Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ಮದುವೆ ಮಾತುಕತೆಗಳಲ್ಲಿ ಸಫಲತೆ

ವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ತ್ರಯೋದಶಿ ತಿಥಿ, ಭಾನುವಾರ, ಏಪ್ರಿಲ್ 25, 2021ರ ರಾಶಿ ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರಿಗೆ ಮದುವೆ ಮಾತುಕತೆಗಳಲ್ಲಿ ಸಫಲತೆ
ರಾಶಿ ಭವಿಷ್ಯ
Follow us
ರಾಜೇಶ್ ದುಗ್ಗುಮನೆ
| Updated By: ಆಯೇಷಾ ಬಾನು

Updated on: Apr 25, 2021 | 6:19 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ತ್ರಯೋದಶಿ ತಿಥಿ, ಭಾನುವಾರ, ಏಪ್ರಿಲ್ 25, 2021. ಹಸ್ತ ನಕ್ಷತ್ರ, ರಾಹುಕಾಲ: ಇಂದು ಸಂಜೆ 4:58ರಿಂದ ಇಂದು ಸಂಜೆ 6 ಗಂ:33 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.53. ಸೂರ್ಯಾಸ್ತ: ಸಂಜೆ 6.33.

ತಾ.24-04-2021 ರ ಭಾನುವಾರದ ರಾಶಿಭವಿಷ್ಯ

ಮೇಷ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ. ಶುಭಸಂಖ್ಯೆ: 6

ವೃಷಭ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭಸಂಖ್ಯೆ: 1

ಮಿಥುನ: ಆತ್ಮೀಯರೊಂದಿಗೆ ಮನಸ್ತಾಪ ವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು. ಶುಭಸಂಖ್ಯೆ: 9

ಕರ್ಕ: ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭಸಂಖ್ಯೆ: 7

ಸಿಂಹ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ.ವ್ಯಾಪಾರವೃದ್ಧಿಯಾಗುವದು. ಆರ್ಥಿಕ ಸಂಕಷ್ಟ ದೂರಾಗುವದು. ಶುಭಸಂಖ್ಯೆ : 3

ಕನ್ಯಾ: ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ.ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಶುಭಸಂಖ್ಯೆ: 8

ತುಲಾ:ಅನಿಸಿಕೆಗಿಂತ ವಾಸ್ತವ ಬೇರೆ ಇರುವದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭಸಂಖ್ಯೆ:  2

ವೃಶ್ಚಿಕ: ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವದು. ಸಂಕಷ್ಟಗಳ ಪರಿಹಾರಕ್ಕಾಗಿ ಅಲೆದಾಡಬೇಕಾದ ಸಂಭವವಿದೆ. ಶುಭಸಂಖ್ಯೆ: 4

ಧನು: ಸ್ವಜನರಲ್ಲಿ ಮನಸ್ತಾಪ. ದೇಹಾರೋಗ್ಯವೂ ಸರಿಯಿರದೆ ತಾಪದಾಯಕವಾಗುತ್ತದೆ. ಆದರೆ ಶ್ರೇಷ್ಠ ಜನರಿಂದ ಪುರಸ್ಕಾರ. ಸಾಂಸಾರಿಕ ದೃಷ್ಟಿಯಲ್ಲೂ ತೃಪ್ತಿದಾಯಕವಿದ್ದು ನೆಮ್ಮದಿ ಉಂಟಾಗುತ್ತದೆ. ಶುಭಸಂಖ್ಯೆ: 6

ಮಕರ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭಸಂಖ್ಯೆ: 2

ಕುಂಭ: ವ್ಯಥಾ ಚಿಂತೆ, ತಪ್ಪು ಕಲ್ಪನೆ, ನಿಷ್ಟುರ ಮಾತುಗಳನ್ನು ಕೇಳುವ ಸಂಭವ, ಜನ್ಮಸ್ಥ ಶುಕ್ರ ಇರುವದರಿಂದ ಆರ್ಥಿಕ ಸುಭದ್ರತೆ ಇರುವದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅವಶ್ಯಕ. ಮನೆಯಲ್ಲಿ ಸಂತೋಷವಿರುವದು. ಗೋಸೇವೆಯಿಂದ ಕಷ್ಟಪರಿಹಾರ. ಶುಭಸಂಖ್ಯೆ: 8

ಮೀನ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ. ಶುಭಸಂಖ್ಯೆ 3

Dina Bhavishya

ದಿನ ಭವಿಷ್ಯಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು