Horoscope Today – ದಿನ ಭವಿಷ್ಯ; ಈ ರಾಶಿಯವರ ಉದಾಸೀನತೆಯಿಂದ ಕಾರ್ಯಹಾನಿ ಸಂಭವವಿದೆ

| Updated By: Digi Tech Desk

Updated on: Apr 28, 2021 | 9:09 AM

Today Horoscope ಏಪ್ರಿಲ್ 28, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರ ಉದಾಸೀನತೆಯಿಂದ ಕಾರ್ಯಹಾನಿ ಸಂಭವವಿದೆ
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣಪಕ್ಷ, ಬಿದಿಗೆ ತಿಥಿ, ಬುಧವಾರ, ಏಪ್ರಿಲ್ 28, 2021. ವಿಶಾಖ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.12 ರಿಂದ ಇಂದು ಮಧ್ಯಾಹ್ನ 1.47 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.51. ಸೂರ್ಯಾಸ್ತ: ಸಂಜೆ 6.35.

ತಾ.28-04-2021 ಬುಧವಾರದ ರಾಶಿಭವಿಷ್ಯ

ಮೇಷ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 5

ವೃಷಭ: ಕೆಲಸಗಳು ನಿಧಾನಗತಿಯಲ್ಲಿ ಸಾಗುವವು ಸೂಕ್ಷ್ಮತೆಯಿಂದ ವ್ಯವಹರಿಸಿರಿ. ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ಮನೋಚಿಂತಿತ ಕಾರ್ಯ ಕೈಗೂಡುವುದು. ಹಳೆಯ ಸಾಲ ತೀರುವುದು. ಶುಭ ಸಂಖ್ಯೆ: 9

ಮಿಥುನ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ. ಶುಭ ಸಂಖ್ಯೆ: 4

ಕಟಕ: ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ. ಶುಭ ಸಂಖ್ಯೆ: 7

ಸಿಂಹ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವವು. ಶುಭ ಸಂಖ್ಯೆ: 3

ಕನ್ಯಾ: ಹೊಸ ಆಲೋಚನೆಯೊಂದು ಕಾರ್ಯರೂಪಕ್ಕೆ ಬರುವುದು. ಸಹವರ್ತಿಗಳ ಅಸಹಕಾರ ಇದ್ದರೂ ತೊಂದರೆ ಆಗಲಾರದು. ಅನಪೇಕ್ಷಿತ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದೆ. ಸರಿಯಾದ ಧ್ಯೇಯದಿಂದ ಸಮಾಧಾನ ಇರುವುದು. ಶುಭ ಸಂಖ್ಯೆ: 1

ತುಲಾ: ಧಾರ್ಮಿಕ ಕ್ಷೇತ್ರದಲ್ಲಿ ಗೌರವ ಸಮ್ಮಾನಗಳು ದೊರೆಯುವವು. ಅತಿಯಾದ ನಿರೀಕ್ಷೆಯಿಂದ ಅಸಮಾಧಾನ ಕಂಡುಬರುವುದು. ದೂರುವವರೇ ಹೊಗಳಿದರೂ ನೆಮ್ಮದಿ ಇರಲಾರದು. ಸ್ವಯಂ ಪ್ರತಿಷ್ಟೆಗೆ ಧನವ್ಯಯ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 2

ವೃಶ್ಚಿಕ: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 8

ಧನು: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 4

ಮಕರ: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 3

ಕುಂಭ: ದಿಟ್ಟತನ, ಮನೋಸ್ಥೈರ್ಯ, ನೇರ, ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವುದು. ಶುಭ ಸಂಖ್ಯೆ: 7

ಮೀನ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು. ಶುಭ ಸಂಖ್ಯೆ: 9

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:32 am, Wed, 28 April 21