಕೊಡಿ.  ಶುಭ ಸಂಖ್ಯೆ: 2

ವೃಶ್ಚಿಕ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು . ಶುಭ ಸಂಖ್ಯೆ: 6

ಧನು: ಅನಿರೀಕ್ಷಿತ ಸಂಚಾರ ಒದಗಿಬಂದರೂ ತೃಪ್ತಿದಾಯಕವೆನ್ನಬಹುದು. ವ್ಯಾಪಾರಾದಿ ಉದ್ಯಮಗಳಲ್ಲಿ ಅಪೇಕಿಸಿದಂತೆ ಪ್ರಗತಿ. ಲಾಭ ತೋರಿಬರುತ್ತದೆ. ಹೊಸದಾದ ಆಲೋಚನಾ ಸಿದ್ಧಿ. ವಿಪರೀತ ಖರ್ಚು.  ಶುಭ ಸಂಖ್ಯೆ: 1

ಮಕರ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ.  ಶುಭ ಸಂಖ್ಯೆ: 7

ಕುಂಭ: ಆರಂಭದಲ್ಲಿ ಹರ್ಷ, ಉತ್ಸಾಹ ಇರುವದು ಕೊನೆಗೆ ಮನೋವ್ಯಥೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವದು. ಗ್ರಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವವು. ಶ್ರೀಲಕ್ಷ್ಮೀಸ್ತೋತ್ರ ಪಠಿಸಿರಿ.  ಶುಭ ಸಂಖ್ಯೆ: 8

ಮೀನ: ದಿಟ್ಟತನ, ಮನೋಸ್ಥೈರ್ಯ, ನೇರ,ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವದು.  ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು